S.A. Ramadas profile: ಬಿಜೆಪಿಯ ಹುರಿಯಾಳು ಶಾಸಕ ರಾಮದಾಸ್
ಕರ್ನಾಟಕದಲ್ಲಿ ಅದರಲ್ಲೂ ಮೈಸೂರು ಜಿಲ್ಲೆಯ ಪ್ರಭಾವಿ ರಾಜಕಾರಣಿಗಳಲ್ಲಿ ಮಾಜಿ ವೈದ್ಯಕೀಯ ಸಚಿವ ಎಸ್‌ಎ ರಾಮದಾಸ್ ಅವರು ಕೂಡ ಒಬ್ಬರು. ಬಿಜೆಪಿಯಲ್ಲಿ ತಮ್ಮದೇ ಆದ ಐಡೆಂಟಿಟಿಯನ್ನು ಹೊಂದಿದವರು, ಅಲ್ಲದೆ ಪ್ರಧಾನಿ ನರೇಂದ್ರ ಮೋದಿ ಅವರ ಆಪ್ತ.
ಬೆಂಗಳೂರು, ಮಾರ್ಚ್ 3: ಕರ್ನಾಟಕದಲ್ಲಿ ಅದರಲ್ಲೂ ಮೈಸೂರು ಜಿಲ್ಲೆಯ ಪ್ರಭಾವಿ ರಾಜಕಾರಣಿಗಳಲ್ಲಿ ಮಾಜಿ ವೈದ್ಯಕೀಯ ಸಚಿವ ಎಸ್‌ಎ ರಾಮದಾಸ್ ಅವರು ಕೂಡ ಒಬ್ಬರು. ಬಿಜೆಪಿಯಲ್ಲಿ ತಮ್ಮದೇ ಆದ ಐಡೆಂಟಿಟಿಯನ್ನು ಹೊಂದಿದವರು, ಅಲ್ಲದೆ ಪ್ರಧಾನಿ ನರೇಂದ್ರ ಮೋದಿ ಅವರ ಆಪ್ತ. ಹೀಗಾಗಿ ಅವರ ರಾಜಕೀಯ ಹಿನ್ನೆಲೆಯ ಬಗ್ಗೆ ತಿಳಿಯುವುದು ಅಗತ್ಯ.
24 ಅಕ್ಟೋಬರ್ 1957ರಲ್ಲಿ ಜನಿಸಿದ ಎಸ್‌ಎ ರಾಮದಾಸ್ ಅವರ ಪೂರ್ಣ ಹೆಸರು ಎಸ್. ಅಶ್ವಥ್ ನಾರಾಯಣ ರಾವ್ ರಾಮದಾಸ್. ಅವರು ಮೈಸೂರಿನ ಕೃಷ್ಣರಾಜ ವಿಧಾನಸಭಾ ಕ್ಷೇತ್ರದ ಭಾರತೀಯ ಜನತಾ ಪಕ್ಷದ (ಬಿಜೆಪಿ) ಶಾಸಕರಾಗಿದ್ದಾರೆ. ರಾಮದಾಸ್ ಅವರು ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲೂಕಿನ ಧನಗೂರಿನವರು. ಅವರು ಬಿ.ಎ., ಎಂ.ಬಿ.ಎ., ಎಲ್.ಎಲ್.ಬಿ ಪದವಿಯನ್ನು ಪಡೆದಿದ್ದಾರೆ. ಕೃಷ್ಣರಾಜ ಕ್ಷೇತ್ರದಲ್ಲಿ ಸತತ 4 ಬಾರಿ ಶಾಸಕರಾಗಿ ಆಯ್ಕೆಯಾಗುತ್ತಾ ಬಂದಿದ್ದಾರೆ.

