Teachers Day 2023: ಶಿಕ್ಷಕರ ದಿನದ ಇತಿಹಾಸ, ಮಹತ್ವ ಮತ್ತು ಆಚರಣೆಗಳು
ಒಂದು ಉತ್ತಮ ಸಮಾಜ ನಿರ್ಮಾಣದಲ್ಲಿ ಶಿಕ್ಷಕರ ಪಾತ್ರ ಅತ್ಯಮುಲ್ಯವಾದದ್ದು. ತಮ್ಮ ಜೀವನದುದ್ದಕ್ಕೂ ಪ್ರತಿಯೊಬ್ಬರಿಗೂ ಶಿಕ್ಷಣದ ಅರಿವನ್ನು ಮೂಡಿಸಿ ಜ್ಞಾನವನ್ನು ನೀಡುವ ಶಿಕ್ಷಕ ನಮ್ಮ ಪಾಲಿಗೆ ಆ ದೇವರು ಕೊಟ್ಟ ವರ. ಇಂತಹ ಶಿಕ್ಷಕರಿಗೆ ಗೌರವ ಸೂಚಿಸಲು ಶಿಕ್ಷಕರ ದಿನವನ್ನು ಆಚರಿಸಲಾಗುತ್ತದೆ.
ಭಾರತದೆಲ್ಲೆಡೆ ಮಾಜಿ ರಾಷ್ಟ್ರಪತಿ ಡಾ. ಸರ್ವಪಲ್ಲಿ ರಾಧಾಕೃಷ್ಣನ್ ಅವರ ಜನ್ಮದಿನದ ಅಂಗವಾಗಿ ಪ್ರತಿ ವರ್ಷ ಸೆಪ್ಟೆಂಬರ್ 5 ರಂದು ಶಿಕ್ಷಕರ ದಿನವನ್ನು ಆಚರಿಸಲಾಗುತ್ತದೆ. ವಿಶ್ವದ ವಿವಿಧ ದೇಶಗಳಲ್ಲಿ ವಿವಿಧ ದಿನಾಂಕಗಳಲ್ಲಿ ಶಿಕ್ಷಕರ ದಿನವನ್ನು ಆಚರಿಸಲಾಗುತ್ತದೆ. ಈ ದಿನ ಹಲವೆಡೆ ರಜೆ ಇದ್ದರೆ, ಇನ್ನೂ ಕೆಲವೆಡೆ ಕಾರ್ಯಕ್ರಮಗಳನ್ನು ಆಯೋಜಿಸಲಾಗುತ್ತದೆ.

ಇಂದು ಈ ಲೇಖನದ ಮೂಲಕ ಶಿಕ್ಷಕರ ದಿನಾಚರಣೆಗೆ ಸಂಬಂಧಿಸಿದ ಕೆಲವು ಮಹತ್ವದ ಮಾಹಿತಿಯನ್ನು ತಿಳಿಯೋಣ. ಇದರಿಂದ ಸಮಾಜದಲ್ಲಿ ಶಿಕ್ಷಕರ ಪ್ರಾಮುಖ್ಯತೆಯನ್ನು ಅರ್ಥಮಾಡಿಕೊಳ್ಳಲು ಸಾಧ್ಯವಾಗುತ್ತದೆ. ಜೊತೆಗೆ ಶಿಕ್ಷಕರ ದಿನವನ್ನು ಏಕೆ, ಯಾವಾಗ ಮತ್ತು ಹೇಗೆ ಆಚರಿಸಲಾಗುತ್ತದೆ ಮುಂತಾದ ಕೆಲವು ಮಾಹಿತಿಯನ್ನು ಪಡೆಯೋಣ.
ಇತಿಹಾಸ
1888 ರಲ್ಲಿ ಈ ದಿನದಂದು ಜನಿಸಿದ ದೇಶದ ಮೊದಲ ಉಪರಾಷ್ಟ್ರಪತಿ ಮತ್ತು ಮಾಜಿ ರಾಷ್ಟ್ರಪತಿ, ವಿದ್ವಾಂಸ, ತತ್ವಜ್ಞಾನಿ ಮತ್ತು ಭಾರತ ರತ್ನ ಪ್ರಶಸ್ತಿ ಪುರಸ್ಕೃತ ಡಾ. ಸರ್ವಪಲ್ಲಿ ರಾಧಾಕೃಷ್ಣನ್ ಅವರ ಜನ್ಮದಿನದ ನೆನಪಿಗಾಗಿ ಸೆಪ್ಟೆಂಬರ್ 5 ರಂದು ಭಾರತದಲ್ಲಿ ಶಿಕ್ಷಕರ ದಿನವನ್ನು ಆಚರಿಸಲಾಗುತ್ತದೆ.
