Tips for Summer: ಜೂನ್‌ವರೆಗೂ ಇರಲಿದೆ ಬಿಸಿಲು.. ನಿಮ್ಮ ಆರೋಗ್ಯ ನಿಮ್ಮ ಕೈಯಲ್ಲಿ.. ಇಲ್ಲಿವೆ ಸಲಹೆಗಳು

ರಾಜ್ಯದಲ್ಲಿ ಬರ ತಾಂಡವವಾಡುತ್ತಿದೆ. ನೀರಿಗೆ ಹಾಹಾಕಾರ ಉಂಟಾಗಿದೆ. ಇದೇ ವೇಳೆ ಬಿಸಿಲು ದಿನದಿಂದ ದಿನಕ್ಕೆ ಜಾಸ್ತಿಯಾಗುತ್ತಿದೆ. ಫೆಬ್ರವರಿಯಿಂದ ಆರಂಭವಗಿರುವ ಈ ಬಿಸಿಲು ಜೂನ್ ಎರಡನೇ ವಾರದವರೆಗೂ ಮುಂದುವರೆಯಲಿದೆ. ಬಿಸಿಲಿನಿಂದ ಆರೋಗ್ಯ ಸಮಸ್ಯೆ ಉಂಟಾಗಲಿದೆ. ಹೀಗಾಗಿಯೇ ಅನೇಕ ಮುಂಜಾಗ್ರತ ಕ್ರಮಗಳನ್ನು ತೆಗೆದುಕೊಳ್ಳುವುದು ಅನಿವಾರ್ಯ.

ಹವಾಮಾನ ಇಲಾಖೆ ಸೂರ್ಯನ ಬಿಸಿಲು ಮತ್ತು ಶಾಖದ ಅಲೆಗಳು ಹೆಚ್ಚಾಗುವ ಬ್ಗೆಗ ಮುನ್ನೆಚ್ಚರಿಕೆ ನೀಡಿದೆ. ಸೂರ್ಯನ ಶಾಖದ ಪ್ರಖರತೆಯಿಂದ ಡಿಹೈಡ್ರೇಷನ್, ಸನ್ ಸ್ಟ್ರೋಕ್‌, ವಿಪರೀತ ತಲೆನೋವು ಸೇರಿದಂತೆ ಅನೇಕ ಕಾಯಿಲೆಗಲು ಬರುತ್ತವೆ. ಅದಕ್ಕಾಗಿಯೇ ಅನೇಕ ವೈದ್ಯರು ಸಾಮಾಜಿಕ ಮಾಧ್ಯಮಗಳಲ್ಲಿ ಸಲಹೆಗಳನ್ನು ನೀಡುತ್ತಿದ್ದಾರೆ. ಅವುಗಳಲ್ಲಿ ಕೆಲವು ಸಲಹೆಗಳನ್ನು ಇಲ್ಲಿ ಹಂಚಿಕೊಳ್ಳಲಾಗಿದೆ.

Summer 2024 Some Special Tips to Avoid Health Issues in Summer

ಬೇಸಿಗೆಯಲ್ಲಿ ಆರೋಗ್ಯ ಕಾಪಾಡಿಕೊಳ್ಳಲು ಸಲಹೆಗಳು

* ಬಿಸಿಲಿನಲ್ಲು ಹೊರಗೆ ಹೋಗುವುದನ್ನು ಆದಷ್ಟು ತಪ್ಪಿಸಿ ಕೊಳ್ಳಿ

* ಬಿಸಿಲಿನಲ್ಲಿ ಹೊರ ಹೋಗಲೇ ಬೇಕಾದ ಅನಿವಾರ್ಯತೆ ಇದ್ದಲ್ಲಿ ಬಿಳಿ ಬಣ್ಣದ ಛತ್ರಿಯನ್ನು ಬಳಸಿ

* ಬಿಸಿಲಿನ ಪ್ರಖರತೆಯನ್ನು ಕಪ್ಪು ಮತ್ತು ನೀಲಿ ಬಣ್ಣ ಬೇಗ ಹೀರುವುದರಿಂದ ಕಪ್ಪು ಮತ್ತು ನೀಲಿ ಬಣ್ಣದ ಬಟ್ಟೆಗಳನ್ನು ಧರಿಸಬೇಡಿ

* ಸಾಧ್ಯವಾದಷ್ಟೂ ಕಾಟನ್ ಬಟ್ಟೆಗಳನ್ನು ಧರಿಸಿ

* ಹಿರಿಯ ನಾಗರಿಕರಿಗೆ ಮತ್ತು ಮಕ್ಕಳಿಗೆ ಮನೆಯಲ್ಲಿ ಹೆಚ್ಚು ಹೆಚ್ಚು ನೀರು ಕುಡಿಯಲು ಕೊಡಿ

* ಈ ಬಿಸಿಲಿನಲ್ಲಿ ವಿಟಮಿನ್ 'ಸಿ' ಕೊರತೆ ಎದುರಾಗುವುದರಿಂದ ಹೆಚ್ಚು ನಿಂಬೆಹಣ್ಣಿನ ಜ್ಯೂಸ್ ಮಾಡಿಕೊಂಡು ಕುಡಿಯಿರಿ. ‌ಸಕ್ಕರೆ ಬದಲು ಬೆಲ್ಲವನ್ನು ಬಳಸಿ