ಮೇ 2008 ರಲ್ಲಿ ಕರ್ನಾಟಕದಲ್ಲಿ ಬಿಜೆಪಿಯ ಐತಿಹಾಸಿಕ ವಿಜಯದ ನಂತರ ಅವರು ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ಸಂಸದೀಯ ಕಾರ್ಯದರ್ಶಿಯಾಗಿ ನೇಮಕಗೊಂಡರು. 2010 ರಲ್ಲಿ ಅವರು ಯಡಿಯೂರಪ್ಪ ಸರ್ಕಾರದಲ್ಲಿ ಕ್ಯಾಬಿನೆಟ್ ಸಚಿವರಾಗಿ ನೇಮಕಗೊಂಡರು ಮತ್ತು ವೈದ್ಯಕೀಯ ಶಿಕ್ಷಣ ಖಾತೆಯನ್ನು ವಹಿಸಿಕೊಂಡರು. ಅವರನ್ನು ಮೈಸೂರಿನ ಪ್ರಮುಖ ಹಿಂದೂ ನಾಯಕರಲ್ಲಿ ಒಬ್ಬರೆಂದು ಪರಿಗಣಿಸಲಾಗಿದೆ. ಅವರು 1994 ಮತ್ತು 1999 ರಲ್ಲಿ ಎರಡು ಬಾರಿ ಈ ಕ್ಷೇತ್ರದಿಂದ ಆಯ್ಕೆಯಾಗಿದ್ದಾರೆ. ಆದರೆ 2004 ರಲ್ಲಿ ಎಂ. ಕೆ. ಸೋಮಶೇಖರ್ ವಿರುದ್ಧ ಸೋತಿದ್ದರು.
2008ರ ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಅವರು ಮಾಜಿ ಶಾಸಕರಾಗಿದ್ದ ಕಾಂಗ್ರೆಸ್ ನಾಯಕ ಎಂ.ಕೆ.ಸೋಮಶೇಖರ್ ವಿರುದ್ಧ ಸ್ಪರ್ಧಿಸಿ ಸುಮಾರು 20,000 ಮತಗಳ ಅಂತರದಿಂದ ಗೆದಿದ್ದರು. ಮೇ 2008ರಲ್ಲಿ ಕರ್ನಾಟಕದಲ್ಲಿ ಬಿಜೆಪಿಯ ಐತಿಹಾಸಿಕ ವಿಜಯದ ನಂತರ ಅವರನ್ನು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪನವರ ಸಂಸದೀಯ ಕಾರ್ಯದರ್ಶಿಯಾಗಿ ನೇಮಿಸಲಾಗಿತ್ತು.

2010ರಲ್ಲಿ ಅವರು ಯಡಿಯೂರಪ್ಪ ಸರ್ಕಾರದಲ್ಲಿ ಕ್ಯಾಬಿನೆಟ್ ಸಚಿವರಾಗಿ ನೇಮಕಗೊಂಡು ವೈದ್ಯಕೀಯ ಶಿಕ್ಷಣ ಖಾತೆಯನ್ನು ವಹಿಸಿಕೊಂಡರು. ಅದೇ ಹುದ್ದೆಯಲ್ಲಿ ಮುಂದುವರಿದು ಡಿ.ವಿ. ಸದಾನಂದಗೌಡ ಸರ್ಕಾರದಲ್ಲಿಯೂ ಮುಂದುವರೆದರು. 2008-2013ರ ವಿಧಾನಸಭೆಯಲ್ಲಿ ಮೈಸೂರು ಜಿಲ್ಲೆಗೆ ಜಿಲ್ಲಾ ಉಸ್ತುವಾರಿ ಸಚಿವರೂ ಆಗಿದ್ದರು. 2013ರಲ್ಲಿ ಕೃಷ್ಣರಾಜ ಕ್ಷೇತ್ರದಿಂದ ಸ್ಪರ್ಧಿಸಿ ಐಎನ್‌ಸಿಯ ಎಂ.ಕೆ.ಸೋಮಶೇಖರ್ ಅವರನ್ನು ಸೋಲಿಸಿದ್ದರು. ಮಾಜಿ ಸಚಿವ ರಾಮದಾಸ್ ಮೈಸೂರಿನಲ್ಲಿ ಸಮಾಜ ಸೇವೆಯಲ್ಲಿ ತೊಡಗಿರುವ ಆಸರೆ ಫೌಂಡೇಶನ್ ಎಂಬ ಸ್ವಯಂಸೇವಾ ಸಂಸ್ಥೆಯ ಮುಖ್ಯಸ್ಥರಾಗಿದ್ದಾರೆ.
