ಖ್ಯಾತ ಸ್ಯಾಕ್ಸೋಫೋನ್ ವಾದಕ ಕದ್ರಿ ಗೋಪಾಲನಾಥ್ ವ್ಯಕ್ತಿಚಿತ್ರ

Recommended Video

      Dakshina Kannada Mourns Kadri Gopalnath Legendary Saxophonist | Oneindia Kannada

      ವಿದೇಶಿ ವಾದ್ಯವನ್ನು ತನ್ನದಾಗಿಸಿಕೊಂಡು ಅದಕ್ಕೆ ಭಾರತೀಯ ಸಂಗೀತವನ್ನು ಕರಗತ ಮಾಡಿಸಿದ ಖ್ಯಾತ ಸ್ಯಾಕ್ಸೋಫೋನ್ ಮಾಂತ್ರಿಕ ಕದ್ರಿ ಗೋಪಾಲನಾಥ್‌ ಅವರು.

      ಸ್ಯಾಕ್ಸೋಫೋನ್ ವಾದನದಲ್ಲಿ ಕರ್ನಾಟಕ ಶಾಸ್ತ್ರೀಯ ಸಂಗೀತದ ಅಳವಡಿಕೆಯಿಂದ ಅವರು ವಿಶ್ವಪ್ರಸಿದ್ಧಿ ಪಡೆದವರಾಗಿದ್ದಾರೆ.

      ಗೋಪಾಲನಾಥ್ ಜೀವನ: ಗೋಪಾಲನಾಥ್ ಅವರು 1950ರ ವರ್ಷದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಜನಿಸಿದರು. ತಂದೆ ತನಿಯಪ್ಪನವರು ನಾಗಸ್ವರ ವಿದ್ವಾಂಸರಾಗಿದ್ದರಿಂದ ಸಂಗೀತವೆಂಬುದು ಗೋಪಾಲನಾಥರ ದಿನಚರಿಯಾಗಿತ್ತು.ತಾಯಿ ಗಂಗಮ್ಮನವರು.

      Saxophonist Kadri Gopalnath Brief Profile

      ಸ್ಯಾಕ್ಸೋಫೋನ್ ವಾದಕ ಕದ್ರಿ ಗೋಪಾಲನಾಥ್ ಅವರು ಸ್ವರ ಮಾಧುರ್ಯಕ್ಕೆ ವಿರಾಮದ ಚುಕ್ಕಿ ನೀಡಿದ್ದಾರೆ. ಅವರು ಮಂಗಳೂರಿನ ಎಜೆ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ.

      ಕೆಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಕದ್ರಿಯವರು ಮಂಗಳೂರು ಎಜೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು.

      ಕದ್ರಿ ಗೋಪಾಲನಾಥರು ಬಾಲ್ಯದಿಂದಲೇ ತಂದೆಯವರಿಂದ ನಾಗಸ್ವರ ಶಿಕ್ಷಣವನ್ನು ಪಡೆದರು. ಆದರೆ ಅವರ ಬದುಕಿಗೆ ತೆರೆದದ್ದು ಮತ್ತೊಂದು ಬಾಗಿಲು. ಒಮ್ಮೆ ಅವರು ಮೈಸೂರು ಅರಮನೆಯ ಬ್ಯಾಂಡ್ ಸೆಟ್ನೊಂದಿಗೆ ಸ್ಯಾಕ್ಸೋಫೋನ್ ವಾದನವನ್ನು ಕೇಳಿ ಆ ವಾದ್ಯದಲ್ಲಿರುವ ವೈವಿದ್ಯತೆಗೆ ಮನಸೋತು ಸ್ಯಾಕ್ಸೋಫೋನ್ನಲ್ಲಿಯೇ ಪ್ರಾವಿಣ್ಯತೆ ಸಂಪಾದಿಸಬೇಕೆಂಬ ದೃಢ ನಿರ್ಧಾರ ಕೈಗೊಂಡರು.

      ಗುರು ಅನುಗ್ರಹ: ಕದ್ರಿ ಗೋಪಾಲನಾಥರು ಮದ್ರಾಸಿನ ಟಿ. ವಿ. ಗೋಪಾಲಕೃಷ್ಣನ್ ಅವರ ಸಂಪರ್ಕಕ್ಕೆ ಬಂದರು. ಗೋಪಾಲನಾಥರಲ್ಲಿದ್ದ ಅಗಾಧ ಪ್ರತಿಭೆಯನ್ನು ಗಮನಿಸಿದ ಗೋಪಾಲಕೃಷ್ಣನ್ ಅವರು ಕದ್ರಿ ಗೋಪಾಲನಾಥರು ಒಬ್ಬ ಅಂತರರಾಷ್ಟ್ರೀಯ ಪ್ರತಿಭೆಯಾಗಿ ರೂಪುಗೊಳ್ಳಲು ನೀರೆರೆದರು. ಗೋಪಾಲನಾಥರು ತಮ್ಮ ಗುರುಗಳ ಅನುಗ್ರಹವೇ ತಮ್ಮ ಎಲ್ಲಾ ಸಾಧನೆಗಳ ಹಿಂದಿರುವ ಶಕ್ತಿ ಎಂದು ಭಕ್ತಿಯಿಂದ ಸ್ಮರಿಸುತ್ತಾರೆ.

      ಗೋಪಾಲನಾಥ್ ಅವರಿಗೆ ಸಂದಿರುವ ಪ್ರಶಸ್ತಿಗಳು:ಕದ್ರಿ ಗೋಪಾಲನಾಥರಿಗೆ ಸಲ್ಲದ ಪ್ರಶಸ್ತಿಗಳೇ ಇಲ್ಲ. ಭಾರತ ಸರ್ಕಾರದ ಪದ್ಮಶ್ರೀ ಪ್ರಶಸ್ತಿ, ಕೇಂದ್ರ ಸಂಗೀತ ನಾಟಕ ಅಕಾಡೆಮಿ ಪ್ರಶಸ್ತಿ, ತಮಿಳುನಾಡು ಸರಕಾರದ ಕಲೈಮಾಮಣಿ, ಕರ್ನಾಟಕ ಕಲಾಶ್ರೀ, ಗಾನಕಲಾ ಭೂಷಣ, ನಾದ ಗಂಧರ್ವ, ನಾದೋಪಾಸನ ಬ್ರಹ್ಮ ಸುನಾದ, ನಾದಕಲಾ ರತ್ನ, ನಾದಕಲಾನಿಧಿ, ಸಂಗೀತ ವಿದ್ಯಾರತ್ನ, ಸಂಗೀತ ರತ್ನ, ಶೃಂಗೇರಿ - ಮಂತ್ರಾಲಯ - ಅಹೋಬಿಲ ಮುಂತಾದ ಪೀಠಗಳಿಂದ ಸನ್ಮಾನ, ಕಂಚಿ ಕಾಮಕೋಠಿ ಆಸ್ಥಾನ ವಿದ್ವಾನ್, ಬೆಂಗಳೂರು ವಿಶ್ವವಿದ್ಯಾಲಯದ ಡಾಕ್ಟರೇಟ್ ಮುಂತಾದ ಅನೇಕ ಪ್ರಶಸ್ತಿ ಗೌರವಗಳು ಕದ್ರಿ ಗೋಪಾಲನಾಥರನ್ನು ಅರಸಿಬಂದಿವೆ.

      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+