• search
  • Live TV
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts

ವಿರೋಧಿಗಳ ನಡುವೆ ಮೈತ್ರಿ: ಶಿವಸೇನಾ-ಕಾಂಗ್ರೆಸ್ 'ಹಸ್ತಲಾಘವ' ಸಾಧ್ಯವೇ?

|

ಮಹಾರಾಷ್ಟ್ರದಲ್ಲಿ ಸೈದ್ಧಾಂತಿಕವಾಗಿ ತನ್ನ ಬದ್ಧ ವೈರಿಗಳಾದ ಎನ್‌ಸಿಪಿ ಮತ್ತು ಕಾಂಗ್ರೆಸ್‌ ಜತೆಗೆ ಶಿವಸೇನಾ ಕೈಜೋಡಿಸಿ ಸರ್ಕಾರ ರಚಿಸುವ ವಿಚಾರವೇ ಅಚ್ಚರಿ ಮೂಡಿಸಿತ್ತು. ಎನ್‌ಸಿಪಿ ಜತೆಗೆ ರಾಜಕೀಯವಾಗಿ ಉತ್ತಮ ಬಾಂಧವ್ಯ ಹೊಂದಿದ್ದರೂ, ಬಿಜೆಪಿ ಅಥವಾ ಶಿವಸೇನಾ, ಸರ್ಕಾರ ರಚನೆಗೆ ಕಾಂಗ್ರೆಸ್‌ ಜತೆ ಮೈತ್ರಿ ಮಾಡಿಕೊಳ್ಳುವ ವಿಚಾರ ಅಸಾಧ್ಯ ಎಂಬುದು ಅವುಗಳ ರಾಜಕೀಯ ವಿಚಾರಧಾರೆಗಳನ್ನು ಬಲ್ಲವರಿಗೆ ತಿಳಿದ ವಿಚಾರ. ಆದರೆ ಮುಖ್ಯಮಂತ್ರಿ ಗಾದಿಗಾಗಿ ಪಟ್ಟು ಹಿಡಿದಿದ್ದ ಶಿವಸೇನಾ, ಬಿಜೆಪಿಯೊಂದಿಗಿನ ಸುಮಾರು 35 ವರ್ಷಗಳ ಸಖ್ಯ ತೊರೆದು ತನ್ನ ರಾಜಕೀಯ ಕಡು ವೈರಿಯ ಜತೆಗೂಡಿ ಸರ್ಕಾರ ರಚನೆಗೆ ಮುಂದಾಗಿದೆ.

ಶಿವಸೇನಾ ಸಂಸ್ಥಾಪಕ ಬಾಳ ಠಾಕ್ರೆ ತಮ್ಮ ಬದುಕಿನುದ್ದಕ್ಕೂ ಕಾಂಗ್ರೆಸ್‌ಅನ್ನು ವಿರೋಧಿಸಿಕೊಂಡೇ ಬಂದಿದ್ದರು. ಮಹಾರಾಷ್ಟ್ರದಲ್ಲಿ ತಮ್ಮ ಕುಟುಂಬದವರು ಮುಖ್ಯಮಂತ್ರಿಯಾಗುವುದು ಖಚಿತ ಎಂದು ತಂದೆಗೆ ನೀಡಿದ್ದ ಮಾತನ್ನು ಈಡೇರಿಸುವುದಾಗಿ ಶಿವಸೇನಾ ಮುಖ್ಯಸ್ಥ ಉದ್ಧವ್ ಠಾಕ್ರೆ ಹೇಳುತ್ತಿದ್ದಾರೆ. ಆದರೆ ಅದಕ್ಕಾಗಿ ಅವರು ತಂದೆ ತೀವ್ರವಾಗಿ ವಿರೋಧಿಸುತ್ತಿದ್ದ ಕಾಂಗ್ರೆಸ್ ಜತೆಗೆ ಸೇರಿಕೊಳ್ಳುತ್ತಿರುವುದು ಸರಿಯೇ? ಎಂದು ಸಾಮಾಜಿಕ ಜಾಲತಾಣಗಳಲ್ಲಿ ಚರ್ಚೆ ನಡೆಯುತ್ತಿದೆ. ಚುನಾವಣೆಗೂ ಮುನ್ನ ಬಿಜೆಪಿ-ಶಿವಸೇನಾ ನಡುವೆ ನಡೆದಿದ್ದ ಮೈತ್ರಿ ಫಲಿತಾಂಶ ಬಂದ ದಿನದಿಂದಲೇ ಮುರಿದುಬಿದ್ದಂತಾಗಿತ್ತು.