ರಾಮದಾಸ್‌ರವರ 1994ರಲ್ಲಿ ಭಾರತೀಯ ಜನತಾ ಪಾರ್ಟಿಯಲ್ಲಿ ಸಕ್ರಿಯ ಕಾರ್ಯಕರ್ತರಾಗಿ ರಾಜಕೀಯ ಜೀವನ ಆರಂಭವಾಯಿತು. 1993 ರಿಂದ 1995 ರ ಅವಧಿಯಲ್ಲಿ ಮೈಸೂರು ನಗರ ಬಿಜೆಪಿ ಯುವ ಮೋರ್ಚಾದ ಅಧ್ಯಕ್ಷರಾಗಿ ಅವರು ಸೇವೆ ಸಲ್ಲಿಸಿದರು. ಬಳಿಕ1995ರಿಂದ 1997 ರವರೆಗೆ ಮತ್ತು 1997ರಿಂದ 2000 ವರೆಗೆ ಎರಡು ಬಾರಿಗೆ ಕರ್ನಾಟಕ ರಾಜ್ಯದ ಬಿಜೆಪಿ ಯುವ ಮೋರ್ಚಾದ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದಾರೆ. ಅಲ್ಲಿಂದ ಭಾರತೀಯ ಜನತಾ ಪಕ್ಷದ ರಾಷ್ಟ್ರೀಯ ಪರಿಷತ್ ಸದಸ್ಯರಾಗಿಯೂ ಸೇವೆ ಸಲ್ಲಿಸಿದ ಅನುಭವ ಇವರದ್ದು.
ಈ ರಾಜಕೀಯ ನೆಲೆಗಟ್ಟಿನೊಂದಿಗೆ ನೇರವಾಗಿ ರಾಜಕೀಯ ಅಖಾಡಕ್ಕೆ ಇಳಿದಾಗ ಪ್ರಥಮ ಬಾರಿಗೆ 1994ರಲ್ಲಿ ನಡೆದ ವಿಧಾನಸಭಾ ಚುನಾವಣೆಗೆ ಕೃಷ್ಣರಾಜ ಕ್ಷೇತ್ರದಿಂದ ಭಾರತೀಯ ಜನತಾ ಪಕ್ಷದ ಅಭ್ಯರ್ಥಿಯಾಗಿ ಸ್ಪರ್ಧಿಸಿದರು. ಮೊದಲ ಬಾರಿಗೆ ಸುಮಾರು 9500 ಮತಗಳ ಅಂತರದಲ್ಲಿ ಜಯಗಳಿಸಿ ಶಾಸಕರಾಗಿ ಆಯ್ಕೆಗೊಂಡರು. ನಂತರ ಕೃಷ್ಣರಾಜ ಕ್ಷೇತ್ರವೇ ಇವರ ತವರು ಮನೆಯಾಯಿತು. 1999 ರಲ್ಲಿ ನಡೆದ ಚುನಾವಣೆಯಲ್ಲಿ ಎರಡನೇ ಬಾರಿಗೆ ಸುಮಾರು 10 ಸಾವಿರ ಮತಗಳ ಅಂತರದಿಂದ ಗೆದ್ದಿದ್ದರು. ಮೂರನೇ ಬಾರಿಗೆ ಸುಮಾರು 19 ಸಾವಿರ ಮತಗಳ ಭಾರಿ ಅಂತರದಿಂದ ಗೆಲ್ಲತ್ತಾರೆ. ಮತ್ತೆ 2004 ರಲ್ಲಿ ನಾಲ್ಕನೇ ಬಾರಿಗೆ ಸುಮಾರು 26500 ಮತಗಳ ಭಾರಿ ಅಂತರದಿಂದ ವಿಜಯಶಾಲಿಯಾಗಿದ್ದಾರೆ.
