ಟ್ರಾಯ್ ನೀತಿ ಜಾರಿ, ಫೆ.01 ರಿಂದ ಟಿವಿ, ಡಿಟಿಎಚ್ ಬಂದ್ ಆಗುತ್ತಾ?
ಭಾರತೀಯ ಟೆಲಿಕಾಂ ನಿಯಂತ್ರಣ ಪ್ರಾಧಿಕಾರ(ಟ್ರಾಯ್) ಫೆಬ್ರವರಿ 01ರಿಂದ ಹೊಸ ಕೇಬಲ್ ನೀತಿ ಜಾರಿಗೆ ತಂದಿದೆ. ಹೊಸ ನೀತಿಯ ಪ್ರಕಾರ, ಜನವರಿ 31ರ ವರೆಗೆ ನಿಮ್ಮ ಆಯ್ಕೆಯ ಚಾನೆಲ್ ಪ್ಯಾಕೇಜ್ ಅಳವಡಿಸಿಕೊಳ್ಳಲು ಕಾಲಾವಕಾಶ ನೀಡಲಾಗಿತ್ತು.
ಕೇಬಲ್ ಟಿವಿ ಮತ್ತು ಡಿಟಿಹೆಚ್ ದರದ ಮಾಹಿತಿಗಳನ್ನು ಭಾರತೀಯ ದೂರಸಂಪರ್ಕ ನಿಯಂತ್ರಣ ಪ್ರಾಧಿಕಾರ(ಟ್ರಾಯ್) ವೆಬ್ ಸೈಟ್ ನಲ್ಲಿ ಪ್ರಕಟಿಸಿದೆ. ಫೆ.1ರ ಗಡುವು ವಿಸ್ತರಣೆ ಮಾಡುವುದಿಲ್ಲ ಎಂದು ಟ್ರಾಯ್ ಸ್ಪಷ್ಟಪಡಿಸಿತ್ತು.
ಡಿಟಿಎಚ್ ಸೇವಾ ಸಂಸ್ಥೆಗಲಾದ ಏರ್ ಟೆಲ್, ಡಿಶ್ ಟಿವಿ, ಹಾಥ್ವೇ, ಸಿಟಿ ಕೇಬಲ್ ಹಾಗೂ ಸ್ಥಳೀಯ ಕೇಬಲ್ ಆಪರೇಟರ್ ಗಳು ತಮ್ಮ ದರ ಪಟ್ಟಿಯನ್ನು ಈಗಾಗಲೇ ಚಂದಾದರರಿಗೆ ಪ್ರದರ್ಶಿಸತೊಡಗಿವೆ. ಪ್ರಸಾರಕಾರರು, ಡಿಟಿಎಚ್ ಆಪರೇಟರ್ ಗಳು ಮತ್ತು Multi System Operators(ಎಂಎಸ್ಒ)ಗಳ ಜತೆ ಟ್ರಾಯ್ ಅಧಿಕಾರಿಗಳು ಮಹತ್ವದ ಸಭೆ ನಡೆಸಿದ ಬಳಿಕ ದರಗಳನ್ನು ನಿಗದಿ ಮಾಡಲಾಗಿದೆ. ದರ ಪಟ್ಟಿ ಬಗ್ಗೆ ಯಾವುದಾದರೂ ಗೊಂದಲಗಳಿದ್ದರೆ 011-23237922 (ಎ.ಕೆ. ಭಾರಧ್ವಾಜ್) ಮತ್ತು 011-23220209 (ಅರವಿಂದ್ ಕುಮಾರ್) ಇಲ್ಲವೇ ಇ- ಮೇಲ್ [email protected] ಅಥವಾ [email protected]. ಗೆ ಸಂಪರ್ಕಿಸಬಹುದು
ಫೆ.1ರ ಗಡುವು ಮುಗಿದ ನಂತರ ಉಚಿತ ಚಾನೆಲ್ ಗಳನ್ನು ಹೊರತುಪಡಿಸಿ, ಇತರೆ ಚಾನೆಲ್ ಗಳು ಲಭ್ಯವಾಗುವುದಿಲ್ಲ ಎಂಬ ಸುದ್ದಿ ಹಬ್ಬಿತ್ತು. ಹೀಗಾಗಿ, ಫೆ.1ರಂದು ಟಿವಿ, ಡಿಟಿಎಚ್ ಬಂದ್ ಆಗುವ ನಿರೀಕ್ಷೆಯಿತ್ತು. ಆದರೆ, ಹಾಗೇನು ಆಗಿಲ್ಲ. ಎಂದಿನಂತೆ ಎಲ್ಲಾ ಚಾನೆಲ್ ಗಳು ಪ್ರಸಾರವಾಗುತ್ತಿವೆ. ಮುಂದೇನು?

