ಭಾರತದಲ್ಲಿ ಟಾಟಾ ನೆಕ್ಸಾನ್ ಮತ್ತು ಮಹೀಂದ್ರಾ XUV400 ಇವಿಗೆ ಪ್ರತಿಸ್ಪರ್ಧಿಯಾಗಿ ಎಂಟ್ರಿ ಕೊಡಲಿದೆ ಈ ವಿದೇಶಿ ಐಷಾರಾಮಿ ಕಾರು
ಇದೀಗ ಆಟೋಮೊಬೈಲ್ ಕ್ಷೇತ್ರಕ್ಕೆ ಬಂದರೆ ಎಲೆಕ್ಷ್ಟ್ರಿಕ್ ವಾಹನಗಳದ್ದೇ ದರ್ಬಾರ್ ಆಗಿದ್ದು, ಭಾರೀ ಸ್ಪರ್ಧೆಯೂ ಏರ್ಪಟ್ಟಿದೆ. ಅದು ಎಷ್ಟರ ಮಟ್ಟಿಗೆ ಅಂದರೆ ತಾವೇನು ಕಡಿಮೆಯಿಲ್ಲವೆಂಬಂತೆ ಒಂದಕ್ಕಿಂತ ಒಂದು ಕಂಪನಿಗಳು ವಿಶಿಷ್ಟ ವಿನ್ಯಾಸದಲ್ಲಿ, ಉತ್ತಮ ಸೌಲಭ್ಯಗಳ್ಳುವ, ಕಡಿಮೆ ಬೆಲೆಯಲ್ಲಿ ಎಲೆಕ್ಟ್ರಿಕ್ ಕಾರು, ಬೈಕ್‌ಗಳನ್ನು ಮಾರುಕಟ್ಟೆಗೆ ಬಿಡುತ್ತಲೇ ಇವೆ. ಇದೀಗ ವಿದೇಶಿ ಕಂಪನಿಯೊಂದು ಕಡಿಮೆ ಬೆಲೆಯಲ್ಲಿ ಐಷಾರಾಮಿ ಎಲೆಕ್ಟ್ರಿಕ್ ಕಾರು ಬಿಡುಗಡೆ ಮಾಡಲು ಮುಂದಾಗಿದೆ. ಹಾಗಾದರೆ ಆ ಕಾರು ಯಾವುದು & ವಿಶೇಷತೆಗಳೇನು ಎಂದು ಇಲ್ಲಿ ತಿಳಿಯಿರಿ.
ವಿನ್ಫಾಸ್ಟ್ ಕಂಪನಿ ಜಾಗತಿಕ ಮಾರುಕಟ್ಟೆಯಲ್ಲಿ ಹೊಸ ಎಲೆಕ್ಟ್ರಿಕ್ ಕಾರುಗಳ ಮೂಲಕ ಹವಾ ಕ್ರಿಯೆಟ್ ಮಾಡುತ್ತಿದ್ದು, ಇದೀಗ ಭಾರತದಲ್ಲೂ ಈ ಕಂಪನಿ ಹೊಸ ವಿನ್ಯಾಸದ ಎಲೆಕ್ಟ್ರಿಕ್ ಕಾರುಗಳನ್ನು ಬಿಡುಗಡೆ ಮಾಡಲು ಮುಂದಾಗಿದೆ. ವಿಯೆಟ್ನಾಂ ಮೂಲದ ಜನಪ್ರಿಯ ಎಲೆಕ್ಟ್ರಿಕ್ ವಾಹನ ತಯಾರಕ ಕಂಪನಿ ಆಗಿರುವ ವಿನ್ಫಾಸ್ಟ್ ಶೀಘ್ರದಲ್ಲೇ ಹೊಸ ಹೊಸ ಇವಿ ಕಾರು ಮಾದರಿಗಳನ್ನು ಬಿಡುಗಡೆ ಮಾಡಲು ಸಿದ್ಧತೆ ನಡೆಸಿದೆ ಎನ್ನುವ ಮಾಹಿತಿ ಲಭ್ಯವಾಗಿದೆ.

