ಅತಿಯಾದ ಉಷ್ಣಾಂಶ; ಆರೋಗ್ಯ ಇಲಾಖೆ ಸುತ್ತೋಲೆ, ಸಲಹೆಗಳು

ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ಅತಿಯಾದ ಉಷ್ಣಾಂಶ ದಾಖಲಾಗುತ್ತಿದೆ. ಆದ್ದರಿಂದ ಬೇಸಿಗೆಯಲ್ಲಿ ಆರೋಗ್ಯ ಕಾಪಾಡಿಕೊಳ್ಳಲು ಕೆಲವು ಸಲಹೆಗಳನ್ನು ನೀಡಲಾಗಿದೆ.

ಬೇಸಿಗೆ ಕಾಲ ಆರಂಭವಾಗಿದೆ. ವಿವಿಧ ಜಿಲ್ಲೆಗಳಲ್ಲಿ ಅತಿಯಾದ ಉಷ್ಣಾಂಶ ದಾಖಲಾಗುತ್ತಿದೆ. ಜನರು ಬಿಸಿಲಿನ ಧಗೆಗೆ ಸಿಲುಕಿ ಇನ್ನೂ ಎರಡು ತಿಂಗಳು ಕಳೆಯಬೇಕಲ್ಲ ಎಂದು ಕೊಳ್ಳುತ್ತಿದ್ದಾರೆ. ಬೇಸಿಗೆಯಲ್ಲಿ ಸಂಭವಿಸುವ ಅನಾರೋಗ್ಯ ಪರಿಸ್ಥಿತಿಗಳನ್ನು ನಿಭಾಯಿಸುವ ಕುರಿತು ಕರ್ನಾಟಕದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸುತ್ತೋಲೆಯೊಂದನ್ನು ಹೊರಡಿಸಿದೆ. ಎಲ್ಲಾ ಜಿಲ್ಲಾಧಿಕಾರಿಗಳಿಗೆ ಕೆಲವು ಸೂಚನೆಗಳನ್ನು ನೀಡಲಾಗಿದೆ.

ತಾಂತ್ರಿಕಾ ಸಲಹಾ ಸಮಿತಿಯ 195ನೇ ಸಭೆಯ ಶಿಫಾರಸ್ಸಿನ ಅನ್ವಯ ಜನರು ಬೇಸಿಗೆಯಲ್ಲಿ ಆರೋಗ್ಯ ಕಾಪಾಡಿಕೊಳ್ಳಲು ಕೆಲವು ಸಲಹೆಗಳನ್ನು ನೀಡಲಾಗಿದೆ. ಪ್ರಸ್ತುತ ರಾಜ್ಯದಲ್ಲಿ ಬೇಸಿಗೆ ಕಾಲ ಆರಂಭವಾಗಿದ್ದು, ಈ ಅವಧಿಯಲ್ಲಿ ಅತಿಯಾದ ಉಷ್ಣಾಂಶದಿಂದಾಗಿ ನಾನಾ ರೀತಿಯ ಅನಾರೋಗ್ಯ ಪರಿಸ್ಥಿತಿಗಳು ಸಂಭವಿಸುವ ಸಾಧ್ಯತೆ ಇದೆ. ಆದ್ದರಿಂದ ಸುತ್ತೋಲೆ ಮೂಲಕ ಅಧಿಕಾರಿಗಳಿಗೆ ಕೆಲವು ಸೂಚನೆ ಕೊಡಲಾಗಿದೆ.

Summer Season Health And Family Welfare Department Circular And Tips

ಅತಿಯಾದ ಉಷ್ಣಾಂಶದಿಂದ ಸಂಭವಿಸಬಹುದಾದ ಅನಾರೋಗ್ಯ ಪರಿಸ್ಥಿತಿಗಳ ತಡೆಗಟ್ಟುವಿಕೆ, ನಿಯಂತ್ರಣ ಮತ್ತು ನಿರ್ವಹಣೆಯನ್ನು ಸಾರ್ವಜನಿಕ ಆರೋಗ್ಯದ ಹಿತದೃಷ್ಟಿಯಿಂದ, ಸೂಕ್ತವಾಗಿ ಕ್ರಮ ಕೈಗೊಳ್ಳಲು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಹಾಗೂ ಜಿಲ್ಲಾಡಳಿತಗಳಿಗೆ ಆರೋಗ್ಯ ಇಲಾಖೆ ಮೂಲಕ ಈ ಸೂಚನೆಗಳನ್ನು ನೀಡಲಾಗಿದೆ.

