ಯೋಗಿ ಸಂಪುಟ; ಡಿಸಿಎಂ ಬ್ರಜೇಶ್ ಪಾಠಕ್ ಪರಿಚಯ
ಲಕ್ನೋ, ಮಾರ್ಚ್ 25; ಉತ್ತರ ಪ್ರದೇಶದಲ್ಲಿ ಯೋಗಿ ಆದಿತ್ಯನಾಥ್ 2.0 ಆಡಳಿತ ಆರಂಭವಾಗಿದೆ. ಮುಖ್ಯಮಂತ್ರಿಯಾಗಿ ಶುಕ್ರವಾರ ಅವರು ಪ್ರಮಾಣ ವಚನ ಸ್ವೀಕಾರ ಮಾಡಿದರು. ಬ್ರಜೇಶ್ ಪಾಠಕ್ ಉಪಮುಖ್ಯಮಂತ್ರಿಯಾಗಿ ಯೋಗಿ ಆದಿತ್ಯನಾಥ್ ಸಂಪುಟ ಸೇರಿದ್ದಾರೆ.
57 ವರ್ಷದ ಬ್ರಜೇಶ್ ಪಾಠಕ್ ಉತ್ತರ ಪ್ರದೇಶದಲ್ಲಿ ಬ್ರಾಹ್ಮಣ ಸಮುದಾಯದ ಪ್ರಭಾವಿ ನಾಯಕ. ಉಪ ಮುಖ್ಯಮಂತ್ರಿಯಾಗಿ, ಸಚಿವರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
ಕಾನೂನು, ನ್ಯಾಯಾಂಗ, ಗ್ರಾಮೀಣ ಇಂಜಿನಿಯರಿಂಗ್ ಖಾತೆಗಳನ್ನು ನಿರ್ವಹಣೆ ಮಾಡಿದ್ದಾರೆ. ಬ್ರಜೇಶ್ ಪಾಠಕ್ ಸಂಘ ಪರಿವಾರದ ಮೂಲಕ ರಾಜಕೀಯ ಆರಂಭ ಮಾಡಿದವರಲ್ಲ. ಮೊದಲು ಕಾಂಗ್ರೆಸ್‌ನಲ್ಲಿದ್ದ ಅವರು ಬಳಿಕ ಬಿಎಸ್‌ಪಿ ಸೇರಿದ್ದರು.

1964ರ ಜೂನ್ 25ರಂದು ಹರೋಡಿ ಜಿಲ್ಲೆಯ ಮಲ್ಲವನ್‌ನಲ್ಲಿ ಬ್ರಜೇಶ್ ಪಾಠಕ್ ಜನಿಸಿದರು. ತಂದೆ ಸುರೇಶ್ ಪಾಠಕ್ ವಕೀಲರಾಗಿದ್ದರು. ಬ್ರಜೇಶ್ ಲಕ್ನೋ ವಿಶ್ವವಿದ್ಯಾಲಯದಿಂದ ಎಲ್‌ಎಲ್‌ಬಿ ಪದವಿ ಪಡೆದರು.
90ರ ದಶಕದಲ್ಲಿಯೇ ಕಾಂಗ್ರೆಸ್ ಮೂಲಕ ಬ್ರಜೇಶ್ ಪಾಠಕ್ ರಾಜಕೀಯಕ್ಕೆ ಪಾದಾರ್ಪಣೆ ಮಾಡಿದರು. 2002ರಲ್ಲಿ ಮಲ್ಲವನ್ ಕ್ಷೇತ್ರದಿಂದ ಮೊದಲ ಬಾರಿಗೆ ಕಾಂಗ್ರೆಸ್ ಅಭ್ಯರ್ಥಿಯಾಗಿ ಚುನಾವಣಾ ಕಣಕ್ಕಿಳಿದರು. ಆದರೆ ಬಿಎಸ್‌ಪಿ ಅಭ್ಯರ್ಥಿ ವಿರುದ್ಧ ಸೋಲು ಕಂಡರು.
