• search
  • Live TV
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts

Sira Exit Poll Results; ಮೊದಲ ಬಾರಿಗೆ ಶಿರಾದಲ್ಲಿ ಬಿಜೆಪಿಗೆ ಗೆಲುವು

|

ಬೆಂಗಳೂರು, ನವೆಂಬರ್ 07: ತುಮಕೂರು ಜಿಲ್ಲೆಯ ಶಿರಾ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಬಿಜೆಪಿ ಜಯಗಳಿಸಲಿದೆ ಎಂದು ಚುನಾವಣೋತ್ತರ ಸಮೀಕ್ಷೆ ಹೇಳಿದೆ. ಮೊದಲ ಬಾರಿಗೆ ಕ್ಷೇತ್ರದಲ್ಲಿ ಬಿಜೆಪಿ ಖಾತೆ ತೆರೆಯಲಿದೆ.

ಶಿರಾ ಕ್ಷೇತ್ರದ ಉಪ ಚುನಾವಣೆ ನವೆಂಬರ್ 3ರಂದು ನಡೆದಿದ್ದು ಶೇ 84.54ರಷ್ಟು ಮತದಾನವಾಗಿದೆ. ನವೆಂಬರ್ 10ರ ಮಂಗಳವಾರ ಚುನಾವಣಾ ಫಲಿತಾಂಶ ಪ್ರಕಟವಾಗಲಿದೆ. ಚುನಾವಣೋತ್ತರ ಸಮೀಕ್ಷೆ ಫಲಿತಾಂಶಗಳು ಶನಿವಾರ ಪ್ರಕಟವಾಗಿವೆ.

Sira Exit Poll Results; ಶಿರಾದಲ್ಲಿ ಖಾತೆ ತೆರೆಯಲಿದೆ ಬಿಜೆಪಿ

ಕನ್ನಡ ಸುದ್ದಿ ವಾಹಿನಿ ಟಿವಿ 9 ಸಿ ವೋಟರ್ ನಡೆಸಿದ ಸಮೀಕ್ಷೆ ಫಲಿತಾಂಶವನ್ನು ಪ್ರಕಟಿಸಿದೆ. ಶಿರಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಾ. ರಾಜೇಶ್ ಗೌಡ ಮೊದಲ ಬಾರಿಗೆ ಶಾಸಕರಾಗಿ ಆಯ್ಕೆಯಾಗಲಿದ್ದಾರೆ ಎಂದು ಸಮೀಕ್ಷೆಗಳು ಹೇಳಿವೆ. ಡಾ. ರಾಜೇಶ್ ಗೌಡ ಅವರು ಶೇ 36.6ರಷ್ಟು ಮತಗಳನ್ನು ಪಡೆದು ಜಯಗಳಿಸಲಿದ್ದಾರೆ.

RR Nagar exit poll result 2020; ಮುನಿರತ್ನಗೆ ಗೆಲುವು

ಶಿರಾ ಕ್ಷೇತ್ರದ ಕಾಂಗ್ರೆಸ್‌ ಅಭ್ಯರ್ಥಿ ಟಿ. ಬಿ. ಜಯಚಂದ್ರ ಉಪ ಚುನಾವಣೆಯಲ್ಲಿ ಶೇ 32.5ರಷ್ಟು ಮತಗಳನ್ನು ಪಡೆಯಲಿದ್ದಾರೆ. ಜೆಡಿಎಸ್‌ ಅಭ್ಯರ್ಥಿ ಅಮ್ಮಾಜಮ್ಮ ಶೇ 17.4ರಷ್ಟು ಮತಗಳನ್ನು ಪಡೆಯಲಿದ್ದಾರೆ ಎಂದು ಸಿ ವೋಟರ್ ಸಮೀಕ್ಷೆ ಹೇಳಿದೆ.

ಶಿರಾ ಉಪ ಚುನಾವಣೆ; ಬಿಜೆಪಿ ಗೆಲುವು ಅಷ್ಟು ಸುಲಭವಲ್ಲ!

