Rizwan Arshad Profile: ಶಿವಾಜಿನಗರದ ಶಾಸಕ ರಿಜ್ವಾನ್ ಅರ್ಷದ್ ಪರಿಚಯ
ರಿಜ್ವಾನ್ ಅರ್ಷದ್ ಅವರು 1995-96 ರಲ್ಲಿ ಭಾರತೀಯ ರಾಷ್ಟ್ರೀಯ ವಿದ್ಯಾರ್ಥಿಗಳ ಒಕ್ಕೂಟಕ್ಕೆ (NSUI) ಸೇರುವ ಮೂಲಕ ತಮ್ಮ ರಾಜಕೀಯ ಜೀವನವನ್ನು ಪ್ರಾರಂಭಿಸಿದರು.
ಬೆಂಗಳೂರು, ಮಾರ್ಚ್ 06: ಶಿವಾಜಿನಗರ ವಿಧಾನಸಭಾ ಕ್ಷೇತ್ರದ ಹಾಲಿ ಶಾಸಕ ರಿಜ್ವಾನ್ ಅರ್ಷದ್. ಕಾಂಗ್ರೆಸ್ ಪಕ್ಷದ ನಾಯಕರಲ್ಲಿ ಪ್ರಮುಖರಾಗಿರುವ ಇವರು, ವಿದ್ಯಾರ್ಥಿ ಜೀವನದಿಂದಲೂ ಕಾಂಗ್ರೆಸ್ ಜೊತೆಗೆ ಒಡನಾಟ ಇಟ್ಟುಕೊಂಡಿದ್ದಾರೆ. ಡಿಸೆಂಬರ್ 2019 ರಲ್ಲಿ ಶಿವಾಜಿನಗರ ವಿಧಾನಸಭೆಯ ಉಪಚುನಾವಣೆಯಲ್ಲಿ ಗೆದ್ದ ನಂತರ ಮೊದಲ ಬಾರಿಗೆ ಶಾಸಕರಾಗಿದ್ದಾರೆ.
ಇಂಡಿಯನ್ ನ್ಯಾಷನಲ್ ಕಾಂಗ್ರೆಸ್‌ನ ರಿಜ್ವಾನ್ ಅರ್ಷದ್ ಶಿವಾಜಿನಗರ ಕ್ಷೇತ್ರದಲ್ಲಿ ತಮ್ಮದೆ ಆದ ಛಾಪು ಹೊಂದಿದ್ದಾರೆ. 2019 ರಲ್ಲಿ ಶಾಸಕರಾಗಿ ಆಯ್ಕೆಯಾಗಿದ್ದರೂ ಕೂಡ ರಿಜ್ವಾನ್ ಅರ್ಷದ್, ಕಾಂಗ್ರೆಸ್‌ನಲ್ಲಿ 1995ರಿಂದಲೂ ಕಾರ್ಯ ನಿರ್ವಹಿಸುತ್ತಿದ್ದಾರೆ. ಭಾರತೀಯ ರಾಷ್ಟ್ರೀಯ ವಿದ್ಯಾರ್ಥಿಗಳ ಒಕ್ಕೂಟಕ್ಕೇ ಸೇರುವ ಮೂಲಕ ತಮ್ಮ ರಾಜಕೀಯ ಜೀವನವನ್ನು ಆರಂಭಿಸಿದ್ದಾರೆ.

ರಿಜ್ವಾನ್ ಅರ್ಷದ್, 24 ಸೆಪ್ಟೆಂಬರ್ 1979 ರಲ್ಲಿ ಜನಿಸಿದರು. ವಕೀಲರಾಗಿದ್ದ ಆರ್ ಕ್ಯೂ ಅರ್ಷದ್ ಅವರ ತಂದೆ. ಅವರ ತಾಯಿ ಶೆಹನಾಜ್ ಅರ್ಷದ್ ಅವರು ಇಂಗ್ಲಿಷ್ ಸಾಹಿತ್ಯದಲ್ಲಿ ಎಂಎ ಪದವಿ ಪಡೆದಿದ್ದಾರೆ. ರಿಜ್ವಾನ್ ಅರ್ಷದ್ ಅವರು ಮೈಸೂರಿನ ಸೇಂಟ್ ಫಿಲೋಮಿನಾ ಕಾಲೇಜಿನಲ್ಲಿ ಬ್ಯಾಚುಲರ್ ಆಫ್ ಕಾಮರ್ಸ್ ಪದೆವಿ ಪಡೆದಿದ್ದಾರೆ. ಅವರಿಗೆ ಹುಮೈರಾ ಮತ್ತು ಸಫಿಯಾ ಎಂಬ ಇಬ್ಬರು ಒಡಹುಟ್ಟಿದವರಿದ್ದಾರೆ. ಇನ್ನು, ರಿಜ್ವಾನ್ ಅರ್ಷದ್ ಅವರು ನಜೀಹಾ ಎಂಬುವವರನ್ನು ವಿವಾಹವಾಗಿದ್ದು, ಈ ದಂಪತಿಗೆ ಫೈಜಾನ್ ಮತ್ತು ಅಫ್ಜಾನ್ ಎಂಬ ಇಬ್ಬರು ಮಕ್ಕಳಿದ್ದಾರೆ.