ಹಿಂದುತ್ವದ ಬಗ್ಗೆ ಮಾತೇ ಆಡೊಲ್ಲ: ಕಾಂಗ್ರೆಸ್‌ಗೆ ಶಿವಸೇನಾ ಭರವಸೆ?

ಈ ರೀತಿಯ ವಿಭಿನ್ನ ವಿಚಾರಧಾರೆಯುಳ್ಳ ರಾಜಕೀಯ ಪಕ್ಷಗಳು ಸೇರಿ ಸರ್ಕಾರ ರಚಿಸಿರುವುದು ಇದು ಮೊದಲ ಸಲವೇನಲ್ಲ. ಬಿಜೆಪಿ ಮತ್ತು ಕಾಂಗ್ರೆಸ್ ತನ್ನ ಬದ್ಧ ವಿರೋಧಿಗಳೊಂದಿಗೆ ಮೈತ್ರಿ ಮಾಡಿಕೊಂಡ ಉದಾಹರಣೆಗಳಿವೆ. ಸ್ವತಃ ಬಿಜೆಪಿ ಮತ್ತು ಕಾಂಗ್ರೆಸ್ ನಡುವೆಯೂ ಮೈತ್ರಿ ನಡೆದಿದೆ. ಅಂತಹ ಕೆಲವು ಮೈತ್ರಿಗಳ ಮಾಹಿತಿ ಇಲ್ಲಿದೆ.

ಕಾಂಗ್ರೆಸ್-ಬಿಜೆಪಿ ಮೈತ್ರಿ

ಕಾಂಗ್ರೆಸ್-ಬಿಜೆಪಿ ಮೈತ್ರಿ

ಭಾರತದ ರಾಜಕೀಯ ಇತಿಹಾಸದಲ್ಲಿ ಅತ್ಯಂತ ಅಸಹಜ ಎನಿಸುವ ಮೈತ್ರಿ ನಡೆದಿರುವುದು ಮಿಜೋರಾಂನ ಚಕ್ಮಾ ಸ್ವಾಯತ್ತ ಜಿಲ್ಲಾ ಕೌನ್ಸಿಲ್‌ನಲ್ಲಿ. ಇಲ್ಲಿ 2018ರಲ್ಲಿ 20 ಸದಸ್ಯರ ಕೌನ್ಸಿಲ್‌ಗೆ ಚುನಾವಣೆ ನಡೆದಿತ್ತು. ಬಿಜೆಪಿ ನೇತೃತ್ವದ ಈಶಾನ್ಯ ಪ್ರಜಾಪ್ರಭುತ್ವ ಮೈತ್ರಿಕೂಟ (ಎನ್‌ಇಡಿಎ) ಎಂಟು ಸ್ಥಾನಗಳಲ್ಲಿ ಗೆದ್ದು ದೊಡ್ಡ ಪಕ್ಷವಾಗಿ ಹೊರಹೊಮ್ಮಿತು. ಕಾಂಗ್ರೆಸ್ ಏಳು ಸ್ಥಾನಗಳಲ್ಲಿ ಗೆದ್ದಿದ್ದರೆ ಬಿಜೆಪಿ ಐದರಲ್ಲಿ ಗೆಲುವು ಸಾಧಿಸಿತ್ತು. ಇಲ್ಲಿ ಬದ್ಧ ವೈರಿಗಳಾದ ಕಾಂಗ್ರೆಸ್ ಮತ್ತು ಬಿಜೆಪಿ ಜತೆಗೂಡಿ ಮೈತ್ರಿ ಮಾಡಿಕೊಂಡು ಆಡಳಿತ ನಡೆಸಿದ್ದವು.