ತಿಂಗಳ ಪ್ಯಾಕೇಜ್ :
ಇಲ್ಲಿ ತನಕ ಶೇಕಡಾ 70ರಷ್ಟು ಮಂದಿ ನೂತನ ವ್ಯವಸ್ಥೆಗೆ ಬದಲಾಗಿದ್ದಾರೆ ಎಂಬ ಮಾಹಿತಿಯಿದೆ. ಈ ಹಿನ್ನೆಲೆಯಲ್ಲಿ ಗ್ರಾಹಕರು ಹೊಸ ವ್ಯವಸ್ಥೆಗೆ ಬದಲಾಗುವವರೆಗೂ ಇನ್ನೂ ಕೆಲ ದಿನಗಳ ಕಾಲ ಚಾನೆಲ್ ಗಳ ಸೇವೆಯನ್ನು ಮುಂದುವರೆಸುವ ನಿರೀಕ್ಷೆಯಿದೆ. ತಿಂಗಳ ಪ್ಯಾಕೇಜ್ ಹಾಕಿಸಿಕೊಂಡಿರುವ ಕೇಬಲ್ ಟಿವಿ ಹಾಗೂ ಡಿಟಿಎಚ್ ಗ್ರಾಹಕರು ತಿಂಗಳ ಅಂತ್ಯದ ತನಕ ಅಥವಾ ಮುಂದಿನ ಅಪ್ಡೇಟ್(ಹೊಸ ವ್ಯವಸ್ಥೆ ಆಯ್ಕೆ ಮಾಡಿಕೊಳ್ಳುವ) ತನಕ ಎಂದಿನಂತೆ ಟಿವಿ ನೋಡುತ್ತಿರಬಹುದು.

ಗ್ರಾಹಕರಿಗೆ ಹೇಗೆ ಗೊತ್ತಾಗಲಿದೆ
ಟ್ರಾಯ್ ನಿಯಮ, ಚಾನೆಲ್ ಆಯ್ಕೆ ಹಾಗೂ ಕೇಬಲ್ ಆಪರೇಟರ್, ಡಿಟಿಎಚ್ ಕಂಪನಿಗಳ ಅಫರ್ ಬಗ್ಗೆ ಚಾನೆಲ್ ನಂಬರ್ 999ರಲ್ಲಿ ಸಂಪೂರ್ಣ ಮಾಹಿತಿ ನೀಡಲಾಗುತ್ತಿದೆ. ಗ್ರಾಹಕರಿಗೆ ಎಸ್ಎಂಎಸ್ ಮೂಲಕ, ಪ್ರಾತ್ಯಕ್ಷಿಕೆ ವಿಡಿಯೋ, ಪಾಂಪ್ಲೆಟ್ ಮೂಲಕ ಕೂಡಾ ಮಾಹಿತಿ ನೀಡಲಾಗುತ್ತಿದೆ. ಈಗ ಹೊಸ ನಿಯಮದ ಪ್ರಕಾರ ಒಂದು ಚಾನೆಲ್ ಅಥವಾ ಚಾನೆಲ್ ಗಳ ಸಮೂಹಗಳಿರುವ ಪ್ಯಾಕೆಜ್ ಹಾಕಿಸಿಕೊಳ್ಳಬಹುದು.

