Get Updates
Get notified of breaking news, exclusive insights, and must-see stories!

Uttarakhand ABP CVoter Exit Poll 2022: ಯಾರಿಗೆ ಜಯ?

ನವ ದೆಹಲಿ ಮಾರ್ಚ್ 7: 2022ರ ಐದು ರಾಜ್ಯಗಳ ವಿಧಾನಸಭಾ ಚುನಾವಣೆಯ ಕೊನೆಯ ಹಂತದ ಮತದಾನ ಇಂದು ನಡೆದಿದೆ. ಉತ್ತರ ಪ್ರದೇಶ, ಉತ್ತರಾಖಂಡ, ಪಂಜಾಬ್, ಗೋವಾ ಮತ್ತು ಮಣಿಪುರ ವಿಧಾನಸಭೆ ಚುನಾವಣೆಯ ನಂತರ ಇದೀಗ ಎಕ್ಸಿಟ್ ಪೋಲ್ ಫಲಿತಾಂಶ ಹೊರಬಿದ್ದಿದೆ. ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಯ ಕೊನೆಯ ಹಂತದ ಮತದಾನದೊಂದಿಗೆ, ಎಲ್ಲಾ ಐದು ರಾಜ್ಯಗಳ ವಿಧಾನಸಭಾ ಚುನಾವಣೆಗಳು ಪೂರ್ಣಗೊಂಡಿವೆ. ಈ ಐದು ರಾಜ್ಯಗಳು 690 ವಿಧಾನಸಭಾ ಸ್ಥಾನಗಳನ್ನು ಹೊಂದಿವೆ. ಚುನಾವಣೆ ಮುಗಿದ ನಂತರ ಮಾರ್ಚ್ 10 ರಂದು ಈ ಎಲ್ಲಾ ಕ್ಷೇತ್ರಗಳ ಚುನಾವಣಾ ಫಲಿತಾಂಶ ಹೊರಬೀಳಲಿದೆ. ಚುನಾವಣಾ ಫಲಿತಾಂಶಕ್ಕೂ ಮುನ್ನ ಐದು ರಾಜ್ಯಗಳ ಜನರ ಮನಸ್ಥಿತಿ ಅರಿಯುವ ಪ್ರಯತ್ನ ನಡೆದಿದೆ. ಟೈಮ್ಸ್ ನೌ ಸಿಓಟರ್ ನಡೆಸಿದ ಚುನಾವಣೋತ್ತರ ಸಮೀಕ್ಷೆಯಲ್ಲಿ ಉತ್ತರಾಖಂಡದಲ್ಲಿ ಯಾರಿಗೆ ಜಯ ಸಿಗಲಿದೆ ಎನ್ನುವುದನ್ನು ತಿಳಿಸಿದೆ.

ಉತ್ತರಾಖಂಡದ 70 ವಿಧಾನಸಭಾ ಕ್ಷೇತ್ರಗಳ ಚುನಾವಣೆ ಪೂರ್ಣಗೊಂಡಿದೆ. ಸೋಮವಾರ ಚುನಾವಣೋತ್ತರ ಸಮೀಕ್ಷೆ ಪ್ರಕಟವಾಗಿದೆ. ರಾಜ್ಯದಲ್ಲಿ ಸರ್ಕಾರ ರಚನೆ ಮಾಡಲು ಬೇಕಾದ ಮ್ಯಾಜಿಕ್ ನಂಬರ್ 36. ಉತ್ತರಾಖಂಡ ರಾಜ್ಯದಲ್ಲಿ Times New Cvoter ನಡೆಸಿದ ಚುನಾವಣೋತ್ತರ ಸಮೀಕ್ಷೆ ಪ್ರಕಟವಾಗಿದೆ. ಕಾಂಗ್ರೆಸ್ ಪಕ್ಷ 31 ಸ್ಥಾನಗಳನ್ನು ಪಡೆದರೆ ಬಿಜೆಪಿ 37 ಸ್ಥಾನಗಳನ್ನು ಪಡೆಯುವ ಮೂಲಕ ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮಲಿದೆ ಎಂದು ಸಮೀಕ್ಷೆ ಹೇಳಿದೆ. ರಾಜ್ಯದಲ್ಲಿ ಬಿಜೆಪಿ ಅಧಿಕಾರದಲ್ಲಿದೆ. ಉತ್ತರಾಖಂಡ ವಿಧಾನಸಭೆ ಚುನಾವಣಾ ಫಲಿತಾಂಶ ಮಾರ್ಚ್ 10ರಂದು ಪ್ರಕಟವಾಗಲಿದೆ.

ಉತ್ತರಾಖಂಡ್ ಎಕ್ಸಿಟ್ ಪೋಲ್

ಟೈಮ್ಸ್ ನೌ ಎಕ್ಸಿಟ್ ಪೋಲ್ ಪ್ರಕಾರ ಬಿಜೆಪಿ ಖಾತೆಯಲ್ಲಿ 37 ಸ್ಥಾನಗಳನ್ನು ಪಡೆಯಬಹುದು. ಕಾಂಗ್ರೆಸ್ 31 ಸ್ಥಾನಗಳನ್ನು ಪಡೆಯಬಹುದು. ಆಮ್ ಆದ್ಮಿ ಪಕ್ಷದ ಖಾತೆಯಲ್ಲಿ 1 ಸ್ಥಾನ ಉಳಿಯುವ ಸಾಧ್ಯತೆ ಇದ್ದು, ಇತರರ ಪಕ್ಷಗಳಿಗೆ 1 ಸ್ಥಾನ ಸಿಗಲಿದೆ.

Uttarakhand Election Times New CVoter Exit Poll Results 2022 In Kannada

ಬಿಜೆಪಿ: 37 ಸ್ಥಾನಗಳು

ಕಾಂಗ್ರೆಸ್: 31 ಸ್ಥಾನಗಳು

AAP: 1 ಸ್ಥಾನ

OTH: 1 ಮತ

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+