12 ವರ್ಷ ಕಾಲ ವಾಹನ ಸಂಚಾರವನ್ನೇ ತ್ಯಜಿಸಿದ್ದ ಶ್ರೀಚಾರುಕೀರ್ತಿ ಭಟ್ಟಾರಕ ಸ್ವಾಮೀಜಿ ಪರಿಚಯ
ಅನಾರೋಗ್ಯದಿಂದ ಬಳಲುತ್ತಿದ್ದ ಶ್ರವಣಬೆಳಗೊಳದ ಜೈನ ಮಠದ ಶ್ರೀ ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿ (74) ಗುರುವಾರ ವಿಧಿವಶರಾದರು.ಇತಿಹಾಸ ತಜ್ಞರು, ತತವ ಜ್ಞಾನಿಗಳು ಹಾಗೂ ಸಮಾಜ ಸೇವೆಯಲ್ಲಿ ತೊಡಗಿಸಿಕೊಂಡಿದ್ದ ಶ್ರೀ ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿ ಅವರ ಪರಿಚಯ ಇಲ್ಲಿದೆ.
ಹಾಸನ, ಮಾರ್ಚ್ 23: ಅನಾರೋಗ್ಯದಿಂದ ಬಳಲುತ್ತಿದ್ದ ಶ್ರವಣಬೆಳಗೊಳದ ಜೈನ ಮಠದ ಶ್ರೀ ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿ (74) ಗುರುವಾರ ವಿಧಿವಶರಾದರು. ಕಳೆದ ಕೆಲವು ತಿಂಗಳುಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಅವರನ್ನು ಬೆಳ್ಳೂರು ಕ್ರಾಸ್‌ನಲ್ಲಿರುವ ಆದಿಚುಂಚನಗಿರಿ ಆಸ್ಪತ್ರೆಗೆ ಹೆಚ್ಚಿನ ಚಿಕಿತ್ಸೆಗಾಗಿ ದಾಖಲು ಮಾಡಲಾಗಿತ್ತು.
ದುರಾದೃಷ್ಟವಶಾತ್ ಶ್ರೀ ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿ ಹೃದಯಾಘಾತದಿಂದ ಗುರುವಾರ ಮುಂಜಾನೆ ಕೊನೆಯುಸಿರೆಳೆದಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ. ಇತಿಹಾಸ ತಜ್ಞರು, ತತ್ವ ಜ್ಞಾನಿಗಳು ಹಾಗೂ ಸಮಾಜ ಸೇವೆಯಲ್ಲಿ ತೊಡಗಿಸಿಕೊಂಡಿದ್ದ ಶ್ರೀ ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿ ಅವರ ಪರಿಚಯ ಇಲ್ಲಿದೆ.

ಶ್ರೀಚಾರುಕೀರ್ತಿ ಭಟ್ಟಾರಕ ಸ್ವಾಮೀಜಿ ಅವರು 1949 ಮೇ 3ರಂದು ಕಾರ್ಕಳದ ವರಂಗ ಗ್ರಾಮದಲ್ಲಿ ಜನಿಸಿದರು. ಅವರ ಪೂರ್ವಾಶ್ರಮದ ಹೆಸರು ರತ್ನವರ್ಮ. ಮೈಸೂರು ವಿಶ್ವವಿದ್ಯಾಲಯದಲ್ಲಿ ಇತಿಹಾಸ ವಿಭಾಗದಲ್ಲಿ ಎಂ.ಎ. ಮುಗಿಸಿದ್ದ ಅವರು, ಬೆಂಗಳೂರು ವಿಶ್ವವಿದ್ಯಾಲಯದ ಶಸ್ತ್ರ ಶಾಸ್ತ್ರ ಜೊತೆಗೆ ಕನ್ನಡ, ಸಂಸ್ಕೃತ ಮತ್ತು ಪ್ರಾಕೃತದಲ್ಲೂ ಸ್ನಾತಕೋತ್ತರ ಪದವಿ ಪಡೆದಿದ್ದರು. ಅವರ ಜ್ಞಾನ ಕೇವಲ ಜೈನ ಧರ್ಮಶಾಸ್ತ್ರಕ್ಕೆ ಸೀಮಿತವಾಗಿರದೇ, ಇತಿಹಾಸ ತಜ್ಞರು, ತತ್ವ ಜ್ಞಾನಿಗಳು, ಶ್ರೇಷ್ಠವಾಗಿಗಳು ಆಗಿದ್ದರು.
