ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಡೆಂಗ್ಯೂ ಜ್ವರ ಬಾರದಂತೆ ಎಚ್ಚರ ವಹಿಸಲು ಕ್ರಮಗಳು

|
Google Oneindia Kannada News

ಡೆಂಗ್ಯೂ ಜ್ವರ ಸೊಳ್ಳೆಗಳಿಂದ ಬರುವ ಕಾಯಿಲೆಯಾಗಿದೆ. ಮುಂಜಾಗ್ರತೆ ಕ್ರಮಗಳನ್ನು ಅನುಸರಿಸುವ ಮೂಲಕ ಜ್ವರ ಬಾರದಂತೆ ತಡೆಯಬಹುದಾಗಿದೆ. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಅಧಿಕಾರಿಗಳು ಕ್ರಮಗಳನ್ನು ವಿವರಿಸಿದ್ದಾರೆ.

ಡೆಂಗ್ಯೂ ರೋಗವು ಇಡೀಸ್ ಈಜೀಪ್ಟಿ ಎಂಬ ಸೊಳ್ಳೆಯಿಂದ ಒಬ್ಬರಿಂದ ಒಬ್ಬರಿಗೆ ಹರಡುತ್ತದೆ. ಸ್ವಚ್ಛವಾದ ನೀರಿನಲ್ಲಿ ತನ್ನ ಸಂತಾನೋತ್ಪತ್ತಿಯನ್ನು ಬೆಳೆಸುವ ಈ ಸೊಳ್ಳೆಯು ಹಗಲಿನಲ್ಲಿ ಮಾತ್ರ ಕಚ್ಚುತ್ತದೆ.

ದಕ್ಷಿಣ ಕನ್ನಡದಲ್ಲಿ 14 ದಿನದಲ್ಲಿ 128 ಮಂದಿಗೆ ಡೆಂಗ್ಯೂ ಜ್ವರ ದಕ್ಷಿಣ ಕನ್ನಡದಲ್ಲಿ 14 ದಿನದಲ್ಲಿ 128 ಮಂದಿಗೆ ಡೆಂಗ್ಯೂ ಜ್ವರ

7 ದಿನಗಳಲ್ಲಿ ಮೊಟ್ಟೆಯಿಂದ ಮರಿ ಸೊಳ್ಳೆಯಾಗಿ ಪರಿವರ್ತನೆಗೊಳ್ಳುತ್ತದೆ. ಜನರು ನೀರು ಸಂಗ್ರಹಿಸುವ ತೊಟ್ಟಿ, ಬ್ಯಾರಲ್, ಪಾತ್ರೆಗಳನ್ನು ಪ್ರತಿ 3-4 ದಿನಗಳಿಗೊಮ್ಮೆ ಸ್ವಚ್ಛವಾಗಿ ತಿಕ್ಕಿ ತೊಳೆದು ಬಿಸಿಲಿನಲ್ಲಿ ಒಣಗಿಸಿದ ನಂತರ ನೀರನ್ನು ತುಂಬಿಡಬೇಕು.

ಡೆಂಗ್ಯೂ ಪೀಡಿತರ ಸಂಖ್ಯೆ ಹೆಚ್ಚಳ; ಸೊಳ್ಳೆ ಕಡಿತದ ಬಗ್ಗೆ ಎಚ್ಚರ ಡೆಂಗ್ಯೂ ಪೀಡಿತರ ಸಂಖ್ಯೆ ಹೆಚ್ಚಳ; ಸೊಳ್ಳೆ ಕಡಿತದ ಬಗ್ಗೆ ಎಚ್ಚರ

Steps To Avoid Dengue Preventing Mosquito Bites

ಮನೆ ಅಥವ ಕಚೇರಿಯ ಏರ್‌ಕೂಲರ್‌ನಲ್ಲಿ ಸಂಗ್ರಹವಾದ ನೀರು ಮತ್ತು ಹೂವಿನ ಕುಂಡಲಿಗಳಲ್ಲಿ ಸಂಗ್ರಹಿಸಿದ ನೀರನ್ನು ಕೂಡ ಪ್ರತಿ 3-4 ದಿನಗಳಿಗೊಮ್ಮೆ ಬದಲಾಯಿಸಬೇಕು ಎಂದು ಅಧಿಕಾರಿಗಳು ಸಲಹೆ ನೀಡಿದ್ದಾರೆ.

