• search
  • Live TV
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts

ಸೇಡು ಬಿಟ್ಟು ಸ್ನೇಹದತ್ತ ಚಿತ್ತ..! ಚೀನಾ-ಅಮೆರಿಕ ನಡುವೆ ಮಹತ್ವದ ಮಾತುಕತೆ

|
Google Oneindia Kannada News

ಎಲ್ಲಿ ಅಮೆರಿಕ ಇರುತ್ತದೆಯೋ ಅಲ್ಲಿ ಚೀನಾ ಇರಲ್ಲ, ಎಲ್ಲಿ ಚೀನಾ ಇರುತ್ತದೋ ಅಲ್ಲಿ ಅಮೆರಿಕ ಬರಲ್ಲ. ಹೀಗೆ ಇಬ್ಬರದ್ದೂ ಹತ್ತಾರು ವರ್ಷಗಳ ಮುನಿಸು. ಅದರಲ್ಲೂ ಟ್ರಂಪ್ ಅಧ್ಯಕ್ಷರಾದ ಬಳಿಕ ಚೀನಾ ಹಾಗೂ ಅಮೆರಿಕ ಹಾವು-ಮುಂಗಸಿ ರೀತಿ ಕಿತ್ತಾಡಿದ್ದವು. ಆದರೆ ಜೋ ಬೈಡನ್ ಆಡಳಿತದಲ್ಲಿ ಎಲ್ಲವೂ ಬದಲಾಗುತ್ತಿದೆ. ಇದೀಗ ಚೀನಾ ಜೊತೆ ಸ್ನೇಹ ಬೆಸೆಯಲು ಮುಂದಾಗಿರುವ ಬೈಡನ್ ಆಡಳಿತ, ಹೊಸ ದಾಳ ಉರುಳಿಸಿದೆ.

ಚೀನಾ ಜತೆ ಅಮೆರಿಕ ಅಧಿಕಾರಿಗಳು ಸೇನಾ ಮಾತುಕತೆ ನಡೆಸಿದ್ದಾರೆ ಎನ್ನಲಾಗಿದೆ. ಪೆಂಟಗಾನ್‌ನ ಆದೇಶದ ಹಿನ್ನೆಲೆಯಲ್ಲಿ ಮಹತ್ವದ ಮಾತುಕತೆ ನಡೆದಿದೆ. ದಕ್ಷಿಣ ಚೀನಾ ಸಮುದ್ರದ ವಿಚಾರಕ್ಕೆ ಚೀನಾ ಮತ್ತು ಅಮೆರಿಕ ನಡುವೆ ಸಭೆ ಆಯೋಜಿಸಿ ಮಹತ್ವದ ಚರ್ಚೆ ನಡೆಸಲಾಗಿದೆ. ಇತ್ತೀಚೆಗಷ್ಟೇ ಚೀನಾ ಅಮೆರಿಕ ವಿರುದ್ಧ ಇದೇ ವಿಚಾರಕ್ಕೆ ಗರಂ ಆಗಿತ್ತು.

ಸಂಪದ್ಭರಿತ ಟ್ರಿಲಿಯನ್ ಡಾಲರ್ ಜಾಗಕ್ಕಾಗಿ ವರ್ಲ್ಡ್ ವಾರ್..?ಸಂಪದ್ಭರಿತ ಟ್ರಿಲಿಯನ್ ಡಾಲರ್ ಜಾಗಕ್ಕಾಗಿ ವರ್ಲ್ಡ್ ವಾರ್..?

