ಯುಪಿ 7ನೇ ಹಂತದ ಚುನಾವಣೆ: 28% ಅಭ್ಯರ್ಥಿಗಳ ವಿರುದ್ಧ ಕ್ರಿಮಿನಲ್ ಆರೋಪ
ಲಕ್ನೋ ಮಾರ್ಚ್ 6: ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಯ ಏಳನೇ ಹಂತದಲ್ಲಿ 54 ಕ್ಷೇತ್ರಗಳಲ್ಲಿ ಸ್ಪರ್ಧಿಸುತ್ತಿರುವ 613 ಅಭ್ಯರ್ಥಿಗಳ ಪೈಕಿ 607 ಅಭ್ಯರ್ಥಿಗಳ ಅಫಿಡವಿಟ್‌ಗಳನ್ನು ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ (ADR) ವಿಶ್ಲೇಷಿಸಿದೆ. ಏಳನೇ ಹಂತದ ಒಟ್ಟು 607 ಅಭ್ಯರ್ಥಿಗಳ ಪೈಕಿ 170 (ಶೇ28) ಜನರು ತಮ್ಮ ವಿರುದ್ಧ ಕ್ರಿಮಿನಲ್ ಮೊಕದ್ದಮೆಗಳನ್ನು ಘೋಷಿಸಿಕೊಂಡಿದ್ದಾರೆ. ಜೊತೆಗೆ 131 (ಶೇ22) ಅಭ್ಯರ್ಥಿಗಳು ಗಂಭೀರ ಕ್ರಿಮಿನಲ್ ಪ್ರಕರಣಗಳನ್ನು ಘೋಷಿಸಿಕೊಂಡಿದ್ದಾರೆ ಎಂದು ವರದಿ ಹೇಳಿದೆ.
54 ಕ್ಷೇತ್ರಗಳ ಪೈಕಿ 35 ಕ್ಷೇತ್ರಗಳಲ್ಲಿ (65%) 'ರೆಡ್ ಅಲರ್ಟ್' ಅಥವ ಅತ್ಯಂತ ಸೂಕ್ಷ್ಮ ಪ್ರದೇಶಗಳೆಂದು ಘೋಷಿಸಲಾಗಿದೆ. ರೆಡ್ ಅಲರ್ಟ್ ಕ್ಷೇತ್ರಗಳಲ್ಲಿ ಮೂರು ಅಥವಾ ಅದಕ್ಕಿಂತ ಹೆಚ್ಚು ಅಭ್ಯರ್ಥಿಗಳು ಸ್ಪರ್ಧಿಸುತ್ತಿರುವ ನಾಯಕರು ತಮ್ಮ ವಿರುದ್ಧ ಕ್ರಿಮಿನಲ್ ಮೊಕದ್ದಮೆಗಳನ್ನು ಘೋಷಿಸಿದ್ದಾರೆ ಎಂದು ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ (ADR) ನ ಹೊಸ ವರದಿಯು ಹೇಳುತ್ತದೆ.
54 ಕ್ಷೇತ್ರಗಳಲ್ಲಿ ಏಳನೇ ಮತ್ತು ಅಂತಿಮ ಹಂತದ ಯುಪಿ ಚುನಾವಣೆಯಲ್ಲಿ ಸ್ಪರ್ಧಿಸುತ್ತಿರುವ 613 ಅಭ್ಯರ್ಥಿಗಳ ಪೈಕಿ 607 ಅಭ್ಯರ್ಥಿಗಳ ಸ್ವಯಂ ಪ್ರಮಾಣ ಪತ್ರಗಳನ್ನು ADR ವಿಶ್ಲೇಷಿಸಿದೆ. ಉಳಿದ ಆರು ಅಭ್ಯರ್ಥಿಗಳ ಅಫಿಡವಿಟ್‌ಗಳನ್ನು ಕೆಟ್ಟದಾಗಿ ಸ್ಕ್ಯಾನ್ ಮಾಡಲಾಗಿದ್ದು ಅಥವಾ ಸಂಪೂರ್ಣ ಅಫಿಡವಿಟ್‌ಗಳನ್ನು ಚುನಾವಣಾ ಆಯೋಗದ ವೆಬ್‌ಸೈಟ್‌ನಲ್ಲಿ ಅಪ್‌ಲೋಡ್ ಮಾಡದ ಕಾರಣ ಅವರನ್ನು ವಿಶ್ಲೇಷಿಸಲಾಗಿಲ್ಲ. 54 ಕ್ಷೇತ್ರಗಳ ಪೈಕಿ 35 ಕ್ಷೇತ್ರಗಳನ್ನು 'ರೆಡ್ ಅಲರ್ಟ್' ಎಂದು ಘೋಷಿಸಲಾಗಿದೆ ಎಂದು ವರದಿ ಹೇಳಿದೆ.

