ಮಹರ್ಷಿ ವಾಲ್ಮೀಕಿ ಜಯಂತಿ 2021: ಇತಿಹಾಸ ಮತ್ತು ಮಹತ್ವ
ಭಾರತದ ಮೊಟ್ಟ ಮೊದಲ ಮಹಾಕಾವ್ಯ ರಾಮಾಯಣವನ್ನು ರಚಿಸಿದ ಮಹರ್ಷಿ ವಾಲ್ಮೀಕಿ ಅವರ ಜಯಂತಿಯನ್ನು ಅಕ್ಟೋಬರ್ 20ರಂದು ಆಚರಿಸಲಾಗುತ್ತದೆ.
ಸಂಸ್ಕೃತದಲ್ಲಿ ರಚಿಸಲಾಗಿರುವ ರಾಮಾಯಣ ಮಹಾಕಾವ್ಯವು 24,000 ಶ್ಲೋಕಗಳನ್ನು ಹೊಂದಿದೆ. ವಾಲ್ಮೀಕಿಯು ಕವಿಕುಲದ ಗುರುವಾಗಿ ಹಲವಾರು ಕವಿಗಳಿಗೆ ಮತ್ತು ಸಾಹಿತಿಗಳಿಗೆ ಸ್ಫೂರ್ತಿಯ ಸೆಲೆಯಾಗಿದ್ದಾರೆ. ವಾಲ್ಮೀಕಿ ರಾಮಾಯಣದ ಆಧಾರದ ಮೇಲೆ ವಿವಿಧ ಭಾಷೆಗಳಲ್ಲಿ ಕಾವ್ಯ, ನಾಟಕ, ಕಾದಂಬರಿ ಮತ್ತು ಕತೆಗಳನ್ನು ಅನೇಕರು ರಚಿಸಿದ್ದಾರೆ. ಇಂದಿಗೂ ಸಹ ರಾಮಾಯಣ ಮಹಾಕಾವ್ಯವು ಜಗತ್ತಿನಲ್ಲಿ ಸತ್ವಯುತವಾದ ಮತ್ತು ಮೌಲ್ಯಯುತವಾದ ಸಾಹಿತ್ಯ ಸೃಷ್ಟಿಗೆ ಪ್ರೇರಣೆಯಾಗಿದೆ.
ರಾಮಾಯಣವು ಭಾರತೀಯರ ಜೀವನಚರಿತ್ರೆಯನ್ನು ಮತ್ತು ಸಂಸ್ಕೃತಿಯನ್ನು ಪ್ರತಿಬಿಂಬಿಸುವ ಮಹಾಕಾವ್ಯವಾಗಿದೆ. ಮಹರ್ಷಿ ವಾಲ್ಮೀಕಿಯು ರಾಮಾಯಣದಲ್ಲಿ ಭರತಖಂಡದಲ್ಲಿನ ಅರಣ್ಯಗಳು, ಪರ್ವತಗಳು, ನದಿಗಳು, ಸರೋವರಗಳು, ಸಮುದ್ರಗಳು ಮತ್ತು ಜಲಪಾತಗಳ ಪ್ರಕೃತಿ ಸೌಂದರ್ಯವನ್ನು ವರ್ಣಿಸಿದ್ದಾರೆ. ವಿವಿಧ ಪಾತ್ರಗಳ ಮುಖಾಂತರ ಕೌಟುಂಬಿಕ ಮೌಲ್ಯಗಳು ಮತ್ತು ಆದರ್ಶ ವ್ಯಕ್ತಿಯ ಗುಣಲಕ್ಷಣಗಳನ್ನು ಮನೋಜ್ಞವಾಗಿ ಚಿತ್ರಿಸಿದ್ದಾರೆ.

