ವೀಕೆಂಡ್ ಗೆ ಹೇಳಿಮಾಡಿಸಿದ ತಾಣ ಮಡಿಕೇರಿಯ ನಿಶಾನೆಮೊಟ್ಟೆ
ಕೊಡಗಿನ ನಿಸರ್ಗದ ನಡುವೆ ನೂರಾರು ಪ್ರವಾಸಿ ತಾಣಗಳು ತಮ್ಮದೇ ವೈಶಿಷ್ಟ್ಯಮತ್ತು ಚೆಲುವಿನಿಂದ ಕಂಗೊಳಿಸುತ್ತಿದ್ದರೂ ಪ್ರಚಾರದ ಮತ್ತು ಮೂಲ ಸೌಲಭ್ಯದ ಕೊರತೆಯಿಂದಾಗಿ ಪ್ರವಾಸಿಗರನ್ನು ಸೆಳೆಯುವಲ್ಲಿ ವಿಫಲವಾಗಿ ಎಲೆಮರೆಯ ಕಾಯಿಯಂತೆ ಉಳಿದು ಹೋಗಿವೆ. ಇಂತಹ ಪ್ರವಾಸಿ ತಾಣಗಳ ಪೈಕಿ ನಿಶಾನೆಮೊಟ್ಟೆಯೂ ಒಂದು.
ಪ್ರಕೃತಿ ಪ್ರೇಮಿಗಳಿಗೆ ಹೇಳಿ ಮಾಡಿಸಿದ ತಾಣ ಇದು. ಬೆಟ್ಟಸಾಲುಗಳು... ದೂರದ ಕಾಫಿ, ಏಲಕ್ಕಿ ತೋಟಗಳು... ಗದ್ದೆ ಬಯಲುಗಳು... ಅಂಕುಡೊಂಕಾದ ರಸ್ತೆಗಳಲ್ಲಿ ಸರ್ಕಸ್ ಮಾಡುತ್ತಾ ಸಾಗುವ ವಾಹನಗಳು... ಮೇಲಿನ ಗುಡ್ಡದಲ್ಲಿ, ಕೆಳಗಿನ ಹಳ್ಳದಲ್ಲಿ ಅಲ್ಲಲ್ಲಿ ಕಾಣುವ ಹೆಂಚಿನ ಮನೆಗಳು... ದೂರದ ಅರಣ್ಯದ ನಡುವೆ ಮಲೆಕುಡಿಯರ ಜೋಪಡಿಗಳಿಂದ ಗಾಳಿಯಾಡುತ್ತಾ ಮೇಲೇಳುವ ಹೊಗೆ... ಒಂದೇ ಎರಡೇ, ಹತ್ತಾರು ಸುಂದರ, ವಿಸ್ಮಯ ನೋಟಗಳು ಹುಮ್ಮಸ್ಸು ತುಂಬುತ್ತವೆ.

ಈ ತಾಣಕ್ಕೆ ಮಡಿಕೇರಿಯಿಂದ ಹತ್ತು ಕಿ.ಮೀ. ದೂರಕ್ಕೆ ಸಾಗಬೇಕು. ಮಡಿಕೇರಿಯಿಂದ ಸ್ಟೀವರ್ಟ್ ಹಿಲ್ ಮಾರ್ಗವಾಗಿ ಸುಮಾರು ನಾಲ್ಕು ಕಿ.ಮೀ. ದೂರವನ್ನು ಆಯಾಸವಿಲ್ಲದೆ ಕ್ರಮಿಸಬಹುದಾದರೂ ನಂತರದ ಹಾದಿ ಸವಾಲೊಡ್ಡುತ್ತದೆ. ಹಳ್ಳ, ದಿಣ್ಣೆಗಳಿಂದ ಕೂಡಿದ ರಸ್ತೆಯಲ್ಲಿ ಜೀಪು ಹೊರತುಪಡಿಸಿ ಇನ್ಯಾವುದೇ ವಾಹನಗಳಲ್ಲಿ ಹೋಗುವುದು ಕಷ್ಟ. ಹಾಗಾಗಿ ಹೆಚ್ಚಿನವರು ನಡೆದುಕೊಂಡೇ ಹೋಗುತ್ತಾರೆ. ಮಡಿಕೇರಿಯಿಂದ ಹೊರಟು ನಿಶಾನೆಮೊಟ್ಟೆ ತಪ್ಪಲು ತಲುಪಬೇಕಾದರೆ ಕನಿಷ್ಠ ಒಂದು ಗಂಟೆಯಾದರೂ ಬೇಕು.