ಬಳಿಕ ಅವರು ಬಿಎಸ್‌ಪಿ ಸೇರಿದರು. ಆದರೆ ಪಕ್ಷ 2004ರ ಲೋಕಸಭೆ ಚುನಾವಣೆಯಲ್ಲಿ ಉನ್ನಾವ್ ಕ್ಷೇತ್ರದಿಂದ ಪಕ್ಷ ಟಿಕೆಟ್ ನೀಡಿತು. ಚುನಾವಣೆಯಲ್ಲಿ ಬ್ರಜೇಶ್ ಪಾಠಕ್ ಗೆಲುವು ಸಾಧಿಸಿದರು.
2009ರಲ್ಲಿ ಬಿಎಸ್‌ಪಿ ಪಕ್ಷ ಅವರನ್ನು ರಾಜ್ಯಸಭೆಗೆ ಕಳುಹಿಸಿತು ಮತ್ತು 2014ರ ಲೋಕಸಭೆ ಚುನಾವಣೆಯಲ್ಲಿ ಸೋಲು ಕಂಡ ಬಳಿಕ 2016ರಲ್ಲಿ ಬ್ರಜೇಶ್ ಪಾಠಕ್ ಬಿಜೆಪಿ ಸೇರಿದರು. ಲಕ್ನೋ ಸೆಂಟ್ರಲ್ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಗೆದ್ದರು ಮತ್ತು ಬಿಜೆಪಿ ಸರ್ಕಾರದಲ್ಲಿ ಸಚಿವರಾದರು.
ಬ್ರಜೇಶ್ ಪಾಠಕ್ ಪತ್ನಿ ನಮ್ರತಾ ಸಹ ರಾಜಕೀಯದಲ್ಲಿ ಸಕ್ರಿಯರಾಗಿದ್ದಾರೆ. ಉನ್ನಾವ್ ಸರ್ದಾರ್ ಕ್ಷೇತ್ರದಲ್ಲಿ 2012ರ ಚುನಾವಣೆಯಲ್ಲಿ ಸೋತ ಅವರು ಮಾಯಾವತಿ ರಾಜ್ಯದ ಮುಖ್ಯಮಂತ್ರಿಯಾಗಿದ್ದಾಗ ಮಹಿಳಾ ಆಯೋಗದ ಉಪಾಧ್ಯಕ್ಷೆಯಾಗಿದ್ದರು.
2017ರ ಚುನಾವಣೆಯಲ್ಲಿ ಬ್ರಜೇಶ್ ಪಾಠಕ್ ಲಕ್ನೋ ಸೆಂಟ್ರಲ್ ಕ್ಷೇತ್ರದಿಂದ ಚುನಾವಣೆಗೆ ಸ್ಪರ್ಧಿಸಿದರು ಮತ್ತು ಗೆಲವು ಸಾಧಿಸಿ ಸಚಿವರಾದರು.
Recommended Video
-
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ -
Gas: ಬೆಳಗಾವಿಯಲ್ಲಿ ಸಿಲಿಂಡರ್, ಇಂಧನ ಲಭ್ಯತೆಯ ಬಗ್ಗೆ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಪ್ಡೇಟ್ಸ್ -
Liquor Ban: ಬೆಂಗಳೂರಲ್ಲಿ 48 ಗಂಟೆಗಳ ಕಾಲ ಮದ್ಯ ಮಾರಾಟ ನಿಷೇಧ, ಎಲ್ಲೆಲ್ಲಿ - ಯಾಕೆ ಇಲ್ಲಿದೆ ಮಾಹಿತಿ -
Bengaluru property: ಬೆಂಗಳೂರು ಆಸ್ತಿ ತೆರಿಗೆ ಬಾಕಿದಾರರಿಗೆ ಇದೀಗ ಬಿಗ್ ಶಾಕ್: ಪಾಲಿಕೆಗಳೇ ಆಸ್ತಿ ಖರೀದಿ












Click it and Unblock the Notifications