ಮಹರ್ಷಿ ವಾಲ್ಮೀಕಿ ಜಯಂತಿ 2021: ಇತಿಹಾಸ ಮತ್ತು ಮಹತ್ವ ಭಾರತದ ಮೊಟ್ಟ ಮೊದಲ ಮಹಾಕಾವ್ಯ ರಾಮಾಯಣವನ್ನು ರಚಿಸಿದ ಮಹರ್ಷಿ ವಾಲ್ಮೀಕಿ ಅವರ ಜಯಂತಿಯನ್ನು ಅಕ್ಟೋಬರ್ 20ರಂದು ಆಚರಿಸಲಾಗುತ್ತಿದೆ.
ಸಂಸ್ಕೃತದಲ್ಲಿ ರಚಿಸಲಾಗಿರುವ ರಾಮಾಯಣ ಮಹಾಕಾವ್ಯವು 24,000 ಶ್ಲೋಕಗಳನ್ನು ಹೊಂದಿದೆ. ವಾಲ್ಮೀಕಿಯು ಕವಿಕುಲದ ಗುರುವಾಗಿ ಹಲವಾರು ಕವಿಗಳಿಗೆ ಮತ್ತು ಸಾಹಿತಿಗಳಿಗೆ ಸ್ಫೂರ್ತಿಯ ಸೆಲೆಯಾಗಿದ್ದಾರೆ.
ವಾಲ್ಮೀಕಿ ರಾಮಾಯಣದ ಆಧಾರದ ಮೇಲೆ ವಿವಿಧ ಭಾಷೆಗಳಲ್ಲಿ ಕಾವ್ಯ, ನಾಟಕ, ಕಾದಂಬರಿ ಮತ್ತು ಕತೆಗಳನ್ನು ಅನೇಕರು ರಚಿಸಿದ್ದಾರೆ. ಇಂದಿಗೂ ಸಹ ರಾಮಾಯಣ ಮಹಾಕಾವ್ಯವು ಜಗತ್ತಿನಲ್ಲಿ ಸತ್ವಯುತವಾದ ಮತ್ತು ಮೌಲ್ಯಯುತವಾದ ಸಾಹಿತ್ಯ ಸೃಷ್ಟಿಗೆ ಪ್ರೇರಣೆಯಾಗಿದೆ.
ರಾಮಾಯಣವು ಭಾರತೀಯರ ಜೀವನಚರಿತ್ರೆಯನ್ನು ಮತ್ತು ಸಂಸ್ಕೃತಿಯನ್ನು ಪ್ರತಿಬಿಂಬಿಸುವ ಮಹಾಕಾವ್ಯವಾಗಿದೆ. ಮಹರ್ಷಿ ವಾಲ್ಮೀಕಿಯು ರಾಮಾಯಣದಲ್ಲಿ ಭರತಖಂಡದಲ್ಲಿನ ಅರಣ್ಯಗಳು, ಪರ್ವತಗಳು, ನದಿಗಳು, ಸರೋವರಗಳು, ಸಮುದ್ರಗಳು ಮತ್ತು ಜಲಪಾತಗಳ ಪ್ರಕೃತಿ ಸೌಂದರ್ಯವನ್ನು ವರ್ಣಿಸಿದ್ದಾರೆ. ವಿವಿಧ ಪಾತ್ರಗಳ ಮುಖಾಂತರ ಕೌಟುಂಬಿಕ ಮೌಲ್ಯಗಳು ಮತ್ತು ಆದರ್ಶ ವ್ಯಕ್ತಿಯ ಗುಣಲಕ್ಷಣಗಳನ್ನು ಮನೋಜ್ಞವಾಗಿ ಚಿತ್ರಿಸಿದ್ದಾರೆ.
