Mobile: ಕೈ ಗೆಟಕುವ ದರದಲ್ಲಿ ಲಾಂಚ್ ಆಗಿದೆ ವಿವೋ ಫೋನ್: ಇದರ ಫೀಚರ್ಸ್ ನೋಡಿದರೆ ತೊಗೊಳುದು ಗ್ಯಾರಂಟಿ
ಮಾರುಕಟ್ಟೆಯಲ್ಲಿ ಹಲವು ಬಗೆಯ ಫೋನ್‌ಗಳು ಬರುತ್ತವೆ. ಒಂದಕ್ಕಿಂತ ಒಂದು ಆಕರ್ಷಕ ರೂಪದಲ್ಲಿ ಗ್ರಾಹಕರನ್ನು ಆಕರ್ಷಿಸುತ್ತವೆ. ಈ ಫೋನ್‌ಗಳು ದಿನವೂ ಹೊಸ ತಂತ್ರಜ್ಞಾನದೊಂದಿಗೆ ಗ್ರಾಹಕರನ್ನು ಸೆಳೆಯುತ್ತಿವೆ. ಈ ಪಟ್ಟಿಯಲ್ಲಿ ಚೀನಾ ಕಂಪನಿಗಳಿಗೆ ಅಗ್ರ ಸ್ಥಾನ. ದಿನೇ ದಿನೇ ಚೀನಾ ಕಂಪನಿಗಳು ಹೊಸ ಹೊಸ ತಂತ್ರಜ್ಞಾನವನ್ನು ಮೈಗೂಡಿಸಿಕೊಂಡು ಬರಲಿದೆ.
Vivo Y200 Pro 5G ಭಾರತೀಯ ಮಾರುಕಟ್ಟೆಯಲ್ಲಿ ಸದ್ದು ಮಾಡಲಿದೆ. ಈ ವಿವೋ ಫೋನ್ ಲುಕ್ ಸಖತ್ ಆಗಿದೆ. ವಿವೋ ಸ್ಮಾರ್ಟ್‌ಫೋನ್ ಅಮ್ಲೋಡ್ ಡಿಸ್‌ಪ್ಲೇ ಹೊಂದಿದೆ. ಈ ಫೋನ್ ಅಸಲಿಗೆ Vivo Y200, Vivo Y200e ಗೆ ಹೋಲಿಸಿದರೆ ಈ ಫೋನ್ ಹಲವು ಪ್ರೀಮಿಯಂ ಆಗಿದೆ. Vivo ತನ್ನ ಸಾಮಾಜಿಕ ಮಾಧ್ಯಮ ಹ್ಯಾಂಡಲ್ ಮೂಲಕ ಈ ಫೋನ್‌ನ ಬೆಲೆಯನ್ನು ಬಿಡುಗಡೆ ಮಾಡಿದೆ. ಇದು ಆನ್‌ಲೈನ್ ಮತ್ತು ಆಫ್‌ಲೈನ್‌ನಲ್ಲೂ ಲಭ್ಯವಿದೆ.

ಸ್ಟೋರೇಜ್ ಕ್ಯಾಪಿಸಿಟಿ ಎಷ್ಟು?
ವಿವೋ ಕಂಪನಿಯ ನೂತನ ಮೊಬೈಲ್ 8ಜಿಬಿ ರ್ಯಾಮ್ + 128 ಜಿಬಿ ಇಂಟರ್ನಲ್ ಸ್ಟೋರೇಜ್ ಹೊಂದಿದೆ. ಫೋನ್‌ನ ಬೆಲೆ ರೂ 24,999 ಮತ್ತು ಇ-ಕಾಮರ್ಸ್ ವೆಬ್‌ಸೈಟ್ ಫ್ಲಿಪ್‌ಕಾರ್ಟ್ ಮತ್ತು ವಿವೋದ ಅಧಿಕೃತ ಇ-ಸ್ಟೋರ್‌ಗಳಲ್ಲಿ ಲಭ್ಯ. ಆಫ್‌ಲೈನ್ ಸ್ಟೋರ್‌ಗಳ ಮೂಲಕ ಮಾರಾಟಕ್ಕೆ ಲಭ್ಯವಾಗಲಿದೆ. ಆನ್‌ಲೈನ್ ಖರೀದಿ ಮಾಡಿದಾಗ ಈ ಪೋನ್ ಮೇಲೆ ಆಕರ್ಷಕ ಡಿಸ್ಕಂಟ್ ಲಭ್ಯವಿದೆ. ಎಸ್‌ಬಿಐ, ಐಡಿಎಫ್‌ಸಿ ಫಸ್ಟ್ ಬ್ಯಾಂಕ್, ಫೆಡರಲ್ ಬ್ಯಾಂಕ್ ಕಾರ್ಡ್‌ಗಳಿಂದ ಖರೀದಿಸಿದಾಗ 2,500 ರೂಪಾಯಿಗಳ ತ್ವರಿತ ಕ್ಯಾಶ್‌ಬ್ಯಾಕ್ ನೀಡಲಾಗುತ್ತದೆ.
