ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಟೈಮ್ಸ್ ನೌ ಸಿ-ವೋಟರ್ ಸಮೀಕ್ಷೆ: ಪಿಣರಾಯಿ ಸರ್ಕಾರ ಮತ್ತೆ ಅಧಿಕಾರಕ್ಕೆ

|
Google Oneindia Kannada News

ತಿರುವನಂತಪುರಂ, ಮಾರ್ಚ್ 24: ಕೇರಳ ಜೊತೆಗೆ ತಮಿಳುನಾಡು, ಅಸ್ಸಾಂ, ಪುದುಚೇರಿ , ಪಶ್ಚಿಮ ಬಂಗಾಳದ ವಿಧಾನಸಭೆಗೆ ಚುನಾವಣೆ ನಿಗದಿಯಾಗಿದ್ದು, ಚುನಾವಣಾ ಪೂರ್ವ ಸಮೀಕ್ಷೆಗಳು ಪ್ರಕಟವಾಗುತ್ತಿವೆ. ಕೇರಳ ಚುನಾವಣೆಯಲ್ಲಿ ಎಲ್‌ಡಿಎಫ್ ಮತ್ತೊಮ್ಮೆ ಗೆಲುವು ಸಾಧಿಸುವ ಸಾಧ್ಯತೆಯಿದೆ ಎಂದು ಇಂದು ಪ್ರಕಟವಾದ ಟೈಮ್ಸ್ ನೌ ಸಮೀಕ್ಷೆ ಹೇಳಿದೆ.

ಬಿಜೆಪಿ ಒಂದು ಸ್ಥಾನಗಳಿಸಿದರೆ ಹೆಚ್ಚು ಹಾಗೂ ಪಿಣರಾಯಿ ವಿಜಯನ್ ಸಿಎಂ ಆಗಲು ಸೂಕ್ತ ಎಂದು ಎಬಿಪಿಯ ಎರಡು ಸಮೀಕ್ಷೆ, ಟೈಮ್ಸ್ ನೌ- ಸಿ -ವೋಟರ್ ಸಂಸ್ಥೆ ನಡೆಸಿದ ಸಮೀಕ್ಷೆ ಹಾಗೂ ಮನೋರಮಾ ವಿಎಂಆರ್ ಸಮೀಕ್ಷೆ ಹೇಳಿದ್ದನ್ನು ಇಲ್ಲಿ ಉಲ್ಲೇಖಿಸಬಹುದು.

ಕೇರಳದಲ್ಲಿ ಎಲ್‌ಡಿಎಫ್ ಅಧಿಕಾರಕ್ಕೇರಲಿದ್ದು, ಯುಡಿಎಫ್ ಮತ್ತೊಮ್ಮೆ ಮುಖಭಂಗ ಅನುಭವಿಸಲಿದೆ ಎಂದು ವರದಿ ಬಂದಿದೆ. ಕೇರಳದ 140 ಸ್ಥಾನಗಳಿಗೆ ಮಲಪ್ಪುರಂ ಉಪ ಚುನಾವಣೆ ಏಪ್ರಿಲ್ 6 ರಂದು ಮತದಾನ ನಡೆಯಲಿದ್ದು, ಮೇ 2 ರಂದು ಫಲಿತಾಂಶ ಪ್ರಕಟವಾಗಲಿದೆ.

ವಿಧಾನಸಭೆಯ ಬಲಾಬಲ

ವಿಧಾನಸಭೆಯ ಬಲಾಬಲ

140 ಸ್ಥಾನಗಳ ವಿಧಾನಸಭೆಯ ಬಲಾಬಲ: ಸಿಪಿಐ (ಎಂ) ನೇತೃತ್ವದ ಎಲ್ ಡಿ ಎಫ್ 93 ಸ್ಥಾನ, ಕಾಂಗ್ರೆಸ್ ನೇತೃತ್ವ ಯುಡಿಎಫ್ 42 ಹಾಗೂ ಬಿಜೆಪಿ ನೇತೃತ್ವದ ಎನ್ಡಿಎ 1 ಸ್ಥಾನ ಹೊಂದಿದೆ. ಯಾವುದೇ ಪಕ್ಷವು ಅಧಿಕಾರ ಸ್ಥಾಪಿಸಲು ಮ್ಯಾಜಿಕ್ ನಂಬರ್ 71 ದಾಟಬೇಕಾಗುತ್ತದೆ.