ರಾಮಾಯಣ ಮಹಾಕಾವ್ಯದಲ್ಲಿ ಮಾತೃದೇವೋಭವ, ಪಿತೃದೇವೋಭವ, ಆಚಾರ್ಯದೇವೋಭವ, ಅತಿಥಿದೇವೋಭವದಂತಹ ಮೌಲ್ಯಗಳನ್ನು ಎತ್ತಿ ಹಿಡಿಯಲಾಗಿದೆ. ಮಮತೆ, ಸಮತೆ, ಭ್ರಾತೃತ್ವ, ತ್ಯಾಗ, ದೇಶಪ್ರೇಮ, ಅಳಿಲು ಸೇವೆ, ಪಿತೃವಾಕ್ಯ ಪರಿಪಾಲನೆ ಮುಂತಾದ ಹಲವಾರು ಮಾನವೀಯ ಮತ್ತು ಸಾಮಾಜಿಕ ಮೌಲ್ಯಗಳನ್ನು ಪ್ರತಿಪಾದಿಸಲಾಗಿದೆ.
ಇಂತಹ ಅನನ್ಯವಾದ ರಾಮಾಯಣ ಮಹಾಕಾವ್ಯವನ್ನು ರಚಿಸಿದ ಮಹರ್ಷಿ ವಾಲ್ಮೀಕಿಯನ್ನು 'ಕವಿಗಳ ಕವಿ' ಎಂದು ಮಹಾಕವಿ ಕಾಳಿದಾಸ ಗೌರವಿಸಿದ್ದಾನೆ. ಭಾರತದ ಪ್ರಥಮ ಪ್ರಧಾನ ಮಂತ್ರಿಯಾಗಿದ್ದ ಜವಾಹರಲಾಲ್ ನೆಹರು ಅವರು ರಚಿಸಿರುವ 'ಡಿಸ್ಕವರಿ ಆಫ್ ಇಂಡಿಯಾ' ಪುಸ್ತಕದಲ್ಲಿ, ಜನರ ಮನಸ್ಸಿನ ಮೇಲೆ ಅಗಾಧವಾದ ಪ್ರಭಾವವನ್ನು ಬೀರಿರುವ ಮಹಾಕಾವ್ಯ ರಾಮಾಯಣ ಎಂಬುದಾಗಿ ಉಲ್ಲೇಖಿಸಿದ್ದಾರೆ.
ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ರಾಷ್ಟ್ರಕವಿ ಕುವೆಂಪುರವರು, ''ರಾಮಾಯಣದಂತಹ ಮಹಾಕಾವ್ಯ ಮತ್ತು ವಾಲ್ಮೀಕಿಯಂತಹ ಮಹಾಕವಿ ನಮಗೆ ದೊರೆತಿರುವುದು ಭುವನದ ಭಾಗ್ಯ,'' ಎಂದು ಬಣ್ಣಿಸಿದ್ದಾರೆ.
ಜಗತ್ತಿನ ಪ್ರಸಿದ್ಧ ಲೇಖಕ ಮತ್ತು ವಿಮರ್ಶಕನಾದ ಟಿ.ಎಸ್. ಎಲಿಯೆಟ್, ''ನೂರು ವರ್ಷಗಳಿಗೊಮ್ಮೆ ಸಾಹಿತ್ಯ ಮತ್ತು ಸಾಹಿತಿಗಳನ್ನು ವಿಮರ್ಶೆ ಮಾಡುವ ಮತ್ತು ತುಲನೆ ಮಾಡುವ ಕಾಲ ಬರುತ್ತದೆ. ಆಗ ಸಾಹಿತ್ಯ ಮತ್ತು ಸಾಹಿತಿಗಳ ಜನಪ್ರಿಯತೆಯ ಸ್ಥಾನಮಾನ ಏರುಪೇರಾಗುತ್ತದೆ,'' ಎಂದು ಅಭಿಪ್ರಾಯ ಪಡುತ್ತಾನೆ. ಆದರೆ ರಾಮಾಯಣ ಮಹಾಕಾವ್ಯ ಮತ್ತು ಅದರ ಕರ್ತೃ ಮಹರ್ಷಿ ವಾಲ್ಮೀಕಿಯು ಅನಾದಿಕಾಲದಿಂದ ವರ್ತಮಾನದವರೆಗೂ ನಿರಂತರವಾಗಿ ಅಪಾರ ಜನಪ್ರಿಯತೆಯನ್ನು ಹೊಂದಿದ್ದು ಜನಮಾನಸದಲ್ಲಿ ಶಾಶ್ವತ ಸ್ಥಾನವನ್ನು ಪಡೆದಿದ್ದಾರೆ. ಇದಕ್ಕೆ ಪೂರಕವಾಗಿ ವಾಲ್ಮೀಕಿ ರಾಮಾಯಣದ ಪ್ರಾರಂಭದಲ್ಲಿ ಈ ರೀತಿ ಉಲ್ಲೇಖಿಸಲಾಗಿದೆ.
