How To Apply For Student Bus Pass: ವಿದ್ಯಾರ್ಥಿಗಳು ಬಸ್ ಪಾಸ್ ಪಡೆಯಲು ಸೇವಾ ಸಿಂಧು ಪೋರ್ಟಲ್‌ನಲ್ಲಿ ಅರ್ಜಿ
Student Bus Pass 2023: 2023-24ನೇ ಸಾಲಿನ ಶೈಕ್ಷಣಿಕ ವರ್ಷ ಆರಂಭಗೊಂಡಿದೆ. ಶಾಲಾ-ಕಾಲೇಜುಗಳು ಆರಂಭಗೊಡಿವೆ. ಕರ್ನಾಟಕ ಸರ್ಕಾರದ 'ಶಕ್ತಿ' ಯೋಜನೆಯಡಿ ವಿದ್ಯಾರ್ಥಿನಿಯರು ಉಚಿತವಾಗಿ ಸಾಮಾನ್ಯ ಸರ್ಕಾರಿ ಬಸ್‌ಗಳಲ್ಲಿ ತೆರಳಬಹುದು. ಆದರೆ ವಿದ್ಯಾರ್ಥಿಗಳು ಬಸ್ ಪಾಸು ಪಡೆಯಬೇಕಿದೆ. ಪಾಸು ಪಡೆಯಲು ಆನ್‌ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಕೆ ಮಾಡಬಹುದಾಗಿದೆ.
ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ವಿದ್ಯಾರ್ಥಿಗಳ ಬಸ್ ಪಾಸುಗಳ ದರಪಟ್ಟಿಯನ್ನು ಬಿಡುಗಡೆ ಮಾಡಿದೆ. ಪ್ರಾಥಮಿಕ ಶಾಲೆಗಳಿಂದ ಹಿಡಿದು ಸಂಜೆ ಕಾಲೇಜು/ಪಿಎಚ್‌ಡಿ ಪದವಿ ತನಕ ವಿದ್ಯಾರ್ಥಿಗಳು ಬಸ್ ಪಾಸುಗಳನ್ನು ಪಡೆದು ಸಂಚಾರ ನಡೆಸಬಹುದು. ಅದಕ್ಕಾಗಿ ನಿಗದಿತ ಪಾಸುಗಳನ್ನು ಪಡೆಯಬೇಕಿದೆ.

2023-24ನೇ ಸಾಲಿನ ಶೈಕ್ಷಣಿಕ ವರ್ಷದ ಚಟುವಟಿಕೆಗಳು ಈಗಾಗಲೇ ಪ್ರಾರಂಭವಾಗಿರುತ್ತವೆ. ಪ್ರಸಕ್ತ ಸಾಲಿನಲ್ಲಿ ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ (ವಾಕರಸಾ) ಸಂಸ್ಥೆಯ ವಿದ್ಯಾರ್ಥಿ ಬಸ್ ಪಾಸ್ ಪಡೆಯಲು ಸೇವಾಸಿಂಧು ಪೋರ್ಟಲ್‌ನಲ್ಲಿ ಅರ್ಜಿ ಸಲ್ಲಿಸಬೇಕಿರುತ್ತದೆ ಎಂದು ಹೇಳಿದೆ. ಸರ್ಕಾರದ ಆದೇಶದಂತೆ ಸಂಪೂರ್ಣ ಗಣಕೀಕೃತವಾಗಿ ವಿದ್ಯಾರ್ಥಿ ಬಸ್ ಪಾಸ್‌ಗಳನ್ನು ವಿತರಿಸಲಾಗುತ್ತಿದೆ.
ಪಾಸು ಪಡೆಯಲು ವಿದ್ಯಾರ್ಥಿಗಳು ಸೇವಾಸಿಂಧು ಪೋರ್ಟಲ್‌ನಲ್ಲಿ ಅರ್ಜಿ ಸಲ್ಲಿಸಬೇಕಿದ್ದು, ಅರ್ಜಿ ಸಲ್ಲಿಕೆ ಮಾಡುವಾಗ ಕ್ರಮಗಳನ್ನು ಅನುಸರಿಸುವುದು ಎಂದು ತಿಳಿಸಿದೆ.