ಹೆಚ್ಚು ನೀರು ಕುಡಿಯುವುದು; ಬಾಯಾರಿಕೆ ಇಲ್ಲದಿದ್ದರೂ ಸಹ ಹೆಚ್ಚು ನೀರನ್ನು ಆಗಾಗ ಸೇವಿಸಬೇಕು, ಬಾಯಾರಿಕೆಯು ನಿರ್ಜಲೀಕರಣದ ಲಕ್ಷಣವಾಗಿದೆ. ಪ್ರಯಾಣ ಮಾಡುವ ಸಮಯದಲ್ಲೂ ನೀರನ್ನು ಕುಡಿಯಲು ಜೊತೆಗೆ ತೆಗೆದುಕೊಂಡು ಹೋಗುವುದು ಅಗತ್ಯವಾಗಿದೆ. ಮೌಖಿಕ ಪುನರ್ಜಿಲೀಕರಣ ದ್ರಾವಣ ಹಾಗೂ ಮನೆಯಲ್ಲಿಯೇ ಸಿದ್ಧ ಪಡಿಸಿದ ನಿಂಬೆ ಹಣ್ಣಿನ ಶರಬತ್ತು, ಮಜ್ಜಿಗೆ, ಲಸ್ಸಿ, ಹಣ್ಣಿನ ಜ್ಯೂಸ್‌ಗಳನ್ನು ಒಂದು ಚಿಟಿಕೆ ಉಪ್ಪಿನೊಂದಿಗೆ ಸೇವಿಸುವುದು ಉತ್ತಮ. ಈ ಋತುಮಾನದಲ್ಲಿ ಲಭ್ಯವಿರುವ ಹಾಗೂ ಹೆಚ್ಚು ನೀರಿನ ಅಂಶವನ್ನು ಹೊಂದಿರುವ ಹಣ್ಣು ಹಾಗೂ ತರಕಾರಿಗಳಾದ ಕಲ್ಲಂಗಡಿ, ಕರಬೂಜ, ಕಿತ್ತಳೆ, ದ್ರಾಕ್ಷಿ, ಅನಾನಸ್, ಎಳನೀರುಗಳನ್ನು ಹೆಚ್ಚಾಗಿ ಸೇವಿಸಬೇಕು.

Summer Season Health And Family Welfare Department Circular And Tips

ಶರೀರವನ್ನು ಸುರಕ್ಷಿತವಾಗಿಟ್ಟುಕೊಳ್ಳುವುದು. ತಿಳಿ ಬಣ್ಣದ ಹತ್ತಿಯ ಬಟ್ಟೆಯನ್ನು ಧರಿಸುವುದು ಉತ್ತಮ. ಬಿಸಿಲಿನಲ್ಲಿ ಹೊರ ಹೋಗುವ ಸಂದರ್ಭಗಳಲ್ಲಿ ಛತ್ತಿ, ಟೋಪಿ/ ಹ್ಯಾಟ್, ಟವೆಲ್ ಅಥವಾ ಇನ್ನಾವುದೇ ಸಾಂಪ್ರದಾಯಿಕ ಪದ್ಧತಿಯನ್ನು ಉಪಯೋಗಿಸಬಹುದುದ. ಬಿಸಿಲಿನಲ್ಲಿ ನಡೆಯುವ ಸಂದರ್ಭದಲ್ಲಿ ಪಾದರಕ್ಷೆಗಳನ್ನು ಧರಿರಸಬೇಕು. ರೇಡಿಯೋ, ದೂರದರ್ಶನ ಹಾಗೂ ದಿನಪತ್ರಿಕೆಗಳ ಮೂಲಕ ಸ್ಥಳೀಯ ಹವಾಮಾನದ ಮಾಹಿತಿಯನ್ನು ಪಡೆಯುತ್ತಿರಿ.