ವಾಲ್ಮೀಕಿ ಜಯಂತಿ ಶುಭ ಮುಹೂರ್ತ:
ಪೂರ್ಣಿಮೆಯು ಅಕ್ಟೋಬರ್ 19ರಂದು ಸಂಜೆ 07.03ಕ್ಕೆ ಶುರುವಾಗಲಿದೆ ಅದು ಅಕ್ಟೋಬರ್ 20ರ ರಾತ್ರಿ 08.26ಕ್ಕೆ ಮುಕ್ತಾಯಗೊಳ್ಳಲಿದೆ. ಅಂದು ಶೋಭಾ ಯಾತ್ರಾ, ಭಜನೆಯನ್ನು ಕೈಗೊಳ್ಳಲಾಗುತ್ತದೆ.
ಮಹರ್ಷಿ ವಾಲ್ಮೀಕಿಯ ಜನನ ಮತ್ತು ಪಾಲನೆ:
ವಾಲ್ಮೀಕಿಯ ಜೀವನದ ಕುರಿತಾಗಿ ಅನೇಕ ದಂತಕಥೆಗಳಿವೆ. ಅದರಲ್ಲಿ ಒಂದು ಕಥೆಯ ಪ್ರಕಾರ, ವಾಲ್ಮೀಕಿ ಋಷಿಯಾಗುವ ಮೊದಲು ರತ್ನಾಕರ . ನಾರದನ ಉಪದೇಶದಿಂದ ರತ್ನಾಕರನಿಗೆ ಜ್ಞಾನೋದಯವಾಯಿತೆಂದು ಹೇಳಲಾಗುತ್ತದೆ. ವಾಲ್ಮೀಕಿ ಮಹರ್ಷಿಗಳು ಪ್ರಚೇತಸ ಮುನಿಯ ಮಗ. ಹೀಗಾಗಿ ಅವರಿಗೆ 'ಪ್ರಾಚೇತಸ' ಎಂಬ ಹೆಸರಿದೆ.
ಪರಮಾತ್ಮನನ್ನು ಕುರಿತು ಬಹಳ ವರ್ಷಗಳ ಕಾಲ ತಪಸ್ಸು ಮಾಡುತ್ತಿದ್ದಾಗ ಅವರ ಸುತ್ತ ಹುತ್ತ ಬೆಳೆದಿತ್ತು. ಹುತ್ತ(ಸಂಸ್ಕೃತದಲ್ಲಿ-ವಲ್ಮೀಕ)ವನ್ನು ಭೇದಿಸಿಕೊಂಡು ಹೊರಗೆ ಬಂದಿದ್ದರಿಂದ 'ವಾಲ್ಮೀಕಿ' ಎಂಬ ಹೆಸರು ಬಂತು ಎಂದು ಹೇಳುತ್ತಾರೆ.
