Jaundice: ಕಾಮಾಲೆ ರೋಗದತ್ತ ಎಚ್ಚರಿಕೆ ವಹಿಸಿ: ಯಾಕೆ ಗೊತ್ತಾ?
ಇದೀಗ ವಾತಾವರಣ ಬದಲಾಗಿದ್ದು, ಮನೆಯಿಂದ ಆಚೆ ರಸ್ತೆ ಬದಿಗಳಲ್ಲಿ ಆಹಾರ ಸೇವಿಸುವಾಗ, ನೀರು ಕುಡಿಯುವಾಗ ಎಚ್ಚರಿಕೆ ವಹಿಸುವುದು ಬಹುಮುಖ್ಯವಾಗಿದ್ದು, ಅದರಲ್ಲೂ ಬಿಟ್ಟು, ಬಿಟ್ಟು ಜ್ವರ ಬರುತ್ತಿದ್ದರೆ, ಮಾತ್ರೆ ಸೇವಿಸಿ ತೆಪ್ಪಗಾಗದೆ ರಕ್ತ ಪರೀಕ್ಷೆ ಮಾಡಿಸಿ ಜ್ವರಕ್ಕೆ ಕಾರಣವನ್ನು ಹುಡುಕಿ ಅದಕ್ಕೆ ತಕಂತೆ ಚಿಕಿತ್ಸೆ ಪಡೆಯುವುದು ಒಳ್ಳೆಯದು ಏಕೆಂದರೆ ಇದೀಗ ಕಾಮಾಲೆ ರೋಗ ಕೆಲವೆಡೆ ಕಾಣಿಸಿಕೊಳ್ಳುತ್ತಿದ್ದು ಈ ಸಂಬಂಧ ಎಚ್ಚರಿಕೆಯ ಹೆಜ್ಜೆಯಿಡುವುದನ್ನು ಮರೆಯಬಾರದು.
ಇನ್ನು ಕಾಮಾಲೆ ರೋಗ ಹೇಗೆ ಬರುತ್ತದೆ ಎಂಬುದನ್ನು ವೈದ್ಯರೇ ಹೇಳಿದಂತೆ ಹೇಳುವುದಾದರೆ, ಯಕೃತಿನ (ಲಿವರ್) ಸೋಂಕಿನಿಂದ ಬರುತ್ತದೆಯಂತೆ. ರೋಗದ ಸೋಂಕಿಗೆ ಹಲವಾರು ವೈರಾಣುಗಳು ಕಾರಣವಾಗಿದ್ದು, ಆ ಪೈಕಿ ಸೌಮ್ಯ ಸ್ವರೂಪದ ಎ ವೈರಾಣುವಿನಿಂದ ಹಿಡಿದು ತೀವ್ರ ಸ್ವರೂಪದ ಬಿ ವೈರಾಣು ಹಾಗೂ ಸಿ, ಡಿ, ಇ ಮತ್ತು ಜಿ ವೈರಾಣುವಿನಿಂದ ರೋಗಕ್ಕೆ ತುತ್ತಾಗಬಹುದು. ಕಾಮಾಲೆ ರೋಗವು ಅಭಿವೃದ್ಧಿ ಹೊಂದುತ್ತಿರುವ ರಾಷ್ಟ್ರಗಳಲ್ಲಿ ಜನಸಾಂದ್ರತೆ ಜಾಸ್ತಿ ಇರುವಲ್ಲಿ ಮತ್ತು ವೈಯಕ್ತಿಕ ಹಾಗೂ ಪರಿಸರ ನೈರ್ಮಲ್ಯ ಕೊರತೆ ಇರುವ ಕಡೆ ಸಾಂಕ್ರಾಮಿಕ ರೋಗವಾಗಿ ಕಾಣಿಸಿಕೊಳ್ಳಬಹುದಾಗಿದೆ.