ಉತ್ತಮವಾದ ಗಾಳಿ ಹಾಗೂ ತಣ್ಣಗಿರುವ ಪ್ರದೇಶದಲ್ಲಿ ಇರಿ. ನೇರವಾಗಿ ಸೂರ್ಯನ ಬೆಳಕು ಹಾಗೂ ಬಿಸಿಗಾಳಿಯು ಮನೆಯ ಒಳಗೆ ಬರದಂತೆ ತಡೆಯಲು, ಹಗಲು ಹೊತ್ತಿನಲ್ಲ ಕಿಟಕಿಗಳನ್ನು ಪರದೆಗಳಿಂದ ಮುಚ್ಚಿರಿ ಹಾಗೂ ತಣ್ಣನೆಯ ಗಾಳಿ ಸಂಚಾರಕ್ಕೆ ಅನುಕೂಲವಾಗುವಂತೆ, ರಾತ್ರಿಯ ಹೊತ್ತು ಕಿಟಕಿಗಳನ್ನು ತೆರೆದಿಡಬೇಕು. ಹೊರಾಂಗಣ ಚಟುವಟಕೆಗಳನ್ನು ಆದಷ್ಟೂ ದಿನದ ತಣ್ಣನೆಯ ಸಮಯದಲ್ಲ ಅಂದರೆ ಬೆಳಗಿನ ಹೊತ್ತು ಅಥವಾ ಸಂಜೆಗೆ ಸೀಮಿತವಿರುವಂತೆ ಬದಲಾಯಿಸಿಕೊಳ್ಳಿ. ಬಿಸಿಗಾಳಿಯ ಒತ್ತಡ ಹಾಗೂ ಬಿಸಿಗಾಳಿಗೆ ಸಂಬಂಧಪಟ್ಟ ಆರೋಗ್ಯ ಸಮಸ್ಯೆಗಳಿಂದ ಎಲ್ಲರಿಗೂ ಅಪಾಯವಿದೆ. ನವಜಾತ ಶಿಶುಗಳು ಹಾಗೂ ಚಿಕ್ಕ ಮಕ್ಕಳು. ಹೊರಾಂಗಣದಲ್ಲಿ ಕೆಲಸ ನಿರ್ವಹಿಸುವವರು, ಮಾನಸಿಕ ಸಮಸ್ಯೆಗಳಿಂದ ಬಳಲುತ್ತಿರುವವರು. ಆರೋಗ್ಯ ಸಮಸ್ಯೆಗಳರುವವರು, ವಿಶೇಷವಾಗಿ ಹೃದ್ರೋಗ ಹಾಗೂ ರಕ್ತದ ಒತ್ತಡದಿಂದ ಬಳಲುತ್ತಿರುವವರು ಬಿಸಿಲಿನಲ್ಲಿ ಸಂಚಾರ ಮಾಡಬೇಡಿ.

ತಂಪಾದ ವಾತಾವರಣವಿರುವ ಪ್ರದೇಶದಿಂದ ಬಿಸಿಯಾದ ವಾತಾವರಣದ ಪ್ರದೇಶಕ್ಕೆ ಭೇಟಿ ನೀಡುವ ಜನರು, ಬಿಸಿಗಾಳಿಯ ಸಂದರ್ಭದಲ್ಲಿ ಸುಮಾರು ಒಂದು ವಾರದ ಅವಧಿಯನ್ನು ಹೊಸ ವಾತಾವರಣಕ್ಕೆ ಒಗ್ಗಿಕೊಳ್ಳಲು ಮೀಸಅಡಬೇಕು ಹಾಗೂ ಈ ಅವಧಿಯಲ್ಲಿ ಹೆಚ್ಚು ನೀರನ್ನು ಸೇವಿಸಬೇಕು. ಹಂತ ಹಂತವಾಗಿ ಬಿಸಿಯಾದ ವಾತಾವರಣದಲ್ಲಿ ಚಟುವಟಕೆಗಳನ್ನು ನಡೆಸುವುದರಿಂದ ಒಗ್ಗಿಕೊಳ್ಳಲು ಸಾಧ್ಯವಾಗುತ್ತದೆ. ವೃದ್ಧರು ಅಥವಾ ರೋಗಿಗಳ ಉಸ್ತುವಾರಿ ಹಾಗೂ ಅವರ ಆರೋಗ್ಯ ಸ್ಥಿತಿಯ ಮೇಲ್ವಿಚಾರಣೆಯನ್ನು ಪ್ರತಿದಿನ ಕೈಗೊಳ್ಳಬೇಕು. ಮನೆಯ ಒಳಾಂಗಣವನ್ನು ತಣ್ಣಗಿರಿಸಲು ಪರದೆಗಳನ್ನು ಬಳಕೆ ಮಾಡಿ, ಹಗಲು ಹೊತ್ತಿನಲ್ಲ ಮನೆಯ ಕೆಳಗಿನ ಮಹಡಿಗಳಲ್ಲಿ ಇರುವುದು ಉತ್ತಮ. ಶರೀರವನ್ನು ತಣ್ಣಗಿಸಲು ಫ್ಯಾನ್ ಅಥವಾ ತೇವವಾದ ಬಟ್ಟೆಯನ್ನು ಬಳಸಬಹುದು.

