R.V. Deshpande Profile: ಹ್ಯಾಟ್ರಿಕ್ ಗೆಲುವಿನ ಸರದಾರ ಈ ʼಆರ್.ವಿ ದೇಶಪಾಂಡೆʼ! ಇಲ್ಲಿದೆ ನೋಡಿ ಮಾಹಿತಿ
ಆರ್.ವಿ. ದೇಶಪಾಂಡೆ ಕರ್ನಾಟಕದಲ್ಲಿ ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡರಲ್ಲೊಬ್ಬರಾಗಿದ್ದಾರೆ. ಎಂಟು ಬಾರಿ ಶಾಸಕರಾಗಿರುವ ದೇಶಪಾಂಡೆ ರಾಜ್ಯದ ಅತಿ ಹಿರಿಯ ಕಾಂಗ್ರೆಸ್ ಶಾಸಕರು. ಈ ಹಿಂದೆ ಮುಖ್ಯಮಂತ್ರಿಯಾಗಿದ್ದ ಸಿದ್ದರಾಮಯ್ಯ ಹಾಗೂ ಎಸ್.ಎಂ. ಕೃಷ್ಣ ಅವರ ಸಚಿವ ಸಂಪುಟದಲ್ಲಿ ಮಧ್ಯಮ ಹಾಗೂ ಬೃಹತ್ ಕೈಗಾರಿಕೆಗಳ ಸಚಿವರಾಗಿ ಕೆಲಸ ಒಟ್ಟು ಹತ್ತು ವರ್ಷಗಳ ಕಾಲ ಈ ಖಾತೆಗಳ ಸಚಿವರಾಗಿದ್ದರು.
ಮೂಲತಃ ಜನತಾ ಪರಿವಾರದಿಂದ ರಾಜಕೀಯ ಜೀವನವನ್ನ ಆರಂಭಿಸಿದ ಆರ್.ವಿ. ದೇಶಪಾಂಡೆ 1999 ರಲ್ಲಿ ಕಾಂಗ್ರೆಸ್ ಸೇರಿದರು. ಇವರು ತಮ್ಮ ಪ್ರಭಾವಿ ನಾಯಕತ್ವ ಹಾಗೂ ಪರಿಣಾಮಕಾರಿ ಆಡಳಿತಕ್ಕೆ ಹೆಸರುವಾಸಿಯಾಗಿದ್ದಾರೆ.

ತಂದೆ ವಿಶ್ವನಾಥ್ ರಾವ್, ತಾಯಿ ವಿಮಲಾ ಬಾಯಿ. 60 ರ ದಶಕದ ಆರಂಭದಲ್ಲಿ ಬೆಳಗಾವಿಯ ರಾಣಿ ಪಾರ್ವತಿ ದೇವಿ ಕಾಲೇಜಿನಿಂದ ಬಿಎ ಪದವಿ ಪಡೆದರು. ನಂತರ ಹಳಿಯಾಳ ನ್ಯಾಯಾಲಯದಲ್ಲಿ ದಶಕದ ಕಾಲ ನ್ಯಾಯವಾದಿಯಾಗಿ ಕಾರ್ಯನಿರ್ವಹಿಸಿದರು. ರಾಧಾ ದೇಶಪಾಂಡೆ ಇವರ ಪತ್ನಿ. ಪ್ರಸಾದ್ ಮತ್ತು ಪ್ರಶಾಂತ್ ಇವರ ಮಕ್ಕಳು. ಉತ್ತರ ಕನ್ನಡ ಜಿಲ್ಲೆಯ ಹಳಿಯಾಳ ವಿಧಾನಸಭೆ ಕ್ಷೇತ್ರವನ್ನು ಸತತ 5 ಬಾರಿ ಪ್ರತಿನಿಧಿಸಿದ್ದಾರೆ. 1994-1999 ರವರೆಗೆ ಜನತಾ ದಳದಿಂದ ಮತ್ತು 1999-2004ರವರೆಗೆ ಕಾಂಗ್ರೆಸ್ ಪಕ್ಷದಿಂದ ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಖಾತೆ ಸಚಿವರಾಗಿದ್ದರು. ಪ್ರಸಕ್ತ 2013 ರ ಕಾಂಗ್ರೆಸ್ ಸರ್ಕಾರದಲ್ಲಿ ಉನ್ನತ ಶಿಕ್ಷಣ ಮತ್ತು ಪ್ರವಾಸೋದ್ಯಮ ಇಲಾಖೆಯ ಸಚಿವರಾಗಿದ್ದಾರೆ.
1994 ರಲ್ಲಿ ದೇವೇಗೌಡರ ಸರ್ಕಾರದಲ್ಲಿ ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಖಾತೆ ಸಚಿವರಾಗಿ, ಬೆಂಗಳೂರು ಐ ಟಿ ಪಿ ಎಲ್, ಬೆಂಗಳೂರು ಐ ಐ ಐ ಟಿ, ಮೈಸೂರಿನ ಇನ್ಫ಼ೋಸಿಸ್ ತರಬೇತಿ ಕೇಂದ್ರ ಸ್ಥಾಪನೆಗೆ ಶೀಘ್ರ ಅನುಮತಿ ಕೊಡಿಸಿದ್ದು ಇವರ ಹೆಗ್ಗಳಿಕೆ. 1999 ರಲ್ಲಿ ಜನತಾದಳ ಪಕ್ಷ ಹೋಳಾದಾಗ, ರೋಷನ್ ಬೇಗ್ ರೊಂದಿಗೆ ಭಾರತೀಯ ಕಾಂಗ್ರೆಸ್ ಪಕ್ಷ ಸೇರಿದರು. ಎಸ್ ಎಂ ಕೃಷ್ಣರ ಸಚಿವ ಸಂಪುಟದಲ್ಲಿ ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಖಾತೆ ಸಚಿವರಾದರು. 1999 ಎಂಟು ಬಾರಿ ಶಾಸಕರಾಗಿರುವ ದೇಶಪಾಂಡೆ ಜನತಾ ಪರಿವಾರದಿಂದ ರಾಜಕಾರಣ ಆರಂಭಿಸಿ 1999 ರಲ್ಲಿ ಕಾಂಗ್ರೆಸ್ ಪಕ್ಷ ಸೇರಿದರು.

