ರಾಷ್ಟ್ರಪತಿಗಳ ಪೊಲೀಸ್ ಪದಕ ವಿಜೇತೆ ಸೋನಿಯಾ ನಾರಂಗ್
ಕರ್ನಾಟಕದ ಕೆಡರ್‌ನ ಐಪಿಎಸ್ ಅಧಿಕಾರಿ ಸೋನಿಯಾ ನಾರಂಗ್ ಅವರು ಸದ್ಯ ಕೇಂದ್ರ ಸೇವೆಯಲ್ಲಿದ್ದಾರೆ. 72ನೇ ಗಣರಾಜ್ಯೋತ್ಸವ ಸಂದರ್ಭದಲ್ಲಿ ವಿಶಿಷ್ಟ ಸೇವೆ ಸಲ್ಲಿಸಿದ ಪೊಲೀಸರಿಗೆ ನೀಡಲಾಗುವ ರಾಷ್ಟ್ರಪತಿಗಳ ಪೊಲೀಸ್ ಪದಕವನ್ನು ಸೋನಿಯಾ ನಾರಂಗ್ ಅವರಿಗೆ ನೀಡಿ ಗೌರವಿಸಲಾಗಿದೆ.
ಸೋನಿಯಾ ನಾರಂಗ್ ಸೇರಿದಂತೆ ರಾಷ್ಟ್ರೀಯ ತನಿಖಾ ಸಂಸ್ಥೆ(ಎನ್ಐಎ)ಯ 6 ಅಧಿಕಾರಿಗಳಿಗೆ ರಾಷ್ಟ್ರಪತಿಗಳ ಪೊಲೀಸ್ ಪದಕ ಲಭಿಸಿದೆ. ಸೋನಿಯಾ ನಾರಂಗ್ ಅವರು ಸದ್ಯ ಜಾರಿ ನಿರ್ದೇಶನಾಲಯದ ಹೆಚ್ಚುವರಿ ನಿರ್ದೇಶಕಿಯಾಗಿದ್ದಾರೆ. ಇದಕ್ಕೂ ಮುನ್ನ ಎನ್ಐಎ ಡಿಐಜಿಯಾಗಿದ್ದರು.
ಸೋನಿಯಾ ನಾರಂಗ್ ಸಂಕ್ಷಿಪ್ತ ಪರಿಚಯ:
ಸೋನಿಯಾ ನಾರಂಗ್ ಅವರು ಮೂಲತಃ ಚಂಡೀಗಢದವರು. ಬಿಎ ಪದವಿ ಪಡೆದ ಬಳಿಕ ಅವರು ಸಮಾಜ ಶಾಸ್ತ್ರದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. 2002ರಲ್ಲಿ ಕರ್ನಾಟಕ ಕೆಡರ್‌ನ ಅಧಿಕಾರಿಯಾಗಿ ನೇಮಕವಾದರು. ರಾಜ್ಯದಲ್ಲಿ ಸೋನಿಯಾ ನಾರಂಗ್ ಅವರು ಕಲಬುರಗಿಯಲ್ಲಿ ಜಿಲ್ಲೆಯ ಸಹಾಯಕ ಪೊಲೀಸ್ ವರಿಷ್ಠಾಧಿಕಾರಿಯಾಗಿ ಕೆಲಸ ಆರಂಭಿಸಿದರು.

ನಂತರ ಅವರು ಬೈಲಹೊಂಗಲದಲ್ಲಿ ಎಎಸ್‌ಪಿಯಾಗಿ ಕೆಲಸ ಮಾಡಿದರು. ದಾವಣಗೆರೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯಾಗಿ ಕೆಲಸ ಮಾಡುವಾಗ ಸೋನಿಯಾ ನಾರಂಗ್ ಅವರ ಹೆಸರು ರಾಜ್ಯಕ್ಕೆ ಪರಿಚಯವಾಯಿತು. ನಂತರ ಬೆಳಗಾವಿಗೆ ವರ್ಗಾವಣೆಯಾದ ಅವರು ಅನಂತರ ಬೆಂಗಳೂರಿಗೆ ಬಂದರು.
ಕೆಎಸ್ಆರ್‌ಪಿಯಲ್ಲಿಯೂ ಕೆಲಸ ನಿರ್ವಹಿಸಿದ ನಾರಂಗ್ ಅವರು, ನಂತರ ಲೋಕಾಯುಕ್ತಕ್ಕೆ ವರ್ಗಾವಣೆಯಾದರು. 2015ರಿಂದ ಬೆಂಗಳೂರು ನಗರ ಲೋಕಾಯುಕ್ತ ಎಸ್ಪಿಯಾಗಿ ಕಾರ್ಯನಿರ್ವಹಿಸುತ್ತಿದ್ದ ಸೋನಿಯಾ ನಾರಂಗ್ ಅವರಿಗೆ ನಂತರ ಡಿಐಜಿಯಾಗಿ ಬಡ್ತಿ ಸಿಕ್ಕಿತ್ತು. ನಂತರ ಸಿಐಡಿಯ ಡಿಐಜಿಯಾಗಿ ನೇಮಕವಾದರು. ಅವರ ನೇತೃತ್ವದಲ್ಲಿಯೇ ದ್ವಿತೀಯ ಪಿಯುಸಿ ರಸಾಯನಶಾಸ್ತ್ರ ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣದ ತನಿಖೆ ನಡೆಸಲಾಯಿತು.