1970ರಲ್ಲಿ ಶ್ರೀಚಾರುಕೀರ್ತಿ ಭಟ್ಟಾರಕ ಸ್ವಾಮೀಜಿ ಜೈನ ಮಠದ ಪೀಠವೇರಿದ್ದರು. ಪೀಠದಲ್ಲಿದ್ದುಕೊಂಡೇ ಮಠದ ಸಮಸ್ತ ಕಾರ್ಯನಿರ್ವಹಣೆಯೊಂದಿಗೆ ಸಂಶೋಧನೆ, ಗ್ರಂಥ ರಚನೆಯಲ್ಲಿ ಕ್ರಿಯಾಶೀಲರಾಗಿದ್ದ ಸ್ವಾಮೀಜಿಯವರ ಸರಳತೆ, ಸಜ್ಜನಿಕೆ, ಸಾಮಾಜಿಕ ಕಳಕಳಿ, ಲವಲವಿಕೆ, ಎಲ್ಲರಿಗೂ ಸ್ಪೂರ್ತಿಯಾಗಿತ್ತು. 1981ರಲ್ಲಿ ಗೋಮಟೇಶ್ವರ ಮಹಾಮಸ್ತಕಾಭಿಷೇಕವನ್ನು ಯಶಸ್ವಿಯಾಗಿ ನಡೆಸಿದ್ದನ್ನು ಮೆಚ್ಚಿ ಅಂದಿನ ಪ್ರಧಾನ ಮಂತ್ರಿ ಇಂದಿರಾ ಗಾಂಧಿ ಶ್ರೀಗಳಿಗೆ 'ಕರ್ಮಯೋಗಿ' ಬಿರುದು ನೀಡಿ ಗೌರವಿಸಿದ್ದರು.
ಶ್ರೀಚಾರುಕೀರ್ತಿ ಭಟ್ಟಾರಕ ಸ್ವಾಮೀಜಿ ಅವರು ತಮ್ಮ ಜೀವಿತಾವಧಿಯಲ್ಲಿ ಏಳು ಮಹಾಮಸ್ತಕಾಭಿಷೇಕವನ್ನು ನೆರವೇರಿಸಿದ್ದಾರೆ.

ಸುಮಾರು 40ಕ್ಕೂ ಅಧಿಕ ಜಿನಾಲಯಗಳನ್ನು ಜೀರ್ಣೋದ್ಧಾರಗೊಳಿಸಿ, ಅಲ್ಲಿ ನಿತ್ಯ ಪೂಜೆ ನಡೆಯುವಂತೆ ಮಾಡಿದ್ದಾರೆ. ಸುತ್ತಮುತ್ತಲಿನ ಹತ್ತಕ್ಕೂ ಹೆಚ್ಚು ಗ್ರಾಮಗಳನ್ನು ದತ್ತು ಸ್ವೀಕರಿಸಿ, ಅಲ್ಲಿ ಪ್ರಾಥಮಿಕ ಸೌಲಭ್ಯಗಳನ್ನು ಕಲ್ಪಿಸಿದ್ದಾರೆ.
ಸಹಸ್ರಮಾನದ ಮಹಾಮಸ್ತಕಾಭಿಷೇಕದಲ್ಲಿ ಸಾವಿರ ಮಂದಿಗೆ ಉಚಿತ ನೇತ್ರ ಚಿಕಿತ್ಸಾ ಶಿಬಿರ ನಡೆಸಿದ್ದರು. ಆರೋಗ್ಯ ಹಾಗೂ ಶಿಕ್ಷಣಕ್ಕೆ ಮಹತ್ವ ನೀಡುತ್ತಿದ್ದ ಸ್ವಾಮೀಜಿ ಶಾಲೆ, ಪಾಲಿಟೆಕ್ನಿಕ್, ಎಂಜಿನಿಯರಿಂಗ್ ಕಾಲೇಜು, ನರ್ಸಿಂಗ್ ಕಾಲೇಜು, ಗೋಮಟೇಶ ವಿದ್ಯಾಪೀಠ ಹಾಗೂ ಪ್ರಾಕೃತ ಭಾಷೆಯ ಅಭಿವೃದ್ಧಿಗಾಗಿ ಬೆಂಗಳೂರಲ್ಲಿ 'ಪ್ರಾಕೃತಜ್ಞಾನ ಭಾರತ ಟ್ರಸ್ಟ್' ನಿರ್ಮಿಸಿದ್ದಾರೆ.
ಶ್ರವಣಬೆಳಗೊಳದಲ್ಲಿ ರಾಷ್ಟ್ರೀಯ ಪ್ರಾಕೃತ ಅಧ್ಯಯನ-ಸಂಶೋಧನ ಸಂಸ್ಥೆಯಲ್ಲಿ ತಾಳೆಗರಿಗಳನ್ನು ಸಂರಕ್ಷಿಸುವ, ಪ್ರಾಕೃತ ಗ್ರಂಥಗಳ ಕನ್ನಡ ಅನುವಾದ ಯೋಜನೆ ಕಾರ್ಯ ನಡೆದಿದೆ. ಆಯುರ್ವೇದ ಆಸ್ಪತ್ರೆ, ಸಂಬೂರಿ ಆಸ್ಪತ್ರೆ, ಕ್ಲಿನಿಕಲ್ ಲ್ಯಾಬ್‌ಗಳನ್ನು ಸ್ಥಾಪಿಸಿರುವ ಸ್ವಾಮೀಜಿ ಮಸ್ತಕಾಭಿಷೇಕದಲ್ಲಿ ಉಳಿದ ಹಣದಿಂದ ಆಧುನಿಕ ಮಕ್ಕಳ ಆಸ್ಪತ್ರೆ ನಿರ್ಮಿಸಿದ್ದರು.