ಕ್ರಿಮಿನಲ್ ಪ್ರಕರಣಗಳು
ಇನ್ನೂ ಚುನಾವಣೆಯಲ್ಲಿ ಎಸ್‌ಪಿಯ 45 ಅಭ್ಯರ್ಥಿಗಳಲ್ಲಿ 26 (58%) ಅಭ್ಯರ್ಥಿಗಳು, ಜೊತೆಗೆ ಬಿಜೆಪಿಯ 47 ಅಭ್ಯರ್ಥಿಗಳಲ್ಲಿ 26 (55%), ಬಿಎಸ್‌ಪಿಯ 52 ಅಭ್ಯರ್ಥಿಗಳಲ್ಲಿ 20 (38%), 54 ಬಿಎಸ್‌ಪಿ ಅಭ್ಯರ್ಥಿಗಳಲ್ಲಿ 20 (37%), ಆಮ್ ಆದ್ಮಿ ಪಕ್ಷದ 47 ಅಭ್ಯರ್ಥಿಗಳ ಪೈಕಿ ಎಂಟು (17%) ಅಭ್ಯರ್ಥಿಗಳು ತಮ್ಮ ಅಫಿಡವಿಟ್‌ಗಳಲ್ಲಿ ತಮ್ಮ ವಿರುದ್ಧ ಕ್ರಿಮಿನಲ್ ಮೊಕದ್ದಮೆಗಳನ್ನು ಘೋಷಿಸಿದ್ದಾರೆ.
ಅಲ್ಲದೆ, ಎಸ್‌ಪಿಯ 20, ಬಿಜೆಪಿಯ 19, ಬಿಎಸ್‌ಪಿಯ 13, ಕಾಂಗ್ರೆಸ್‌ನ 12 ಮತ್ತು ಎಎಪಿಯ ಏಳು ಮಂದಿ ತಮ್ಮ ವಿರುದ್ಧ ಗಂಭೀರ ಕ್ರಿಮಿನಲ್ ಮೊಕದ್ದಮೆಗಳನ್ನು ತಮ್ಮ ಅಫಿಡವಿಟ್‌ನಲ್ಲಿ ಘೋಷಿಸಿದ್ದಾರೆ ಎಂದು ವರದಿ ತಿಳಿಸಿದೆ. ಕನಿಷ್ಠ 11 ಅಭ್ಯರ್ಥಿಗಳು ಮಹಿಳೆಯರ ವಿರುದ್ಧದ ಅಪರಾಧಕ್ಕೆ ಸಂಬಂಧಿಸಿದ ಪ್ರಕರಣಗಳನ್ನು ಘೋಷಿಸಿದ್ದಾರೆ. ಇಬ್ಬರು ಅತ್ಯಾಚಾರಕ್ಕೆ ಸಂಬಂಧಿಸಿದ ಪ್ರಕರಣಗಳನ್ನು ಘೋಷಿಸಿದ್ದಾರೆ (ಭಾರತೀಯ ದಂಡ ಸಂಹಿತೆಯ ಸೆಕ್ಷನ್ 376). ಏಳು ಅಭ್ಯರ್ಥಿಗಳು ತಮ್ಮ ವಿರುದ್ಧ ಕೊಲೆಗೆ ಸಂಬಂಧಿಸಿದ ಪ್ರಕರಣಗಳನ್ನು (ಐಪಿಸಿಯ ಸೆಕ್ಷನ್ 302) ಘೋಷಿಸಿಕೊಂಡರೆ, 25 ಅಭ್ಯರ್ಥಿಗಳು ಕೊಲೆ ಯತ್ನಕ್ಕೆ ಸಂಬಂಧಿಸಿದ ಪ್ರಕರಣಗಳನ್ನು ಘೋಷಿಸಿದ್ದಾರೆ (ಐಪಿಸಿಯ ಸೆಕ್ಷನ್-307).
ಏಳನೇ ಹಂತದಲ್ಲಿ ಕೋಟ್ಯಾಧಿಪತಿಗಳು
607 ಅಭ್ಯರ್ಥಿಗಳಲ್ಲಿ, 217 (36%) ಕೋಟ್ಯಾಧಿಪತಿಗಳಾಗಿದ್ದರೆ, ಪ್ರತಿ ಅಭ್ಯರ್ಥಿಯ ಆಸ್ತಿಯ ಸರಾಸರಿ ಮೌಲ್ಯ 2.55 ಕೋಟಿ ರೂ ಇದೆ. ಯುಪಿ ಚುನಾವಣೆಯಲ್ಲಿ ಹಣಬಲದ ಪಾತ್ರ ಎದ್ದು ಕಾಣುತ್ತಿದ್ದು, ಎಲ್ಲಾ ಪ್ರಮುಖ ರಾಜಕೀಯ ಪಕ್ಷಗಳು ಶ್ರೀಮಂತ ಅಭ್ಯರ್ಥಿಗಳಿಗೆ ಟಿಕೆಟ್ ನೀಡಿರುವುದು ಸ್ಪಷ್ಟವಾಗಿದೆ ಎಂದು ವರದಿ ಹೇಳುತ್ತದೆ. ಪ್ರಮುಖ ಪಕ್ಷಗಳ ಪೈಕಿ ಬಿಜೆಪಿಯ 40 (85%), ಎಸ್‌ಪಿಯ 37 (82%), ಬಿಎಸ್‌ಪಿಯ 41 (79%), ಕಾಂಗ್ರೆಸ್‌ನ 22 (41%) ಮತ್ತು ಎಎಪಿಯ 15 (32%) ಅಭ್ಯರ್ಥಿಗಳು 1 ಕೋಟಿಗಿಂತ ಹೆಚ್ಚಿನ ಆಸ್ತಿಯನ್ನು ಘೋಷಿಸಿದ್ದಾರೆ.