ಕರ್ನಾಟಕದಲ್ಲಿ ವಿದ್ಯಾರ್ಥಿ ಬಸ್ ಪಾಸ್ ಅರ್ಜಿ ಸಲ್ಲಿಕೆ ಹೇಗೆ?
ವಿದ್ಯಾರ್ಥಿಗಳು ಸೇವಾಸಿಂಧು ಪೋರ್ಟಲ್‌ನಲ್ಲಿ ಅರ್ಜಿಯನ್ನು ಸಲ್ಲಿಸಬೇಕಿರುತ್ತದೆ. ವಿಳಾಸ https://sevasindhuservices.karnataka.gov.in/buspassservices
ವಿದ್ಯಾರ್ಥಿಗಳು ಸೇವಾಸಿಂಧು ಪೋರ್ಟಲ್‌ನಲ್ಲಿ ಬಸ್ ಪಾಸ್‌ಗಾಗಿ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ಆನ್ ಲೈನ್ ಪೋರ್ಟಲ್‌ನಲ್ಲಿ ಅರ್ಜಿ ಸಲ್ಲಿಸಲು ಯಾವುದೇ ಶುಲ್ಕಗಳು ಇರುವುದಿಲ್ಲ.
ಅಲ್ಲದೇ ವಿದ್ಯಾರ್ಥಿಗಳು, ಕರ್ನಾಟಕ-ಒನ್ ಮತ್ತು ಗ್ರಾಮ-ಒನ್ ಕೇಂದ್ರಗಳಿಗೆ ಭೇಟಿ ನೀಡಿ ಅಲ್ಲಿನ ಸಿಬ್ಬಂದಿಗಳ ಮೂಲಕವು ಅರ್ಜಿ ಸಲ್ಲಿಸಬಹುದಾಗಿದೆ. ಈ ಕೇಂದ್ರಗಳಲ್ಲಿ ಅರ್ಜಿ ಸಲ್ಲಿಸಲು ಸರ್ಕಾರದ ಆದೇಶದಂತೆ ರೂ. 30 ಸೇವಾ ಶುಲ್ಕವನ್ನು ಸದರಿ ಕೇಂದ್ರಗಳ ಸಿಬ್ಬಂದಿಗಳು ಪಡೆಯಲು ಅವಕಾಶವಿರುತ್ತದೆ.
ಅರ್ಜಿ ಅನುಮೋದನೆಯಾದ ವಿದ್ಯಾರ್ಥಿಗಳಿಗೆ ಪಾಸು ಪಡೆಯಲು ಭೇಟಿ ನೀಡಬೇಕಿರುವ ಕೌಂಟರ್‌ನ ಹೆಸರು ವಿಳಾಸ ಮಾಹಿತಿಯನ್ನು ಅರ್ಜಿಯಲ್ಲಿ ನೀಡಲಾದ ಮೊಬೈಲ್ ಸಂಖ್ಯೆಗೆ ಎಸ್‌ಎಂಎಸ್ ಮುಖೇನ ಕಳುಹಿಸಲಾಗುವುದು.
ತದನಂತರ ವಿದ್ಯಾರ್ಥಿಗಳು ಆಯ್ಕೆ ಮಾಡಿದ ಕೌಂಟರ್‌ಗೆ ತೆರಳಿ, ನಿಗದಿತ ಪಾಸಿನ ಶುಲ್ಕವನ್ನು ನಗದು, ಕ್ರೆಡಿಟ್ ಕಾರ್ಡ್/ ಡೆಬಿಟ್ ಕಾರ್ಡ್/ UPI ಮುಖೇನ ಪಾವತಿಸಿ ಪಾಸ್ ಅನ್ನು ಪಡೆಯಬಹುದಾಗಿದೆ.