ಹಲವು ದೇಶಗಳಲ್ಲಿ ಜೈನ ಧರ್ಮ ಪ್ರಸಾರ ಮಾಡಿ ಅಹಿಂಸೆಯ ಸಂದೇಶ ಬಿತ್ತರಿಸಿರುವ ಸ್ವಾಮೀಜಿಗಳ ವಿಶೇಷತೆಯೆಂದರೆ, 2006ರಿಂದ ದೂರವಾಣಿಯಲ್ಲಿ ಅಥವಾ ಮೊಬೈಲ್‌ನಲ್ಲಿ ಮಾತನಾಡದಿರುವುದು. ಚಾತುರ್ಮಾಸಕ್ಕೆ ವಿಜಾಪುರಕ್ಕೆ ತೆರಳಿ ಮರಳಿದ ಬಳಿಕ, 2001ರಲ್ಲಿ ಧವಳ ಮತ್ತು ಜಯಧವಳ ಆಗಮ ಗ್ರಂಥಗಳ ಪ್ರಕಟಣೆ ವೇಳೆ ಅವರು 12 ವರ್ಷ ಕಾಲ ವಾಹನ ಸಂಚಾರವನ್ನೇ ತ್ಯಜಿಸಿದ್ದರು. ಅವರ ನೇತೃತ್ವದಲ್ಲಿ ಸುಮಾರು ಏಳು ಮಹಾಮಸ್ತಕಾಭಿಷೇಕಗಳು ಯಶಸ್ವಿಯಾಗಿ ನಡೆದಿದ್ದವು.
ಭಗವಾನ್ ಮಹಾವೀರರ 2,500ನೇ ವಾರ್ಷಿಕೋತ್ಸವದ ಸ್ಮರಣಾರ್ಥವಾಗಿ ದಕ್ಷಿಣ ಭಾರತದಾದ್ಯಂತ 'ಧರ್ಮಚಕ್ರ' ಎಂಬ ಕಾರ್ಯಕ್ರಮವನ್ನು ಅತ್ಯಂತ ಯಶಸ್ವಿಯಾಗಿ ಆಯೋಜಿಸುವಲ್ಲಿ ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿ ಪ್ರಮುಖ ಪಾತ್ರವಹಿಸಿದ್ದರು. 'ಸರಕಾರಗಳು ಮತ್ತು ಸಮಾಜ ಕೈಜೋಡಿಸಿದಾಗ ಮಾತ್ರ ಇಂಥ ಉತ್ಸವಗಳು ಯಶಸ್ವಿಯಾಗಲು ಸಾಧ್ಯ' ಎಂಬ ಸರಳ ಸೌಜನ್ಯದ ನುಡಿ ಶ್ರೀಚಾರುಕೀರ್ತಿ ಭಟ್ಟಾರಕ ಸ್ವಾಮೀಜಿ ಅವರದಾಗಿತ್ತು.
ಶ್ರವಣಬೆಳಗೊಳದ ಜೈನ ಮಠದ ಶ್ರೀ ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿಗಳ ನಿಧನಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೇರಿದಂತೆ ಗಣ್ಯರು ಸಂತಾಪ ವ್ಯಕ್ತಪಡಿಸಿದ್ದಾರೆ.
-
Viral Video: ವಿದೇಶಿ ಛಾಯಾಗ್ರಾಹಕರ ಫೋಟೋಗ್ರಫಿ ಹುಚ್ಚುತನಕ್ಕೆ ಜೀವ ಕಳೆದುಕೊಂಡಿತೇ ಭಾರತದ ಮುದ್ದಾದ ಆನೆ, ಏನಿದು ಚರ್ಚೆ -
ಬೆಂಗಳೂರು-ವಿಜಯಪುರ ಎಕ್ಸ್ಪ್ರೆಸ್ ರೈಲು ಸೇವೆ: ಸಂಚಾರ ಸಮಯ 10ಗಂಟೆ ಇಳಿಕೆಗೆ ಎಂಬಿ ಪಾಟೀಲ ಆಗ್ರಹ -
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Cricket: ವಿಶ್ವದಾಖಲೆ ಬರೆದ ಕಿವೀಸ್ ವನಿತೆಯರು: ಭಾರತದ ದಾಖಲೆ ಅಳಿಸಿ ಹಾಕಿದ ನ್ಯೂಜಿಲೆಂಡ್ ಅಬ್ಬರ -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
ಬೇಸಿಗೆ ರಜೆ -ವಾರಾಂತ್ಯದ ರಶ್: ಹುಬ್ಬಳ್ಳಿ-ರಾಮೇಶ್ವರಂ ಮತ್ತು ಬೆಂಗಳೂರು-ಕಣ್ಣೂರು ವಿಶೇಷ ರೈಲು ಸಂಚಾರ












Click it and Unblock the Notifications