72ನೇ ಗಣರಾಜ್ಯೋತ್ಸವ ಸಂಭ್ರಮ ವಿಶೇಷ ಪುಟ
ಲೋಕಾಯುಕ್ತ ಹಗರಣ ಬೆಳಕಿಗೆ ತಂದರು : ಕರ್ನಾಟಕ ಲೋಕಾಯುಕ್ತದಲ್ಲಿ ಭ್ರಷ್ಟಾಚಾರದ ನಡೆದಿದೆ ಎಂದು ಲೋಕಾಯುಕ್ತ ಎಸ್‌ಪಿಯಾಗಿದ್ದ ಸೋನಿಯಾ ನಾರಂಗ್ ಅವರು 2015ರ ಮೇ 11ರಂದು ಲೋಕಾಯುಕ್ತ ರಿಜಿಸ್ಟ್ರಾರ್‌ಗೆ ಪತ್ರ ಬರೆದಿದ್ದರು. ಆನಂತರ ನಡೆದ ಹಲವು ಬೆಳವಣಿಗೆಗಳ ಬಳಿಕ ಲೋಕಾಯುಕ್ತ ವೈ. ಭಾಸ್ಕರ ರಾವ್ ಅವರು ಡಿಸೆಂಬರ್ 7ರಂದು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು.
ಸೋನಿಯಾ ನಾರಂಗ್ ಅವರನ್ನು ರಾಷ್ಟ್ರೀಯ ತನಿಖಾ ದಳ (ಎನ್‌ಐಎ) ನವದೆಹಲಿ ವಿಭಾಗದ ಎಸ್‌ಪಿಯಾಗಿ ನೇಮಕ ಮಾಡಲಾಯಿತು. ನಂತರ ಎನ್ಐಎ ಡಿಐಜಿಯಾಗಿ ಅಧಿಕಾರ ಅವಧಿ ಪೂರೈಸಿದ ಬಳಿಕ ಜಾರಿ ನಿರ್ದೇಶನಾಲಯದ ಹೆಚ್ಚುವರಿ ನಿರ್ದೇಶಕಿಯಾಗಿ ಬಡ್ತಿ ಪಡೆದುಕೊಂಡರು.
-
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral -
SSLC ಪರೀಕ್ಷೆ-1ರಲ್ಲಿ ಅಂಕ ಕಡಿಮೆಯಾಗಿದೆಯೇ? ಚಿಂತೆ ಬಿಡಿ, ಮೇ 18ರಿಂದ ನಡೆಯುವ ಪರೀಕ್ಷೆ-2ಕ್ಕೆ ಸಜ್ಜಾಗಿ -
Bengaluru: ಪಬ್ನಲ್ಲಿ 150 ರೂ. ಕೊಟ್ಟು ಆರ್ಡರ್ ಮಾಡಿದ್ರೆ ಬಂದಿದ್ದು ಬರೀ ಹಪ್ಪಳ-ಸಂಡಿಗೆ: ದಂಗಾದ ಗ್ರಾಹಕ -
ಇಂಡೋನೇಷ್ಯಾದಲ್ಲಿ 7.4 ತೀವ್ರತೆಯ ಪ್ರಬಲ ಭೂಕಂಪ: ಏಷ್ಯಾ ರಾಷ್ಟ್ರಗಳಲ್ಲಿ ಸುನಾಮಿ ಆತಂಕ, ಭಾರತದ ಮೇಲಾಗುವ ಪರಿಣಾಮವೇನು? -
Bengaluru House Rent: ಬೆಂಗಳೂರಿನ ಪ್ರೈಮ್ ಏರಿಯಾದಲ್ಲೂ ನಾನ್ವೆಜ್ ಪ್ರಿಯರಿಗೆ ಮನೆ ಸಿಗ್ತಿಲ್ಲ, ಸೋಷಿಯಲ್ ಮೀಡಿಯಾ ಚರ್ಚೆ -
Prakash Raj: ನಾಸ್ತಿಕನಾದರೂ ತಾಯಿಯ ನಂಬಿಕೆಗೆ ಗೌರವ ಕೊಟ್ಟು; ಕ್ರೈಸ್ತ ಧರ್ಮದ ಸಂಪ್ರದಾಯ ಪಾಲನೆ: ನಟ ಪ್ರಕಾಶ್ ರಾಜ್ -
Education: CBSE 9 ಮತ್ತು 10ನೇ ತರಗತಿಯ ಹೊಸ ಪಠ್ಯಕ್ರಮ ಇಂದು ಬಿಡುಗಡೆ -
ಮುಂದಿನ 2 ರಿಂದ 3 ವಾರಗಳಲ್ಲಿ ಇರಾನ್ ಮೇಲೆ ಅತ್ಯಂತ ಭೀಕರ ದಾಳಿ: ಟ್ರಂಪ್ ಎಚ್ಚರಿಕೆ -
ವಿದ್ಯಾರ್ಥಿಗಳ ಮೊಬೈಲ್ ಗೀಳಿಗೆ ಬ್ರೇಕ್: ಹೊಸ 'ಡಿಜಿಟಲ್ ನೀತಿ' ಪ್ರಕಟಿಸಿದ ಆರೋಗ್ಯ ಇಲಾಖೆ -
Raghav Chadha: ಸಂಸದ ರಾಘವ್ ಚಡ್ಡಾಗೆ ಶಾಕ್ ಕೊಟ್ಟ ಎಎಪಿ, ಬಿಜೆಪಿ ಸೇರಲಿದ್ದಾರೆಯೇ ಸ್ಟಾರ್ ರಾಜಕಾರಣಿ -
Nuwan Thushara: ಆರ್ಸಿಬಿಗಾಗಿ ಶ್ರೀಲಂಕಾ ಕ್ರಿಕೆಟ್ ಮಂಡಳಿಯ ವಿರುದ್ಧವೇ ತಿರುಗಿ ಬಿದ್ದ ಸ್ಟಾರ್ ಆಟಗಾರ ನುವಾನ್ ತುಷಾರ












Click it and Unblock the Notifications