ದರೋಡೆಕೋರ ಮಹರ್ಷಿಯಾಗಿದ್ದು ಹೀಗೆ:
ಒಮ್ಮೆ ದೇವರುಗಳಿಗೆ ವಾಲ್ಮೀಕಿಯನ್ನು ಸರಿ ದಾರಿಗೆ ತಂದು ಕಾಡಿನ ಜನರನ್ನು ಆತನಿಂದ ರಕ್ಷಿಸಬೇಕೆಂದು ಯೋಚಿಸಿದರು. ಆದ್ದರಿಂದ, ಒಮ್ಮೆ ನಾರದ ಮುನಿ ಕಾಡಿನಲ್ಲಿ ಹಾದುಹೋಗುತ್ತಿದ್ದಾಗ, ವಾಲ್ಮೀಕಿ ಅವನನ್ನು ಸೆರೆಯಲ್ಲಿಟ್ಟುಕೊಂಡನು. ಆಗ ನಾರದ ಮುನಿಗಳು ವಾಲ್ಮೀಕಿ ಮಹರ್ಷಿಗಳನ್ನು ಕುರಿತು ನೀವು ಮಾಡುತ್ತಿರುವುದು ಪಾಪದ ಕೃತ್ಯ, ನಿಮ್ಮ ಪಾಪದ ಪಾಲುದಾರಿಕೆಯಲ್ಲಿ ನಿಮ್ಮ ಕುಟುಂಬವೂ ಕೂಡ ಸೇರಿಕೊಳ್ಳುತ್ತದೆ.
ಸಿಕ್ಕ ಸಿಕ್ಕವರನ್ನು ಸೆರೆಯಲ್ಲಿಟ್ಟು ಹಿಂಸಿಸುವ ಬದಲು ನಿಮ್ಮ ಕುಟುಂಬವನ್ನು ಸೆರೆಯಲ್ಲಿಟ್ಟು ನೋಡಿ ಅವರು ಸೆರೆವಾಸದಲ್ಲಿರಲು ಒಪ್ಪುತ್ತಾರೆಯೇ ನೋಡಿ ಎಂದು ಹೇಳಿದರು. ಆಗ ವಾಲ್ಮೀಕಿ ಕುಟುಂಬದ ಎಲ್ಲಾ ಸದಸ್ಯರನ್ನು ಕುರಿತು ನನ್ನ ಪಾಪದ ಪಾಲುದಾರರಾಗುವಿರೇ ಎಂದು ಕೇಳಿದಾಗ ಎಲ್ಲರೂ ಅವರನ್ನು ನಿರಾಕರಿಸುತ್ತಾರೆ.
ಇದು ವಾಲ್ಮೀಕಿಗೆ ಪ್ರಪಂಚದ ಬಗ್ಗೆ ತಿಳಿದುಕೊಳ್ಳಲು ಕಾರಣವಾಯಿತು ಮತ್ತು ನಂತರ ನಾರದರ ಬಳಿ ತಾನು ಮಾಡಿದ ಪಾಪಕ್ಕೆ ಮೋಕ್ಷವನ್ನು ಕೇಳಿದರು. ಆಗ ನಾರದರು ಅವನಿಗೆ ರಾಮ ಎಂಬ ಮಂತ್ರವನ್ನು ಪಠಿಸುವಂತೆ ಸಲಹೆಯನ್ನು ನೀಡಿದನು.
ನಾರದರ ಮಾತಿನಿಂದ ಪ್ರಭಾವಿತನಾದ ವಾಲ್ಮೀಕಿ ತಪಸ್ಸಿಗೆ ಕುಳಿತುಕೊಂಡು ರಾನ ನಾಮವನ್ನು ಜಪಿಸಲು ಆರಂಭಿಸಿದರು. ಅಂದಿನಿಂದ ರತ್ನಾಕರ ಎನ್ನುವ ಕ್ರೂರಿ ಮಹರ್ಷಿ ವಾಲ್ಮೀಕಿಯಾಗಿ ಪರಿವರ್ತನೆ ಹೊಂದಿದರು.












Click it and Unblock the Notifications