ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಪರಿಚಯ; ಬಿಜೆಪಿಯಿಂದ ಅಮಾನತುಗೊಂಡಿರುವ ನೂಪುರ್ ಶರ್ಮಾ ಯಾರು?

|
Google Oneindia Kannada News

ಅವಹೇಳನಕಾರಿ ಹೇಳಿಕೆ ನೀಡಿದ ಆರೋಪದ ಮೇಲೆ ಬಿಜೆಪಿ ರಾಷ್ಟ್ರೀಯ ವಕ್ತಾರರಾದ ನೂಪುರ್ ಶರ್ಮಾ ಹಾಗೂ ದೆಹಲಿ ಬಿಜೆಪಿಯ ಮಾಧ್ಯಮ ಮುಖ್ಯಸ್ಥ ನವೀನ್ ಕುಮಾರ್ ಜಿಂದಾಲ್‌ರನ್ನು ಪ್ರಾಥಮಿಕ ಸದಸ್ಯತ್ವದಿಂದ ಅಮಾನತು ಮಾಡುವ ಮೂಲಕ ಭಾರತೀಯ ಜನತಾ ಪಕ್ಷ (ಬಿಜೆಪಿ) ಕಠಿಣ ಸಂದೇಶವನ್ನು ರವಾನಿಸಿದೆ.

ಜ್ಞಾನವಾಪಿ ಮಸೀದಿಯ ವಿವಾದಕ್ಕೆ ಸಂಬಂಧಿಸಿದಂತೆ ಕಳೆದ 10 ದಿನಗಳ ಹಿಂದೆ ಸುದ್ದಿ ವಾಹಿನಿಯ ಸಂವಾದ ಒಂದರಲ್ಲಿ ಪ್ರವಾದಿ ಮೊಹಮ್ಮದ್ ಪೈಗಂಬರ್‌ ಬಗ್ಗೆ ನೂಪುರ್ ಶರ್ಮಾ ಅವಹೇಳನಕಾರಿಯಾಗಿ ಮಾತನಾಡಿದ ಹಿನ್ನೆಲೆಯಲ್ಲಿ ಮುಸ್ಲಿಂ ಸಮುದಾಯದಿಂದ ತೀವ್ರ ಖಂಡನೆ ವ್ಯಕ್ತವಾಗಿತ್ತು.

ಪ್ರವಾದಿ ಅವಹೇಳನ: ಭಾರತೀಯ ಉತ್ಪನ್ನಗಳ ಬಹಿಷ್ಕಾರಕ್ಕೆ ಕರೆ ಪ್ರವಾದಿ ಅವಹೇಳನ: ಭಾರತೀಯ ಉತ್ಪನ್ನಗಳ ಬಹಿಷ್ಕಾರಕ್ಕೆ ಕರೆ

ಮುಖ್ಯವಾಗಿ ಅರಬ್ ರಾಷ್ಟ್ರಗಳು ಇವರ ಹೇಳಿಕೆಯನ್ನು ಬಲವಾಗಿ ಖಂಡಿಸಿತು. ಈ ಘಟನೆಯ ನಂತರ ಉತ್ತರ ಪ್ರದೇಶದ ಕಾನ್ಪುರದಲ್ಲಿ ಗಲಭೆ ನಡೆದಿದ್ದು, ಈ ಗಲಭೆಗೆ ಇವರ ಹೇಳಿಕೆಯೇ ಕಾರಣ ಎಂದು ಆರೋಪಿಸಲಾಗಿದೆ.