ಬೇಸಿಗೆಯಲ್ಲಿ ಏನು ಮಾಡಬಾರು; ಈ ಬಿಸಿಲಿನಲ್ಲಿ ಅಂದರೆ ಮಧ್ಯಾಹ್ನ 12 ಗಂಟೆಯಿಂದ 3 ಗಂಟೆಯವರೆಗೆ ಹೊರ ಹೋಗುವುದನ್ನು ತಪ್ಪಿಸಬೇಕು. ಮಧ್ಯಾಹ್ನದ ಸಂದರ್ಭದಲ್ಲ ಶ್ರಮದಾಯಕ ಹೊರಾಂಗಣ ಚಟುವಟಕೆಗಳನ್ನು ಕೈಗೊಳ್ಳಬಾರದು. ಚಪ್ಪಲಿ ಧರಿಸದೇ ಹೊರಹೋಗುವ ಅಭ್ಯಾಸವನ್ನು ತಪ್ಪಿಸಿ, ಮಧ್ಯಾಹ್ನದ ಸಮಯದಲ್ಲಿ ಅಡುಗೆ ಮಾಡುವುದು ತಪ್ಪಿಸಿ, ಅಡುಗೆ ಸಿದ್ಧಪಡಿಸುವ ಪ್ರದೇಶದಲ್ಲಿ ಕಿಟಕಿ ಹಾಗೂ ಬಾಗಿಲುಗಳನ್ನು ತೆರೆದಿಡಿ. ಮದ್ಯಪಾನ, ಕಾಫಿ ಮತ್ತು ಕಾರ್ಬೊನೇಟೆಡ್ ಪಾನೀಯಗಳು ಅಥವಾ ಹೆಚ್ಚು ಸಕ್ಕರೆ ಅಂಶವನ್ನು ಹೊಂದಿದ ಪಾನೀಯಗಳಿಂದ ದೂರವಿರಿ. ಇಂತಹ ಪಾನೀಯಗಳು ದೇಹವನ್ನು ನಿರ್ಜಲೀಕರಣಗೊಳಿಸುತ್ತವೆ. ಅಥವಾ ಹೊಟ್ಟೆ ನೋವನ್ನು ಉಂಟುಮಾಡುತ್ತವೆ. ಹೆಚ್ಚು ಪ್ರೊಟೀನ್ ಭರಿತವಾದ ಹಾಗೂ ಹಳೆಯದಾದ ಆಹಾರ ಪದಾರ್ಥಗಳನ್ನು ಸೇವಿಸಬೇಡಿ. ಮಕ್ಕಳು ಅಥವಾ ಸಾಕು ಪ್ರಾಣಿಗಳನ್ನು ನಿಲುಗಡೆ ಮಾಡಿರುವ ವಾಹನಗಳಲ್ಲ ಬಿಡಬೇಡಿ. ವಾಹನಗಳ ಒಳಾಂಗಣದಲ್ಲಿನ ಹೆಚ್ಚಿನ ತಾಪಮಾನವು ಅಪಾಯಕಾರಿಯಾಗಬಹುದು.