ದೀರ್ಘಾವಧಿ ಪ್ಯಾಕೇಜ್ ವುಳ್ಳವರಿಗೆ ಕಷ್ಟ
ಪ್ರೀಪೇಯ್ಡ್ ಗ್ರಾಹಕರು ಹಾಗೂ ದೀರ್ಘಾವಧಿ (3, 6 ಹಾಗೂ 12 ತಿಂಗಳು) ಪ್ಯಾಕೇಜ್ ಹೊಂದಿರುವವರು ಏನು ಮಾಡಬೇಕು ಎಂಬ ಗೊಂದಲ ಮುಂದುವರೆದಿದೆ. ಡಿಟಿಎಚ್ ಆಪರೇಟರ್ ಗಳ ಜತೆ ಟ್ರಾಯ್ ಮಾತುಕತೆ ಮುಂದುವರೆದಿದ್ದು, ಈ ಬಗ್ಗೆ ಪ್ರಕಟಣೆ ಹೊರಡಿಸುವ ಸಾಧ್ಯತೆಯಿದೆ. ಯಾವುದಕ್ಕೂ ಟ್ರಾಯ್ ವೆಬ್ ಸೈಟ್ ನೋಡಿ ಅಥವಾ ನಿಮ್ಮ ಕೇಬಲ್ ಅಥವಾ ಡಿಟಿಎಚ್ ಆಪರೇಟರ್ ಸಂಪರ್ಕಿಸಿ ನಿಮ್ಮ ನೆಚ್ಚಿನ ಪ್ಯಾಕೇಜ್ ಹಾಕಿಸಿಕೊಳ್ಳಿ. ಹಳೆ ಪ್ಯಾಕೇಜ್ ಬದಲಾಯಿಸಿಕೊಳ್ಳಲು ಅವಕಾಶವನ್ನು ಕೆಲವು ಸಂಸ್ಥೆಗಳು ನೀಡಿವೆ.

ಗೊಂದಲ ಏನೇ ಇರಲಿ, 100 ಚಾನೆಲ್ ನೋಡಬಹುದು
ನೂರಾರು ಚಾನೆಲ್ ಉಚಿತವಿದೆ: ದೂರದರ್ಶನದ ಉಚಿತ 26 ಚಾನೆಲ್ ಸೇರಿದಂತೆ 100 ಚಾನೆಲ್(74 Free to Air) ಗಳನ್ನು ವೀಕ್ಷಿಸಬಹುದು. ಇದಕ್ಕಾಗಿ 130 ರೂ. ಶುಲ್ಕ ನಿಗದಿಪಡಿಸಲಾಗಿದ್ದು, ಇದರೊಂದಿಗೆ ಶೇ. 18 ರಷ್ಟು ಜಿ.ಎಸ್.ಟಿ. ಪಾವತಿಸಿ 154 ರೂ.ಗೆ 100 ಚಾನಲ್ ಗಳನ್ನು ಗ್ರಾಹಕರು ವೀಕ್ಷಿಸಬಹುದಾಗಿದೆ. HD ಚಾನೆಲ್ ಹೊರತು ಪಡಿಸಿ ಎಸ್ ಡಿ ಚಾನೆಲ್ ಗಳ 100ರ ಪ್ಯಾಕ್ ಗೆ 184ರು ಗಿಂತ ಅಧಿಕ ನೀಡಬೇಡಿ ಎಂದು ಟ್ರಾಯ್ ಸೂಚಿಸಿದೆ. ಪ್ರತಿ 25 ಉಚಿತ ಚಾನೆಲ್ ಗಳಿಗೆ ಜಿ.ಎಸ್.ಟಿ. ಸೇರಿ 25 ರೂ.ಪಾವತಿಸಬೇಕಿದೆ. ಪ್ರತಿಯೊಂದು ಚಾನೆಲ್ ಗೂ 1 ಪೈಸೆಯಿಂದ 19 ರೂ.ರವರೆಗೆ ದರ ನಿಗದಿಯಾಗಿದೆ ಎಂದು ಎಂದು ಭಾರತೀಯ ಟೆಲಿಕಾಂ ನಿಯಂತ್ರಣ ಸಂಸ್ಥೆ(ಟ್ರಾಯ್) ತಿಳಿಸಿದೆ.