ಬಹಳಷ್ಟು ಜನಕ್ಕೆ ಕಾಮಾಲೆ ರೋಗದ ಚಿಹ್ನೆಗಳು ಗೊತ್ತಾಗುವುದಿಲ್ಲ ಹೀಗಾಗಿ ಅವರು ಯಾವುದೋ ಒಂದು ಮಾತ್ರೆ ಸೇವಿಸಿ ತೆಪ್ಪಗಾಗುತ್ತಾರೆ. ಉಲ್ಭಣಗೊಂಡಾಗ ಆಸ್ಪತ್ರೆಗೆ ತೆರಳುತ್ತಾರೆ. ಆದ್ದರಿಂದ ಮೊದಲಿಗೆ ರೋಗದ ಲಕ್ಷಣಗಳನ್ನು ತಿಳಿದುಕೊಂಡರೆ ಬಹುಬೇಗ ಚಿಕಿತ್ಸೆ ಪಡೆದು ವಾಸಿ ಮಾಡಿಕೊಳ್ಳಲು ಸಾಧ್ಯವಾಗುತ್ತದೆ. ಜ್ವರ, ಚಳಿ, ತಲೆನೋವು, ಆಯಾಸ, ದೇಹ ಪೂರ್ಣ ನಿಶ್ಯಕ್ತಿ, ಕೀಲು ನೋವು ಇದರ ಜೊತೆಗೆ ವಾಕರಿಕೆ, ವಾಂತಿ, ಹಸಿವು ಇಲ್ಲದಿರುವುದು, ಹಳದಿ ಬಣ್ಣದ ಮೂತ್ರ ಹೋಗುವುದು. ಕಣ್ಣು, ಚರ್ಮ, ಉಗುರುಗಳು ಹಳದಿಯಾಗಿರುವುದು ಕಂಡು ಬರುತ್ತದೆ. ಇದಿಷ್ಟನ್ನು ಗಮನಿಸಿದರೆ ಅದು ಕಾಮಾಲೆ ರೋಗ ಎಂಬುದು ಸುಲಭವಾಗಿ ಗೊತ್ತಾಗಿ ಬಿಡುತ್ತದೆ.
ರೋಗಕ್ಕೆ ವಯಸ್ಸು ಲಿಂಗ ತಾರತಮ್ಯವಿಲ್ಲ
ಈ ರೋಗ ಹರಡಲು ವಯಸ್ಸಿನ ಮತ್ತು ಲಿಂಗ ತಾರತಮ್ಯವಿಲ್ಲ. ಆದರೆ ಹೆಚ್ಚಾಗಿ ಮಕ್ಕಳು ಹಾಗೂ ವಯಸ್ಕರಲ್ಲಿ ಕಂಡು ಬರುತ್ತದೆ. ಈ ರೋಗದಿಂದ ನರಳುತ್ತಿರುವ ರೋಗಿಗಳು ಕಾಮಾಲೆ ರೋಗ ಲಕ್ಷಣಗಳು ಕಂಡುಬರುವ ಎರಡು ವಾರ ಮೊದಲು, ಕಂಡು ಬಂದ ಒಂದು ವಾರದವರೆಗೂ ರೋಗಾಣುವನ್ನು ಮಲದ ಮೂಲಕ ಹೊರಹಾಕುತ್ತಾರೆ. ಇಂತಹ ರೋಗಿಗಳ ಮಲವು ಕುಡಿಯುವ ನೀರು, ತಿನ್ನುವ ಆಹಾರವನ್ನು ಕಲುಷಿತಗೊಳಿಸಿದರೆ ಇಂತಹ ಆಹಾರವನ್ನು ಸೇವಿಸಿದ ಈ ರೋಗದ ವಿರುದ್ದ ನಿರೋಧಕ ಶಕ್ತಿ ಇಲ್ಲದ ವ್ಯಕ್ತಿಗಳಿಗೆ ಸಾಮಾನ್ಯವಾಗಿ 25 ರಿಂದ 35 ದಿನಗಳ ನಂತರ ರೋಗ ಲಕ್ಷಣಗಳು ಕಂಡು ಬರಬಹುದು.