ರೋಗದ ಲಕ್ಷಣಗಳು : ತೀವ್ರ ತಲೆನೋವು, ಕಣ್ಣು ನೋವು, ಕೀಲು ಮತ್ತು ಸ್ನಾಯು ನೋವು, ಹಸಿವಾಗದೇ ಇರುವುದು, ತುರಿಕೆ ಹಾಗೂ ತೀವ್ರ ಜ್ವರ ಡೆಂಗ್ಯೂ ಜ್ವರದ ಲಕ್ಷಣಗಳಾಗಿವೆ. ರೋಗದ ಲಕ್ಷಣ ಕಂಡುಬಂದಲ್ಲಿ ತಕ್ಷಣ ಆಸ್ಪತ್ರೆಗೆ ಭೇಟಿ ನೀಡಿ, ವೈದ್ಯರನ್ನು ಭೇಟಿಯಾಗಬೇಕು.

ರೋಗಕ್ಕೆ ತುತ್ತಾದವರು ಹೆಚ್ಚಿನ ವಿಶ್ರಾಂತಿ ಪಡೆಯಬೇಕು. ನೀರಿನ ಜೊತೆಗೆ ಸಾಕಷ್ಟು ಪ್ರಮಾಣದಲ್ಲಿ ದ್ರವ ಪದಾರ್ಥಗಳನ್ನು ಸೇವಿಸಬೇಕು. ಸೊಳ್ಳೆಯು ಕಚ್ಚದಂತೆ ಎಚ್ಚರಿಕೆಯನ್ನು ವಹಿಸಬೇಕು.

ಬೆಂಗಳೂರಲ್ಲಿ ಡೆಂಗ್ಯೂ ಹೆಚ್ಚಳ: ಎನ್‌ಎಸ್‌1 VS ಎಲಿಸಾ ಪರೀಕ್ಷೆಬೆಂಗಳೂರಲ್ಲಿ ಡೆಂಗ್ಯೂ ಹೆಚ್ಚಳ: ಎನ್‌ಎಸ್‌1 VS ಎಲಿಸಾ ಪರೀಕ್ಷೆ

ಸೊಳ್ಳೆ ಕಡಿತದಿಂದ ಪಾರಾಗಲು ಉದ್ದನೆಯ ತೋಳಿನ ಅಂಗಿ ಮತ್ತು ಪ್ಯಾಂಟ್‌ಗಳನ್ನು ಧರಿಸಬೇಕು. ಸೊಳ್ಳೆ ಬತ್ತಿ, ಸೊಳ್ಳೆ ಪರದೆಯನ್ನು ಬಳಸಬೇಕು.

ಕುಡಿಯುವ ನೀರಿನ ಮೂಲಗಳಾದ ಬಾವಿ, ಬೋರ್‌ವೆಲ್ ಹಾಗೂ ಕೈ ಪಂಪ್‌ಗಳ ಕನಿಷ್ಠ 100 ಅಡಿ ಸುತ್ತಮುತ್ತಲು ತಿಪ್ಪೆಗುಂಡಿ, ಕಸ-ಕಡ್ಡಿ ಹಾಗೂ ಮಲ ವಿಸರ್ಜನೆ ಮಾಡದಂತೆ ನೋಡಿಕೊಳ್ಳಬೇಕು.

ಕುಡಿಯುವ ನೀರಿನ ಮೂಲಗಳಿಗೆ ಮೇಲ್ಮಟ್ಟದ ಸಂಗ್ರಹಗಾರಗಳಲ್ಲಿ ಪ್ರತಿದಿನ ಹಾಗೂ ತೆರೆದ ಬಾವಿಗಳಲ್ಲಿ ವಾರಕ್ಕೊಮ್ಮೆ ಕ್ಲೋರಿನೇಷನ್ ಮಾಡಬೇಕು. ಕ್ಲೋರಿನೇಷನ್ ಮಾಡಿದ ನೀರನ್ನು ಬಳಸಬೇಕು.

English summary
Dengue fever is a mosquito-borne disease. People should avoid mosquito bites. Here are the steps to take avoid mosquito.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X