ಭಾರತದಲ್ಲಿ ಇವಿ ಕಾರುಗಳ ಉತ್ಪಾದನೆ ಮತ್ತು ಮಾರಾಟಕ್ಕಾಗಿ ಈಗಾಗಲೇ ವಿವಿಧ ಹಂತದ ಅಧ್ಯಯನ ನಡೆಸುತ್ತಿದ್ದು, ಇದೀಗ ಹೊಸ ಇವಿ ಕಾರುಗಳ ರೋಡ್ ಟೆಸ್ಟಿಂಗ್ ಪ್ರಕ್ರಿಯೆಗೆ ಚಾಲನೆ ನೀಡಿದೆ. ವಿನ್ಫಾಸ್ಟ್ ಕಂಪನಿಯು ಮಧ್ಯಮ ಕ್ರಮಾಂಕದ ಇವಿ ಕಾರುಗಳ ಮೂಲಕ ಭಾರೀ ಸಂಚಲ ಮೂಡಿಸುತ್ತಿದ್ದು, ಭಾರತದಲ್ಲಿ ಮೊದಲ ಹಂತವಾಗಿ VF e34 ಎಲೆಕ್ಟ್ರಿಕ್ ಎಸ್‌ಯುವಿ ಕಾರು ಬಿಡುಗಡೆ ಮಾಡಲು ಮುಂದಾಗಿದೆ.
ಮುಂಬರಲಿರುವ ವಿನ್ಫಾಸ್ಟ್ನ ಈ ಹೊಸ ಕಾರು ಟಾಟಾ ನೆಕ್ಸಾನ್ ಇವಿ ಮತ್ತು ಮಹೀಂದ್ರಾ XUV400 ಇವಿ ಕಾರುಗಳಿಗೆ ಪೈಪೋಟಿ ನೀಡುವುದರಲ್ಲಿ ಯಾವುದೇ ಅನುಮಾನವಿಲ್ಲದ ಎನ್ನುವ ಮಾಹಿತಿ ಲಭ್ಯವಾಗಿದೆ. ಇನ್ನು ಈ ಕಾರು ಹೊಸ ವಿನ್ಯಾಸದಲ್ಲಿ, ಉತ್ತಮ ಸೌಲಭ್ಯಗಳನ್ನು ಒಳಗೊಂಡಿರಲಿದೆ ಮತ್ತು ಉತ್ತಮ ಪರ್ಫಾಮೆನ್ಸ್‌ನೊಂದಿಗೆ 350ರಿಂದ 400 ಕಿಲೋ ಮೀಟರ್ ಮೈಲೇಜ್ ಕೊಡುವ ಬ್ಯಾಟರಿ ಆಯ್ಕೆಯನ್ನು ಹೊಂದಿರಲಿದೆ ಎಂದು ತಿಳಿದುಬಂದಿದೆ.
VF e34 ಎಲೆಕ್ಟ್ರಿಕ್ ಕಾರು ಹೊಸ ವಿನ್ಯಾದಲ್ಲಿ ಬಿಡುಗಡೆ ಆಗಲಿದ್ದು, ಇದೀಗ ಹೊಸ ಇವಿ ಕಾರುಗಳನ್ನು ವಿನ್ಫಾಸ್ಟ್ ಕಂಪನಿಯು ಸಿಬಿಯು ಆಮದು ನೀತಿಯಡಿ ಮಾರಾಟ ಮಾಡಲು ನಿರ್ಧರಿಸಿದೆ. ಆದ್ದರಿಂದ ಇದನ್ನು ಇದೇ 2024ರ ಅಂತ್ಯದಲ್ಲಿ ಅಥವಾ 2025ರ ಆರಂಭದಲ್ಲಿ ಬಿಡುಗಡೆ ಮಾಡಲಿದ್ದು, ಗ್ರಾಹಕರಿಗೆ ಕೈಗೆಟಕುವ ಬೆಲೆಯಲ್ಲಿ ಸಿಗಲಿದ ಎಂದು ಹೇಳಲಾಗುತ್ತಿದೆ.