ಅಪರೂಪದಲ್ಲಿ ಕೆಲವೊಮ್ಮೆ ರಕ್ತದ ಮೂಲಕವೂ ಈ ಕಾಮಾಲೆ ರೋಗವು ಹರಡಬಲ್ಲದು. ಒಮ್ಮೆ ಈ ರೋಗದಿಂದ ನರಳಿದವರು ಶೇ. 95 ರಷ್ಟು ನಿರೋಧಕ ಶಕ್ತಿಯನ್ನು ಪಡೆಯುತ್ತಾರೆ. ಶೇ. 5 ರಷ್ಟು ಜನರು ಮತ್ತೆ ಈ ರೋಗಕ್ಕೆ ತುತ್ತಾಗಬಹುದಂತೆ. ಕಾಮಾಲೆ ರೋಗವು ನಿಧಾನವಾಗಿ ಉಲ್ಭಣಗೊಳ್ಳುವುದರಿಂದ ಆರಂಭದಲ್ಲಿ ಯಾವುದೇ ಸೂಚನೆಗಳು ಕಾಣುವುದಿಲ್ಲ. ಇದನ್ನು ದೂರ ಮಾಡಬೇಕಾದರೆ ಮೊದಲಿಗೆ ನಾವು ಜಾಗೃತರಾಗಬೇಕು.

ನಾವು ಮಾಡಬಹುದಾದ ಕೆಲಸ ಏನೆಂದರೆ ಸಾರ್ವಜನಿಕ ಸ್ಥಳಗಳಲ್ಲಿ ತೆರೆದಿಟ್ಟ ಪಾನೀಯ ಹಾಗೂ ಹಣ್ಣು ಹಂಪಲು, ತರಕಾರಿಗಳತ್ತ ಗಮನಹರಿಸುವುದು, ಕೊಳೆತ ಆಹಾರ, ಮೀನು, ಮಾಂಸ, ಐಸ್ಕ್ರೀಂ, ಶೀತಲೀಕರಿಸಿದ ಆಹಾರ ಇತ್ಯಾದಿಗಳತ್ತಲೂ ಗಮನಹರಿಸುವುದು, ಸಾರ್ವಜನಿಕ ನೀರು ಸರಬರಾಜು ವ್ಯವಸ್ಥೆಯಲ್ಲಿ ಸೂಪರ್ ಕ್ಲೋರಿನೇಶನ್ ಆಗುತ್ತಿದೆಯಾ ಎಂಬುದನ್ನು ಮನದಟ್ಟು ಮಾಡಿಕೊಳ್ಳಬೇಕು.
ರೋಗ ಹರಡಲು ಕಾರಣಗಳು ಹಲವು
ಕೆಲವೊಮ್ಮೆ ನೀರಿನಿಂದಲೇ ಈ ರೋಗ ಹರಡುವುದರಿಂದ ನೀರು ಶುದ್ಧವಾಗಿದೆಯಾ? ನೀರು ಸರಬರಾಜಾಗುವ ಪೈಪ್ ಗಳು ಸೇರಿದಂತೆ ಎಲ್ಲವೂ ಸ್ವಚ್ಛವಾಗಿದೆಯಾ? ಕಲುಷಿತ ನೀರು ಸೇರ್ಪಡೆಯಾಗುತ್ತಿದೆಯಾ ಎಂಬುದರ ಬಗ್ಗೆಯೂ ಗಮನಹರಿಸಬೇಕಾಗುತ್ತದೆ. ಇಲ್ಲಿ ನಾವು ಸ್ವಲ್ಪ ಎಡವಿದರೂ ಕಾಮಾಲೆ ರೋಗಕ್ಕೆ ಆಹ್ವಾನ ನೀಡಿದಂತೆಯೇ.. ಇಷ್ಟಕ್ಕೂ ಕಾಮಾಲೆ ರೋಗ ಬೇಸಿಗೆಯಲ್ಲಿಯೇ ಏಕೆ ಹೆಚ್ಚಾಗಿ ಬಾಧಿಸುತ್ತದೆ ಎಂಬುದನ್ನು ನೋಡಿದ್ದೇ ಆದರೆ ಅದಕ್ಕೆ ಹಲವಾರು ಕಾರಣಗಳು ಕಾಣ ಸಿಗುತ್ತವೆ.
