ವೈರಲ್ ವಿಡಿಯೋ: ತರಗತಿಯಲ್ಲಿ ಮಕ್ಕಳ ಜೊತೆ ಶಿಕ್ಷಕಿ ನೃತ್ಯ
ದೆಹಲಿ, ಜೂನ್ 18: ಖಾಲಿ ತರಗತಿಯಲ್ಲಿ ವಿದ್ಯಾರ್ಥಿಗಳ ಜೊತೆ ಶಿಕ್ಷಕಿ ನೃತ್ಯ ಮಾಡಿರುವ ವಿಡಿಯೋ ವೈರಲ್ ಆಗಿದೆ. ಟ್ವಿಟರ್‌ನಲ್ಲಿ ಇದುವರೆಗೂ 5.8 ಲಕ್ಷ ವೀಕ್ಷಣೆ ಕಂಡಿದ್ದು, ಶಿಕ್ಷಕಿ, ವಿದ್ಯಾರ್ಥಿಗಳ ನೃತ್ಯಕ್ಕೆ ನೆಟ್ಟಿಗರು ಮನಸೋತಿದ್ದಾರೆ.
ಖಾಲಿ ತರಗತಿಯಲ್ಲಿ"ಜುಮ್ಕಾ ಬರೇಲಿ ವಾಲಾ" ಹಾಡಿಗೆ ವಿದ್ಯಾರ್ಥಿಗಳೊಂದಿಗೆ ಶಿಕ್ಷಕಿ ನೃತ್ಯ ಮಾಡುತ್ತಿದ್ದಾರೆ. "ದಿಲ್ಲಿ ಶಹರ್ ಕಾ ಸಾರಾ ಮೀನಾ ಬಾಜಾರ್ ಲೇ ಕೆ, ಬೇಸಿಗೆ ಶಿಬಿರದ ಕೊನೆಯ ದಿನದಂದು ನಮ್ಮ ಅಪರಿಪೂರ್ಣ ನೃತ್ಯದ ಚಲನೆಗಳು, ಸಂತೋಷ ಮತ್ತು ಒಗ್ಗಟ್ಟಿನ ಕೆಲವು ಪರಿಪೂರ್ಣ ಕ್ಷಣಗಳಿಗೆ ಕಾರಣವಾಗುತ್ತದೆ" ಎನ್ನುವ ಸಂದೇಶದೊಂದಿಗೆ ಶಿಕ್ಷಕಿ ಮನು ಗುಲಾಟಿ ವಿಡಿಯೋವನ್ನು ಟ್ವೀಟ್ ಮಾಡಿದ್ದಾರೆ.
ವಿಶೇಷ ಕಾರಣಕ್ಕಾಗಿ, ಶಿಕ್ಷಕಿ ಮತ್ತು ಮಕ್ಕಳ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದೆ. ಬೋಧಕರು ಮತ್ತು ಅವರ ಮಕ್ಕಳು ರೀಮಿಕ್ಸ್ ಮಾಡಿದ ಜುಮ್ಕಾ ಬರೇಲಿ ವಾಲಾ ನೃತ್ಯದ ವೀಡಿಯೋಗೆ ಜನ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ

ಈ ವಿಡಿಯೋ 5.84 ಲಕ್ಷಕ್ಕೂ ಹೆಚ್ಚು ವೀಕ್ಷಣೆಗಳನ್ನು ಹೊಂದಿದೆ. ಶಿಕ್ಷಕರು ಮತ್ತು ವಿದ್ಯಾರ್ಥಿಗಳು ತಮ್ಮ ನೃತ್ಯ ಸಂಯೋಜಿಸಲು ಪ್ರಯತ್ನಿಸುತ್ತಿರುವುದನ್ನು ನೋಡಬಹುದಾಗಿದೆ. ಮನು ಗುಲಾಟಿ ಎಂಬ ಭಾರತದ ನವ ದೆಹಲಿಯ ಶಾಲೆಯೊಂದರಲ್ಲಿ ಶಿಕ್ಷಕಿಯಾಗಿ ಕೆಲಸ ಮಾಡುತ್ತಿದ್ದು, ತಾವು ಮತ್ತು ತಮ್ಮ ವಿದ್ಯಾರ್ಥಿಗಳು ಒಟ್ಟಿಗೆ ನೃತ್ಯ ಮಾಡಿದ್ದಾರೆ.
दिल्ली शहर का सारा मीना बाज़ार ले के।☺️
— Manu Gulati (@ManuGulati11) June 16, 2022
Our imperfect dance moves on the last day of summer camp...leading to some perfect moments of joy and togetherness.💕#SchoolLife #TeacherStudent pic.twitter.com/K50Zi1Qajf
ವಿಡಿಯೋಗೆ ನೆಟ್ಟಿಗರ ಮೆಚ್ಚುಗೆ; ವಿದ್ಯಾರ್ಥಿಗಳ ಜೊತೆ ಶಿಕ್ಷಕಿ ಮಾಡಿರುವ ನೃತ್ಯದ ವಿಡಿಯೋ ಈಗ ವೈರಲ್ ಆಗಿದ್ದು ಸಾಕಷ್ಟು ಮಂದಿ ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದಾರೆ. ಕೀರ್ತಿಕಾ ಪನೇರಿ ಎನ್ನುವ ಐಎಎಸ್ ಅಧಿಕಾರಿ ವಿಡಿಯೋಗೆ ಮೆಚ್ಚುಗೆ ವ್ಯಕ್ತಪಡಿಸಿ ಟ್ವೀಟ್ ಮಾಡಿದ್ದಾರೆ.