ಮಡಿಕೇರಿಗೆ ನೀರು ಒದಗಿಸುವ ಜಲಾಗಾರ ಕೂಟುಹೊಳೆ ಹಾಗೂ ಮಡಿಕೇರಿ ಪಟ್ಟಣದ ವಿಹಂಗಮ ನೋಟವೂ ಇಲ್ಲಿ ಲಭ್ಯ. ನಿಶಾನೆಮೊಟ್ಟೆಯ ಮೇಲ್ಭಾಗದಲ್ಲಿ ವಿಶಾಲ ಸಮತಟ್ಟಾದ ಜಾಗವಿರುವುದರಿಂದ ಆಡಿ ಕುಣಿದು ಕುಪ್ಪಳಿಸಬಹುದು, ಅಷ್ಟೇ ಅಲ್ಲ ಟೆಂಟ್ ಹಾಕಿ ಅಲ್ಲಿ ರಾತ್ರಿ ಕೂಡ ಕಳೆಯಬಹುದು.

ಈ ಬೆಟ್ಟಕ್ಕೆ ನಿಶಾನೆಮೊಟ್ಟೆ ಎಂಬ ಹೆಸರು ಏಕೆ ಬಂದಿರಬಹುದೆಂಬ ಕುತೂಹಲ ಕಾಡದಿರದು. ಹಿಂದೆ ಕೊಡಗನ್ನು ಆಳುತ್ತಿದ್ದ ರಾಜರ ಕಾಲದಲ್ಲಿ ಶತ್ರುಗಳು ದಂಡೆತ್ತಿ ಬರುವುದನ್ನು ಅರಿಯಲು ಈ ಗುಡ್ಡದ ಮೇಲೆ ಸೈನಿಕರನ್ನಿರಿಸಲಾಗುತ್ತಿತ್ತಂತೆ. ಈ ಗುಡ್ಡದಿಂದ ನಿಂತು ನೋಡಿದರೆ ದೂರದಿಂದ ಬರುವ ಶತ್ರು ಸೈನ್ಯ ಕಾಣುತ್ತಿತ್ತಂತೆ. ತಕ್ಷಣ ರಾಜನಿಗೆ ಸುದ್ದಿ ಮುಟ್ಟಿಸಿ ಸೈನ್ಯವನ್ನು ಸಜ್ಜುಗೊಳಿಸಿ ಶತ್ರುಗಳನ್ನು ಹಿಮ್ಮೆಟ್ಟಿಸುತ್ತಿದ್ದರಂತೆ. ಘಟ್ಟವನ್ನೇರಿ ಬರುವ ಶತ್ರು ಸೈನಿಕರ ಮೇಲೆ "ನಿಶಾನೆ" ಇಡಲು ಈ ಗುಡ್ಡ ಯೋಗ್ಯವಾಗಿದ್ದರಿಂದ "ನಿಶಾನೆ ಮೊಟ್ಟೆ" ಎಂಬ ಹೆಸರು ಬಂದಿರಬಹುದೆಂದು ಹೇಳಲಾಗುತ್ತಿದೆ.
ಸಾಮಾನ್ಯವಾಗಿ ಕೊಡಗಿನಲ್ಲಿ ಎತ್ತರದ ಜಾಗವನ್ನು ಮೊಟ್ಟೆ ಎಂದು ಕರೆಯುವುದು ರೂಢಿ. ಮಡಿಕೇರಿ ಬಳಿಯ ಎತ್ತರದ ಈ ನಿಶಾನೆಬೆಟ್ಟ ಜನರ ಆಡು ಮಾತಿನಲ್ಲಿ ನಿಶಾನೆಮೊಟ್ಟೆ ಎಂದೇ ಕರೆಯಲ್ಪಡುತ್ತಿದೆ. ನಿಶಾನೆಮೊಟ್ಟೆಗೆ ಪಿಕ್ ನಿಕ್ ಹೋಗುವವರು ತಮ್ಮೊಂದಿಗೆ ತಿಂಡಿ ತಿನಿಸುಗಳನ್ನು ಒಯ್ದರೆ ಒಂದಷ್ಟು ಹೊತ್ತು ಅಲ್ಲಿದ್ದು ಬರಬಹುದು. ಮಡಿಕೇರಿಯಿಂದ ನಿಶಾನೆಮೊಟ್ಟೆಯತ್ತ ಹೆಜ್ಜೆ ಹಾಕುವಾಗ ಸಿಗುವ ಸ್ಟೋನ್ ಹಿಲ್ ಕೂಡ ಒಂದು ಸುಂದರ ವೀಕ್ಷಣಾ ತಾಣ.