-
ನಟಿ ನೋರಾ ಫತೇಹಿ ವೃತ್ತಿಜೀವನಕ್ಕೆ ಕುತ್ತು ತಂದ 'ಸೆರಗ ಸರ್ಸೆ' ವಿವಾದ: ಗಡಿಪಾರು ಮಾಡುವಂತೆ ಗೃಹ ಸಚಿವಾಲಯಕ್ಕೆ ದೂರು -
ಮಾರ್ಚ್ 21ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ಮಾರ್ಚ್ 22ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Power Cut: ನಾಳೆ ಮಾ.22 ರಿಂದ 25ರವರೆಗೆ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ: ಬೆಸ್ಕಾಂ -
Ration: ಪಡಿತರ ಚೀಟಿದಾರರಿಗೆ ಭರ್ಜರಿ ಗುಡ್ ನ್ಯೂಸ್ ಕೊಟ್ಟ ಕೇಂದ್ರ ಸರ್ಕಾರ -
ಆರ್ಸಿಬಿ ಮತ್ತೆ ಚಾಂಪಿಯನ್ ಆಗೋದು ಫಿಕ್ಸ್, ಹ್ಯಾಜಲ್ವುಡ್ ಅಲಭ್ಯತೆ ತಂಡಕ್ಕೆ ವರದಾನ ಎಂದ ಆರ್.ಅಶ್ವಿನ್ -
March 21 Horoscope: 12 ರಾಶಿಗಳ ಇಂದುದಿನ ಭವಿಷ್ಯ – ಹಣ, ಆರೋಗ್ಯ, ಕೆಲಸದ ಫಲಿತಾಂಶ -
SWR: ವಿಜಯಪುರ-ಮಂಗಳೂರು ಎಕ್ಸ್ಪ್ರೆಸ್ ರೈಲು ಸಂಚಾರದಲ್ಲಿ ಭಾಗಶಃ ರದ್ದು, ವೇಳಾಪಟ್ಟಿ ಗಮನಿಸಿ -
ಜಿಯೋ, ಏರ್ಟೆಲ್ಗೆ ಸೆಡ್ಡು ಹೊಡೆಯಲು BSNL ಮಾಸ್ಟರ್ ಪ್ಲಾನ್: ವೊಡಾಫೋನ್ ಐಡಿಯಾ ಜತೆ ಮಹತ್ವದ ಹೆಜ್ಜೆ -
Rain Alert: ಕರ್ನಾಟಕದಲ್ಲಿ ಮಾ.27ರವರೆಗೆ ಗುಡುಗು ಸಹಿತ ಮಳೆ, ಕರಾವಳಿಗೆ ಉಷ್ಣ ಅಲೆ ಎಚ್ಚರಿಕೆ -
ಯುವತಿಯರ ಜೊತೆ ಸೆಕ್ಯೂರಿಟಿ ಗಾರ್ಡ್ ಭರ್ಜರಿ ಸ್ಟೆಪ್ಸ್: 'ಬೇಬಿ ಡಾಲ್' ಡ್ಯಾನ್ಸ್ ವಿಡಿಯೋ ಸಖತ್ Viral -
Gold Price Today: ಇಂದು ಚಿನ್ನ-ಬೆಳ್ಳಿ ದರದಲ್ಲಿ ದಾಖಲೆಯ ಇಳಿಕೆ, 30000 ರೂ ಕುಸಿದ ಬಿಳಿ ಲೋಹ











Click it and Unblock the Notifications