ಬಿಜೆಪಿ-ಪಿಡಿಪಿ ಮೈತ್ರಿ

ಬಿಜೆಪಿ-ಪಿಡಿಪಿ ಮೈತ್ರಿ

2014ರಲ್ಲಿ ನಡೆದ ಜಮ್ಮು ಮತ್ತು ಕಾಶ್ಮೀರ ವಿಧಾನಸಭೆ ಚುನಾವಣೆಯ ಬಳಿಕ ಎರಡು ವಿಭಿನ್ನ ಸಿದ್ಧಾಂತಗಳ ಪೀಪಲ್ಸ್ ಡೆಮಾಕ್ರಟಿಕ್ ಪಾರ್ಟಿ (ಪಿಡಿಪಿ) ಮತ್ತು ಬಿಜೆಪಿ ಅಚ್ಚರಿಯ ಮೈತ್ರಿ ಮಾಡಿಕೊಂಡು ಸರ್ಕಾರ ರಚಿಸಿದ್ದವು. ಪಿಡಿಪಿ ಪ್ರತ್ಯೇಕತಾವಾದಿಗಳ ಪರವಾದ ಪಕ್ಷ ಎಂದು ಚುನಾವಣೆಗೂ ಮುನ್ನ ಬಿಜೆಪಿ ಗಂಭೀರ ಆರೋಪಗಳನ್ನು ಮಾಡಿತ್ತು. ಜಮ್ಮು ಮತ್ತು ಕಾಶ್ಮೀರದಲ್ಲಿ 370ನೇ ವಿಧಿಯನ್ನು ರದ್ದುಗೊಳಿಸುವುದಾಗಿ ಬಿಜೆಪಿ ಹೇಳುತ್ತಿದ್ದರೆ, ಭಾರತದೊಂದಿಗಿನ ಇತರೆ ಭಾಗಗಳೊಂದಿಗೆ ಸಂಬಂಧ ಇರಿಸಿಕೊಳ್ಳಲು ಆ ವಿಧಿ ನೆರವಾಗುತ್ತಿದೆ ಎಂದು ಪಿಡಿಪಿ ಪ್ರತಿಪಾದಿಸುತ್ತಿತ್ತು. ಇಂತಹ ವೈರುಧ್ಯ ಚಿಂತನೆಗಳ ನಡುವೆಯೂ ಬಿಜೆಪಿ ನಾಯಕ ರಾಮ್ ಮಾಧವ್ ನೇತೃತ್ವದಲ್ಲಿ ಜಮ್ಮು ಮತ್ತು ಕಾಶ್ಮೀರದಲ್ಲಿ ಪಿಡಿಪಿ-ಬಿಜೆಪಿ ಸರ್ಕಾರ ಅಸ್ತಿತ್ವಕ್ಕೆ ಬಂದಿತ್ತು. 2018ರಲ್ಲಿ ಒಡಕು ಮೂಡಿದ ಕಾರಣ ಮೈತ್ರಿ ಮುರಿದುಬಿತ್ತು.