ದಕ್ಷಿಣ ಚೀನಾ ಸಮುದ್ರದ ಮೇಲೆ ಸಂಪೂರ್ಣ ಹಕ್ಕು ಸಾಧಿಸಲು ಚೀನಾ ಪ್ರಯತ್ನಿಸುತ್ತಿದೆ ಎನ್ನುತ್ತಿದೆ ಅಮೆರಿಕ. ಆದ್ರೆ ಅಮೆರಿಕದ ಈ ವರ್ತನೆಗೆ ಚೀನಾ ಖಡಕ್ ತಿರುಗೇಟು ನೀಡುತ್ತಾ ಬಂದಿದೆ. ಇನ್ನು ಇತ್ತೀಚೆಗೆ ಅಮೆರಿಕದ ಉಪಾಧ್ಯಕ್ಷೆ ಕಮಲಾ ಹ್ಯಾರಿಸ್ ಕೂಡ ಈ ವಿಚಾರವನ್ನ ಪ್ರಸ್ತಾಪ ಮಾಡಿದ್ದರು. ನಮಗೆ ಬೀಜಿಂಗ್ ಜೊತೆ ಸ್ಪರ್ಧೆ ಬೇಕು ಆದರೆ ಸಮರ ಬೇಡ ಎಂದಿದ್ದರು. ಕಮಲಾ ಈ ಹೇಳಿಕೆ ನೀಡಿದ ಕೆಲವೇ ದಿನಗಳ ಬಳಿಕ ಚೀನಾ ಜೊತೆ ಅಮೆರಿಕ ಮಹತ್ವದ ಸೇನಾ ಮಾತುಕತೆ ನಡೆಸಿದೆ.

ಇಬ್ಬರ ನಡುವೆ ಜಗಳ ಏಕೆ..?

ಇಬ್ಬರ ನಡುವೆ ಜಗಳ ಏಕೆ..?

ದಕ್ಷಿಣ ಚೀನಾ ಸಮುದ್ರದಲ್ಲಿ ಹಿಡಿತ ಸಾಧಿಸುವ ಚೀನಾ ಪ್ರಯತ್ನ ಇಂದು, ನಿನ್ನೆಯದಲ್ಲ. ಸುಮಾರು 3-4 ದಶಕಗಳಿಂದಲೂ ಈ ಜಾಗಕ್ಕಾಗಿ ರಕ್ತ ರಹಿತ ಬಡಿದಾಟ ನಡೆಯುತ್ತಲೇ ಇದೆ. ಅಮೆರಿಕ ಚೀನಾ ವಿರುದ್ಧ ಈ ವಿಚಾರದಲ್ಲಿ ಜಾಗತಿಕ ಮಟ್ಟದಲ್ಲಿ ಕತ್ತಿ ಮಸೆಯುತ್ತಲೇ ಇದೆ. ಇಷ್ಟಕ್ಕೆಲ್ಲಾ ಕಾರಣವಾಗಿರುವುದು ದಕ್ಷಿಣ ಚೀನಾ ಸಮುದ್ರದಲ್ಲಿ ಅವಿತಿರುವ ಸಂಪತ್ತು. ಸುಮಾರು 3.5 ಮಿಲಿಯನ್ ಸ್ಕ್ವೇರ್ ಕಿಲೋ ಮೀಟರ್ ಅಂದರೆ ಭಾರತ ಹೊಂದಿರುವ ಭೂಭಾಗಕ್ಕಿಂತಲೂ ದೊಡ್ಡದಾದ ಪ್ರದೇಶ ದಕ್ಷಿಣ ಚೀನಾ ಜಲಗಡಿಗೆ ಇದೆ. ಭಾರಿ ಪ್ರಮಾಣದ ನೈಸರ್ಗಿತ ಸಂಪನ್ಮೂಲ ಹಾಗೂ ವ್ಯವಹಾರ ನಡೆಸುವ ಜಾಗ ಇದಾಗಿದೆ.

400 ಯುದ್ಧ ನೌಕೆ ಟಾರ್ಗೆಟ್..!

400 ಯುದ್ಧ ನೌಕೆ ಟಾರ್ಗೆಟ್..!