"ನೀವು ನನ್ನ ಹೃದಯದಲ್ಲಿ ಸರ್ಕಾರಿ ಶಿಕ್ಷಕರ ಬಗ್ಗೆ ಇರುವ ಗೌರವವನ್ನು ಹೆಚ್ಚಿಸಿದ್ದೀರಿ, ಧನ್ಯವಾದಗಳು. ನಿಮಗೆ ಹೆಚ್ಚಿನ ಶಕ್ತಿ ನೀಡಲು ಮತ್ತು ದೇವರು ನಿಮ್ಮನ್ನು ಆಶೀರ್ವದಿಸಲಿ," ಎಂದು ಟ್ವೀಟ್ ಮಾಡಿದ್ದಾರೆ.
ಇನ್ನೂ ಒಬ್ಬ ಟ್ವಿಟರ್ ಬಳಕೆದಾರರು "ಶಿಕ್ಷಕಿ, ವಿದ್ಯಾರ್ಥಿಗಳ ನಡುವಿನ ಸಂಬಂಧ ಹೀಗಿರಬೇಕು" ಎಂದು ಟ್ವೀಟ್ ಮಾಡಿದ್ದಾರೆ.
You increase the Respect for Government Teacher in my Heart... Thanks alot... More Power to you and God Bless You 🙌 Getting Jealous for Students who get such Passionate Teacher ☺
— KIRTIKA PANERI IAS (@IasPaneri) June 16, 2022
"ದೆಹಲಿಯ ಶಾಲೆಗಳನ್ನು ಶಿಕ್ಷಕರು ಹೇಗೆ ಪರಿವರ್ತಿಸುತ್ತಿದ್ದಾರೆ ನೋಡಿ, ಮನು ಗುಲಾಟಿ ಇದು ತುಂಬಾ ಸುಂದರವಾಗಿದೆ" ಎಂದು ಟ್ವೀಟ್ ಮಾಡಿದ್ದಾರೆ.
"ತುಂಬಾ ಸುಂದರ, ನಿಮ್ಮ ಸುಂದರ ಕಲಾತ್ಮಕತೆ ಮತ್ತು ಅದ್ಭುತ ಶಿಕ್ಷಕ-ವಿದ್ಯಾರ್ಥಿ ಸಂಬಂಧಕ್ಕೆ ಹೃತ್ಪೂರ್ವಕ ನಮಸ್ಕಾರ" ಎಂದು ಮತ್ತೊಬ್ಬರು ಟ್ವೀಟ್ ಮಾಡಿದ್ದಾರೆ.
ಶಿಕ್ಷಕರೆಂದರೆ ಬರೀ ಪುಸ್ತಕದಲ್ಲಿರುವ ಪಾಠಗಳನ್ನು ಹೇಳುವುದಷ್ಟೇ ಅಲ್ಲ, ಬದುಕಿನ ಮೌಲ್ಯಗಳನ್ನು ಮಕ್ಕಳಿಗೆ ತಿಳಿಸಬೇಕು ಎಂದು ಹಲವರು ಹೇಳಿದ್ದಾರೆ. ಅದರಲ್ಲೂ ಸರ್ಕಾರಿ ಶಾಲೆಗಳೆಂದರೆ ಕೀಳು ಭಾವನೆಯಲ್ಲಿ ನೋಡುವವರಿಗೆ ಈ ವಿಡಿಯೋ ಉತ್ತರವಾಗಲಿದೆ, ಸರ್ಕಾರಿ ಶಾಲೆಗಳು ಯಾವ ಖಾಸಗಿ ಶಾಲೆಗಳಿಗೂ ಕಡಿಮೆ ಇಲ್ಲ ಎಂದು ಹಲವು ಟ್ವಿಟರ್ ಬಳಕೆದಾರರು ಟ್ವೀಟ್ ಮಾಡಿದ್ದಾರೆ.
-
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Summer Drinks: ಬಿಸಿಲಿನಲ್ಲಿ ದೇಹಕ್ಕೆ ಬೆಸ್ಟ್ ಡ್ರಿಂಕ್ ಯಾವುದು? ಎಳನೀರು ಅಥವಾ ಮಜ್ಜಿಗೆ -
ಬೆಂಗಳೂರು-ವಿಜಯಪುರ ಎಕ್ಸ್ಪ್ರೆಸ್ ರೈಲು ಸೇವೆ: ಸಂಚಾರ ಸಮಯ 10ಗಂಟೆ ಇಳಿಕೆಗೆ ಎಂಬಿ ಪಾಟೀಲ ಆಗ್ರಹ -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
Viral Video: ಹುಡುಗಿ ಪ್ರೀತಿಗೆ ಒಪ್ಪಿಕೊಂಡಳು ಆದ್ರೆ ರಿಂಗೇ ಮಿಸ್ ಆಯ್ತು: MI ಮ್ಯಾಚ್ನಲ್ಲೊಂದು ಸ್ವಾರಸ್ಯಕರ ಘಟನೆ












Click it and Unblock the Notifications