ಡಾ. ಸರ್ವಪಲ್ಲಿ ರಾಧಾಕೃಷ್ಣನ್ ಅವರು 1962 ರಲ್ಲಿ ಭಾರತದ ಎರಡನೇ ರಾಷ್ಟ್ರಪತಿಯಾಗಿ ಅಧಿಕಾರ ವಹಿಸಿಕೊಂಡಾಗ, ಅವರ ವಿದ್ಯಾರ್ಥಿಗಳು ಸೆಪ್ಟೆಂಬರ್ 5 ಅನ್ನು ವಿಶೇಷ ದಿನವಾಗಿ ಆಚರಿಸಲು ಅನುಮತಿ ಕೇಳಲು ಅವರನ್ನು ಸಂಪರ್ಕಿಸಿದರು. ಈ ವೇಳೆ ಸರ್ವಪಲ್ಲಿ ರಾಧಾಕೃಷ್ಣನ್ ಅವರು ಸಮಾಜಕ್ಕೆ ಶಿಕ್ಷಕರ ಅಮೂಲ್ಯ ಕೊಡುಗೆಯನ್ನು ಗುರುತಿಸಲು ಸೆಪ್ಟೆಂಬರ್ 5 ಅನ್ನು ಶಿಕ್ಷಕರ ದಿನವನ್ನಾಗಿ ಆಚರಿಸಲು ಸೂಚಿಸಿದರು. ಅಂದಿನಿಂದ ವಿಶ್ವ ಶಿಕ್ಷಕರ ದಿನವನ್ನು ಅಕ್ಟೋಬರ್ 5 ರಂದು ಆಚರಿಸಲಾಗುತ್ತದೆ.
ಮಹತ್ವ
ಶಾಲೆಗಳು, ಕಾಲೇಜುಗಳು, ವಿಶ್ವವಿದ್ಯಾನಿಲಯಗಳು ಮತ್ತು ಶಿಕ್ಷಣ ಸಂಸ್ಥೆಗಳಲ್ಲಿ ಸೆಪ್ಟೆಂಬರ್ 5 ರಂದು ಶಿಕ್ಷಕರ ದಿನವನ್ನು ಆಚರಿಸಲಾಗುತ್ತದೆ. ವಿದ್ಯಾರ್ಥಿಗಳು ತಮ್ಮ ಪ್ರೀತಿಯ ಶಿಕ್ಷಕರಿಗೆ ತಮ್ಮ ಮೆಚ್ಚುಗೆಯನ್ನು ವ್ಯಕ್ತಪಡಿಸಲು ಪ್ರದರ್ಶನಗಳು, ನೃತ್ಯಗಳಂತಹ ವಿವಿಧ ಚಟುವಟಿಕೆಗಳಲ್ಲಿ ತೊಡಗುತ್ತಾರೆ.
ಶಾಲೆ ಅಥವಾ ಕಾಲೇಜುಗಳಲ್ಲಿ ಶಿಕ್ಷಕರಿಗೆ ಕೃತಜ್ಞತೆಯನ್ನು ವ್ಯಕ್ತಪಡಿಸಲು ಮತ್ತು ಅವರ ಜೀವನದಲ್ಲಿ ಶಿಕ್ಷಕರು ಹೊಂದಿರುವ ಆಳವಾದ ಪ್ರಭಾವವನ್ನು ವ್ಯಕ್ತಪಡಿಸಲು ಇದು ಉತ್ತಮ ಅವಕಾಶವಾಗಿದೆ.
ಆಚರಣೆಗಳು
ಈ ದಿನ ತಮ್ಮ ನೆಚ್ಚಿನ ಶಿಕ್ಷಕರಿಗೆ ಅವರ ಕೃತಜ್ಞತೆ ಮತ್ತು ಪ್ರೀತಿಯನ್ನು ತಿಳಿಸಲು ಕೈಯಿಂದ ಮಾಡಿದ ಕಾರ್ಡ್‌ಗಳನ್ನು ಒಳಗೊಂಡಂತೆ ಹೂವುಗಳು, ಸಿಹಿತಿಂಡಿಗಳು, ಚಾಕೊಲೇಟ್‌ಗಳು ಮತ್ತು ಇನ್ನಿತರ ಉಡುಗೊರೆಗಳನ್ನು ವಿದ್ಯಾರ್ಥಿಗಳು ನೀಡುತ್ತಾರೆ.
ವಿದ್ಯಾರ್ಥಿಗಳು ತಮ್ಮ ಶಿಕ್ಷಕರಿಗಾಗಿ ಶಾಲಾ-ಕಾಲೇಜುಗಳಲ್ಲಿ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸುತ್ತಾರೆ. ಹಿರಿಯ ವಿದ್ಯಾರ್ಥಿಗಳು ತರಗತಿಗಳ ಉಸ್ತುವಾರಿ ವಹಿಸುತ್ತಾರೆ. ಈ ವಿದ್ಯಾರ್ಥಿಗಳು ತಮ್ಮ ಶಿಕ್ಷಕರೊಂದಿಗೆ ಸ್ಮರಣೀಯವನ್ನು ಕಳೆಯುತ್ತಾರೆ.












Click it and Unblock the Notifications