ರಿಜ್ವಾನ್ ಅರ್ಷದ್ ಅವರು 1995-96 ರಲ್ಲಿ ಭಾರತೀಯ ರಾಷ್ಟ್ರೀಯ ವಿದ್ಯಾರ್ಥಿಗಳ ಒಕ್ಕೂಟಕ್ಕೆ (NSUI) ಸೇರುವ ಮೂಲಕ ತಮ್ಮ ರಾಜಕೀಯ ಜೀವನವನ್ನು ಪ್ರಾರಂಭಿಸಿದರು. 1997-98 ರಲ್ಲಿ ಮೈಸೂರು ವಿಶ್ವವಿದ್ಯಾನಿಲಯದ ಸೆನೆಟ್ ಸದಸ್ಯರಾಗಿ ಆಯ್ಕೆಯಾದರು. 1996ರಲ್ಲಿ ಎನ್‌ಎಸ್‌ಯುಐ ಕಾಲೇಜು ಘಟಕದ ಅಧ್ಯಕ್ಷರಾಗಿ ಆಯ್ಕೆಯಾದರು. ಬಳಿಕ 1997ರಲ್ಲಿ ಎನ್‌ಎಸ್‌ಯುಐ ಮೈಸೂರು ಜಿಲ್ಲಾ ಘಟಕದ ಉಪಾಧ್ಯಕ್ಷರಾಗಿದ್ದಾರೆ. 1998ರಲ್ಲಿ ಎನ್‌ಎಸ್‌ಯುಐ ಕರ್ನಾಟಕ ರಾಜ್ಯ ಘಟಕ ರಾಜ್ಯ ಪ್ರಧಾನ ಕಾರ್ಯದರ್ಶಿಯಾಗಿ ಆಯ್ಕೆಯಾದರು. ಇದಾದ ಬಳಿಕ 1999 ರಲ್ಲಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸಿದ್ದಾರೆ.
ನಂತರ 2004ರಲ್ಲಿ ಭಾರತೀಯ ಯುವ ಕಾಂಗ್ರೆಸ್‌ನ ಉಪಾಧ್ಯಕಷರಾಗಿ ಮತ್ತು 2010ರಲ್ಲಿ ಕರ್ನಾಟಕ ಪ್ರದೇಶ ಯುವ ಕಾಂಗ್ರೆಸ್ ಸಮಿತಿಯಲ್ಲಿ ಸೇವೆ ಸಲ್ಲಿಸಿದರು. ಇದಾದ ಬಳಿಕ 2010- 2011ರಲ್ಲಿ ಭಾರತೀಯ ಯುವ ಕಾಂಗ್ರೆಸ್ ನವದೆಹಲಿಯಲ್ಲಿ ರಾಷ್ಟ್ರೀಯ ಕಾರ್ಯದರ್ಶಿಯಾಗಿಯೂ ಕಾರ್ಯ ನಿರ್ವಹಿಸಿದ್ದಾರೆ.

2011 ರಲ್ಲಿ, ರಿಜ್ವಾನ್ ಅರ್ಷದ್ ಉತ್ತಮ ಅಂತರದೊಂದಿಗೆ ಕರ್ನಾಟಕ ಪ್ರದೇಶ ಯುವ ಕಾಂಗ್ರೆಸ್ (ಕೆಪಿವೈಸಿಸಿ) ಯ ಮೊದಲ ಚುನಾಯಿತ ರಾಜ್ಯಾಧ್ಯಕ್ಷರಾದರು. 2014 ರಲ್ಲಿ, ಅವರು 29,000 ಮತಗಳಲ್ಲಿ 21,000 ಮತಗಳನ್ನು ಗಳಿಸುವ ಮೂಲಕ ಕೆಪಿವೈಸಿಸಿ ಅಧ್ಯಕ್ಷರಾಗಿ ಮರು ಆಯ್ಕೆಯಾದರು. 2014 ರ ಲೋಕಸಭಾ ಚುನಾವಣೆಯಲ್ಲಿ ಬೆಂಗಳೂರು ಸೆಂಟ್ರಲ್ ನಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿದ್ದರು. ಆದರೆ ಅವರು ಬಿಜೆಪಿ ಅಭ್ಯರ್ಥಿ ಪಿ.ಸಿ ಮೋಹನ್ ವಿರುದ್ಧ ಸೋತರು. ಈ ಚುನಾವಣೆಯಲ್ಲಿ ಪಿ.ಸಿ. ಮೋಹನ್ 5,57,130 (51.85%) ಮತಗಳನ್ನು ಪಡೆದರೇ ರಿಜ್ವಾನ್ ಅರ್ಷದ್ 4,19,630 (39.05%) ಮತಗಳನ್ನು ಪಡೆದರು.