ಪ್ರವಾದಿ ಬಗ್ಗೆ ಅವಹೇಳನ: ಸೌದಿ ಸಚಿವಾಲಯ ಖಂಡನೆ ಪ್ರವಾದಿ ಬಗ್ಗೆ ಅವಹೇಳನ: ಸೌದಿ ಸಚಿವಾಲಯ ಖಂಡನೆ

ಇನ್ನೊಂದು ಕಡೆ ನವೀನ್ ಕುಮಾರ್ ಜಿಂದಾಲ್ ಟ್ವೀಟ್‌ಗಳು ವಿವಾದದ ಕಿಡಿ ಎಬ್ಬಿಸಿತ್ತು. ಸದ್ಯ ಅವರು ಟ್ವೀಟ್ ಅಳಿಸಿ ಹಾಕಿದ್ದಾರೆ. ಇದನ್ನು ಖಂಡಿಸಿ ಅರಬ್ ರಾಷ್ಟ್ರಗಳಲ್ಲಿ ಮೇಡ್ ಇನ್ ಇಂಡಿಯಾ ಸರಕುಗಳನ್ನು ನಿಷೇಧಿಸುವ ಕುರಿತು ಟ್ಟಿಟ್ಟರ್ ಅಭಿಯಾನ ನಡೆಯುತ್ತಿದೆ. ಅಲ್ಲದೇ ಕತಾರ್ ದೇಶವು ಅಲ್ಲಿನ ಭಾರತೀಯ ರಾಯಭಾರಿಗೆ ಸಮನ್ಸ್ ಜಾರಿಗೊಳಿಸಿದೆ. ಅಲ್ಲದೇ ಪ್ರವಾದಿ ಮೊಹಮ್ಮದ್ ಪೈಗಂಬರ್‌ ಅವರ ವಿರುದ್ಧದ ಹೇಳಿಕೆಗೆ ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ.

 ಅಂದ ಹಾಗೇ ಯಾರು ಈ ನೂಪೂರ್ ಶರ್ಮಾ

ಅಂದ ಹಾಗೇ ಯಾರು ಈ ನೂಪೂರ್ ಶರ್ಮಾ

* ಬಿಜೆಪಿಯಿಂದ ಸದ್ಯ ಅಮಾನುಗೊಂಡಿರುವ ನೂಪೂರ್ ಶರ್ಮಾ, ಪಕ್ಷದ ರಾಷ್ಟ್ರೀಯ ವಕ್ತಾರರಾಗಿದ್ದರು.

* 2015ರ ದೆಹಲಿ ವಿಧಾನಸಭೆ ಚುನಾವಣೆಯಲ್ಲಿ ಅರವಿಂದ ಕೇಜ್ರಿವಾಲ್ ಅವರ ವಿರುದ್ಧ ಸ್ಪರ್ಧಿಸಿದ ನಂತರ ನೂಪೂರ್ ಶರ್ಮಾ ಹೆಚ್ಚು ಪ್ರಚಾರಕ್ಕೆ ಬಂದರು.

* ನೂಪೂರ್ ಶರ್ಮಾ ದೆಹಲಿ ವಿಶ್ವವಿದ್ಯಾನಿಲಯದಲ್ಲಿ ಓದುತ್ತಿರುವಾಗಲೇ ತಮ್ಮ ರಾಜಕೀಯ ಪಯಣವನ್ನು ಆರಂಭಿಸಿದರು.

* ನಂತರ ಅವರು ಅಧ್ಯಯನಕ್ಕಾಗಿ ವಿದೇಶಕ್ಕೆ ತೆರಳಿದರು. ಅಲ್ಲದೇ ಅಲ್ಲಿ ಭಾರತದ ಟೆಕ್ ಯುವ ರಾಯಭಾರಿಯಾಗಿದ್ದರು.

* ವಿದೇಶದಿಂದ ವಾಪಾಸಾದ ನೂಪೂರ್ ಶರ್ಮಾ ಬಿಜೆಪಿ ಯುವ ಮೋರ್ಚಾದಲ್ಲಿ ಗುರುತಿಸಿಕೊಂಡರು.

* ನೂಪೂರ್ ಶರ್ಮಾ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ನ ಸದಸ್ಯರಾಗಿದ್ದಾರೆ. ಇದು ಬಿಜೆಪಿಯ ವಿದ್ಯಾರ್ಥಿ ಘಟಕವಾಗಿದೆ.

