ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

Oneindia explainer; ರಾಜ್ಯಸಭೆ ಚುನಾವಣೆ ಹೇಗೆ ನಡೆಯುತ್ತದೆ?

|
Google Oneindia Kannada News

ಬೆಂಗಳೂರು, ಜೂನ್ 04 : ಕೊರೊನಾ ವೈರಸ್ ಸೋಂಕಿನ ನಡುವೆಯೇ ರಾಜ್ಯಸಭಾ ಚುನಾವಣೆ ಬಗ್ಗೆ ಚರ್ಚೆಗಳು ಆರಂಭವಾಗಿದೆ. ಒಟ್ಟು 24 ಸದಸ್ಯರನ್ನು ಆಯ್ಕೆ ಮಾಡಲು ಜೂನ್ 19ರಂದು ಚುನಾವಣೆ ನಡೆಯಲಿದೆ.

Recommended Video

ಪಾಕಿಸ್ತಾನದ ಆರಂಭಿಕ ಆಟಗಾರನಿಗೆ ರೋಹಿತ್ ಶರ್ಮ ರೋಲ್ ಮಾಡೆಲ್ | Rohit Sharma | Oneindia Kannada

ಕರ್ನಾಟಕ ವಿಧಾನಸಭೆಯಿಂದ ರಾಜ್ಯಸಭೆಗೆ ಆಯ್ಕೆಯಾಗಿರುವ ಕಾಂಗ್ರೆಸ್‌ನ ಬಿ. ಕೆ. ಹರಿಪ್ರಸಾದ್, ರಾಜೀವ್ ಗೌಡ, ಬಿಜೆಪಿಯ ಪ್ರಭಾಕರ ಕೋರೆ ಮತ್ತು ಜೆಡಿಎಸ್‌ನ ಕುಪೇಂದ್ರ ರೆಡ್ಡಿ ಅವರ ಅವಧಿ ಜೂನ್ 25ಕ್ಕೆ ಅಂತ್ಯಗೊಳ್ಳಲಿದೆ. ಅದಕ್ಕೂ ಮೊದಲು ಹೊಸ ಸದಸ್ಯರ ಆಯ್ಕೆಯಾಗಬೇಕಿದೆ.

ಕಾಂಗ್ರೆಸ್ ಶಾಸಕರ ರಾಜೀನಾಮೆ; ರಾಜ್ಯಸಭೆ ಚುನಾವಣೆ ಲೆಕ್ಕಾಚಾರ ಉಲ್ಟಾ ಕಾಂಗ್ರೆಸ್ ಶಾಸಕರ ರಾಜೀನಾಮೆ; ರಾಜ್ಯಸಭೆ ಚುನಾವಣೆ ಲೆಕ್ಕಾಚಾರ ಉಲ್ಟಾ

ಕರ್ನಾಟಕದ ಜನರು ಆಯ್ಕೆ ಮಾಡಿರುವ ಶಾಸಕರು ರಾಜ್ಯಸಭಾ ಸದಸ್ಯರನ್ನು ಆಯ್ಕೆ ಮಾಡಲಿದ್ದಾರೆ. ಒಬ್ಬರು ರಾಜ್ಯಸಭಾ ಸದಸ್ಯರ ಆಯ್ಕೆಗೆ 45 ಮತಗಳು ಅಗತ್ಯವಿದೆ. ವಿಧಾನಸಭೆಯ ಶಾಸಕರ ಬಲಾಬದಲ ಆಧಾರದ ಮೇಲೆ ಯಾರು, ಎಷ್ಟು ಸ್ಥಾನ ಗೆಲ್ಲುತ್ತಾರೆ? ಎಂಬುದು ತೀರ್ಮಾನವಾಗಲಿದೆ.

ರಾಜ್ಯಸಭೆ ಚುನಾವಣೆ; ಮೌನ ಮುರಿದ ಮುದ್ದಹನುಮೇಗೌಡರು! ರಾಜ್ಯಸಭೆ ಚುನಾವಣೆ; ಮೌನ ಮುರಿದ ಮುದ್ದಹನುಮೇಗೌಡರು!

ಜನರು ನೇರವಾಗಿ ರಾಜ್ಯಸಭಾ ಸದಸ್ಯರನ್ನು ಆಯ್ಕೆ ಮಾಡಲು ಅವಕಾಶವಿಲ್ಲ. ಜನರು ಆಯ್ಕೆ ಮಾಡಿದ ಶಾಸಕರು ಮತದಾನದ ಮೂಲಕ ಆಯ್ಕೆ ಮಾಡಬಹುದು. ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಗಣ್ಯರನ್ನು ರಾಷ್ಟ್ರಪತಿಗಳು ರಾಜ್ಯಸಭೆಗೆ ನಾಮ ನಿರ್ದೇಶನ ಮಾಡುತ್ತಾರೆ.

ರಾಜ್ಯಸಭೆ ಚುನಾವಣೆ; ಕರ್ನಾಟಕದಲ್ಲೊಂದು ಬ್ರೇಕಿಂಗ್ ನ್ಯೂಸ್! ರಾಜ್ಯಸಭೆ ಚುನಾವಣೆ; ಕರ್ನಾಟಕದಲ್ಲೊಂದು ಬ್ರೇಕಿಂಗ್ ನ್ಯೂಸ್!