ಇದು ಭಾರತದಲ್ಲಿ ಪೂರ್ಣಪ್ರಮಾಣದ ಕಾರ್ಯಾಚರಣೆ ನಡೆಸಲಿದೆ. ಅಲ್ಲದೆ, ಎಲೆಕ್ಟ್ರಿಕ್ ಕಾರುಗಳ ಉತ್ಪಾದನೆಗಾಗಿ ಭಾರೀ ಪ್ರಮಾಣದ ಹೂಡಿಕೆಯನ್ನು ಘೋಷಣೆ ಮಾಡುತ್ತಿದೆ. ಇದಕ್ಕಾಗಿ ವಿನ್ಫಾಸ್ಟ್ ತಮಿಳುನಾಡು ಸರ್ಕಾರದೊಂದಿಗೆ ಈಗಾಗಲೇ ಮಹತ್ವದ ಒಪ್ಪಂದ ಮಾಡಿಕೊಂಡಿದ್ದು, ಹೊಸ ಎಲೆಕ್ಟ್ರಿಕ್ ವಾಹನ ಉತ್ಪಾದನಾ ಘಟಕ ನಿರ್ಮಾಣಕ್ಕೆ ಚಾಲನೆ ನೀಡಿದೆ ಎನ್ನುವ ಮಾಹಿತಿ ಬಹಿರಂಗವಾಗಿದೆ.
ಮೊದಲ ಹಂತದ ಘಟಕದ ಮೂಲಕ ವಾರ್ಷಿಕವಾಗಿ 1.50 ಲಕ್ಷ ಯುನಿಟ್ ಎಲೆಕ್ಟ್ರಿಕ್ ಕಾರುಗಳನ್ನು ಉತ್ಪಾದಿಸುವ ಗುರಿಯನ್ನು ಹೊಂದಿದ್ದು, ಇದಕ್ಕಾಗಿ ಮೊದಲ ಹಂತದಲ್ಲಿಯೇ 4,165 ಕೋಟಿ ರೂಪಾಯಿ ಹೂಡಿಕೆ ಮಾಡುತ್ತಿದ್ದು, ಈ ಮೂಲಕ ಸ್ಥಳೀಯವಾಗಿ 3,500 ಉದ್ಯೋಗಗಳನ್ನು ಸೃಷ್ಠಿಸುವ ಭರವಸೆ ನೀಡಿದೆ. ಈ ಮೂಲಕ ಕಂಪನಿಯು ಮಧ್ಯಮ ಕ್ರಮಾಂಕದ ಕಾರುಗಳು ಮಾತ್ರವಲ್ಲದೆ, ಐಷಾರಾಮಿ ಇವಿ ಕಾರುಗಳನ್ನು ಸಹ ಪರಿಚಯಿಸಲಿದ ಎಂದು ತಿಳಿದುಬಂದಿದೆ.
ಒಟ್ಟಿನಲ್ಲಿ ಎಲೆಕ್ಟ್ರಿಕ್ ಕಾರುಗಳು ಮಾರುಕಟ್ಟೆಯಲ್ಲಿ ಸ್ಪರ್ಧೇಯಲ್ಲಿ ಕ್ರಾಂತಿಯನ್ನೇ ಸೃಷ್ಟಿಸಿವೆ. ಗ್ರಾಹಕರನ್ನು ಸೆಳೆಯಲು ಉತ್ತಮ ಸೌಲಭ್ಯಗಳುಳ್ಳ ಎಲೆಕ್ಟ್ರಿಕ್ ಕಾರುಗಳನ್ನು ಕಡಿಮೆ ಬೆಲೆಯಲ್ಲಿ ಮಾರಾಟ ಮಾಡುವ ಮೂಲಕ ಪೈಪೋಟಿಗೆ ಒಳಗಾಗಿವೆ.












Click it and Unblock the Notifications