ಕೆಲಸಗಾರರಿಗೆ ಕೆಲಸದ ಸ್ಥಳದಲ್ಲಿ ಕುಡಿಯಲು ತಣ್ಣನೆಯ ನೀರಿನ ವ್ಯವಸ್ಥೆ ಮಾಡಬೇಕು ಹಾಗೂ ಪ್ರತಿ 20 ನಿಮಿಷಗಳಗೊಮ್ಮೆ ಒಂದು ಗ್ಲಾಸ್ ಅಥವಾ ಅದಕ್ಕಿಂತ ಹೆಚ್ಚು ನೀರು ಕುಡಿಯುವಂತೆ ಗಮನ ವಹಿಸಬೇಕು. ಕೆಲಸಗಾರರು ನೇರವಾದ ಸೂರ್ಯವಾದ ಬೆಳಕಿನಲ್ಲಿ ಕೆಲಸ ನಿರ್ವಹಿಸದಂತೆ ಎಚ್ಚರ ವಹಿಸಬೇಕು. ಕೆಲಸಗಾರರಿಗೆ ನೆರಳಿನಲ್ಲಿ ಕೆಲಸ ನಿರ್ವಹಿಸಲು ಅನುಕೂಲವಾಗುವಂತ, ತಾತ್ಕಾಲಿಕ ಶೆಡ್‌ಗಳನ್ನು ನಿರ್ಮಿಸಬಹುದು. ಶ್ರಮದಾಯಕ ಹಾಗೂ ಹೊರಾಂಗಣ ಚಟುವಟಿಕೆಗಳನ್ನು, ತಾಪಮಾನವು ಕಡಿಮೆ ಇರುವ ಸಮಯದಲ್ಲಿ ಅಂದರೆ ಬೆಳಗಿನ ಅಥವಾ ಸಂಜೆಯ ಸಮಯದಲ್ಲಿ ನಿರ್ವಹಿಸುವಂತೆ ವೇಳಾಪಟ್ಟಿಯನ್ನು ಸಿದ್ಧಗೊಳಸಬೇಕು. ಹೊರಾಂಗಣ ಚಟುವಟಿಕೆಗಳ ಸಂದರ್ಭದಲ್ಲಿ ಕೆಲಸಗಾರರಿಗೆ ಪ್ರತಿ 1 ಗಂಟೆಗೆ 5 ನಿಮಿಷಗಳ ಬಿಡುವನ್ನು ನೀಡಬೇಕು. ಹೆಚ್ಚುವರಿ ಕೆಲಸಗಾರರನ್ನು ನೇಮಿಸಿಕೊಳ್ಳಿ ಅಥವಾ ಕೆಲಸದ ಗತಿಯನ್ನು ಕಡಿಮೆಗೊಳಿಸಿ.

ಸಾಮಾನ್ಯವಾಗಿ ಹೆಚ್ಚಿನ ಉಷ್ಣತೆಗೆ ಹೊಂದಿಕೊಳ್ಳಲು ಒಂದು ವಾರ ಅವಧಿಯ ಅವಶ್ಯಕತೆ ಇರುತ್ತದೆ. ಆದ್ದರಿಂದ, ಮೊದಲ ವಾರದಲ್ಲ ಪ್ರತಿ ದಿನ 3 ಗಂಟೆಗಳಗಿಂತ ಹೆಚ್ಚು ಕೆಲಸ ಮಾಡಬಾರದು, ನಂತರ ಕೆಲಸದ ಅವಧಿಯನ್ನು ಹಂತ ಹಂತವಾಗಿ ಹೆಚ್ಚಿಸಬಹುದು. ಬಿಸಿಯಾದಗಾಳಿ ಹಾಗೂ ಉಷ್ಣತೆಯ ಒತ್ತಡದಿಂದ ಉಂಟಾಗುವ ಆರೋಗ್ಯ ಸಮಸ್ಯೆಗಳ ಲಕ್ಷಣಗಳನ್ನು ಗುರುತಿಸುವಂತೆ ಕೆಲಸಗಾರರಿಗೆ ತರಬೇತಿ ನೀಡಬೇಕು. ವ್ಯಕ್ತಿಗೆ ತನ್ನ ಲಕ್ಷಣಗಳನ್ನು ಗುರುತಿಸಲು ಸಾಧ್ಯವಾಗದೇ ಇರುವ ಸಂದರ್ಭಗಳು ಹೆಚ್ಚಿರುವುದರಿಂದ, ಜೊತೆಯಲ್ಲಿನ ಕೆಲಸಗಾರರು ಲಕ್ಷಣಗಳನ್ನು ಪತ್ತೆ ಹಚ್ಚಲು ಅನುಕೂಲವಾಗುವಂತೆ ವ್ಯವಸ್ಥೆ ಮಾಡಬೇಕು.