* 2008 ರಲ್ಲಿ ನೂಪೂರ್ ಶರ್ಮಾ ಎಬಿವಿಪಿ ಯಿಂದ ಸ್ಪರ್ಧಿಸಿ ದೆಹಲಿ ವಿಶ್ವವಿದ್ಯಾನಿಲಯ ವಿದ್ಯಾರ್ಥಿ ಸಂಘದ ಅಧ್ಯಕ್ಷರಾಗಿ ಆಯ್ಕೆಯಾದರು.

* ನೂಪೂರ್ ಶರ್ಮಾ ಬಿಜೆಪಿ ಯುವ ಘಟಕದಲ್ಲಿ ರಾಷ್ಟ್ರೀಯ ಕಾರ್ಯಕಾರಿಣಿ ಸದಸ್ಯರಾಗಿಯೂ ಕೆಲಸ ಮಾಡಿದ್ದಾರೆ.

 ಹೇಳಿಕೆ ಕುರಿತು ಕ್ಷಮೆಯಾಚಿಸಿದ ನೂಪೂರ್ ಶರ್ಮಾ

ಹೇಳಿಕೆ ಕುರಿತು ಕ್ಷಮೆಯಾಚಿಸಿದ ನೂಪೂರ್ ಶರ್ಮಾ

ಬಿಜೆಪಿಯಿಂದ ಅಮಾನತುಗೊಂಡ ನಂತರ ನೂಪೂರ್ ಶರ್ಮಾ ತಮ್ಮ ಹೇಳಿಕೆ ಕುರಿತು ಕ್ಷಮೆಯಾಚಿಸಿದ್ದಾರೆ. ಅಲ್ಲದೇ ತಮ್ಮ ಹೇಳಿಕೆಗಳನ್ನು ಹಿಂಪಡೆದಿರುವ ಬಗ್ಗೆ ಟ್ವೀಟ್ ಮಾಡಿದ್ದಾರೆ.

ನೂಪೂರ್ ಶರ್ಮಾ ಅವಹೇಳನಕಾರಿ ಹೇಳಿಕೆ ವಿರುದ್ಧ ರಝಾ ಅಕಾಡೆಮಿಯ ಮುಂಬೈ ಘಟಕದ ಜಂಟಿ ಕಾರ್ಯದರ್ಶಿ ಇರ್ಫಾನ್ ಶೇಖ್ ಅವರು ಮುಂಬೈ ಪೊಲೀಸರಿಗೆ ದೂರು ನೀಡಿದ್ದಾರೆ. ಅಲ್ಲದೇ ಮಹಾರಾಷ್ಟ್ರದಲ್ಲಿ ನೂಪೂರ್ ಶರ್ಮಾ ವಿರುದ್ಧ ಹಲವು ಎಫ್‌ಐಆರ್ ಗಳು ದಾಖಲಾಗಿವೆ.

 ಹೇಳಿಕೆಗಳಿಂದ ಅಂತರ ಕಾಯ್ದುಕೊಂಡ ಬಿಜೆಪಿ

ಹೇಳಿಕೆಗಳಿಂದ ಅಂತರ ಕಾಯ್ದುಕೊಂಡ ಬಿಜೆಪಿ

ಇನ್ನೊಂದೆಡೆ ನೂಪುರ್ ಶರ್ಮಾ ಮತ್ತು ನವೀನ್ ಕುಮಾರ್ ಜಿಂದಾಲ್ ಅವರ ಹೇಳಿಕೆಗಳಿಂದ ಬಿಜೆಪಿ ಅಂತರ ಕಾಯ್ದುಕೊಂಡಿದೆ. ಈ ಬಗ್ಗೆ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವ ಬಿಜೆಪಿ ಪ್ರಧಾನ ಕಾರ್ಯದರ್ಶಿ ಅರುಣ್ ಸಿಂಗ್, "ಯಾವುದೇ ಧರ್ಮವನ್ನು ಅವಹೇಳನ ಮಾಡುವ ಚಿಂತನೆಯನ್ನು ತಮ್ಮ ಪಕ್ಷ ಸ್ಪಷ್ಟವಾಗಿ ವಿರೋಧಿಸುತ್ತದೆ. ಭಾರತೀಯ ಜನತಾ ಪಕ್ಷ ಎಲ್ಲ ಧರ್ಮಗಳನ್ನೂ ಗೌರವಿಸುತ್ತದೆ. ಯಾವುದೇ ಧರ್ಮ ಹಾಗೂ ಧಾರ್ಮಿಕ ನಾಯಕರ ಅವಹೇಳನವನ್ನು ಬಿಜೆಪಿ ಖಂಡಿಸುತ್ತದೆ. ಈ ರೀತಿಯ ವ್ಯಕ್ತಿಗಳು ಅಥವಾ ಸಿದ್ದಾಂತವನ್ನು ಬಿಜೆಪಿ ಎಂದಿಗೂ ಪ್ರೋತ್ಸಾಹಿಸುವುದಿಲ್ಲ,'' ತಿಳಿಸಿದ್ದಾರೆ.