ಚೀನಾ ಸರ್ಕಾರ ನೌಕಾ ಬಲ ಹೆಚ್ಚಿಸಲು ಮತ್ತಷ್ಟು ಆದ್ಯತೆ ನೀಡುತ್ತಿದ್ದು, ಮುಂದಿನ 4 ವರ್ಷಗಳ ಅವಧಿಯಲ್ಲಿ ಈಗಿರುವ 360 ಯುದ್ಧ ನೌಕೆಗಳನ್ನು 400ಕ್ಕೆ ಏರಿಸುವ ಗುರಿ ಹೊಂದಲಾಗಿದೆ. ಇದು ತನ್ನ ಜಲ ಗಡಿಯಲ್ಲಿನ ಭದ್ರತೆ ಹಾಗೂ ಶತ್ರು ಪಡೆಗಳಿಗೆ ದೊಡ್ಡ ಸಂದೇಶವಾಗಲಿದೆ ಎಂಬುದು ಚೀನಾ ಲೆಕ್ಕಾಚಾರ. ಈಗಾಗಲೇ ಭೂ ಸೇನೆ ಹಾಗೂ ವಾಯು ಸೇನೆಗಳಲ್ಲೂ ಬಲ ಪ್ರದರ್ಶನ ಮಾಡಿರುವ ಚೀನಿ ಸೇನೆ, ಸಮದ್ರದ ಮೇಲೂ ಹಿಡಿತ ಸಾಧಿಸುವ ಮುನ್ಸೂಚನೆ ನೀಡಿದೆ. ಪ್ರಮುಖವಾಗಿ ದಕ್ಷಿಣ ಚೀನಾ ಸಮುದ್ರದ ಮೇಲೆ ಚೀನಾ ಪ್ರತಿಪಾದಿಸುವ ಹಕ್ಕು ಸ್ವಾಮ್ಯ ಇದರಿಂದ ಮತ್ತಷ್ಟು ಗಟ್ಟಿಯಾಗಲಿದೆ. ದಕ್ಷಿಣ ಚೀನಾ ಸಮುದ್ರದಲ್ಲಿ ಚೀನಿಯರ ಪ್ರಾಬಲ್ಯವನ್ನು ತಗ್ಗಿಸಲು ಅಮೆರಿಕ ನೇತೃತ್ವದಲ್ಲಿ ‘ಕ್ವಾಡ್' ಒಕ್ಕೂಟ ಪ್ರಯತ್ನಿಸುತ್ತಿದೆ.

ಎಷ್ಟಿದೆ ಗೊತ್ತಾ ಸಂಪತ್ತಿನ ಪ್ರಮಾಣ..?

ಎಷ್ಟಿದೆ ಗೊತ್ತಾ ಸಂಪತ್ತಿನ ಪ್ರಮಾಣ..?

ಅಮೆರಿಕದ ಸರ್ಕಾರಿ ಸಂಸ್ಥೆ ನೀಡಿರುವ ಮಾಹಿತಿಯಂತೆ ದಕ್ಷಿಣ ಚೀನಾ ಸಮುದ್ರದಲ್ಲಿ 190 ಟ್ರಿಲಿಯನ್ ಕ್ಯೂಬಿಕ್ ಅಡಿ ನೈಸರ್ಗಿಕ ಅನಿಲ ಅಡಗಿದೆ. ಇಷ್ಟು ಗ್ಯಾಸ್ ಸಿಕ್ಕರೆ ಹತ್ತಾರು ವರ್ಷ ಚೀನಾ ಯಾರ ಬಳಿಯೂ ನ್ಯಾಚ್ಯುರಲ್ ಗ್ಯಾಸ್‌ಗೆ ಕೈಚಾಚುವ ಅವಶ್ಯಕತೆ ಇರೋದಿಲ್ಲ. ಹಾಗೇ 11 ಬಿಲಿಯನ್ ಬ್ಯಾರೆಲ್‌ ಪೆಟ್ರೋಲ್, ಡೀಸೆಲ್ ಸಂಯುಕ್ತ ಇಲ್ಲಿ ಅಡಗಿದೆ. ಇಷ್ಟೇ ಆಗಿದ್ದರೆ ಚೀನಾ ಅಷ್ಟೊಂದು ತಲೆಕೆಡಿಸಿಕೊಳ್ಳುವ ಸಾಧ್ಯತೆ ಕಡಿಮೆ ಇರುತ್ತಿತ್ತೇನೋ. ಆದರೆ ಇದೆಲ್ಲವನ್ನೂ ಮೀರಿಸುವ ಖಜಾನೆ ದಕ್ಷಿಣ ಚೀನಾ ಸಮುದ್ರದಲ್ಲಿದೆ. ದಕ್ಷಿಣ ಚೀನಾ ಸಮುದ್ರದಲ್ಲಿ ಅಮೂಲ್ಯ ಅದಿರುಗಳಿವೆ. ಚಿನ್ನ ಸೇರಿದಂತೆ ಟಿನ್, ಕ್ರೋಮೈಟ್, ಮ್ಯಾಗ್ನಟೈಟ್, ಜಿರ್ಕಾನ್ ಮತ್ತಿತರ ಅದಿರುಗಳು ಸಾಕಷ್ಟು ಪ್ರಮಾಣದಲ್ಲಿ ಲಭ್ಯವಿದೆ. ಇಷ್ಟು ಪ್ರಮಾಣದ ಸಂಪತ್ತನ್ನು ಬಿಟ್ಟುಕೊಡಲು ಚೀನಾ ಬಿಲ್‌ಕುಲ್ ಸಿದ್ಧವಿಲ್ಲ.