Vivo Y200 Pro ನ ವೈಶಿಷ್ಟ್ಯಗಳು
ಈ ಬಜೆಟ್ ಫ್ರೆಂಡ್ಲಿ ಕ್ವಾಲ್ಕೊಮ್ ಸ್ನ್ಯಾಪ್ ಡ್ರ್ಯಾಗನ್ 695 ಪ್ರೊಸೆಸರ್ ಹೊಂದಿದೆ. ಈ Vivo ಸ್ಮಾರ್ಟ್ಫೋನ್ 6.78 ಇಂಚಿನ 3D ಕರ್ವ್ಡ್ ಅಮ್ಲೋಡ್ ಡಿಸ್‌ಪ್ಲೇಯೊಂದಿಗೆ ಬರುತ್ತದೆ. ಫೋನ್‌ನಲ್ಲಿ ಫುಲ್ ಎಚ್‌ಡಿ ರೆಸಲ್ಯೂಶನ್ ಅನ್ನು ಬೆಂಬಲಿಸಲಾಗುತ್ತದೆ. ಆಂಡ್ರಾಯಡ್ 14 ಆಧಾರಿತ ಫಂಟೆಕ್ OS 14 ನಲ್ಲಿ ಫೋನ್ ಕಾರ್ಯನಿರ್ವಹಿಸುತ್ತದೆ.
ಕ್ಯಾಮೆರಾ ಹೇಗಿದೆ?
ಈ ಸ್ಮಾರ್ಟ್‌ಫೋನ್‌ನ ಹಿಂಭಾಗದಲ್ಲಿ ಡ್ಯುಯಲ್ ಕ್ಯಾಮೆರಾ ಸೆಟಪ್ ಲಭ್ಯವಿದೆ. ಫೋನ್ 64MP ಮುಖ್ಯ OIS ಕ್ಯಾಮೆರಾವನ್ನು ಹೊಂದಿರುತ್ತದೆ. ಇದಲ್ಲದೇ 2ಎಂಪಿ ಡೆಪ್ತ್ ಸೆನ್ಸಾರ್ ಅನ್ನು ನೀಡಲಾಗಿದೆ. ಇದು ಸೆಲ್ಫಿ ಮತ್ತು ವೀಡಿಯೊ ಕರೆಗಾಗಿ 16MP ಕ್ಯಾಮೆರಾವನ್ನು ಹೊಂದಿದೆ. ಈ ಸ್ಮಾರ್ಟ್‌ಫೋನ್ 5000mAh ಬ್ಯಾಟರಿ ಹೊಂದಿದ್ದು, 44 ವ್ಯಾಟ್ ವೈಯರ್ಡ್ ಫಾಸ್ಟ್ ಚಾರ್ಜಿಂಗ್ ಬೆಂಬಲವನ್ನು ಹೊಂದಿದೆ. ಈ ಮೊಬೈಲ್ ಯುಎಸ್‌ಬಿ ಟೈಪ್ ಸಿ ಚಾರ್ಜಿಂಗ್ ಬೆಂಬಲವನ್ನು ಹೊಂದಿದೆ.