 ಅಮಾನತು ಕ್ರಮ ಸ್ವಾಗತಿಸಿದ ಸೌದಿ ಅರೇಬಿಯಾ

ಅಮಾನತು ಕ್ರಮ ಸ್ವಾಗತಿಸಿದ ಸೌದಿ ಅರೇಬಿಯಾ

"ಭಾರತದಲ್ಲಿ ಸಾವಿರಾರು ವರ್ಷಗಳಿಂದ ಹಲವು ಧರ್ಮಗಳು ನೆಲೆಸಿವೆ. ಬಿಜೆಪಿ ಕೂಡಾ ಎಲ್ಲ ಧರ್ಮಗಳನ್ನು ಗೌರವಿಸುತ್ತದೆ. ಯಾವುದೇ ಧರ್ಮವನ್ನು ಅವಹೇಳನ ಮಾಡುವ ವ್ಯಕ್ತಿ ಅಥವಾ ಸಿದ್ದಾಂತವನ್ನು ಬಿಜೆಪಿ ಖಂಡಿಸುತ್ತದೆ,'' ಎಂದು ಹೇಳಿದ್ದಾರೆ.

"ಭಾರತದ ಸಂವಿಧಾನವು ದೇಶದ ಪ್ರಜೆಗಳಿಗೆ ಯಾವುದೇ ಧರ್ಮವನ್ನು ಅನುಸರಿಸುವ ಹಾಗೂ ಆಯ್ಕೆ ಮಾಡಿಕೊಳ್ಳುವ ಅಧಿಕಾರವನ್ನು ನೀಡಿದೆ. ಎಲ್ಲ ಧರ್ಮಗಳನ್ನು ಬಿಜೆಪಿ ಗೌರವಿಸುತ್ತದೆ,'' ಎಂದು ಅರುಣ್ ಸಿಂಗ್ ಹೇಳಿದ್ದಾರೆ.

ಇನ್ನೊಂದಡೆ ಪ್ರವಾದಿ ಮೊಹಮ್ಮದ್ ಪೈಗಂಬರ್‌ ಕುರಿತು ಬಿಜೆಪಿ ವಕ್ತಾರೆ ನೂಪುರ್ ಶರ್ಮಾ ಅವರ ಹೇಳಿಕೆಯನ್ನು ಸೌದಿ ಅರೇಬಿಯಾ ಕಟುವಾಗಿ ಟೀಕಿಸಿದೆ. ಅಲ್ಲದೆ ಬಿಜೆಪಿ ತನ್ನ ವಕ್ತಾರರನ್ನು ಅಮಾನತುಗೊಳಿಸಿದ ಕ್ರಮವನ್ನು ಸ್ವಾಗತಿಸಿದೆ.

Recommended Video

ಬಿಜೆಪಿ-ಕಾಂಗ್ರೆಸ್ ಚಡ್ಡಿ ಪಾಲಿಟಿಕ್ಸ್ ಬಗ್ಗೆ HDK ಫುಲ್ ಗರಂ | #Politics | OneIndia Kannada

English summary
BJP send out a strong message as it suspended party’s spokesperson Nupur Sharma and Naveen Kumar Jindal after they made controversial remarks against Prophet Muhammad.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X