10 ಜೂನ್ 2016 ರಂದು ಕರ್ನಾಟಕ ವಿಧಾನ ಪರಿಷತ್ತಿಗೆ ಆಯ್ಕೆಯಾದರು. ಎಂಎಲ್‌ಸಿಯಾಗಿ ರಿಜ್ವಾನ್ ಅರ್ಷದ್ ಅವರು ಬೆಂಗಳೂರಿನಲ್ಲಿ ಹಲವಾರು ಅಭಿವೃದ್ಧಿ ಮತ್ತು ಮೂಲಸೌಕರ್ಯಗಳಿಗೆ ಅನುದಾನ ಪಡೆಯುವಲ್ಲಿ ಪ್ರಮುಖ ಪಾತ್ರ ವಹಿಸಿದ್ದರು. ಐದು ವರ್ಷಗಳ ನಂತರ, ಅವರು 2019 ರ ಲೋಕಸಭೆ ಚುನಾವಣೆಯಲ್ಲಿ ಬೆಂಗಳೂರು ಸೆಂಟ್ರಲ್ ಕ್ಷೇತ್ರಕ್ಕೆ ಕಾಂಗ್ರೆಸ್-ಜೆಡಿಎಸ್ ಜಂಟಿ ಅಭ್ಯರ್ಥಿಯಾಗಿದ್ದರು. ಆದರೆ, ಮತ್ತೆ ಸಂಸತ್ತಿನ ಚುನಾವಣೆಯಲ್ಲಿ ಬಿಜೆಪಿಯ ಪಿ.ಸಿ. ಮೋಹನ್ ವಿರುದ್ಧ ಸೋತರು. ಈ ಬಾರಿ ವಿಜೇತ ಅಭ್ಯರ್ಥಿ ಪಿ.ಸಿ.ಮೋಹನ್ 6,02,853 ಮತಗಳನ್ನು (50.35%) ಪಡೆದರೇ, ರಿಜ್ವಾನ್ ಅರ್ಷದ್ 5,31,885 ಮತಗಳನ್ನು (44.43%) ಪಡೆಸಿದ್ದರು. ಈ ಬಾರಿ ಮತಗಳ ಅಂತರ ಕಡಿಮೆಯಾಗಿತ್ತು.

ಶಿವಾಜಿನಗರ ವಿಧಾನಸಭಾ ಶಾಸಕ ಆರ್.ರೋಷನ್ ಬೇಗ್ ಅವರನ್ನು ಅನರ್ಹಗೊಳಿಸಿದ್ದರಿಂದ 2019ರಲ್ಲಿ ಉಪಚುನಾವಣೆ ನಡೆಯಿತು. ಕಾಂಗ್ರೆಸ್‌ನಿಂದ ರಿಜ್ವಾನ್ ಅರ್ಷದ್ ಚುನಾವಣೆಗೆ ಸ್ಪರ್ಧಿಸಿ 2019ರ ಡಿಸೆಂಬರ್ ಐದರಂದು ಉಪಚುನಾವಣೆಯಲ್ಲಿ ಗೆದ್ದು, ಶಿವಾಜಿನಗರ ವಿಧಾನಸಭೆಯ ಶಾಸಕರಾಗಿದ್ದಾರೆ. ಕಳೆದ ಬಾರಿ ಭಾರತೀಯ ಜನತಾ ಪಾರ್ಟಿಯಿಂದ ಎಂ ಸರವಣ ವಿರುದ್ಧ ರಿಜ್ವಾನ್ ಅರ್ಷದ್ ವಿರುದ್ಧ 13,521 ಮತಗಳ ಅಂತರದಿಂದ ಗೆಲುವು ದಾಖಲಿಸಿದ್ದರು. ಈ ಬಾರಿ ರಿಜ್ವಾನ್ ಅರ್ಷದ್ ಶಾಸಕರಾಗಿ ಶಿವಾಜಿನಗರಕ್ಕೆ ಹೊಸ ರೂಪ ಕೊಡುತ್ತಿದ್ದಾರೆ. ಕ್ಷೇತ್ರದಲ್ಲಿ ಹಲವು ಅಭಿವೃದ್ಧಿ ಕಾಮಗಾರಿಗಳು ನಡೆದಿರುವ ಕಾರಣ ಮತ್ತೆ ರಿಜ್ವಾನ್ ಅರ್ಷದ್‌ಗೆ ಕಾಂಗ್ರೆಸ್ ಟಿಕೆಟ್ ನೀಡುವುದಲ್ಲಿ ಸಂಶಯವಿಲ್ಲ.
