ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ವೀಕೆಂಡ್ ಗೆ ಹೇಳಿಮಾಡಿಸಿದ ತಾಣ ಮಡಿಕೇರಿಯ ನಿಶಾನೆಮೊಟ್ಟೆ

By ಬಿ.ಎಂ.ಲವಕುಮಾರ್
|
Google Oneindia Kannada News

ಕೊಡಗಿನ ನಿಸರ್ಗದ ನಡುವೆ ನೂರಾರು ಪ್ರವಾಸಿ ತಾಣಗಳು ತಮ್ಮದೇ ವೈಶಿಷ್ಟ್ಯಮತ್ತು ಚೆಲುವಿನಿಂದ ಕಂಗೊಳಿಸುತ್ತಿದ್ದರೂ ಪ್ರಚಾರದ ಮತ್ತು ಮೂಲ ಸೌಲಭ್ಯದ ಕೊರತೆಯಿಂದಾಗಿ ಪ್ರವಾಸಿಗರನ್ನು ಸೆಳೆಯುವಲ್ಲಿ ವಿಫಲವಾಗಿ ಎಲೆಮರೆಯ ಕಾಯಿಯಂತೆ ಉಳಿದು ಹೋಗಿವೆ. ಇಂತಹ ಪ್ರವಾಸಿ ತಾಣಗಳ ಪೈಕಿ ನಿಶಾನೆಮೊಟ್ಟೆಯೂ ಒಂದು.

ಪ್ರವಾಸಕ್ಕೆ ಹೊರಟ್ರಾ? ನಿಲ್ಲಿ, ಈ ಲೇಖನವನ್ನು ಓದುತ್ತಾ ಮುಂದೆ ಸಾಗಿಪ್ರವಾಸಕ್ಕೆ ಹೊರಟ್ರಾ? ನಿಲ್ಲಿ, ಈ ಲೇಖನವನ್ನು ಓದುತ್ತಾ ಮುಂದೆ ಸಾಗಿ

ಪ್ರಕೃತಿ ಪ್ರೇಮಿಗಳಿಗೆ ಹೇಳಿ ಮಾಡಿಸಿದ ತಾಣ ಇದು. ಬೆಟ್ಟಸಾಲುಗಳು... ದೂರದ ಕಾಫಿ, ಏಲಕ್ಕಿ ತೋಟಗಳು... ಗದ್ದೆ ಬಯಲುಗಳು... ಅಂಕುಡೊಂಕಾದ ರಸ್ತೆಗಳಲ್ಲಿ ಸರ್ಕಸ್ ಮಾಡುತ್ತಾ ಸಾಗುವ ವಾಹನಗಳು... ಮೇಲಿನ ಗುಡ್ಡದಲ್ಲಿ, ಕೆಳಗಿನ ಹಳ್ಳದಲ್ಲಿ ಅಲ್ಲಲ್ಲಿ ಕಾಣುವ ಹೆಂಚಿನ ಮನೆಗಳು... ದೂರದ ಅರಣ್ಯದ ನಡುವೆ ಮಲೆಕುಡಿಯರ ಜೋಪಡಿಗಳಿಂದ ಗಾಳಿಯಾಡುತ್ತಾ ಮೇಲೇಳುವ ಹೊಗೆ... ಒಂದೇ ಎರಡೇ, ಹತ್ತಾರು ಸುಂದರ, ವಿಸ್ಮಯ ನೋಟಗಳು ಹುಮ್ಮಸ್ಸು ತುಂಬುತ್ತವೆ.

Weekend Trek To Beautiful Spot Nishanemotte In Madikeri

ಈ ತಾಣಕ್ಕೆ ಮಡಿಕೇರಿಯಿಂದ ಹತ್ತು ಕಿ.ಮೀ. ದೂರಕ್ಕೆ ಸಾಗಬೇಕು. ಮಡಿಕೇರಿಯಿಂದ ಸ್ಟೀವರ್ಟ್ ‌ಹಿಲ್ ಮಾರ್ಗವಾಗಿ ಸುಮಾರು ನಾಲ್ಕು ಕಿ.ಮೀ. ದೂರವನ್ನು ಆಯಾಸವಿಲ್ಲದೆ ಕ್ರಮಿಸಬಹುದಾದರೂ ನಂತರದ ಹಾದಿ ಸವಾಲೊಡ್ಡುತ್ತದೆ. ಹಳ್ಳ, ದಿಣ್ಣೆಗಳಿಂದ ಕೂಡಿದ ರಸ್ತೆಯಲ್ಲಿ ಜೀಪು ಹೊರತುಪಡಿಸಿ ಇನ್ಯಾವುದೇ ವಾಹನಗಳಲ್ಲಿ ಹೋಗುವುದು ಕಷ್ಟ. ಹಾಗಾಗಿ ಹೆಚ್ಚಿನವರು ನಡೆದುಕೊಂಡೇ ಹೋಗುತ್ತಾರೆ. ಮಡಿಕೇರಿಯಿಂದ ಹೊರಟು ನಿಶಾನೆಮೊಟ್ಟೆ ತಪ್ಪಲು ತಲುಪಬೇಕಾದರೆ ಕನಿಷ್ಠ ಒಂದು ಗಂಟೆಯಾದರೂ ಬೇಕು.