-
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
ನಮ್ಮ ಮೆಟ್ರೋ-ಬಾಗ್ಮನೆ ಗ್ರೂಪ್ ಮಧ್ಯೆ ₹40 ಕೋಟಿ ಒಪ್ಪಂದ: ಮೆಟ್ರೋ ನಿಲ್ದಾಣಕ್ಕೆ 'ಬಾಗ್ಮನೆ' ಹೆಸರು -
Pratham: ನಟ ಪ್ರಥಮ್ ಬೆಂಗಳೂರು ತೊರೆಯಲು ದರ್ಶನ್ ಅಭಿಮಾನಿಗಳ ಗಲಾಟೆ ಕಾರಣವೇ? ಅಸಲಿ ಕಾರಣ ಬಿಚ್ಚಿಟ್ಟ ಒಳ್ಳೆ ಹುಡುಗ -
ಬೆಂಗಳೂರಲ್ಲಿ ಸ್ವಚ್ಛತಾ ಅಭಿಯಾನಕ್ಕೆ ಚುರುಕು:12 ಬ್ಲ್ಯಾಕ್ ಸ್ಪಾಟ್ ನಿರ್ಮೂಲನೆ, 35 ಲೋಡ್ ತ್ಯಾಜ್ಯ ತೆರವು -
ದಾವಣಗೆರೆಯಲ್ಲಿ ಹೈಡ್ರಾಮಾ: ಪ್ರದೀಪ್ ಈಶ್ವರ್ ಪ್ರಚಾರದ ವೇಳೆ ಚಪ್ಪಲಿ, ಪೊರಕೆ ತೋರಿಸಿದ ಬಿಜೆಪಿ ಕಾರ್ಯಕರ್ತರು -
ಬೆಂಗಳೂರಿನ ಫುಟ್ಪಾತ್ಗಳ ದುರಸ್ತಿಗೆ ಶ್ರಮಿಸಿದ್ದ ಕೆನಡಾ ಪ್ರಜೆ ಈಗ ಮಿಜೋರಾಂಗೆ ಶಿಫ್ಟ್: 'ಬೆಂಗಳೂರಿಗೆ ವಿದಾಯ' ಎಂದ Vlogger -
Vijay Mallya: ವಿಜಯ್ ಮಲ್ಯ ಆರ್ಸಿಬಿಗೆ ಇಂಗ್ಲೀಷ್ ಪದಗಳಲ್ಲಿ ಕನ್ನಡದ ವಿಶೇಷ ಸಂದೇಶ: ಭಾರೀ ವೈರಲ್ -
ಸಕಲೇಶಪುರ: ಬೆಟ್ಟದ ಭೈರವೇಶ್ವರ ದೇವಸ್ಥಾನದಲ್ಲಿ ಪ್ರೀ-ವೆಡ್ಡಿಂಗ್ ಶೂಟ್ ವೇಳೆ ಸ್ಥಳೀಯರಿಂದ ಹಲ್ಲೆ -
ಐಪಿಎಲ್ 2026: ಆರ್ಸಿಬಿ-ಎಸ್ಆರ್ಎಚ್ ಪಂದ್ಯದ ಸಮಯ, ನೇರಪ್ರಸಾರ, ಸಂಪೂರ್ಣ ತಂಡಗಳ ವಿವರ ತಿಳಿಯಿರಿ -
March 28 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
Viral ಆಯ್ತು ಅಕೌಂಟ್ಸ್ ಪ್ರಶ್ನೆಪತ್ರಿಕೆ: ಪರೀಕ್ಷೆಯಲ್ಲೂ ಮಿಂಚಿದ 'ಧುರಂಧರ್: ದಿ ರಿವೆಂಜ್' ಸಿನಿಮಾದ ಪಾತ್ರಗಳು -
ಹಿಂದಿ ರಾಜ್ಯಗಳಲ್ಲಿ ಕನ್ನಡವನ್ನ ಕಡ್ಡಾಯ ಮಾಡಿ: ವಿಜಯೇಂದ್ರಗೆ ನೇರ ಸವಾಲು ಹಾಕಿದ ಕರವೇ ನಾರಾಯಣಗೌಡ












Click it and Unblock the Notifications