Thirthahalli Constituency ; ಕಾಂಗ್ರೆಸ್ ಟಿಕೆಟ್ ಯಾರಿಗೆ? ಎಂಬುದೇ ಕುತೂಹಲ!
ತುಂಗಾ ನದಿಯ ತಟದಲ್ಲಿರುವ ಮಲೆನಾಡಿನ ವಿಧಾನಸಭಾ ಕ್ಷೇತ್ರ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ. ರಾಜ್ಯ ರಾಜಕೀಯಕ್ಕೆ ತನ್ನದೇ ಆದ ಕೊಡುಗೆ ನೀಡಿದ ಕ್ಷೇತ್ರವಿದು. ಇಲ್ಲಿಂದ ಗೆದ್ದವರು ಮುಖ್ಯಮಂತ್ರಿ, ಸ್ಪೀಕರ್, ಸಚಿವರು, ವಿರೋಧ ಪಕ್ಷದ ನಾಯಕರಾಗಿ ಕೆಲಸ ಮಾಡಿದ್ದಾರೆ.
ರಾಜ್ಯದ ದೊಡ್ಡ ವಿಧಾನಸಭಾ ಕ್ಷೇತ್ರಗಳಲ್ಲಿ ತೀರ್ಥಹಳ್ಳಿ ಸಹ ಒಂದು. 2008ರ ಕ್ಷೇತ್ರ ಪುನರ್ ವಿಂಗಡನೆ ಬಳಿಕ ಹೊಸನಗರ ವಿಧಾನಸಭಾ ಕ್ಷೇತ್ರ ಇತಿಹಾಸ ಸೇರಿತು. ಕ್ಷೇತ್ರದ ಹಲವು ಭಾಗ ತೀರ್ಥಹಳ್ಳಿ ಕ್ಷೇತ್ರಕ್ಕೆ ಸೇರಿದೆ. ಶಿವಮೊಗ್ಗ ಲೋಕಸಭಾ ಕ್ಷೇತ್ರದ ವ್ಯಾಪ್ತಿಗೆ ಇದು ಸೇರುತ್ತದೆ.
ತೀರ್ಥಹಳ್ಳಿಯ ಪ್ರಮುಖ ವಾಣಿಜ್ಯ ಬೆಳೆ ಅಡಿಕೆ. ಪ್ರತಿ ವರ್ಷವೂ ಅಡಿಕೆ ಬೆಳೆಗೆ ಸಿಗುವ ಬೆಲೆ ಮೇಲೆ ಕ್ಷೇತ್ರದ ಆರ್ಥಿಕ ಪರಿಸ್ಥಿತಿ ನಿರ್ಧಾರವಾಗುತ್ತದೆ. ಅಡಿಕೆಯ ಎಲೆಚುಕ್ಕೆ ರೋಗ, ಬೆಲೆ ಕುಸಿಯುವ ಆತಂಕ, ಮರಳು & ಕಲ್ಲಿನ ಬಂಗಾರದ ಬೆಲೆ, ಅರಣ್ಯ ಭೂಮಿ ಒತ್ತುವರಿ, ಬಗರ್ ಹುಕುಂ ಮುಂತಾದವು ಕ್ಷೇತ್ರದ ಸಮಸ್ಯೆಗಳು.
ತೀರ್ಥಹಳ್ಳಿ ಕ್ಷೇತ್ರದ ಹಾಲಿ ಶಾಸಕರು ಆರಗ ಜ್ಞಾನೇಂದ್ರ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಂಪುಟದಲ್ಲಿ ಪ್ರಭಾವಿಯಾದ ಗೃಹ ಖಾತೆಯ ಸಚಿವರು. ಹಲವು ವರ್ಷಗಳಿಂದ ಕಾಂಗ್ರೆಸ್‌ನ ಕಿಮ್ಮನೆ ರತ್ನಾಕರ್ ಮತ್ತು ಆರಗ ಜ್ಞಾನೇಂದ್ರ ಕ್ಷೇತ್ರದಿಂದ ಆರಿಸಿ ಬರುತ್ತಿದ್ದಾರೆ. ಆದರೆ ಈ ಬಾರಿ ಕಾಂಗ್ರೆಸ್ ಟಿಕೆಟ್ ಯಾರಿಗೆ ಎಂಬುದು ಕುತೂಹಲಕ್ಕೆ ಕಾರಣವಾಗಿದೆ.