2016ರ ಚುನಾವಣೆಯಲ್ಲಿ ಎಲ್ ಡಿ ಎಫ್ 91, ಯುಡಿಎಫ್ 47, ಕಾಂಗ್ರೆಸ್ 1, ಇತರೆ 1 ಎಂದು ಫಲಿತಾಂಶ ಬಂದಿತ್ತು.

ಲೆಫ್ಟ್ ಡೆಮೊಕ್ರಾಟಿಕ್ ಫ್ರಂಟ್‌ಗೆ ಜಯ

ಲೆಫ್ಟ್ ಡೆಮೊಕ್ರಾಟಿಕ್ ಫ್ರಂಟ್‌ಗೆ ಜಯ

ಎಬಿಪಿ -ಸಿವೋಟರ್ ಸಮೀಕ್ಷೆ 2021 ಆಡಳಿತಾರೂಢ ಲೆಫ್ಟ್ ಡೆಮೊಕ್ರಾಟಿಕ್ ಫ್ರಂಟ್ (LDF) ಮತ್ತೊಮ್ಮೆ ಅಧಿಕಾರಕ್ಕೇರಲಿದೆ. ಸಿಪಿಐ (ಎಂ) ನೇತೃತ್ವದ ಎಲ್ ಡಿ ಎಫ್ ಸರಳ ಬಹುಮತ ಗಳಿಸಲಿದ್ದು 77 ಸ್ಥಾನ ಗಳಿಸಲಿದೆ. ಕಾಂಗ್ರೆಸ್ ನೇತೃತ್ವದ ಯುಡಿಎಫ್ 62 ಸ್ಥಾನ ಗಳಿಸಬಹುದು ಹಾಗೂ ಬಿಜೆಪಿ 2 ಸ್ಥಾನ ಗೆಲ್ಲಬಹುದು ಎಂದು ಟೈಮ್ಸ್ ನೌ ಸಮೀಕ್ಷೆ ಹೇಳಿದೆ. ಯಾವುದೇ ಪಕ್ಷವು ಅಧಿಕಾರ ಸ್ಥಾಪಿಸಲು ಮ್ಯಾಜಿಕ್ ನಂಬರ್ 71 ದಾಟಬೇಕಾಗುತ್ತದೆ.

ಶೇಕಡವಾರು ಮತ ಗಳಿಕೆ

ಶೇಕಡವಾರು ಮತ ಗಳಿಕೆ

ಟೈಮ್ಸ್ ನೌ ಸಮೀಕ್ಷೆಯಂತೆ ಶೇಕಡವಾರು ಮತ ಶೇಕಡವಾರು ಮತ ಗಳಿಕೆಯಲ್ಲಿ 2016ಕ್ಕೆ ಹೋಲಿಸಿದರೆ ಎಲ್ ಡಿ ಎಫ್ ಶೇ 1.1% ಕುಸಿತ ಕಾಣಲಿದೆ. ಅಂದರೆ 2016ರಲ್ಲಿ 43.5% ಗಳಿಸಿದ್ದ ಎಲ್‌ಡಿಎಫ್‌ ಈ ಬಾರಿ 42.4% ಗಳಿಸಲಿದೆ, ಯುಡಿಎಫ್ 38.6% (2016ರಲ್ಲಿ 38.8%), ಬಿಜೆಪಿ 16.45(2016ರಲ್ಲಿ14.9%), ಇತರೆ 2.6% (2016ರಲ್ಲಿ4.6%) ಗಳಿಸಲಿವೆ.

