ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಕೊರೊನಾ ವೈರಸ್ ಎಂದರೇನು?: ಹೇಗೆ ಹರಡುತ್ತೆ, ಚಿಕಿತ್ಸೆ ಏನು?

|
Google Oneindia Kannada News

ಬೆಂಗಳೂರು, ಜನವರಿ 25: ಕೊರೊನಾ ವೈರಸ್ ಎಂದರೇನು? ಹೇಗೆ ಹರಡುತ್ತದೆ ಎಂಬುದರ ಪೂರ್ಣ ಮಾಹಿತಿಯನ್ನು ಬಿಬಿಎಂಪಿ ಜನರಿಗೆ ನೀಡಿದೆ.

ಕೊರೊನಾ ವೈರಸ್ ಭೀತಿ ಹಿನ್ನೆಲೆಯಲ್ಲಿ ವಿಶೇಷ ಆಯುಕ್ತರ ನೇತೃತ್ವದಲ್ಲಿ ನಗರಾದ್ಯಂತ ಸೂಕ್ತ ಕ್ರಮ ಕೈಗೊಳ್ಳುವ ಕುರಿತು ಸಭೆ ನಡೆಸಲಾಗಿದೆ. ಸಾರ್ವಜನಿಕರು ಯಾವುದೇ ಆತಂಕ ಪಡುವ ಅಗತ್ಯವಿಲ್ಲವೆಂದು ಬಿಬಿಎಂಪಿ ಅಧಿಕಾರಿಗಳು ತಿಳಿಸಿದ್ದಾರೆ.

ಕೊರೊನಾ ಸೋಂಕು:20 ಸಾವಿರ ಭಾರತೀಯರ ತಪಾಸಣೆ, 80 ಮಂದಿ ಮೇಲೆ ನಿಗಾಕೊರೊನಾ ಸೋಂಕು:20 ಸಾವಿರ ಭಾರತೀಯರ ತಪಾಸಣೆ, 80 ಮಂದಿ ಮೇಲೆ ನಿಗಾ

ಈ ಕೊರನಾ ವೈರಸ್‌ನಿಂದ ಈಗಾಗಲೇ ಚೀನಾದಲ್ಲಿ 60ಕ್ಕೂ ಹೆಚ್ಚು ಮಂದಿ ಮೃತಪಟ್ಟಿದ್ದಾರೆ. ಭಾರತದ ಏರ್‌ಪೋರ್ಟ್‌ಗಳಲ್ಲಿ ಕೂಡ ತೀವ್ರ ನಿಗಾ ವಹಿಸಲಾಗುತ್ತಿದೆ. ಸೌದಿ ಅರೇಬಿಯಾದಲ್ಲಿರುವ ಕೇರಳ ಮೂಲದ ನರ್ಸ್‌ ಒಬ್ಬರಿಗೂ ಈ ವೈರಸ್ ತಗುಲಿದೆ ಎನ್ನುವ ಮಾಹಿತಿ ಲಭ್ಯವಾಗಿದೆ. ಕರ್ನಾಟಕದಲ್ಲಿ ಒಟ್ಟು 20 ಸಾವಿರ ಮಂದಿಯನ್ನು ಪರೀಕ್ಷೆಗೊಳಪಡಿಸಲಾಗಿದೆ.

ಕೊರೊನಾ ವೈರಸ್ ಎಂದರೇನು?

ಕೊರೊನಾ ವೈರಸ್ ಎಂದರೇನು?

ಕೊರಾನಾ ಅಥವಾ ಕರೋನಾ ವೈರಸ್ ಒಂದು ಬಗೆಯ ಪ್ರಾಣಹಾನಿ ಉಂಟು ಮಾಡುವಂತಹ ವೈರಸ್ ಆಗಿದ್ದು, ಇದು ಮನುಷ್ಯನ ಸಹಿತ ಸಸ್ತನಿಗಳ ಉಸಿರಾಟದ ವ್ಯವಸ್ಥೆ ಮೇಲೆ ಪರಿಣಾಮ ಬೀರುವುದು ಎಂದು ಹೇಳಲಾಗುತ್ತಿದೆ. ಕೊರೊನಾ ವೈರಸ್ ಎನ್ನುವುದು ಪ್ರಾಣಿಗಳಲ್ಲಿ ಕಾಣಿಸಿಕೊಳ್ಳುವ ಸೋಂಕಾಗಿದೆ. ಈಗ ಪ್ರಾಣಿಗಳಿಂದ ಮನುಷ್ಯನಿಗೂ ಈ ಸೋಂಕು ತಗುಲುತ್ತಿದೆ.

ಕೊರೊನಾ ವೈರಸ್‌ ಲಕ್ಷಣಗಳಾವುವು?

ಕೊರೊನಾ ವೈರಸ್‌ ಲಕ್ಷಣಗಳಾವುವು?

ವೈರಸ್ ನಿಂದಾಗಿ ಸಾಮಾನ್ಯ ಶೀತ, ನ್ಯುಮೋನಿಯಾ ಮತ್ತು ತೀವ್ರ ರೀತಿಯ ಶ್ವಾಸಕೋಶದ ಸಮಸ್ಯೆ(ಎಸ್ ಎಆರ್ ಎಸ್) ಕಾಣಿಸಿಕೊಳ್ಳುವುದು ಮತ್ತು ಇದು ಹೊಟ್ಟೆಯ ಮೇಲೂ ಪರಿಣಾಮ ಬೀರುವುದು. ಮೊದಲು ಶೀತ ಕಾಣಿಸಿಕೊಳ್ಳುತ್ತದೆ ಕ್ರಮೇಣವಾಗಿ ತಲೆನೋವು ಕಾಣಿಸಿಕೊಂಡು ಇಡೀ ದೇಹವನ್ನು ಆವರಿಸುತ್ತದೆ.

