ಬಡವರಿಗಾಗಿಯೇ ಅತೀ ಕಡಿಮೆ ದರದಲ್ಲಿ ಎಲೆಕ್ಟ್ರಿಕ್ ಸ್ಕೂಟರ್ ಬಿಡುಗಡೆಗೆ ಮುಂದಾದ ಟಾಟಾ ಕಂಪನಿ-ವಿಶೇಷತೆ, ದರಗಳ ಮಾಹಿತಿ ತಿಳಿಯಿರಿ
Tata Electric Scooter: ಆಟೋಮೊಬೈಲ್ ಕ್ಷೇತ್ರದಲ್ಲಿ ಭಾರೀ ದೊಡ್ಡ ಮಟ್ಟದಕ್ಕಿ ಬದಲಾವಣೆ ಕ್ರಾಂತಿಯೇ ಆಗುತ್ತಿದೆ. ಅದರಲ್ಲೂ ಎಲೆಕ್ಟ್ರಿಕ್ ವಾಹನಗಳು ಬಂದಾಗಿನಿಂದ ಭಾರೀ ಪೈಪೋಟಿ ಏಪರ್ಟಿದೆ. ದ್ವಿಚಕ್ರ ವಾಹನಗಳ ವಿಭಾಗಕ್ಕೆ ಬಂದರೆ ಭಾರತದಲ್ಲಿ ಎಲೆಕ್ಟ್ರಿಕ್ ಸ್ಕೂಟಿಗಳ ಹವಾ ಜೋರಾಗಿದೆ. ಇದರ ಬೆನ್ನಲ್ಲೇ ಅತೀ ಕಡಿಮೆ ಬೆಲೆಯಲ್ಲಿ ಉತ್ತಮ ಸೌಲಭ್ಯವುಳ್ಳ ಎಲೆಕ್ಟ್ರಿಕ್ ಸ್ಕೂಟರ್ ಅನ್ನು ಮಾರುಕಟ್ಟೆಗೆ ಬಿಡಲು ಟಾಟಾ ಕಂಪನಿ ಮುಂದಾಗಿದೆ. ಹಾಗಾದರೆ ಇದೆ ದರ, ವಿಶೇಷತೆಗಳ ವಿವರವನ್ನು ಇಲ್ಲಿ ತಿಳಿಯಿರಿ.
ಎಲ್ಲಾ ಬ್ರಾಂಡ್ ವಾಹನ ತಯಾರಿಕಾ ಕಂಪನಿಗಳು ಗ್ರಾಹಕರ ಕೈಗೆಟಕುವ ದರದಲ್ಲಿ ವಾಹನಗಳನ್ನು ಬಿಡುಗಡೆ ಮಾಡುತ್ತಲೇ ಇದ್ದು, ಭಾರೀ ಪೈಪೋಟಿ ಏರ್ಪಟ್ಟಿದೆ. ಇದರ ನಡುವೆಯೂ ಬಡ ಗ್ರಾಹಕರ ಕೈಗೆಟಕುವ ದರದಲ್ಲಿ ಉತ್ತಮ ಸೌಲಭ್ಯಗಳೊಂದಿಗೆ ಟಾಟಾ ಎಲೆಕ್ಟ್ರಿಕ್ ಸ್ಕೂಟರ್ ಅನ್ನು ಟಾಟಾ ಕಂಪನಿ ಬಿಡುಗಡೆ ಮಾಡಲು ಮುಂದಾಗಿದೆ.

ಬಿಡುಗಡೆಗೂ ಮುನ್ನವೇ ಭಾರತೀಯ ಆಟೋ ಮೊಬೈಲ್ ಮಾರುಕಟ್ಟೆಯಲ್ಲಿ ಟ್ರೆಂಡ್ ಸೃಷ್ಟಿಸಿರುವ ಟಾಟಾ ಕಂಪನಿಯ ಹೊಸ ಎಲೆಕ್ಟ್ರಿಕ್ ಸ್ಕೂಟರ್ ಶೀಘ್ರದಲ್ಲೇ ಮಾರುಕಟ್ಟೆಗೆ ಬರಲಿದೆ. ಈ ವರ್ಷದ ಕೊನೆಯಲ್ಲಿ ಬಿಡುಗಡೆಯಾಲಿದೆ ಎಂದು ಮೂಲಗಳಿಂದ ತಿಳಿದುಬಂದಿದೆ. ಆದರೆ ಟಾಟಾ ಕಂಪನಿ ಈ ಬಗ್ಗೆ ಎಲ್ಲಿಯೂ ಅಧಿಕೃತವಾಗಿ ಬಿಡುಗಡೆಯ ದಿನಾಂಕವನ್ನು ರಿವೀಲ್ ಮಾಡಿಲ್ಲ.
ಬೇರೆ ಎಲೆಕ್ಟ್ರಿಕ್ ಸ್ಕೂಟರ್‌ಗಳಿಗೆ ಹೋಲಿಕೆ ಮಾಡಿದರೆ, ಟಾಟಾ ಕಂಪನಿಯ ಈ ಹೊಸ ಎಲೆಕ್ಟ್ರಿಕ್ ಸ್ಕೂಟರ್‌ನಲ್ಲಿ ಶಕ್ತಿಯುತ ಮೋಟರನ್ನು ಅಳವಡಿಕೆ ಮಾಡಲಾಗಿದ್ದು, ಇದು 3KW ಪವರ್ ಟಾರ್ಕ್ ಶಕ್ತಿಯನ್ನು ಉತ್ಪಾದಿಸಲು ಸಹಕರಿಸುತ್ತದೆ. ಜೊತೆಗೆ ಒಮ್ಮೆ ಸಂಪೂರ್ಣ ಚಾರ್ಜ್ ಮಾಡಿದರೆ, ಇದು 270 ಕಿಲೋ ಮೀಟರ್ ಮೈಲೇಜ್ ನೀಡಲಿದೆ ಎನ್ನುವ ಮಾಹಿತಿ ಲಭ್ಯವಾಗಿದೆ.
ಟಾಟಾದ ಈ ಎಲೆಕ್ಟ್ರಿಕ್ ಸ್ಕೂಟರ್ ಅನ್ನು ಆಧುನಿಕ ತಂತ್ರಜ್ಞಾನವನ್ನು ಅಳವಡಿಸಿ ತಯಾರು ಮಾಡಲಾಗಿದ್ದು, ಯಾವ ಎಲೆಕ್ಟ್ರಿಕ್ ವಾಹನಗಳಲ್ಲಿಯೂ ಕಾಣಿಸಿರದ ವಿಶೇಷ ಸೌಲಭ್ಯಗಳನ್ನು ಈ ವಾಹನದಲ್ಲಿ ಕಾಣಬಹುದಾಗಿದೆ. ಇನ್ನು ಟಾಟಾ ಕಂಪನಿಯು ಈ ಎಲೆಕ್ಟ್ರಿಕ್ ಸ್ಕೂಟರ್ ಅನ್ನು ಬರೀ 67000 ರೂಪಾಯಿಗೆ ಬಿಡುಗಡೆ ಮಾಡಲು ಮುಂದಾಗಿದೆ ಎನ್ನುವ ಮಾಹಿತಿ ತಿಳಿದುಬಂದಿದೆ. ಆದರೆ, ಕಂಪನಿಯಿಂದ ಇದರ ನಿಖರ ದರದ ಮಾಹಿತಿ ತಿಳಿದುಬರಬೇಕಿದೆ.












Click it and Unblock the Notifications