-
Bengaluru: ಬೆಂಗಳೂರಿನ ಹೋಟೆಲ್ಗಳಲ್ಲಿ ಗ್ರಾಹಕರಿಗೆ ಶಾಕ್: ಸಾಂಬಾರ್ ಬದಲು ಬೇರೆ ಆಯ್ಕೆ - ಪೋಸ್ಟ್ ವೈರಲ್, ಡಿಸಿ ಹೇಳಿದ್ದೇನು -
Sulekere: ಮಂಡ್ಯದಲ್ಲಿ ಸೂಳೇಕೆರೆ ಮರುನಾಮಕರಣ ಚರ್ಚೆ: ಇತಿಹಾಸಕ್ಕೆ ಮಸಿ ಬಳಿಯಬೇಡಿ ಎಂದ ಜಗದೀಶ್ ಕೊಪ್ಪ -
B Khata: ಬಿ ಖಾತಾದಿಂದ ಎ ಖಾತಾ ಪರಿವರ್ತನೆ ಸವಾಲುಗಳು: ವೆಚ್ಚ, ಪ್ರಕ್ರಿಯೆ ಸ್ವಂತ ವಿವರ ಹಂಚಿಕೊಂಡ ಆಸ್ತಿದಾರ ಶ್ರೀನಿವಾಸ ಮಠ -
Rain in Karnataka: ಬಿರು ಬಿಸಿಲಿನ ನಡುವೆ ಬೆಂಗಳೂರು ಸೇರಿ ಕರ್ನಾಟಕದ ಈ ಜಿಲ್ಲೆಗಳಲ್ಲಿ ನಾಲ್ಕು ದಿನ ಮಳೆ: ಐಎಂಡಿ ರಿಪೋರ್ಟ್ -
ವಿಶ್ವಕಪ್ ಕಿರೀಟದ ಹಿಂದೆ ದೈವಬಲ: ಕರಾವಳಿಯ ಅಳಿಯ ಸೂರ್ಯಕುಮಾರ್ ಯಾದವ್ ನಡೆಗೆ ಮೆಚ್ಚುಗೆಗಳ ಸುರಿಮಳೆ -
New Airport: 3 ಜಿಲ್ಲೆ ಜನರ ಅನುಕೂಲಕ್ಕಾಗಿ ಸರ್ಕಾರದ ಮಾಸ್ಟರ್ ಪ್ಲ್ಯಾನ್: ಬಳ್ಳಾರಿ ಬಳಿ ಹೊಸ ಏರ್ಪೋರ್ಟ್ -
KSRTC: ಸಾರಿಗೆ ಲೋಕಕ್ಕೆ 'ಪಲ್ಲಕ್ಕಿ' ಮೆರುಗು: ವಿಶ್ವ ಮಹಿಳಾ ದಿನಾಚರಣೆ ಪ್ರಯುಕ್ತ 115 ಹೊಸ ಬಸ್ಗಳ ಲೋಕಾರ್ಪಣೆ -
ಬೆಂಗಳೂರಲ್ಲಿ ಗ್ಯಾಸ್ ಏಜೆನ್ಸಿಗಳ ಭರ್ಜರಿ ದಂಧೆ: ಸಿಲಿಂಡರ್ ಸಿಗದೇ ಗ್ರಾಹಕರು ಕಂಗಾಲು; ಕಾಳಸಂತೆಯಲ್ಲಿ ₹3,000ಕ್ಕೆ ಮಾರಾಟ -
LPG Gas: ಎಲ್ಪಿಜಿ ನಿಯಮಗಳಲ್ಲಿ ಭಾರೀ ಬದಲಾವಣೆ; ಗ್ರಾಹಕರು ದೂರು ನೀಡಲು ಸಹಾಯವಾಣಿ ಸಂಖ್ಯೆಗಳ ಬಿಡುಗಡೆ -
Gold Rate March 13: ಸತತ 3ನೇ ದಿನವೂ ಚಿನ್ನ - ಬೆಳ್ಳಿ ಬೆಲೆ ಭರ್ಜರಿ ಕುಸಿತ, ಎಷ್ಟಾಗಿದೆ ಇಂದಿನ ಬಂಗಾರದ ಬೆಲೆ -
Resort: ಕರ್ನಾಟಕದಲ್ಲಿ ಶುರುವಾಯ್ತು ರೆಸಾರ್ಟ್ ರಾಜಕೀಯ: ‘ಅವರು ನಮ್ಮ ಅತಿಥಿಗಳು’ ಎಂದ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ -
Horoscope March 13: ಈ ರಾಶಿಯವರ ಬದುಕಲ್ಲಿ ಸಕಾರಾತ್ಮಕ ಬೆಳವಣಿಗೆ, ಅಧಿಕ ಲಾಭ; ದಿನ ಭವಿಷ್ಯ












Click it and Unblock the Notifications