ವಿಶ್ಲೇಷಿಸಿದ 47 ಬಿಜೆಪಿಯ ಪ್ರತಿ ಅಭ್ಯರ್ಥಿಗೆ ಸರಾಸರಿ ಆಸ್ತಿ ಮೌಲ್ಯ ರೂ. 6.48 ಕೋಟಿ ಇದ್ದರೆ 52 ಬಿಎಸ್‌ಪಿ ಅಭ್ಯರ್ಥಿಗಳಿಗೆ 6.16 ಕೋಟಿ ರೂ. 45 ಎಸ್‌ಪಿ ಅಭ್ಯರ್ಥಿಗಳ ಸರಾಸರಿ ಆಸ್ತಿ 5.57 ಕೋಟಿ ಮತ್ತು 54 ಕಾಂಗ್ರೆಸ್ ಅಭ್ಯರ್ಥಿಗಳು 1.26 ಕೋಟಿ ರೂ. 47 ಎಎಪಿ ಅಭ್ಯರ್ಥಿಗಳು ಸರಾಸರಿ 1.01 ಕೋಟಿ ಮೌಲ್ಯದ ಆಸ್ತಿ ಹೊಂದಿದ್ದಾರೆ. ಮಾರ್ಚ್ 7 ರಂದು ನಡೆಯಲಿರುವ ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಯಲ್ಲಿ ಏಳನೇ ಹಂತದಲ್ಲಿ 75 (12%) ಮಹಿಳಾ ಅಭ್ಯರ್ಥಿಗಳು ಸ್ಪರ್ಧಿಸುತ್ತಿದ್ದಾರೆ ಎಂದು ವರದಿ ಹೇಳುತ್ತದೆ.
Recommended Video
-
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
Good Friday: ಗುಡ್ ಫ್ರೈಡೇ - ಈಸ್ಟರ್ ರಜೆ ಸ್ಪೆಷಲ್: ಬೆಂಗಳೂರು – ಮಡಗಾಂವ್ ನಡುವೆ ವಿಶೇಷ ರೈಲು ಸೇವೆ ಆರಂಭ -
Viral Video: ಹುಡುಗಿ ಪ್ರೀತಿಗೆ ಒಪ್ಪಿಕೊಂಡಳು ಆದ್ರೆ ರಿಂಗೇ ಮಿಸ್ ಆಯ್ತು: MI ಮ್ಯಾಚ್ನಲ್ಲೊಂದು ಸ್ವಾರಸ್ಯಕರ ಘಟನೆ -
Bagalkote: ಮನೆಗೆ ಯಾರನ್ನೂ ಸೇರಿಸದ ವೀರಣ್ಣ ಚರಂತಿಮಠ ಶಾಸಕರಾಗಲೂ ಲಾಯಕ್ಕಾ?: ಸಿದ್ದರಾಮಯ್ಯ -
Price Hike: ಏಪ್ರಿಲ್ 1ರಿಂದ ಜನಸಾಮಾನ್ಯರಿಗೆ ಬೆಲೆ ಏರಿಕೆ ಶಾಕ್: ವಿದ್ಯುತ್, ನೀರು, ಟೋಲ್ ದರ ಸೇರಿ ಏನೆಲ್ಲ ದುಬಾರಿ? -
ಮಾರ್ಚ್ 31ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Gold Price: ದಿಢೀರ್ ಏರಿಕೆ ಕಂಡ ಚಿನ್ನದ ದರ: ಪ್ರತಿ ಗ್ರಾಂಗೆ 14,929 ರೂಪಾಯಿ, ಕೆ.ಜಿಗೆ 2.5 ಲಕ್ಷ ರೂ. ತಲುಪಿದ ಬೆಳ್ಳಿ -
Kannada: ಕರ್ನಾಟಕದಲ್ಲಿರುವ ಬ್ಯಾಂಕ್ಗಳಲ್ಲಿ ಸ್ಪಷ್ಟ ಕನ್ನಡ; ತುಳು, ಕೊಂಕಣಿ ಭಾಷೆಯ ಕಲರವ ಈಗ ಉಳಿದಿಲ್ಲ: ಕವಿರಾಜ್












Click it and Unblock the Notifications