ಯುಡಿಎಫ್‌ಗೆ ಮೂರು ಸಮೀಕ್ಷೆಗಳಲ್ಲೂ ಹಿನ್ನಡೆ

ಯುಡಿಎಫ್‌ಗೆ ಮೂರು ಸಮೀಕ್ಷೆಗಳಲ್ಲೂ ಹಿನ್ನಡೆ

ಯುಡಿಎಫ್ ಪರ ಮೂರು ಸಮೀಕ್ಷೆಗಳಲ್ಲೂ ಹಿನ್ನಡೆ ಸ್ಥಳೀಯ ಮಾಧ್ಯಮ ಸಂಸ್ಥೆಗಳು ನೀಡಿರುವ ಚುನಾವಣಾ ಪೂರ್ವ ಸಮೀಕ್ಷೆ ಪ್ರಕಾರ, ಎಲ್ ಡಿ ಎಫ್ 72 ರಿಂದ 78 ಸ್ಥಾನ ಗೆಲ್ಲುವ ಸಾಧ್ಯತೆಯಿದೆ ಎನ್ನಲಾಗಿದೆ. ಯುಡಿಎಫ್ 65 ಹಾಗೂ ಬಿಜೆಪಿ 3 ರಿಂದ 7 ಸ್ಥಾನ ಗಳಿಸುವ ನಿರೀಕ್ಷೆಯಿದೆ. ಎರಡನೇ ಸಮೀಕ್ಷೆಯಲ್ಲಿ ಎಲ್ ಡಿ ಎಫ್ 68 ರಿಂದ 78 ಸ್ಥಾನ, ಯುಡಿಎಫ್ 62 ರಿಂದ 72 ಸ್ಥಾನ ಹಾಗೂ ಬಿಜೆಪಿ 2 ಸ್ಥಾನ ಗಳಿಸುವ ಸಾಧ್ಯತೆ ಇದೆ ಎಂದು ವರದಿ ಬಂದಿದೆ. ಇದಲ್ಲದೆ ಎಬಿಪಿ ಸಿ ವೋಟರ್ ಹಾಗೂ ಟೈಮ್ಸ್ ನೌ ಸಿ ವೋಟರ್ ಈ ಹಿಂದಿನ ಸಮೀಕ್ಷೆಯನ್ನು ಕಾಂಗ್ರೆಸ್ ಹಿನ್ನಡೆ ಅನುಭವಿಸಿದೆ.

ಪಿಣರಾಯಿ ವಿಜಯನ್ ಜನಪ್ರಿಯತೆ

ಪಿಣರಾಯಿ ವಿಜಯನ್ ಜನಪ್ರಿಯತೆ

ಸಿಎಂ ಪಿಣರಾಯಿ ವಿಜಯನ್ ಜನಪ್ರಿಯತೆ ತಗ್ಗಿಲ್ಲ, ಟೈಮ್ಸ್ ನೌಚುನಾವಣಾ ಪೂರ್ವ ಮೊದಲ ಸಮೀಕ್ಷೆಯಲ್ಲಿ ಶೇ 39.3 ಮಂದಿ ವಿಜಯನ್ ಅವರೇ ಮುಂದೆ ಸಿಎಂ ಆಗಲು ಸೂಕ್ತ ಎಂದಿದ್ದಾರೆ. ಶೇ 26.5ರಷ್ಟು ಮಂದಿ ಮಾಜಿ ಸಿಎಂ ಉಮ್ಮನ್ ಚಾಂಡಿ ಸಿಎಂ ಆದರೆ ಒಳ್ಳೆಯದು ಎಂದಿದ್ದರೆ, ಕಾಂಗೆಸ್ಸಿನ ಎಂ ರಾಮಚಂದ್ರನ್ ಅವರ ಪರ ಶೇ 8.8 ಮತ ಸಿಕ್ಕಿದೆ.

ಪಿಣರಾಯಿ ಸರ್ಕಾರ ಕಾರ್ಯ ನಿರ್ವಹಣೆ ಅತ್ಯುತ್ತಮ ಎಂದು ಶೇ 31.32ರಷ್ಟು ಮಂದಿ ಹೇಳಿದ್ದರೆ, ಪರವಾಗಿಲ್ಲ ಎಂದು ಶೇ 29.94 ಮಂದಿ ಮತ ಹಾಕಿದ್ದಾರೆ. ಸಮಾಧಾನಕರವಾಗಿಲ್ಲ ಎಂದು ಶೇ 33.32ರಷ್ಟು ಮಂದಿ ಮತ ಚಲಾಯಿಸಿದ್ದಾರೆ. ಈ ಬಗ್ಗೆ ಶೇ 5.42 ರಷ್ಟು ಮಂದಿ ಯಾವುದೇ ಪ್ರತಿಕ್ರಿಯೆ ನೀಡಿಲ್ಲ.

English summary
Kerala Elections: Times Now C Voter Opinion Poll 2021 is out. CM Pinarayi Vijayan led LDF will return to power says report.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X