ಶಿವಸೇನೆಗೆ ಇನ್ನೂ ಕಾಲ ಮಿಂಚಿಲ್ಲ; ಬಿಜೆಪಿ ಜೊತೆ ಕೈ ಜೋಡಿಸಿ ಎಂದ ಡಿವಿಎಸ್

ಕಾಂಗ್ರೆಸ್-ಎಎಪಿ ಸರ್ಕಾರ

ಕಾಂಗ್ರೆಸ್-ಎಎಪಿ ಸರ್ಕಾರ

ಲೋಕಪಾಲ್ ರಚನೆಗಾಗಿ ನಡೆದ ಬೃಹತ್ ಹೋರಾಟ ಮುಂದೆ ಆಮ್ ಆದ್ಮಿ ಪಕ್ಷದ (ಎಎಪಿ) ಉಗಮಕ್ಕೂ ವೇದಿಕೆಯಾಯಿತು. ದೇಶದಾದ್ಯಂತ ಸಂಚಲನ ಮೂಡಿಸಿದ ಈ ಚಳವಳಿ ನಡೆದಾಗ ಕೇಂದ್ರದಲ್ಲಿ ಕಾಂಗ್ರೆಸ್ ನೇತೃತ್ವದ ಯುಪಿಎ ಸರ್ಕಾರವಿತ್ತು. 2013ರಲ್ಲಿ ದೆಹಲಿಯಲ್ಲಿ ನಡೆದ ವಿಧಾನಸಭೆ ಚುನಾವಣೆಯಲ್ಲಿ ಎಎಪಿ ಮುಖ್ಯವಾಗಿ ಕಾಂಗ್ರೆಸ್ ಅನ್ನು ಗುರಿಯಾಗಿರಿಸಿಕೊಂಡು ಪ್ರಚಾರ ನಡೆಸಿತ್ತು. ಈ ಚುನಾವಣೆಯಲ್ಲಿ ಬಿಜೆಪಿ ಅತಿ ದೊಡ್ಡ ಪಕ್ಷವಾಗಿ ಹೊರಹೊಮ್ಮಿದ್ದರೆ ಎಎಪಿ ಎರಡನೆಯ ಸ್ಥಾನ ಪಡೆದಿತ್ತು. ಮುಖ್ಯಮಂತ್ರಿ ಶೀಲಾ ದೀಕ್ಷಿತ್ ಎದುರು ಅರವಿಂದ್ ಕೇಜ್ರಿವಾಲ್ ಜಯಗಳಿಸುವ ಮೂಲಕ ಕಾಂಗ್ರೆಸ್‌ಅನ್ನು ಮೂರನೇ ಸ್ಥಾನಕ್ಕೆ ಇಳಿಸಿದ್ದರು. ಆದರೆ ಬಹುಮತವಿಲ್ಲದ ಬಿಜೆಪಿ ಸರ್ಕಾರ ರಚಿಸಲು ಮುಂದಾಗಲಿಲ್ಲ. ಹೀಗಾಗಿ ಕಾಂಗ್ರೆಸ್ ಬಾಹ್ಯ ಬೆಂಬಲದೊಂದಿಗೆ ಎಎಪಿ ಸರ್ಕಾರ ರಚಿಸಿತು.

ಜೆಡಿಎಸ್-ಕಾಂಗ್ರೆಸ್ ಸರ್ಕಾರ

ಜೆಡಿಎಸ್-ಕಾಂಗ್ರೆಸ್ ಸರ್ಕಾರ

2004ರಲ್ಲಿ ಕರ್ನಾಟಕಲ್ಲಿ ಬಿಜೆಪಿ 79 ಸೀಟುಗಳೊಂದಿಗೆ ದೊಡ್ಡ ಪಕ್ಷವಾಗಿ ಮೂಡಿತ್ತು. ಆದರೆ 65 ಶಾಸಕರಿದ್ದ ಕಾಂಗ್ರೆಸ್ ಮತ್ತು 58 ಸದಸ್ಯರಿದ್ದ ಜೆಡಿಎಸ್ ಸೇರಿ ಸರ್ಕಾರ ರಚಿಸಿದ್ದವು. ಎರಡು ವರ್ಷದೊಳಗೇ ಜೆಡಿಎಸ್ ಬೆಂಬಲ ಹಿಂಪಡೆದುಕೊಂಡು ಸರ್ಕಾರ ಉರುಳಿಸಿತು. ತನ್ನ ಮತ್ತೊಂದು ವಿರೋಧಿ ಪಕ್ಷ ಬಿಜೆಪಿ ಜತೆಗೂಡಿ 20-20 ಸರ್ಕಾರ ರಚಿಸಿತು. ಆದರೆ 20 ತಿಂಗಳು ಕಳೆದ ಬಳಿಕ ಜೆಡಿಎಸ್ ಅಧಿಕಾರ ಹಸ್ತಾಂತರ ಮಾಡದ ಕಾರಣ ಸರ್ಕಾರ ಪತನಗೊಂಡಿತು. 2018ರಲ್ಲಿ ಕೂಡ ಯಾವುದೇ ಪಕ್ಷಕ್ಕೆ ಸ್ಪಷ್ಟ ಬಹುಮತ ಬಾರದ ಬೆನ್ನಲ್ಲೇ ಕಾಂಗ್ರೆಸ್ ಬೆಂಬಲದೊಂದಿಗೆ ಜೆಡಿಎಸ್ ಸರ್ಕಾರ ರಚಿಸಿತು. ಶಾಸಕರ ರಾಜೀನಾಮೆ ಪ್ರಹಸನ ನಡೆದು ಒಂದು ವರ್ಷದ ಬಳಿಕ ಆ ಸರ್ಕಾರ ಕೂಡ ಪತನಗೊಂಡಿತು.