ಜನಪ್ರಿಯವಲ್ಲದ ನಿರ್ಧಾರ ತೆಗೆದುಕೊಳ್ಳಲೂ ಗುಂಡಿಗೆ ಬೇಕುಜನಪ್ರಿಯವಲ್ಲದ ನಿರ್ಧಾರ ತೆಗೆದುಕೊಳ್ಳಲೂ ಗುಂಡಿಗೆ ಬೇಕು

ಮಡಿಕೇರಿಗೆ ನೀರು ಒದಗಿಸುವ ಜಲಾಗಾರ ಕೂಟುಹೊಳೆ ಹಾಗೂ ಮಡಿಕೇರಿ ಪಟ್ಟಣದ ವಿಹಂಗಮ ನೋಟವೂ ಇಲ್ಲಿ ಲಭ್ಯ. ನಿಶಾನೆಮೊಟ್ಟೆಯ ಮೇಲ್ಭಾಗದಲ್ಲಿ ವಿಶಾಲ ಸಮತಟ್ಟಾದ ಜಾಗವಿರುವುದರಿಂದ ಆಡಿ ಕುಣಿದು ಕುಪ್ಪಳಿಸಬಹುದು, ಅಷ್ಟೇ ಅಲ್ಲ ಟೆಂಟ್ ಹಾಕಿ ಅಲ್ಲಿ ರಾತ್ರಿ ಕೂಡ ಕಳೆಯಬಹುದು.

Weekend Trek To Beautiful Spot Nishanemotte In Madikeri

ಈ ಬೆಟ್ಟಕ್ಕೆ ನಿಶಾನೆಮೊಟ್ಟೆ ಎಂಬ ಹೆಸರು ಏಕೆ ಬಂದಿರಬಹುದೆಂಬ ಕುತೂಹಲ ಕಾಡದಿರದು. ಹಿಂದೆ ಕೊಡಗನ್ನು ಆಳುತ್ತಿದ್ದ ರಾಜರ ಕಾಲದಲ್ಲಿ ಶತ್ರುಗಳು ದಂಡೆತ್ತಿ ಬರುವುದನ್ನು ಅರಿಯಲು ಈ ಗುಡ್ಡದ ಮೇಲೆ ಸೈನಿಕರನ್ನಿರಿಸಲಾಗುತ್ತಿತ್ತಂತೆ. ಈ ಗುಡ್ಡದಿಂದ ನಿಂತು ನೋಡಿದರೆ ದೂರದಿಂದ ಬರುವ ಶತ್ರು ಸೈನ್ಯ ಕಾಣುತ್ತಿತ್ತಂತೆ. ತಕ್ಷಣ ರಾಜನಿಗೆ ಸುದ್ದಿ ಮುಟ್ಟಿಸಿ ಸೈನ್ಯವನ್ನು ಸಜ್ಜುಗೊಳಿಸಿ ಶತ್ರುಗಳನ್ನು ಹಿಮ್ಮೆಟ್ಟಿಸುತ್ತಿದ್ದರಂತೆ. ಘಟ್ಟವನ್ನೇರಿ ಬರುವ ಶತ್ರು ಸೈನಿಕರ ಮೇಲೆ "ನಿಶಾನೆ" ಇಡಲು ಈ ಗುಡ್ಡ ಯೋಗ್ಯವಾಗಿದ್ದರಿಂದ "ನಿಶಾನೆ ಮೊಟ್ಟೆ" ಎಂಬ ಹೆಸರು ಬಂದಿರಬಹುದೆಂದು ಹೇಳಲಾಗುತ್ತಿದೆ.

ಸಾಮಾನ್ಯವಾಗಿ ಕೊಡಗಿನಲ್ಲಿ ಎತ್ತರದ ಜಾಗವನ್ನು ಮೊಟ್ಟೆ ಎಂದು ಕರೆಯುವುದು ರೂಢಿ. ಮಡಿಕೇರಿ ಬಳಿಯ ಎತ್ತರದ ಈ ನಿಶಾನೆಬೆಟ್ಟ ಜನರ ಆಡು ಮಾತಿನಲ್ಲಿ ನಿಶಾನೆಮೊಟ್ಟೆ ಎಂದೇ ಕರೆಯಲ್ಪಡುತ್ತಿದೆ. ನಿಶಾನೆಮೊಟ್ಟೆಗೆ ಪಿಕ್ ‌ನಿಕ್ ಹೋಗುವವರು ತಮ್ಮೊಂದಿಗೆ ತಿಂಡಿ ತಿನಿಸುಗಳನ್ನು ಒಯ್ದರೆ ಒಂದಷ್ಟು ಹೊತ್ತು ಅಲ್ಲಿದ್ದು ಬರಬಹುದು. ಮಡಿಕೇರಿಯಿಂದ ನಿಶಾನೆಮೊಟ್ಟೆಯತ್ತ ಹೆಜ್ಜೆ ಹಾಕುವಾಗ ಸಿಗುವ ಸ್ಟೋನ್ ಹಿಲ್ ಕೂಡ ಒಂದು ಸುಂದರ ವೀಕ್ಷಣಾ ತಾಣ.

English summary
So many tourist destinations in kodagu have its own beauty. but the lack of publicity and basic facilities have failed to attract tourists. Nishanemotte of Madikeri is also one of the tourist spots.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X