ಶಾಸಕರ ಮೌಲ್ಯ ಮಾಪನ; ಯಡಿಯೂರಪ್ಪ ಕಾರ್ಯ ವೈಖರಿಗೆ ಅಂಕ ನೀಡಿ
2018ರ ಚುನಾವಣೆಯಲ್ಲಿ ಗೆದ್ದ ಬಳಿಕ ಶಿಕಾರಿಪುರ ಕ್ಷೇತ್ರದ ಶಾಸಕ ಬಿ. ಎಸ್. ಯಡಿಯೂರಪ್ಪ ಮುಖ್ಯಮಂತ್ರಿಯಾದರು. ಆದರೆ ಬಹುಮತ ಸಾಬೀತು ಮಾಡಲು ವಿಫಲರಾದ ಕಾರಣ ರಾಜೀನಾಮೆ ನೀಡಿದರು. ಆದರೆ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರ್ಕಾರ ಪತನಗೊಂಡ ಬಳಿಕ 2019ರಲ್ಲಿ ಮತ್ತೆ ಮುಖ್ಯಮಂತ್ರಿಯಾದರು.
ಕರ್ನಾಟಕ ಬಿಜೆಪಿಯ ಹಿರಿಯ ನಾಯಕ ಯಡಿಯೂರಪ್ಪ ಶಾಸಕರಾಗಿ ಶಿಕಾರಿಪುರದಲ್ಲಿ ಮಾಡಿದ ಕೆಲಸಗಳೇನು?. ಈಗ ರಾಜ್ಯದಲ್ಲಿ ವಿಧಾನಸಭೆ ಚುನಾವಣೆಗೆ ಕೆಲವು ತಿಂಗಳು ಬಾಕಿ ಇದೆ. ನಿಮ್ಮ ಅಮೂಲ್ಯ ಮತವನ್ನು ನೀಡಿ ಆಯ್ಕೆ ಮಾಡಿದ ಶಾಸಕರು ನಾಲ್ಕೂವರೆ ವರ್ಷ ಮಾಡಿದ್ದೇನು? ಎಂದು ನೀವು ಈಗ ಮೌಲ್ಯ ಮಾಪನ ಮಾಡಬಹುದು.
ಒನ್ ಇಂಡಿಯಾ ಕನ್ನಡ ಶಾಸಕರ ಮೌಲ್ಯ ಮಾಪನ ಮಾಡಲು Rate your MLA ಎಂಬ ಅಭಿಯಾನ ಆರಂಭಿಸಿದೆ. ಇಲ್ಲಿ ನಿಮ್ಮ ಕ್ಷೇತ್ರದ ಶಾಸಕರು ಮಾಡಿದ ಕೆಲಸಗಳಿಗೆ ನೀವು ಸ್ಟಾರ್‌ಗಳನ್ನು ನೀಡುವ ಮೂಲಕ ಅಂಕ ನೀಡಬಹುದು.
ಒಟ್ಟು 9 ಅಂಶಗಳ ಆಧಾರದ ಮೇಲೆ ನೀವು ಶಾಸಕರ ಮೌಲ್ಯ ಮಾಪನ ಮಾಡಬಹುದು. ಇದರಲ್ಲಿ ನೀವು ಸ್ಟಾರ್ ರೇಟಿಂಗ್ ಮೂಲಕ ಅಂಕ ನೀಡಬಹುದು. ಈ ಪುಟವನ್ನು ನೀವು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಳ್ಳುವ ಮೂಲಕ ಇತರರು ಸಹ ಮತ ನೀಡುವಂತೆ ಮನವಿ ಮಾಡಬಹುದಾಗಿದೆ.
ಶಾಸಕರ ಲಭ್ಯತೆ, ಕ್ಷೇತ್ರದ ಅಭಿವೃದ್ಧಿ ಕಾರ್ಯ, ವಿಧಾನಸಭೆಯಲ್ಲಿ ಮಾತನಾಡಿದ್ದು, ರಸ್ತೆ ಸೌಕರ್ಯ, ನೀರಿನ ಸೌಕರ್ಯ, ಮೂಲ ಸೌಕರ್ಯ ಮುಂತಾದ ಅಂಶಗಳ ಆಧಾರದ ಮೇಲೆ ನೀವು ವೋಟ್ ಮಾಡಬೇಕು.
ಈ ಪುಟದಲ್ಲಿ ನೀವು ಶಿಕಾರಿಪುರ ಕ್ಷೇತ್ರದ ಬಿಜೆಪಿ ಶಾಸಕ ಬಿ. ಎಸ್. ಯಡಿಯೂರಪ್ಪಗೆ ವೋಟ್ ಮಾಡಬಹುದಾಗಿದೆ. ಪುಟದ ಕೊನೆಯಲ್ಲಿ ನೀವು ಎಷ್ಟು ಅಂಕ ನೀಡಿದ್ದೀರಿ? ಎಂಬ ಸರಾಸರಿ ತೋರಿಸುತ್ತದೆ.
ಈ ಪುಟದಲ್ಲಿ ಶಿಕಾರಿಪುರದ ಕ್ಷೇತ್ರದ ವಿವರ, 2018ರ ಚುನಾವಣೆಯಲ್ಲಿನ ಅಭ್ಯರ್ಥಿಗಳ ವಿವರ, ಪಡೆದ ಮತಗಳು ಸೇರಿದಂತೆ ಇತರ ವಿವರಗಳಿವೆ. ಚುನಾವಣೆ ಹತ್ತಿರವಾಗುತ್ತಿರುವಾಗ ನೀವು ಶಾಸಕರ ಮೌಲ್ಯ ಮಾಪನ ಮಾಡಿ, ಶಾಸಕರಿಗೆ ಮತ ನೀಡಿ.