245 ಸದಸ್ಯರು ಇರುತ್ತಾರೆ

245 ಸದಸ್ಯರು ಇರುತ್ತಾರೆ

ವಿವಿಧ ರಾಜ್ಯಗಳಲ್ಲಿ ವಿಧಾನ ಪರಿಷತ್‌ ಅನ್ನು ಮೇಲ್ಮನೆ ಎಂದು ಕರೆಯಲಾಗುತ್ತದೆ. ಹಾಗೆಯೇ ದೇಶದ ಶಾಸಕಾಂಗ ವ್ಯವಸ್ಥೆಯಲ್ಲಿ ರಾಜ್ಯಸಭೆಯನ್ನು ಮೇಲ್ಮನೆ ಎನ್ನಲಾಗುತ್ತದೆ. ಉಪ ರಾಷ್ಟ್ರಪತಿಗಳು ರಾಜ್ಯಸಭೆಯ ಸಭಾಪತಿಗಳಾಗಿರುತ್ತಾರೆ. ರಾಜ್ಯಸಭೆಯ ಒಟ್ಟು ಸದಸ್ಯರ ಬಲ 245.

ಸದಸ್ಯರ ಆಯ್ಕೆ ಹೇಗೆ?

ಸದಸ್ಯರ ಆಯ್ಕೆ ಹೇಗೆ?

ರಾಜ್ಯಸಭೆಗೆ ಜನರು ನೇರವಾಗಿ ಸದಸ್ಯರನ್ನು ಆಯ್ಕೆ ಮಾಡುವಂತಿಲ್ಲ. 245 ಸದಸ್ಯರಲ್ಲಿ 12 ನಾಮ ನಿರ್ದೇಶಿತ ಸದಸ್ಯರು ಇರುತ್ತಾರೆ. ಕಲೆ, ಸಾಹಿತ್ಯ, ಕ್ರೀಡೆ, ಶಿಕ್ಷಣ, ನ್ಯಾಯಾಂಗ ಹೀಗೆ ವಿವಿಧ ಕ್ಷೇತ್ರದಲ್ಲಿ ಸಾಧನೆ ಮಾಡಿದ ಗಣ್ಯರನ್ನು ರಾಷ್ಟ್ರಪತಿಗಳು ರಾಜ್ಯಸಭೆಗೆ ನಾಮ ನಿರ್ದೇಶನ ಮಾಡುತ್ತಾರೆ. ಸಚಿನ್ ತೆಂಡೂಲ್ಕರ್, ಸುಪ್ರೀಂಕೋರ್ಟ್ ನಿವೃತ್ತ ಮುಖ್ಯ ನ್ಯಾಯಮೂರ್ತಿ ರಂಜನ್ ಗೋಗಾಯ್ ಮುಂತಾದವರು ಹೀಗೆ ನಾಮ ನಿರ್ದೇಶನಗೊಂಡವರು.

ಸದಸ್ಯರ ಅವಧಿ ಎಷ್ಟು?

ಸದಸ್ಯರ ಅವಧಿ ಎಷ್ಟು?

ನಾಮ ನಿರ್ದೇಶಿತ ಸದಸ್ಯರನ್ನು ಬಿಟ್ಟು ಉಳಿ ರಾಜ್ಯಸಭಾ ಸದಸ್ಯರು ರಾಜ್ಯಗಳ ವಿಧಾನಸಭೆಯಿಂದ ಆಯ್ಕೆಯಾಗುತ್ತಾರೆ. ಜನರಿಂದ ಆಯ್ಕೆಯಾದ ಶಾಸಕರು ರಾಜ್ಯಸಭಾ ಸದಸ್ಯರನ್ನು ಆಯ್ಕೆ ಮಾಡುತ್ತಾರೆ. ರಾಜ್ಯಸಭಾ ಸದಸ್ಯರ ಅವಧಿ 6 ವರ್ಷ. ಇವರಲ್ಲಿ 1/3ರಷ್ಟು ಸದಸ್ಯರುಗಳು 2 ವರ್ಷಕ್ಕೊಮ್ಮೆ ನಿವೃತ್ತಿ ಹೊಂದುತ್ತಾರೆ. ಕರ್ನಾಟಕದಿಂದ 12 ಸದಸ್ಯರನ್ನು ರಾಜ್ಯಸಭೆಗೆ ಕಳಿಸಬಹುದಾಗಿದೆ.

ಲೋಕಸಭೆಯಷ್ಟೇ ಮಹತ್ವ

ಲೋಕಸಭೆಯಷ್ಟೇ ಮಹತ್ವ

ಲೋಕಸಭೆಯಷ್ಟೇ ಮಹತ್ವ ರಾಜ್ಯಸಭೆಗೂ ಇದೆ. ಲೋಕಸಭೆಯಲ್ಲಿ ಅನುಮೋದನೆಗೊಂಡ ಮಸೂದೆಗಳನ್ನು ತಿರಸ್ಕರಿಸುವ ಹಕ್ಕು ಸಹ ರಾಜ್ಯಸಭೆಗೆ ಇದೆ. ಆದ್ದರಿಂದ, ಕೇಂದ್ರದಲ್ಲಿ ಆಡಳಿತ ನಡೆಸುವ ಸರ್ಕಾರಗಳು ರಾಜ್ಯಸಭೆ ಚುನಾವಣೆಯನ್ನು ಗಂಭೀರವಾಗಿ ತೆಗೆದುಕೊಳ್ಳುತ್ತವೆ. ಸದಸ್ಯರ ಸಂಖ್ಯೆ ಕಡಿಮೆ ಇದ್ದಾಗ ಮೈತ್ರಿಕೂಟ ರಚಿಸಿಕೊಂಡು ಮಸೂದೆಗಳು ಅಂಗೀಕಾರವಾಗುವಂತೆ ನೋಡಿಕೊಳ್ಳುತ್ತವೆ.

English summary
Election will be held on June 19, 2020 to elect 24 Rajya Sabha members. How member will elect for Rajya Sabha here are the details.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X