ಪ್ರಥಮ ಚಿಕಿತ್ಸೆಯನ್ನು ನೀಡಲು ತರಬೇತಿ ಹೊಂದಿರುವವರು ಲಭ್ಯವಿರಬೇಕು ಹಾಗೂ ಬಿಸಿಗಾಳಿ ಮತ್ತು ಉಷ್ಣತೆಯ ಒತ್ತಡದಿಂದ ಆರೋಗ್ಯ ಸಮಸ್ಯೆಗಳು ಉಂಟಾದ ಸಂದರ್ಭದಲ್ಲ ಸ್ಪಂದಿಸಲು ತುರ್ತು ಪ್ರತಿಕ್ರಿಯಾ ಯೋಜನೆಯು ಕೆಲಸದ ಸ್ಥಳದಲ್ಲಿ ಲಭ್ಯವಿರಬೇಕು. ಗರ್ಭಿಣಿಯರು, ಆರೋಗ್ಯ ಸಮಸ್ಯೆಗಳಿಂದ ಬಳಲುತ್ತಿರುವವರು ಹಾಗೂ ನಿಗದಿತ ಆರೋಗ್ಯ ಸಮಸ್ಯೆಗೆ ಔಷಧೋಪಚಾರವನ್ನು ಪಡೆಯುತ್ತಿರುವವರು, ಬಿಸಿಲಿನಲ್ಲಿ ಕಾರ್ಯ ನಿರ್ವಹಿಸುವ ಮುನ್ನ ತಮ್ಮ ವೈದ್ಯರ ಸಲಹೆಯನ್ನು ಪಡೆಯುವುದು ಅಗತ್ಯವಾಗಿದೆ.

ಹೊರಾಂಗಣದಲ್ಲಿ ಕೆಲಸ ನಿರ್ವಹಿಸುವವರು, ತಿಳಿ ಬಣ್ಣದ ತುಂಬು ತೋಳನ ಅಂಗಿ ಹಾಗೂ ಪ್ಯಾಂಟ್ ಧರಿಸಬೇಕು ಹಾಗೂ ಸೂರ್ಯನ ಶಾಖದಿಂದ ರಕ್ಷಿಸಿಕೊಳ್ಳಲು ತಲೆಯ ಭಾಗವನ್ನು ಮುಚ್ಚಿಕೊಳ್ಳಬೇಕು. ಬಿಸಿಗಾಳಿ ಮತ್ತು ಉಷ್ಣತೆಯ ಒತ್ತಡದಿಂದ ಉಂಟಾಗುವ ಆರೋಗ್ಯ ಸಮಸ್ಯೆಗಳ ಕುರಿತು ಕೆಲಸಗಾರರಲ್ಲಿ ಅರಿವು ಮೂಡಿಸಲು ಶಿಬಿರಗಳನ್ನು ಆಯೋಜಿಸಬೇಕು. ತಾಪಮಾನ ಹಾಗೂ ಮುನ್ಸೂಚನೆ ಕುರಿತು ಮಾಹಿತಿ ನೀಡುವ ವ್ಯವಸ್ಥೆಯನ್ನು ಕೆಲಸದ ಸ್ಥಳಗಳಲ್ಲಿ ಅಳವಡಿಸಬೇಕು. ಬಿಸಿಗಾಳಿ ಮತ್ತು ಉಷ್ಣತೆಯ ಒತ್ತಡದಿಂದ ಉಂಟಾಗುವ ಆರೋಗ್ಯ ಸಮಸ್ಯೆಗಳ ಕುರಿತು ಅರಿವು ಮೂಡಿಸಲು ಹಾಗೂ ಅವುಗಳಿಂದ ರಕ್ಷಿಸಿಕೊಳ್ಳಲು ಅನುಸರಿಸಬೇಕಾದ ಮುಂಜಾಗ್ರತಾ ಕ್ರಮಗಳ ಕುರಿತು ಮಾಲೀಕರು ಹಾಗೂ ಕೆಲಸಗಾರರಿಗೆ ಕರಪತ್ರಗಳನ್ನು ವಿತರಿಸುವುದು ಮತ್ತು ಶಿಬಿರಗಳನ್ನು ಆಯೋಜಿಸಬೇಕು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+