Sira Exit Poll Results; ಶಿರಾದಲ್ಲಿ ಖಾತೆ ತೆರೆಯಲಿದೆ ಬಿಜೆಪಿ

ಬೆಂಗಳೂರು, ನವೆಂಬರ್ 07 : ತುಮಕೂರು ಜಿಲ್ಲೆಯ ಶಿರಾ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆ ಭಾರಿ ಕುತೂಹಲಕ್ಕೆ ಕಾರಣವಾಗಿದೆ. ಉಪ ಚುನಾವಣೆಯಲ್ಲಿ ಬಿಜೆಪಿ ಜಯಗಳಿಸಿ ಕ್ಷೇತ್ರದಲ್ಲಿ ಖಾತೆ ತೆರೆಯಲಿದೆ ಎಂದು ಚುನಾವಣೋತ್ತರ ಸಮೀಕ್ಷೆ ಹೇಳಿದೆ.

ನವೆಂಬರ್ 3ರಂದು ಶಿರಾ ಕ್ಷೇತ್ರದ ಉಪ ಚುನಾವಣೆ ನಡೆದಿತ್ತು. ನವೆಂಬರ್ 10ರ ಮಂಗಳವಾರ ಚುನಾವಣಾ ಫಲಿತಾಂಶ ಪ್ರಕಟವಾಗಲಿದೆ. ಶನಿವಾರ ಸಿ ವೋಟರ್ ನಡೆಸಿದ ಚುನಾವಣೋತ್ತರ ಸಮೀಕ್ಷೆ ಫಲಿತಾಂಶ ಪ್ರಕಟವಾಗಿದೆ.

Sira By Election Exit Poll Result 2020

ಶಿರಾದಲ್ಲಿ ಬಿಜೆಪಿಯಿಂದ ಡಾ. ರಾಜೇಶ್ ಗೌಡ, ಕಾಂಗ್ರೆಸ್‌ನಿಂದ ಟಿ. ಬಿ. ಜಯಚಂದ್ರ, ಜೆಡಿಎಸ್‌ನಿಂದ ಅಮ್ಮಾಜಮ್ಮ ಅಭ್ಯರ್ಥಿಗಳಾಗಿದ್ದರು. ನವೆಂಬರ್ 3ರಂದು ಶೇ 84.54ರಷ್ಟು ಮತದಾನ ನಡೆದಿತ್ತು.

ಶಿರಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಡಾ. ರಾಜೇಶ್ ಗೌಡ ಶೇ 36.6ರಷ್ಟು ಮತಗಳನ್ನು ಪಡೆದು ಜಯಗಳಿಸಲಿದ್ದಾರೆ ಎಂದು ಸಿ ವೋಟರ್ ಸಮೀಕ್ಷೆ ಹೇಳಿದೆ. ಈ ಮೂಲಕ ಮೊದಲ ಬಾರಿಗೆ ಶಿರಾದಲ್ಲಿ ಬಿಜೆಪಿ ಖಾತೆ ತೆರೆಯಲಿದೆ.

ಕಾಂಗ್ರೆಸ್ ಅಭ್ಯರ್ಥಿ ಟಿ. ಬಿ. ಜಯಚಂದ್ರ ಶೇ 32.5ರಷ್ಟು ಮತಗಳನ್ನು ಪಡೆಯಲಿದ್ದಾರೆ. ಜೆಡಿಎಸ್‌ನ ಅಮ್ಮಾಜಮ್ಮ ಅವರು 17.4ರಷ್ಟು ಮತಗಳನ್ನು ಪಡೆಯಲಿದ್ದಾರೆ. ಇತರ ಅಭ್ಯರ್ಥಿಗಳು 13.5ರಷ್ಟು ಮತಗಳನ್ನು ಪಡೆಯಲಿದ್ದಾರೆ ಎಂದು ಸಮೀಕ್ಷೆ ಹೇಳಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+