ಇನ್ನೂ ಉತ್ತರ ಕನ್ನಡ ಜಿಲ್ಲೆಯ ಹಳಿಯಾಳ ಶಾಸಕ, ಮಾಜಿ ಸಚಿವರಾದ ರಘುನಾಥರಾವ ವಿಶ್ವನಾಥರಾವ್ ದೇಶಪಾಂಡೆ ಅವರ ಕಾರ್ಯವೈಖರಿಯನ್ನ ಮೆಚ್ಚಿ 2022ನೇ ಸಾಲಿನ ಅತ್ಯುತ್ತಮ ಶಾಸಕ ಪ್ರಶಸ್ತಿ ದೊರಕಿದೆ.
ಕಳೆದ 2013ರ ಚುನಾವಣೆಯಲ್ಲಿ 55,005 ಮತಗಳನ್ನು ಪಡೆದಿದ್ದ ಅವರು, 5,939 ಮತಗಳ ಅಂತರದಿಂದ ಜೆಡಿಎಸ್ ಅಭ್ಯರ್ಥಿ ಸುನೀಲ್ ಹೆಗಡೆ (49,066) ಅವರನ್ನು ಸೋಲಿಸಿದ್ದರು. ಈ ಬಾರಿ ಕೂಡ ಇದೇ ಮುಂದುವರಿದಿದ್ದು, ಆರ್.ವಿ ದೇಶಪಾಂಡೆ ಅವರು 2018 ರಲ್ಲಿ 5,100 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ.
ಈ ಬಾರಿ ಕಾಂಗ್ರೆಸ್ ಅಧಿಕಾರದ ಗದ್ದುಗೆಯನ್ನ ಪಡೆಯಲು ರಾಜ್ಯಾದ್ಯಂತ ಪ್ರಚಾರವನ್ನ ನಡೆಸುತ್ತಿದೆ. ಈಗಾಗಲೇ ಕೆಪಿಸಿಸಿ ಅಧ್ಯಕ್ಷ ಹಾಲಿ ಶಾಸಕರಿಗೆ ಟಿಕೆಟ್ ಕನ್ಪರ್ಮ್ ಅಂತ ಹೇಳಿದ್ದು, ಹಳಿಯಾಳದಲ್ಲಿ ಆರ್ ವಿ ದೇಶಪಾಂಡೆ ಅವರಿವೆ ಟಿಕೆಟ್ ಬಹುತೇಕ ಸಿಗಲಿದೆ. ಸದ್ಯ ಕಾಂಗ್ರೆಸ್ ನ ಹಿರಿಯ ನಾಯಕ ಆರ್.ವಿ ದೇಶಪಾಂಡೆ 2023 ರ ವಿಧಾನಸಭಾ ಚುನಾವಣಾ ತಯಾರಿ ನಡೆಸುತ್ತಿದ್ದಾರೆ.
-
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
ಮಾರ್ಚ್ 23ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ನಟಿ ನೋರಾ ಫತೇಹಿ ವೃತ್ತಿಜೀವನಕ್ಕೆ ಕುತ್ತು ತಂದ 'ಸೆರಗ ಸರ್ಸೆ' ವಿವಾದ: ಗಡಿಪಾರು ಮಾಡುವಂತೆ ಗೃಹ ಸಚಿವಾಲಯಕ್ಕೆ ದೂರು -
ಮಾರ್ಚ್ 21ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ಮಾರ್ಚ್ 22ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Ration: ಪಡಿತರ ಚೀಟಿದಾರರಿಗೆ ಭರ್ಜರಿ ಗುಡ್ ನ್ಯೂಸ್ ಕೊಟ್ಟ ಕೇಂದ್ರ ಸರ್ಕಾರ -
Power Cut: ನಾಳೆ ಮಾ.22 ರಿಂದ 25ರವರೆಗೆ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ: ಬೆಸ್ಕಾಂ -
ಆರ್ಸಿಬಿ ಮತ್ತೆ ಚಾಂಪಿಯನ್ ಆಗೋದು ಫಿಕ್ಸ್, ಹ್ಯಾಜಲ್ವುಡ್ ಅಲಭ್ಯತೆ ತಂಡಕ್ಕೆ ವರದಾನ ಎಂದ ಆರ್.ಅಶ್ವಿನ್ -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
ಜಿಯೋ, ಏರ್ಟೆಲ್ಗೆ ಸೆಡ್ಡು ಹೊಡೆಯಲು BSNL ಮಾಸ್ಟರ್ ಪ್ಲಾನ್: ವೊಡಾಫೋನ್ ಐಡಿಯಾ ಜತೆ ಮಹತ್ವದ ಹೆಜ್ಜೆ -
Vande Bharat Express: ಬೆಂಗಳೂರು-ಕಲಬುರಗಿ ಸೇರಿದಂತೆ 4 ರೈಲುಗಳ ವೇಳಾಪಟ್ಟಿ ಪರಿಷ್ಕರಣೆ












Click it and Unblock the Notifications