ಕರ್ನಾಟಕ ಸರ್ಕಾರವು ಕರ್ನಾಟಕ ರಾಜ್ಯದ ಮಹಿಳೆಯರಿಗೆ (ವಿದ್ಯಾರ್ಥಿನಿಯರು, ಲಿಂಗತ್ವ ಅಲ್ಪ ಸಂಖ್ಯಾತರು ಸೇರಿದಂತೆ) ಶಕ್ತಿ ಯೋಜನೆಯಡಿ ಕರ್ನಾಟಕ ರಾಜ್ಯದೊಳಗೆ ಉಚಿತ ಪ್ರಯಾಣ ಸೌಲಭ್ಯವನ್ನು ಒದಗಿಸಿರುತ್ತದೆ. ನೆರೆರಾಜ್ಯದಲ್ಲಿ ವಾಸವಿದ್ದು ಕರ್ನಾಟಕ ರಾಜ್ಯದ ಶಾಲೆ/ ಕಾಲೇಜುಗಳಲ್ಲಿ ವ್ಯಾಸಂಗ ಮಾಡುತ್ತಿರುವ ಹಾಗೂ ಕರ್ನಾಟಕ ರಾಜ್ಯದಲ್ಲಿ ವಾಸವಿದ್ದು, ನೆರೆ ರಾಜ್ಯದ ಶಾಲೆ/ ಕಾಲೇಜುಗಳಲ್ಲಿ ವ್ಯಾಸಂಗ ಮಾಡುತ್ತಿರುವ, ಗಡಿಭಾಗದ ಮಾರ್ಗಗಳಲ್ಲಿನ ವಿದ್ಯಾರ್ಥಿನಿಯರು ವಿದ್ಯಾರ್ಥಿ ರಿಯಾಯಿತಿ ಬಸ್ ಪಾಸ್ ಪಡೆಯುವ ಅಗತ್ಯವಿದೆ ಎಂದು ಸ್ಪಷ್ಟಪಡಿಸಲಾಗಿದೆ.
ಗಡಿಭಾಗದ ವಿದ್ಯಾರ್ಥಿಗಳು ಪಾಸುಗಳನ್ನು ಪಡೆಯಲು ಮೇಲೆ ತಿಳಿಸಿದ ಮಾರ್ಗವನ್ನು ಅನುಸರಿಸಬೇಕು. ವಾಕರಸಾಸಂಸ್ಥೆಯ ವ್ಯಾಪ್ತಿಯ 55 ಬಸ್ ನಿಲ್ದಾಣಗಳ ಹಾಗೂ 17 ಕರ್ನಾಟಕ-1 ಕೇಂದ್ರಗಳ ಪಾಸ್ ವಿತರಣಾ ಕೌಂಟರ್‌ಗಳ ವಿವರಗಳನ್ನು ವಿದ್ಯಾರ್ಥಿಗಳ ಮಾಹಿತಿಗಾಗಿ ಸಂಸ್ಥೆಯ ವೆಬ್‌ಸೈಟ್‌ನಲ್ಲಿ ಒದಗಿಸಲಾಗಿದೆ. ವೆಬ್ ಸೈಟ್ ವಿಳಾಸ https://nwkrtc.karnataka.gov.in.
ಸೇವಾ ಸಿಂಧು ಸಹಾಯವಾಣಿ ಸಂಖ್ಯೆ
ವಿದ್ಯಾರ್ಥಿ ಪಾಸುಗಳಿಗೆ ಅರ್ಜಿ ಸಲ್ಲಿಕೆ ಮಾಡುವಾಗ ದೂರುಗಳು ಏನಾದರೂ ಇದ್ದರೆ ಸಹಾಯವಾಣಿಗೆ ಕರೆ ಮಾಡಬಹುದಾಗಿದೆ. ಸೇವಾ ಸಿಂಧು ಮೂಲಕ ಅರ್ಜಿ ಸಲ್ಲಿಸುವ ಪ್ರಕ್ರಿಯೆಗೆ ಸಂಬಂಧಿಸಿದ ವಿಷಯಗಳಿಗೆ ಸಹಾಯವಾಣಿ 8792662814, 8792662816. ಪಾಸ್ ವಿತರಣಾ ಕೇಂದ್ರದಲ್ಲಿ ಪಾಸ್ ಕಾರ್ಡ್‌ನ ಮುದ್ರಣ & ವಿತರಣೆಗೆ ಸಂಬಂಧಿಸಿದ ದೂರುಗಳಿದ್ದರೆ 8904085030 ಸಂಖ್ಯೆಗೆ ಸಂಪರ್ಕಿಸಬಹುದು.












Click it and Unblock the Notifications