ಮೊದಲಿಗೆ ವೈಯಕ್ತಿಕ ನೈರ್ಮಲ್ಯ ಪಾಲನೆ ಮಾಡದಿರುವುದು, ಮಲ ಮೂತ್ರ ವಿಸರ್ಜನೆಗೆ ಹೋಗಿ ಬಂದ ನಂತರ ಸಾಬೂನಿನಿಂದ ಕೈಕಾಲು ತೊಳೆಯದಿರುವುದು, ಆಹಾರ ಪಾನೀಯ ಸ್ವೀಕರಿಸುವ ಮೊದಲು ಕೈಕಾಲು ಮುಖ ತೊಳೆಯದೆ ಇರುವುದು, ಶುದ್ದೀಕರಿಸಿದ ಸಿರೆಂಜ್ ಸೂಜಿ ಬಳಸದೆ ಇರುವುದು. ಸಾರ್ವಜನಿಕ ನೈರ್ಮಲ್ಯ ವ್ಯವಸ್ಥೆ ಪಾಲನೆ. ಮನೆಗಳಲ್ಲಿ, ಊಟ ಉಪಹಾರ ಮಂದಿರಗಳಲ್ಲಿ ಚೆನ್ನಾಗಿ ಕುದಿಸಿ ಆರಿಸಿದ ನೀರನ್ನೇ ಉಪಯೋಗಿಸದೆ ಇರುವುದು ಹೀಗೆ ದೊಡ್ಡ ಪಟ್ಟಿಯೇ ಬೆಳೆಯುತ್ತಾ ಹೋಗುತ್ತದೆ. ಇದೆಲ್ಲವನ್ನು ಶಿಸ್ತುಬದ್ಧವಾಗಿ ಮಾಡುವುದನ್ನು ನಾವು ಕಲಿಯಬೇಕಾಗಿದೆ.
ರೋಗ ಬಾರದಿರಲು ಏನು ಮಾಡಬೇಕು?
ಕಾಮಾಲೆ ರೋಗಕ್ಕೆ ತುತ್ತಾದ ರೋಗಿಗಳು ತಜ್ಞ ವೈದ್ಯರಿಂದ ಪರೀಕ್ಷಿಸಿಕೊಂಡು ಚಿಕಿತ್ಸೆ ಪಡೆದು ವೈದ್ಯರ ಸಲಹೆ ಸೂಚನೆಯನ್ನು ಪಾಲಿಸುವುದು ಅಗತ್ಯ. ರೋಗಿಗಳನ್ನು ಪ್ರತ್ಯೇಕವಾಗಿಸುವುದು ಹಾಗೂ ಉಪಯೋಗಿಸುವ ಪಾತ್ರೆ ಬಟ್ಟೆ ಬರೆಗಳನ್ನು ಕ್ರಿಮಿ ನಾಶಕದಿಂದ ಶುದ್ದೀಕರಿಸುವುದು, ಮಲ ಮೂತ್ರವನ್ನು ಕ್ರಿಮಿನಾಶಕ ಹಾಕಿ ವಿಲೇವಾರಿ ಮಾಡುವುದು. ಸುರಕ್ಷಿತ ನೀರಿನ ಸರಬರಾಜು, ಆಹಾರ ಮತ್ತು ಪ್ರತಿಯೊಬ್ಬರೂ ಶೌಚಾಲಯ ವ್ಯವಸ್ಥೆ ಬಳಸುವುದು ಬಹು ಅಗತ್ಯವಾಗಿದೆ. ಕಾಯಿಲೆ ಬಂದ ಬಳಿಕ ಚಿಕಿತ್ಸೆ ಪಡೆದು ವಾಸಿ ಮಾಡಿಕೊಳ್ಳುವುದಕ್ಕಿಂತ ಕಾಯಿಲೆ ಬರದಂತೆ ಎಚ್ಚರ ವಹಿಸುವುದು ಅಗತ್ಯ. ಹಾಗಾಗಿ ಬೇಸಿಗೆಯ ದಿನಗಳಲ್ಲಿ ನಾವು ಬಲು ಎಚ್ಚರಿಕೆಯಿಂದ ಇರುವುದು ತುಂಬಾ ಅಗತ್ಯ ಎನ್ನುವುದನ್ನು ಮರೆಯಬಾರದು.