-
ರಾಜ್ಯದಲ್ಲಿ 4,824 ಕೋಟಿ ರೂ. ಕೈಗಾರಿಕಾ ಹೂಡಿಕೆಗೆ ಸರ್ಕಾರ ಅಸ್ತು; 14,525 ಉದ್ಯೋಗ ಸೃಷ್ಟಿಯಾಗುವ ನಿರೀಕ್ಷೆ -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ -
Horoscope March 14: ಈ ರಾಶಿಯವರ ಆರ್ಥಿಕ ಸ್ಥಿತಿ ಸುಧಾರಣೆ, ದಾಂಪತ್ಯ ಜೀವನದಲ್ಲಿ ಸಂತಸ, ದಿನ ಭವಿಷ್ಯ -
ಬೆಂಗಳೂರಿನ ಪ್ರಮುಖ ವಿದ್ಯುತ್ ಸ್ಥಾವರ ಬಂದ್; ರಾಜ್ಯದಲ್ಲಿ ವಿದ್ಯುತ್ ಕಡಿತದ ಭೀತಿ! -
Horoscope March 13: ಈ ರಾಶಿಯವರ ಬದುಕಲ್ಲಿ ಸಕಾರಾತ್ಮಕ ಬೆಳವಣಿಗೆ, ಅಧಿಕ ಲಾಭ; ದಿನ ಭವಿಷ್ಯ -
Gold: ಲಕ್ಕುಂಡಿಯಲ್ಲಿ ಸಿಕ್ಕ ಬಂಗಾರದ ನಿಧಿ ಮೌಲ್ಯ 8 ಕೋಟಿ ರೂ.; ನಿಧಿ ಕೊಟ್ಟ ಕುಟುಂಬದಿಂದ ಹೊಸ ಡಿಮ್ಯಾಂಡ್, ಉತ್ಖನನ ಅಂತ್ಯ -
Gas Bill: ಇಡ್ಲಿ-ವಡೆ ಜೊತೆಗೆ ಗ್ಯಾಸ್ ಶುಲ್ಕ ವಿಧಿಸಿದ ರೆಸ್ಟೋರೆಂಟ್!: ದಂಗಾದ ಗ್ರಾಹಕರು, ಇಲ್ಲಿವೆ ನೋಡಿ ದರಗಳು -
ನಮ್ಮದು ಲವ್ ಜಿಹಾದ್ ಅಲ್ಲ, ಮತಾಂತರವೂ ಇಲ್ಲ, ಹಿಂದೂ ಸಂಪ್ರದಾಯದಂತೆ ವಿವಾಹ: ಮೊನಾಲಿಸಾ-ಫರ್ಹಾನ್ ಖಾನ್ ಸ್ಪಷ್ಟನೆ -
Karnataka Weather Mar 12: ಬಿಸಿಲು ಹೆಚ್ಚಳದ ನಡುವೆ ಮಾರ್ಚ್ 15ರಿಂದ ಕರ್ನಾಟಕದಲ್ಲಿ ಮಳೆ, ಹೇಗಿದೆ ಇಂದಿನ ವೆದರ್ -
Gold Rate March 12: ಚಿನ್ನದ ಬೆಲೆ 10,900 ರೂ., ಬೆಳ್ಳಿ ಬೆಲೆ 10,000 ರೂ. ಭರ್ಜರಿ ಇಳಿಕೆ, ಬಂಗಾರ ಪ್ರಿಯರು ಫಿದಾ -
ಇರಾನ್ ಪರಮಾಣು ವಿಜ್ಞಾನಿ ಕಥೆ ಮುಗಿಸಿದ ಇಸ್ರೇಲ್, ಮತ್ತಷ್ಟು ತಿಕ್ಕಾಟ ಶುರು | Operation Roaring Lion -
ಹೊಸೂರು ವಿಮಾನ ನಿಲ್ದಾಣ: ಬೆಂಗಳೂರು ಸಮೀಪ 2,979 ಎಕರೆ ಭೂಮಿ ಸ್ವಾಧೀನ; ಕನ್ನಡದಲ್ಲೇ ಮಾತನಾಡಿದ ತಮಿಳುನಾಡು ಶಾಸಕ












Click it and Unblock the Notifications