-
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral -
SSLC ಪರೀಕ್ಷೆ-1ರಲ್ಲಿ ಅಂಕ ಕಡಿಮೆಯಾಗಿದೆಯೇ? ಚಿಂತೆ ಬಿಡಿ, ಮೇ 18ರಿಂದ ನಡೆಯುವ ಪರೀಕ್ಷೆ-2ಕ್ಕೆ ಸಜ್ಜಾಗಿ -
Bengaluru: ಪಬ್ನಲ್ಲಿ 150 ರೂ. ಕೊಟ್ಟು ಆರ್ಡರ್ ಮಾಡಿದ್ರೆ ಬಂದಿದ್ದು ಬರೀ ಹಪ್ಪಳ-ಸಂಡಿಗೆ: ದಂಗಾದ ಗ್ರಾಹಕ -
ಇಂಡೋನೇಷ್ಯಾದಲ್ಲಿ 7.4 ತೀವ್ರತೆಯ ಪ್ರಬಲ ಭೂಕಂಪ: ಏಷ್ಯಾ ರಾಷ್ಟ್ರಗಳಲ್ಲಿ ಸುನಾಮಿ ಆತಂಕ, ಭಾರತದ ಮೇಲಾಗುವ ಪರಿಣಾಮವೇನು? -
Bengaluru House Rent: ಬೆಂಗಳೂರಿನ ಪ್ರೈಮ್ ಏರಿಯಾದಲ್ಲೂ ನಾನ್ವೆಜ್ ಪ್ರಿಯರಿಗೆ ಮನೆ ಸಿಗ್ತಿಲ್ಲ, ಸೋಷಿಯಲ್ ಮೀಡಿಯಾ ಚರ್ಚೆ -
Prakash Raj: ನಾಸ್ತಿಕನಾದರೂ ತಾಯಿಯ ನಂಬಿಕೆಗೆ ಗೌರವ ಕೊಟ್ಟು; ಕ್ರೈಸ್ತ ಧರ್ಮದ ಸಂಪ್ರದಾಯ ಪಾಲನೆ: ನಟ ಪ್ರಕಾಶ್ ರಾಜ್ -
Education: CBSE 9 ಮತ್ತು 10ನೇ ತರಗತಿಯ ಹೊಸ ಪಠ್ಯಕ್ರಮ ಇಂದು ಬಿಡುಗಡೆ -
ಮುಂದಿನ 2 ರಿಂದ 3 ವಾರಗಳಲ್ಲಿ ಇರಾನ್ ಮೇಲೆ ಅತ್ಯಂತ ಭೀಕರ ದಾಳಿ: ಟ್ರಂಪ್ ಎಚ್ಚರಿಕೆ -
ವಿದ್ಯಾರ್ಥಿಗಳ ಮೊಬೈಲ್ ಗೀಳಿಗೆ ಬ್ರೇಕ್: ಹೊಸ 'ಡಿಜಿಟಲ್ ನೀತಿ' ಪ್ರಕಟಿಸಿದ ಆರೋಗ್ಯ ಇಲಾಖೆ -
Raghav Chadha: ಸಂಸದ ರಾಘವ್ ಚಡ್ಡಾಗೆ ಶಾಕ್ ಕೊಟ್ಟ ಎಎಪಿ, ಬಿಜೆಪಿ ಸೇರಲಿದ್ದಾರೆಯೇ ಸ್ಟಾರ್ ರಾಜಕಾರಣಿ -
Nuwan Thushara: ಆರ್ಸಿಬಿಗಾಗಿ ಶ್ರೀಲಂಕಾ ಕ್ರಿಕೆಟ್ ಮಂಡಳಿಯ ವಿರುದ್ಧವೇ ತಿರುಗಿ ಬಿದ್ದ ಸ್ಟಾರ್ ಆಟಗಾರ ನುವಾನ್ ತುಷಾರ












Click it and Unblock the Notifications