ಶಿರಾ ಉಪ ಚುನಾವಣೆ ಕಣದಲ್ಲಿ ಒಟ್ಟು 16 ಅಭ್ಯರ್ಥಿಗಳು ಕಣದಲ್ಲಿದ್ದರು. ಇತರ ಅಭ್ಯರ್ಥಿಗಳು ಶೇ 13.5ರಷ್ಟು ಮತಗಳನ್ನು ಪಡೆಯಲಿದ್ದಾರೆ ಎಂದು ಚುನಾವಣೋತ್ತರ ಸಮೀಕ್ಷೆಗಳು ಹೇಳಿವೆ.

ಬಿಜೆಪಿ ಐತಿಹಾಸಿಕ ಸಾಧನೆ; ಶಿರಾ ಕ್ಷೇತ್ರದಲ್ಲಿ ಬಿಜೆಪಿ ಜಯಗಳಿಸಿದರೆ ಐತಿಹಾಸಿಕ ಸಾಧನೆ ಆಗಲಿದೆ. ಇದುವರೆಗೂ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಗಳು 3ನೇ ಸ್ಥಾನ ಪಡೆಯುತ್ತಿದ್ದರು. 25 ಸಾವಿರ ಮತಗಳನ್ನು ಪಡೆಯಲು ಸಹ ವಿಫಲರಾಗಿದ್ದರು.

ಉಪ ಚುನಾವಣೆಯಲ್ಲಿ ಶಿರಾದಲ್ಲಿ ಗೆಲುವು ಸಾಧಿಸಬೇಕು ಎಂದು ಬಿಜೆಪಿ ಚುನಾವಣೆ ಘೋಷಣೆಗೆ ಮುನ್ನವೇ ಕ್ಷೇತ್ರದಲ್ಲಿ ತಯಾರಿ ಆರಂಭಿಸಿತ್ತು. ಚುನಾವಣಾ ಪ್ರಚಾರಕ್ಕೆ ಸಚಿವರು, ಬೇರೆ ಜಿಲ್ಲೆಗಳ ನಾಯಕರು ಸೇರಿದಂತೆ ಹಲವಾರು ಜನರು ರಂಗು ತುಂಬಿದ್ದರು.

2008ರಲ್ಲಿ ಶಿರಾ ಕ್ಷೇತ್ರದಲ್ಲಿ ಬಿ. ಕೆ. ಮಂಜುನಾಥ್ 24,025 ಮತ ಪಡೆದಿದ್ದರು. ಆಗ ಕಾಂಗ್ರೆಸ್‌ನ ಟಿ. ಬಿ. ಜಯಚಂದ್ರ ಗೆದ್ದಿದ್ದರು. 2013ರ ಚುನಾವಣೆಯಲ್ಲಿ ಬಿ. ಕೆ. ಮಂಜುನಾಥ್ 18,884 ಮತಗಳನ್ನು ಪಡೆದಿದ್ದರು ಆಗಲೂ ಸಹ ಜಯಚಂದ್ರ ಗೆದ್ದು ಬಿಜೆಪಿ 3ನೇ ಸ್ಥಾನಕ್ಕೆ ಕುಸಿದಿತ್ತು.

2018ರಲ್ಲಿ ಬಿಜೆಪಿ ಗೆಲ್ಲುವ ಉತ್ಸಾಹದಿಂದ ಅಭ್ಯರ್ಥಿಯನ್ನು ಬದಲಾವಣೆ ಮಾಡಿ ಎಸ್. ಆರ್. ಗೌಡ ಅವರಿಗೆ ಟಿಕೆಟ್ ನೀಡಿತು. ಜೆಡಿಎಸ್‌ನ ಬಿ. ಸತ್ಯನಾರಾಯಣ ಗೆಲುವು ಸಾಧಿಸಿದರು. ಕಾಂಗ್ರೆಸ್‌ನ ಟಿ. ಬಿ. ಜಯಚಂದ್ರ 2ನೇ ಸ್ಥಾನಕ್ಕೆ ತೃಪ್ತಿಪಟ್ಟುಕೊಂಡರು. ಬಿಜೆಪಿ ಅಭ್ಯರ್ಥಿ ಪಡೆದ ಮತ 16,959 ಮಾತ್ರ.

English summary
Sira by election exit Poll Results 2020 in Kannada: BJP may win Tumakuru Sira by election. First time BJP candidate may win in assembly seat. Election result will be announced on November 10.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X