ಕೊರೊನಾ ಎಂದರೆ ವೈರಸ್‌ನ ಒಂದು ಗುಂಪು

ಕೊರೊನಾ ಎಂದರೆ ವೈರಸ್‌ನ ಒಂದು ಗುಂಪು

ಕೊರೊನಾ ವೈರಸ್ ಎಂದರೆ ಸಾಮಾನ್ಯ ವೈರಸ್ ಗಳ ಒಂದು ಗುಂಪು. ವೈರಸ್ ಗಳ ಮೇಲ್ಮೈಯಲ್ಲಿ ಕಿರೀಟದಂತಹ ವಿನ್ಯಾಸವಿರುವ ಕಾರಣದಿಂದಾಗಿ ಹೀಗೆ ಹೆಸರಿಡಲಾಗಿದೆ. ಕೆಲವು ಕೊರೊನಾ ವೈರಸ್ ಕೇವಲ ಪ್ರಾಣಿಗಳ ಮೇಲೆ ಮಾತ್ರ ಪರಿಣಾಮ ಬೀರುತ್ತದೆ.

ಶ್ವಾಸಕೋಶ ಸೋಂಕನ್ನು ಉಂಟು ಮಾಡುತ್ತದೆ

ಶ್ವಾಸಕೋಶ ಸೋಂಕನ್ನು ಉಂಟು ಮಾಡುತ್ತದೆ

ಇದು ಸಾಮಾನ್ಯ ಶೀತದಂತಹ ಲಘು ಪ್ರಮಾಣದಿಂದ ಮಧ್ಯಮ ಪ್ರಮಾಣದ ಮೇಲ್ಭಾಗದ ಶ್ವಾಸಕೋಶದ ಸೋಂಕನ್ನು ಉಂಟು ಮಾಡುವುದು. ಆದರೆ ಇದು ಕೆಲವೊಂದು ಸಲ ತೀವ್ರ ರೀತಿಯ ನ್ಯುಮೋನಿಯಾ ಮತ್ತು ಬ್ರಾಂಕೈಟಿಸ್ ಉಂಟು ಮಾಡುವುದು. ಮನುಷ್ಯರನ್ನು ಕಾಡುವಂತಹ ಕೊರೊನಾ ವೈರಸ್ ನಲ್ಲಿ ಹಲವು ವಿಧಗಳು ಇವೆ. ಇದರಲ್ಲಿ ಮೆರ್ಸ್ ಮತ್ತು ಸಾರ್ಸ್ ವೈರಸ್ ಸೇರಿದೆ.

ಕೊರೊನಾ ಹರಡುವುವುದು ಹೇಗೆ?

ಕೊರೊನಾ ಹರಡುವುವುದು ಹೇಗೆ?

ರೋಗವಿರುವವರು ಕೆಮ್ಮಿದರೆ, ಕೈಕುಲುಕುವಿಕೆ, ಯಾವುದೋ ವಸ್ತುವನ್ನು ಮುಟ್ಟಿ ಅಥವಾ ಪ್ರಾಣಿಗಳನ್ನು ಮುಟ್ಟಿ ಕೈತೊಳೆದುಕೊಳ್ಳದೆ ನಿಮ್ಮ ಮುಖ್ಯ, ಬಾಯಿಗಳನ್ನು ಮುಟ್ಟಿದಾಗಲೂ ಈ ರೋಗ ಹರಡುವ ಸಾಧ್ಯತೆ ಇರುತ್ತದೆ.

ಮುಂಜಾಗ್ರತಾ ಕ್ರಮಗಳು, ಚಿಕಿತ್ಸೆ ಏನು?

ಮುಂಜಾಗ್ರತಾ ಕ್ರಮಗಳು, ಚಿಕಿತ್ಸೆ ಏನು?

ಕೊರೊನಾ ವೈರಸ್‌ಗೆ ಚಿಕಿತ್ಸೆ ಇನ್ನೂ ಕಂಡುಹಿಡಿಯಲಾಗಿಲ್ಲ. ಆದರೆ ರೋಗ ಹರಡದಂತೆ ಕೊಂಚ ಮಟ್ಟಿಗೆ ತಡೆಗಟ್ಟಬಹುದಾಗಿದೆ. ಕೈಕಾಲುಗಳನ್ನು ಸೋಪು, ನೀರಿನಿಂದ ಕೈತೊಳೆದುಕೊಳ್ಳಬೇಕು. ಕಣ್ಣು, ಮೂಗು, ಬಾಯಿಯನ್ನು ಕೈನಿಂದ ಮುಟ್ಟಿಕೊಳ್ಳುವುದನ್ನು ಕಡಿಮೆ ಮಾಡಬೇಕು. ಈಗಾಗಲೇ ಸೋಂಕಿನ ಲಕ್ಷಣಗಳು ಕಂಡು ಬಂದಿರುವವರಿಂದ ದೂರವಿರಬೇಕು. ಒಂದೊಮ್ಮೆ ಇಂತಹ ಲಕ್ಷಣಗಳು ಕಂಡು ಬಂದರೆ ತಕ್ಷಣ ಆಸ್ಪತ್ರೆಗೆ ಭೇಟಿ ನೀಡಿ.

English summary
What Is Coronavirus In Humans, How is coronovirus transmitted, how dangerous is , symptoms are given below in the story.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X