Summer 2024 Some Special Tips to Avoid Health Issues in Summer

* ಬೆಳಗ್ಗೆ ಎದ್ದ ತಕ್ಷಣ ತುಳಸಿ ಎಲೆಗಳನ್ನು ಮಿಕ್ಸಿಯಲ್ಲಿ ರುಬ್ಬಿಕೊಂಡು ಎರಡು ಲೋಟದಷ್ಟು ನೀರನ್ನು ಬೆರೆಸಿ ಕುಡಿಯಿರಿ ಇದರಿಂದ ಕೆಲಸ ಮಾಡುವಾಗ ಸುಸ್ತಾಗುವುದಿಲ್ಲ

* ಆಹಾರದಲ್ಲಿ ಮಸಾಲೆ ಪದಾರ್ಥಗಳನ್ನು ಹೆಚ್ಚು ಬಳಸಬೇಡಿ, ಮಸಾಲೆಯಿಂದ ಗುದದ್ವಾರದಲ್ಲಿ ಉಷ್ಣತೆ ಹೆಚ್ಚಾಗಿ ಮಲವಿಸರ್ಜನೆಗೆ ತೊಂದರೆ ಜೊತೆಗೆ ಪೈಲ್ಸ್ ಬರುವ ಸಾಧ್ಯತೆ ಹೆಚ್ಚು

* ಈ ಸಮಯದಲ್ಲಿ ತಲೆ ಮತ್ತು ಮೆದುಳು ತಂಪಾಗಿರಬೇಕು ಆದ್ದರಿಂದ ಎರಡು ದಿನಕ್ಕೊಮ್ಮೆ ಕೊಬ್ಬರಿ ಎಣ್ಣೆ ಬದಲು ರಾತ್ರಿ ಮಲಗುವಾಗ ಹರಳೆಣ್ಣೆ ಹಚ್ಚಿ ಬೆಳಗ್ಗೆ ಸ್ನಾನ ಮಾಡಿ

* ರಾತ್ರಿ ಮಲಗುವ ಮೊದಲು ತಣ್ಣೀರಿನ ಬಟ್ಟೆಯಿಂದ ನೆಲವನ್ನು ಒರೆಸಿಕೊಂಡು ತೆಳುವಾದ ಬಟ್ಟೆಯ ಮೇಲೆ ಮಲಗುವುದು ಸೂಕ್ತ, ಹಾಸಿಗೆಯಿಂದ ದೇಹದ ಉಷ್ಣ ಹೆಚ್ಚುತ್ತದೆ.

* ಹೆಸರು ಕಾಳುಗಳನ್ನು ನೀರಿನಲ್ಲಿ ಅರ್ಧ ಗಂಟೆಯಷ್ಟು ನೆನಸಿಟ್ಟು ನಂತರ ಮಿಕ್ಸಿಯಲ್ಲಿ ಜ್ಯೂಸ್ ಮಾಡಿಕೊಂಡು ದಿನಕ್ಕೆರಡು ಬಾರಿ ಕುಡಿಯಿರಿ ಇದರಿಂದ ದೇಹ ತಂಪಾಗಿರುತ್ತದೆ.

* ಈ ಸಮಯದಲ್ಲಿ ಮೊಸರಿನ ಬದಲು ಮಜ್ಜಿಗೆಯನ್ನು ಆಹಾರಕ್ಕೆ ಬಳಸಿ,ಇಚದರಿಂದ ಜೀರ್ಣಕ್ರಿಯೆ ಚೆನ್ನಾಗಿ ಆಗುವುದರಿಂದ ಅಸಿಡಿಟಿ ಆಗುವುದಿಲ್ಲ

* 5 ವರ್ಷದ ಒಳಗಿನ ಮಕ್ಕಳಿಗೆ ಪ್ರತಿ ಅರ್ಧ ಗಂಟೆಗೊಮ್ಮೆ ಒಂದು ಚಿಟಿಕೆಯಷ್ಟು ಅಯೋಡಿನ್ ಉಪ್ಪು ಬೆರೆಸಿದ ನೀರನ್ನು ಕುಡಿಸುತ್ತಿರಬೇಕು ಇದರಿಂದ ಮಕ್ಕಳನ್ನು ಡಿಹೈಡ್ರೇಷನ್ ಆಗುವುದಿಲ್ಲ.

* ಬೇಸಿಗೆ ದಿನಗಳಲ್ಲಿ ತಣ್ಣೀರಿನ ಸ್ನಾನ ಕ್ಷೇಮ, ದಿನಕ್ಕೆರಡು ಬಾರಿ ಅಂದರೆ ಸಂಜೆ ಅಥವಾ ರಾತ್ರಿ ಮಲಗುವ ಮುನ್ನ ಒಂದು ಬಕೆಟ್ ತಣ್ಣೀರಿಗೆ ಒಂದು 10 ಪುದಿನ ಎಲೆಗಳನ್ನು ಮಿಕ್ಸಿಯಲ್ಲಿ ರುಬ್ಬಿಕೊಂಡು ತಣ್ಣೀರಿಗೆ ಬೆರೆಸಿ ಸ್ನಾನ ಮಾಡುವುದರಿಂದ ಬೆವರಿನ ದುರ್ಗಂಧ ದೂರವಾಗುತ್ತದೆ. ಜೊತೆಗೆ ಚರ್ಮದ ಮೇಲೆ ಬೆವರು ಗುಳ್ಳೆಗಳು ಬರುವುದಿಲ್ಲ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+