5.3 ಟ್ರಿಲಿಯನ್ ಡಾಲರ್ ವಹಿವಾಟು..!

5.3 ಟ್ರಿಲಿಯನ್ ಡಾಲರ್ ವಹಿವಾಟು..!

ಆಶ್ಚರ್ಯವಾದರೂ ಇದು ನಂಬಲೇಬೇಕಾದ ವಿಚಾರ. ದಕ್ಷಿಣ ಚೀನಾ ಸಮುದ್ರ ತೈಲ ಹಾಗೂ ಅದಿರುಗಳನ್ನು ಮಾತ್ರ ಹೊಂದಿಲ್ಲ. ಸಂಪದ್ಭರಿತ ವ್ಯಾಪಾರವನ್ನೂ ನಡೆಸುತ್ತಾ ಬಂದಿದೆ. ಸೌತ್ ಚೀನಾ ಸಮುದ್ರ ಮಾರ್ಗವಾಗಿ ಪ್ರತಿವರ್ಷವೂ ಸುಮಾರು 5.3 ಟ್ರಿಲಿಯನ್ ಮೊತ್ತದ ವ್ಯಾಪಾರ, ವಹಿವಾಟು ನಡೆಯುತ್ತಿದೆ. ಇದು ಜಗತ್ತಿನಲ್ಲಿ ಜಲ ಮಾರ್ಗದ ಮೂಲಕ ನಡೆಯುವ ವ್ಯಾಪಾರದ 3ನೇ ಒಂದು ಭಾಗವಾಗಿದೆ. ಭಾರತವು ಕೂಡ ಪ್ರತಿವರ್ಷ 200 ಬಿಲಿಯನ್ ಡಾಲರ್ ಮೊತ್ತದ ವಹಿವಾಟನ್ನು ದಕ್ಷಿಣ ಚೀನಾ ಸಮುದ್ರ ಮಾರ್ಗದ ಮೂಲಕ ನಡೆಸುತ್ತದೆ. ಅಮೆರಿಕ, ಜಪಾನ್, ಚೀನಾ, ಕೊರಿಯಾ, ಆಸ್ಟ್ರೇಲಿಯಾ ಹೀಗೆ ಹತ್ತಾರು ದೇಶಗಳು ಇದೇ ಮಾರ್ಗ ಬಳಸಿ ವ್ಯಾಪಾರ ನಡೆಸುತ್ತಿವೆ. ಇದೇ ಕಾರಣಕ್ಕೆ ದಕ್ಷಿಣ ಚೀನಾ ಸಮುದ್ರ ಸಂಘರ್ಷದ ತಾಣವಾಗಿ ಮಾರ್ಪಟ್ಟಿದೆ.

English summary
US holds talks with China military for first time under Biden administration.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X