ಆರಗ ಜ್ಞಾನೇಂದ್ರಗೆ ಒಲಿದ ಸಚಿವ ಸ್ಥಾನ
ಸುಮಾರು 40 ವರ್ಷಗಳ ಕಾಲ ಬಿಜೆಪಿಗಾಗಿ ದುಡಿದ ಆರಗ ಜ್ಞಾನೇಂದ್ರ 2018ರ ಚುನಾವಣೆಯಲ್ಲಿ ಗೆಲುವು ಸಾಧಿಸಿದ್ದರು. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಂಪುಟ ಸೇರುವ ಮೂಲಕ ಕೊನೆಗೂ ಸಚಿವರಾಗಿದ್ದರು. ಪ್ರಭಾವಿ ಗೃಹ ಖಾತೆಯೇ ಅವರಿಗೆ ಸಿಕ್ಕಿದೆ. 9 ಬಾರಿ ಚುನಾವಣೆಗೆ ಸ್ಪರ್ಧಿಸಿ 4 ಬಾರಿ ಗೆದ್ದಿರುವ ಆರಗ ಜ್ಞಾನೇಂದ್ರ ಕ್ಷೇತ್ರದಿಂದ ಅತಿ ಹೆಚ್ಚು ಬಾರಿ ಶಾಸಕರಾಗಿ ಆಯ್ಕೆಯಾಗಿ ದಾಖಲೆ ಬರೆದಿದ್ದಾರೆ.
ಸರಳ ಜೀವನ ಶೈಲಿಯ ಆರಗ ಜ್ಞಾನೇಂದ್ರ ಸುಲಭವಾಗಿ ಜನರ ಕೈಗೆ ಸಿಗುತ್ತಾರೆ. ಈ ಬಾರಿಯ ಚುನಾವಣೆಯಲ್ಲಿಯೂ ಅವರಿಗೆ ಬಿಜೆಪಿ ಟಿಕೆಟ್ ಖಚಿತವಾಗಿದೆ. ಕ್ಷೇತ್ರದಲ್ಲಿ ಸಾಕಷ್ಟು ಅಭಿವೃದ್ಧಿ ಕಾರ್ಯಗಳನ್ನು ಮಾಡಿದ್ದು, ಜನರ ಮುಂದೆ ಹೋಗಲು ಸಿದ್ಧವಾಗಿದ್ದಾರೆ.

ಕಾಂಗ್ರೆಸ್ ಟಿಕೆಟ್ ಯಾರಿಗೆ?
2013ರ ಚುನಾವಣೆಯಲ್ಲಿ ಕಾಂಗ್ರೆಸ್‌ನ ಕಿಮ್ಮನೆ ರತ್ನಾಕರ್ ಆರಗ ಜ್ಞಾನೇಂದ್ರ ಸೋಲಿಸಿದ್ದರು. ಮುಖ್ಯಮಂತ್ರಿ ಸಿದ್ದರಾಮಯ್ಯ ಸಂಪುಟದಲ್ಲಿ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವರಾಗಿದ್ದರು. ಸಂಪುಟ ಪುನಾರಚನೆ ಸಮಯದಲ್ಲಿ ಸಚಿವ ಸ್ಥಾನವನ್ನು ಬಿಟ್ಟು ಕೊಟ್ಟಿದ್ದರು. ಆರಗ ಜ್ಞಾನೇಂದ್ರರಂತೆ ಕಿಮ್ಮನೆ ರತ್ನಾಕರ್ ಸಹ ಸರಳ ಜೀವಿ. ಸದಾ ಜನರಿಗೆ ಸಿಗುತ್ತಾರೆ.
2018ರ ಚುನಾವಣೆಯಲ್ಲಿ ಆರಗ ಜ್ಞಾನೇಂದ್ರ 67,527 ಮತಗಳನ್ನು ಪಡೆದು ಗೆದ್ದರು. ಕಿಮ್ಮನೆ ರತ್ನಾಕರ್ 45,572 ಮತಗಳನ್ನು ಪಡೆದು ಸೋಲು ಕಂಡರು. ಆದರೆ ಈ ಬಾರಿಯ ಚುನಾವಣೆಯಲ್ಲಿ ಕಾಂಗ್ರೆಸ್ ಟಿಕೆಟ್ ಯಾರಿಗೆ? ಎಂಬುದು ಕುತೂಹಲಕ್ಕೆ ಕಾರಣವಾಗಿದೆ. ಅದಕ್ಕೆ ಕಾರಣ ಆರ್. ಎಂ. ಮಂಜುನಾಥ ಗೌಡ.