-
115 ರೂಪಾಯಿಯ ಪೊಂಗಲ್ಗೆ 273 ರೂ. ಬಿಲ್: ಸ್ವಿಗ್ಗಿ ವಿರುದ್ಧ ಸುಮಲತಾ ಅಂಬರೀಷ್ ಆಕ್ರೋಶ -
ವಂದೇ ಭಾರತ್ ರೈಲಿನ ಊಟದಲ್ಲಿ ಹುಳು: 'ಅದು ಕೇಸರಿ' ಎಂದ ಸಿಬ್ಬಂದಿ, IRCTCಗೆ 10 ಲಕ್ಷ ದಂಡ -
ಮುದ್ದೇನಹಳ್ಳಿಯಲ್ಲಿ ಪೋಷಕರ ಹರ್ಷ: 27 ಮಕ್ಕಳಿಗೆ ಹೊಸ ಬದುಕು ನೀಡಿದ ಉಚಿತ ಹೃದಯ ಚಿಕಿತ್ಸೆ ಶಿಬಿರ -
Top 3 Job Sectors: 2026ರಲ್ಲಿ ಯಾವ ಕ್ಷೇತ್ರ ಆಯ್ಕೆ ಮಾಡಬೇಕು? ಟಾಪ್ 3 ಉದ್ಯೋಗ ವಲಯಗಳು -
ಬೆಂಗಳೂರಿನಲ್ಲಿ ದೇಶದ ಮೊದಲ ಮನೋರೋಗ ಅಧ್ಯಯನದ ಡಿಜಿಟಲ್ 'ಕಾಮ್-ಬ್ರೈನ್' ಲೋಕಾರ್ಪಣೆ -
ಬೆಂಗಳೂರಿನ ಪಾನಿಪುರಿ ವ್ಯಾಪಾರಿಯ ತಿಂಗಳ ಸಂಪಾದನೆ ಫುಲ್ Viral: ದಿನಕ್ಕೆ 3 ಸಾವಿರ ರೂ. ಗಳಿಕೆ -
Viral Video: 11 ವರ್ಷದ ಬಾಲಕನಿಂದ ಯಶಸ್ವಿ ವಿಮಾನ ಲ್ಯಾಂಡಿಂಗ್; ನೆಟ್ಟಿಗರ ಮನಗೆದ್ದ ಈ ಪುಟ್ಟ ಪೋರ -
ಪೆಟ್ರೋಲ್ ಬದಲು ಎಥೆನಾಲ್ ಬ್ಲೆಂಡಿಂಗ್ ಮ್ಯಾಜಿಕ್; ಸಂಕಷ್ಟದಲ್ಲಿ ಭಾರತಕ್ಕೆ ನೆರವಾದ ಮೋದಿ ಮಾಸ್ಟರ್ ಪ್ಲ್ಯಾನ್: ಕೃಷ್ಣ ಭಟ್ ಬರಹ -
Gold Price: ಚಿನ್ನ-ಬೆಳ್ಳಿ ಬೆಲೆಯಲ್ಲಿ ಭರ್ಜರಿ ಏರಿಕೆ: ಮೂರೇ ದಿನದಲ್ಲಿ ಬೆಳ್ಳಿ 20,000 ರೂ. ಜಂಪ್ -
ಬೆಂಗಳೂರಿನ ಎಂ.ಚಿನ್ನಸ್ವಾಮಿಯಲ್ಲಿ ಐಪಿಎಲ್ ಉದ್ಘಾಟನಾ ಸಮಾರಂಭಕ್ಕೆ ಬ್ರೇಕ್: ಬಿಸಿಸಿಐ ಈ ನಿರ್ಧಾರದ ಹಿಂದಿದೆ ಮಹತ್ವದ ಉದ್ದೇಶ -
Gold Rate: ಇಂದು ನಿಮ್ಮ ನಗರಗಳಲ್ಲಿ 22 ಕ್ಯಾರೆಟ್ ಚಿನ್ನದ ಬೆಲೆ ಎಷ್ಟಿದೆ? ಇಲ್ಲಿದೆ ಸಂಪೂರ್ಣ ಮಾಹಿತಿ -
RCB ಮಾರಾಟದ ಬಗ್ಗೆ ವಿಜಯ್ ಮಲ್ಯ ಭಾವುಕ ಪೋಸ್ಟ್ ; ವಿರಾಟ್ ಕೊಹ್ಲಿ ಬಗ್ಗೆ ಅವರು ಹೇಳಿದ್ದೇನು? ಇಲ್ಲಿದೆ ಮಾಹಿತಿ












Click it and Unblock the Notifications