ಬಿ. ಎಸ್. ಯಡಿಯೂರಪ್ಪ 2018ರ ಚುನಾವಣೆಯಲ್ಲಿ 86,983 ಮತಗಳನ್ನು ಪಡದು ಶಿಕಾರಿಪುರ ಕ್ಷೇತ್ರದಲ್ಲಿ ಜಯಗಳಿಸಿದ್ದಾರೆ. ಎದುರಾಳಿಯಾಗಿದ್ದ ಕಾಂಗೆಸ್‌ನ ಗೋಣಿ ಮಲತೇಶ್ 51,586 ಮತಗಳನ್ನು ಪಡೆದಿದ್ದರು.
2019ರ ಜುಲೈ 26ರಂದು ಕರ್ನಾಟಕದಲ್ಲಿ ಬಿಜೆಪಿ ಸರ್ಕಾರ ಆಸ್ತಿತ್ವಕ್ಕೆ ಬಂದಿತ್ತು. ಸರ್ಕಾರ ಎರಡು ವರ್ಷ ಪೂರೈಸಿದ ಸಾಧನಾ ಸಮಾವೇಶ 2021ರ ಜುಲೈ 26ರಂದು ವಿಧಾನಸೌಧದಲ್ಲಿ ನಡೆಯಿತು. ಇದೇ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ರಾಜೀನಾಮೆ ಘೋಷಣೆ ಮಾಡಿದರು. ಬಳಿಕ ರಾಜಭವನಕ್ಕೆ ತೆರಳಿ ರಾಜೀನಾಮೆ ನೀಡಿದರು.
2023ರ ಚುನಾವಣೆಗೆ ಯಡಿಯೂರಪ್ಪ ಶಿಕಾರಿಪುರ ಕ್ಷೇತ್ರದಿಂದ ಮತ್ತೆ ಕಣಕ್ಕಿಳಿಯುವುದು ಅನುಮಾನವಾಗಿದೆ. ಈಗಾಗಲೇ ಸ್ವ ಕ್ಷೇತ್ರದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮುಂದಿನ ಚುನಾವಣೆಯಲ್ಲಿ ಪುತ್ರ ಬಿ. ವೈ. ವಿಜಯೇಂದ್ರ ಕಣಕ್ಕಿಳಿಯಲಿದ್ದಾರೆ ಎಂದು ಯಡಿಯೂರಪ್ಪ ಘೋಷಣೆ ಮಾಡಿದ್ದಾರೆ. ಹೈಕಮಾಂಡ್ ಒಪ್ಪಿಗೆ ನೀಡಿದರೆ ಬಿ. ವೈ. ವಿಜಯೇಂದ್ರ ಶಿಕಾರಿಪುರದ ಅಭ್ಯರ್ಥಿಯಾಗಲಿದ್ದಾರೆ.
ಶಿಕಾರಿಪುರ ಬಿ. ಎಸ್. ಯಡಿಯೂರಪ್ಪಗೆ ರಾಜಕೀಯ ನೆಲೆ ನೀಡಿದ ಕ್ಷೇತ್ರ. 7 ಬಾರಿ ಶಾಸಕರಾಗಿ ಆಯ್ಕೆಯಾಗಿರುವ ಅವರು 1999ರ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಮಹಾಲಿಂಗಪ್ಪ ಎದುರು ಕ್ಷೇತ್ರದಲ್ಲಿ ಸೋಲು ಸಹ ಕಂಡಿದ್ದರು. ಚುನಾವಣೆಯಲ್ಲಿ 7,561 ಮತಗಳಿಂದ ಯಡಿಯೂರಪ್ಪ ಸೋತಿದ್ದರು.
ಯಡಿಯೂರಪ್ಪ ಬಿಜೆಪಿ ಬಿಟ್ಟು ಕೆಜೆಪಿ ಕಟ್ಟಿದಾಗಲೂ ಶಿಕಾರಿಪುರದ ಜನರು ಅವರ ಜೊತೆ ನಿಂತರು. ಗೆಲ್ಲಿಸಿ ವಿಧಾನಸಭೆಗೆ ಆರಿಸಿ ಕಳಿಸಿದರು. ಹಾಗಾದರೆ ಕ್ಷೇತ್ರದಲ್ಲಿ ಯಡಿಯೂರಪ್ಪ ಮಾಡಿರುವ ಅಭಿವೃದ್ಧಿ ಕಾರ್ಯಗಳೇನು? ಎಂದು ಜನರೇ ಮತದಾನ ಮಾಡುವ ಮೂಲಕ ಹೇಳಬೇಕಾಗಿದೆ.
2018ರ ಚುನಾವಣೆ ವೇಳೆಯಲ್ಲಿ ಯಡಿಯೂರಪ್ಪ ಬಿಜೆಪಿ ಮುಖ್ಯಮಂತ್ರಿ ಅಭ್ಯರ್ಥಿಯಾಗಿದ್ದರು. ಆದರೆ 79 ವರ್ಷದ ಯಡಿಯೂರಪ್ಪ 2023ರ ಚುನಾವಣೆಗೆ ಸ್ಪರ್ಧಿಸುವುದಿಲ್ಲ ಎಂಬ ಸುಳಿವನ್ನು ಈಗಾಗಲೇ ನೀಡಿದ್ದಾರೆ.














Click it and Unblock the Notifications