ಪಕ್ಷದ ಚಿತ್ತದತ್ತ ಎಲ್ಲರ ಕಣ್ಣು
ಕೆಜೆಪಿಯಲ್ಲಿದ್ದು, ಬಳಿಕ ಜೆಡಿಎಸ್ ಸೇರಿದ ಆರ್. ಎಂ. ಮಂಜುನಾಥ ಗೌಡ ಸದ್ಯ ಕಾಂಗ್ರೆಸ್‌ಗೆ ಬಂದಿದ್ದಾರೆ. ಆದ್ದರಿಂದ ಕಿಮ್ಮನೆ ರತ್ನಾಕರ್ ಮತ್ತು ಆರ್. ಎಂ. ಮಂಜುನಾಥ ಗೌಡ ಇಬ್ಬರೂ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಗಳು.
ಪಾದಯಾತ್ರೆ ನಡೆಸುವ ಮೂಲಕ ಇಬ್ಬರು ಕ್ಷೇತ್ರದಲ್ಲಿ ಪಕ್ಷ ಸಂಘಟಿಸುತ್ತಿದ್ದಾರೆ. ಇದೇ ತಿಂಗಳಿನಲ್ಲಿ ಪ್ರಜಾಧ್ವನಿ ಯಾತ್ರೆಗೆ ತೀರ್ಥಹಳ್ಳಿಗೆ ಬಂದಿದ್ದ ಕೆಪಿಸಿಸಿ ಅಧ್ಯಕ್ಷ ಡಿ. ಕೆ. ಶಿವಕುಮಾರ್ ಸಹ ಅಭ್ಯರ್ಥಿ ಯಾರು? ಎಂಬ ಗುಟ್ಟು ಬಿಟ್ಟುಕೊಟ್ಟಿಲ್ಲ.
ಒಮ್ಮೆ ಕೆಜೆಪಿಯಿಂದ, ಮತ್ತೊಮ್ಮೆ ಜೆಡಿಎಸ್‌ನಿಂದ ಕಣಕ್ಕಿಳಿದರೂ ಆರ್. ಎಂ. ಮಂಜುನಾಥ ಗೌಡರು ಗೆಲವು ಕಂಡಿಲ್ಲ. ಈ ಬಾರಿ ಟಿಕೆಟ್ ಪಡೆದು ಕ್ಷೇತ್ರದಲ್ಲಿ ಗೆಲ್ಲಲೇಬೇಕು ಎಂದು ಅವರು ಹಠತೊಟ್ಟು ಕೆಲಸ ಮಾಡುತ್ತಿದ್ದಾರೆ. ಪಕ್ಷ ಯಾರಿಗೆ ಟಿಕೆಟ್ ನೀಡಲಿದೆ? ಎಂಬುದು ಕುತೂಹಲಕ್ಕೆ ಕಾರಣವಾಗಿದೆ.

ಅಭ್ಯರ್ಥಿ ಘೋಷಣೆ ಮಾಡಿದ ಜೆಡಿಎಸ್
ತೀರ್ಥಹಳ್ಳಿ ಕ್ಷೇತ್ರಕ್ಕೆ ಈ ಬಾರಿಯ ಚುನಾವಣೆಗೆ ಜೆಡಿಎಸ್ ಈಗಾಗಲೇ ಅಭ್ಯರ್ಥಿ ಘೋಷಣೆ ಮಾಡಿದೆ. 2018ರಲ್ಲಿ ಆರ್. ಎಂ. ಮಂಜುನಾಥ ಗೌಡ ಪಕ್ಷದ ಅಭ್ಯರ್ಥಿಯಾಗಿದ್ದರು 40,127 ಮತ ಪಡೆದಿದ್ದರು. ಈಗ ಅವರು ಕಾಂಗ್ರೆಸ್ ಸೇರಿರುವುದರಿಂದ ರಾಜಾರಾಮ್ ಜೆಡಿಎಸ್ ಅಭ್ಯರ್ಥಿಯಾಗಿದ್ದಾರೆ.