ಮಹಾರಾಷ್ಟ್ರದಲ್ಲಿ ಶಿವಸೇನೆಗೆ ಬಿಗ್ ಶಾಕ್: ರಾಷ್ಟ್ರಪತಿ ಆಳ್ವಿಕೆಗೆ ಶಿಫಾರಸು?

ಬಿಜೆಪಿ-ಬಿಎಸ್‌ಪಿ ಸರ್ಕಾರ

ಬಿಜೆಪಿ-ಬಿಎಸ್‌ಪಿ ಸರ್ಕಾರ

1993ರಲ್ಲಿ ಉತ್ತರ ಪ್ರದೇಶ ವಿಧಾನಸಭೆ ಚುನಾವಣೆಯಲ್ಲಿ ಸಮಾಜವಾದಿ ಪಕ್ಷ ಮತ್ತು ಬಹುಜನ ಸಮಾಜಪಕ್ಷಗಳು ಮೈತ್ರಿ ಮಾಡಿಕೊಂಡಿದ್ದವು. ಎಸ್‌ಪಿ ನಾಯಕ ಮುಲಾಯಂ ಸಿಂಗ್ ಯಾದವ್ ಮುಖ್ಯಮಂತ್ರಿಯಾಗಿದ್ದರು. 1995ರಲ್ಲಿ ಮಾಯಾವತಿ ತಮ್ಮ ಶಾಸಕರೊಂದಿಗೆ ಅತಿಥಿಗೃಹ ಒಂದರಲ್ಲಿ ಸಭೆ ನಡೆಸುವ ವೇಳೆ ಎಸ್‌ಪಿಯ ಬೆಂಬಲಿಗರು ಅವರ ಮೇಲೆ ದಾಳಿ ನಡೆಸಿತ್ತು. ಈ ಘಟನೆ ಬಳಿಕ ಎಸ್‌ಪಿ-ಬಿಎಸ್‌ಪಿ ಮೈತ್ರಿ ಮುರಿದುಬಿತ್ತು. ಬಿಜೆಪಿ ಮತ್ತು ಜನತಾದಳದ ಬಾಹ್ಯ ಬೆಂಬಲದೊಂದಿಗೆ ಮಾಯಾವತಿ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದರು.

Breaking: ಮಹಾರಾಷ್ಟ್ರಕ್ಕೆ ಉದ್ಧವ್ ಠಾಕ್ರೆ ಸಿಎಂ, ಅಜಿತ್ ಪವಾರ್ ಡಿಸಿಎಂ?

English summary
Ideologically different Parties Shiv Sena and Congress alliance is in the discussion to form government in Maharashtra. India has seen alliance between many political rivelries in the past. Here is a look on some such instances.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
We use cookies to ensure that we give you the best experience on our website. This includes cookies from third party social media websites and ad networks. Such third party cookies may track your use on Oneindia sites for better rendering. Our partners use cookies to ensure we show you advertising that is relevant to you. If you continue without changing your settings, we'll assume that you are happy to receive all cookies on Oneindia website. However, you can change your cookie settings at any time. Learn more
X