ಈ ಬಾರಿಯ ಚುನಾವಣೆಯಲ್ಲಿ ಆರಗ ಜ್ಞಾನೇಂದ್ರಗೆ ಬಿಜೆಪಿ ಟಿಕೆಟ್ ಖಚಿತವಾಗಿದೆ. ರಾಜಾರಾಮ್ ಜೆಡಿಎಸ್‌ನಿಂದ ಕಣಕ್ಕಿಳಿಯುತ್ತಾರೆ. ಕಾಂಗ್ರೆಸ್ ಅಭ್ಯರ್ಥಿ ಯಾರು ಎಂಬುದಕ್ಕೆ ಕಾಲವೇ ಉತ್ತರ ಹೇಳಬೇಕಿದೆ.
ಕ್ಷೇತ್ರದ ಒಟ್ಟು ಮತದಾರರು 1,88,243. ಪುರುಷರು 93,065 ಮತ್ತು ಮಹಿಳೆಯರು 95,178.
-
Rain Alert: ಕರ್ನಾಟಕದ ಈ 9 ಜಿಲ್ಲೆಗಳಿಗೆ ಮುಂದಿನ 2 ದಿನ ವ್ಯಾಪಕ ಆಲಿಕಲ್ಲು ಮಳೆ ಎಚ್ಚರಿಕೆ -
IMD Weather Forecast: ಈ ಭಾಗಗಳಲ್ಲಿ ಮುಂದಿನ 3 ದಿನ ಬಿರುಗಾಳಿ, ಆಲಿಕಲ್ಲು ಸಹಿತ ಭಾರೀ ಮಳೆ -
ರಾಮಚಂದ್ರ ರಾವ್ ಪ್ರಕರಣ: 'ಎಐ' ಅಲ್ಲ ಅಸಲಿ ವಿಡಿಯೋ; ಎಫ್ಎಸ್ಎಲ್ ವರದಿಯಲ್ಲಿ ಬಯಲಾಯ್ತು ಸತ್ಯ -
New Railway Lines: ಬಿರೂರು-ಶಿವಮೊಗ್ಗ ರೈಲು ಹಳಿ ಡಬ್ಲಿಂಗ್, ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ಸಂಪರ್ಕಕ್ಕೆ ಒತ್ತಾಯ -
Rishab Shetty: ಹೊಂಬಾಳೆ ಫಿಲ್ಮ್ಸ್ ಅನ್ಫಾಲೋ ಮಾಡಿದ ರಿಷಬ್ ಶೆಟ್ಟಿ: ಕಾಂತಾರ ಕುಟುಂಬದಲ್ಲಿ ಬಿರುಕು ವದಂತಿ -
Anil Kumble: ವಿರಾಟ್ ಕೊಹ್ಲಿ-ಬೆಂಗಳೂರು ನಡುವಿನ ಅವಿನಾಭಾವ ಸಂಬಂಧದ ಬಗ್ಗೆ ಕನ್ನಡಿಗ ಅನಿಲ್ ಕುಂಬ್ಳೆ ಮನದಾಳದ ಮಾತು -
Bengaluru Second Airport: ಬೆಂಗಳೂರು ಎರಡನೇ ವಿಮಾನ ನಿಲ್ದಾಣದ ಸ್ಥಳ: ಸಚಿವ ಎಂ.ಬಿ.ಪಾಟೀಲ್ ಮಹತ್ವದ ಮಾಹಿತಿ -
ಮಳೆ.. ಮಳೆ.. ಮುಂದಿನ 48 ಗಂಟೆಯಲ್ಲಿ ಮಳೆ ಬಗ್ಗೆ ಹವಾಮಾನ ಇಲಾಖೆ ಮಹತ್ವದ ಮಾಹಿತಿ... Karnataka Rain -
March 20 Horoscope: ಆರೋಗ್ಯ ಮತ್ತು ಹಣಕಾಸು ವಿಷಯದಲ್ಲಿ ಈ ರಾಶಿಗೆ ಲಾಭ -
Karnataka Rain: ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ನಾಳೆವರೆಗೆ ಗುಡುಗು ಸಹಿತ ಮಳೆ ಸಾಧ್ಯತೆ -
March 19 Horoscope: ಈ ರಾಶಿಯವರಿಗೆ ಶುಭಸುದ್ದಿ, ಇತರರಿಗೆ ಎಚ್ಚರಿಕೆ -
40,000 ಹೋಟೆಲ್ ಮಾಲೀಕರಿಗೆ ಭರ್ಜರಿ ಸುದ್ದಿ, ಎಲ್ಪಿಜಿ ಸಿಲಿಂಡರ್ ನಿಯಮ ಬದಲಾವಣೆ... LPG Cylinder Supply












Click it and Unblock the Notifications