ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಮೊದಲು ಓದಿ: ಭಾರತದಲ್ಲಿ 2 ಮುಗೀತು, ಕೊರೊನಾ 3ನೇ ಅಲೆ ಹೇಗಿರುತ್ತೆ?

|
Google Oneindia Kannada News

ನವದೆಹಲಿ, ಏಪ್ರಿಲ್ 06: ಕೊರೊನಾವೈರಸ್ ಸಾಂಕ್ರಾಮಿಕ ಪಿಡುಗಿನ ಎರಡನೇ ಅಲೆಗೆ ಭಾರತ ತತ್ತರಿಸಿ ಹೋಗಿದೆ. ಪ್ರತಿನಿತ್ಯ ಲಕ್ಷ ಲಕ್ಷ ಮಂದಿಗೆ ಕೊವಿಡ್-19 ಸೋಂಕು ತಗುಲುತ್ತಿರುವುದರ ನಡುವೆ ಸಾಂಕ್ರಾಮಿಕ ರೋಗ ಶಾಸ್ತ್ರಜ್ಞರು ಆಘಾತಕಾರಿ ವಿಷಯವನ್ನು ಬಹಿರಂಗಪಡಿಸಿದ್ದಾರೆ.

ಭಾರತದಲ್ಲಿ ಕೊರೊನಾವೈರಸ್ ಎರಡನೇ ಅಲೆ ಅಂತ್ಯವಾಗುವುದರ ಹಿಂದೆಯೇ ಮೂರನೇ ಅಲೆಯ ಆತಂಕ ಹೆಚ್ಚಾಗಲಿದೆ. ಅಲ್ಲದೇ ನಾಲ್ಕನೇ ಅಲೆಯ ಬಗ್ಗೆಯೂ ನಿರ್ಲಕ್ಷ್ಯ ವಹಿಸುವಂತಿಲ್ಲ. ಎರಡನೇ ಅಲೆಯಲ್ಲಿ ಸಾವಿನ ಪ್ರಕರಣ ಹೆಚ್ಚುತ್ತಿದ್ದು, ಮೂರನೇ ಅಲೆ ವೇಳೆಗೆ ದೇಶದ ಆರ್ಥಿಕತೆಗೆ ಭಾರಿ ಪೆಟ್ಟು ಬೀಳುವ ಸಾಧ್ಯತೆಯಿದೆ ಎಂದು ಆರೋಗ್ಯ ತಜ್ಞರು ಎಚ್ಚರಿಕೆ ನೀಡಿದ್ದಾರೆ.

 ಕೊರೊನಾ ಮೂರನೇ ಅಲೆಯಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ; ತಜ್ಞರ ಎಚ್ಚರಿಕೆ ಕೊರೊನಾ ಮೂರನೇ ಅಲೆಯಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ; ತಜ್ಞರ ಎಚ್ಚರಿಕೆ

ದೇಶದಲ್ಲಿ ಕೊರೊನಾವೈರಸ್ ಮೂರನೇ ಅಲೆ ಯಾವಾಗ ಕಾಣಿಸಿಕೊಳ್ಳುತ್ತದೆ. ಕೊವಿಡ್-19 ಮೂರು ಮತ್ತು ನಾಲ್ಕನೇ ಅಲೆಯಿಂದ ಭಾರತದ ಜನಜೀವನ ಮತ್ತು ಆರ್ಥಿಕತೆಯ ಮೇಲೆ ಬೀಳುವ ಪರಿಣಾಮವೇನು, ಮೂರನೇ ಅಲೆ ಆರಂಭ ಆಗುವುದು ಯಾವಾಗ, ಕೊವಿಡ್-19 ಸೋಂಕಿನ ಅಲೆಗಳಿಂದ ಸಾರ್ವಜನಿಕರು ತಮ್ಮನ್ನು ತಾವು ರಕ್ಷಿಸಿಕೊಳ್ಳುವುದು ಹೇಗೆ, ಸಾಂಕ್ರಾಮಿಕ ಪಿಡುಗಿನಿಂದ ಸಾರ್ವಜನಿಕರನ್ನು ರಕ್ಷಿಸಲು ಸರ್ಕಾರಗಳು ಯಾವೆಲ್ಲ ನಿಯಮಗಳನ್ನು ಜಾರಿಗೊಳಿಸಬೇಕು. ಸರ್ಕಾರದ ಮಾರ್ಗಸೂಚಿ ಮತ್ತು ನಿಯಮಗಳನ್ನು ಜನರು ಎಷ್ಟರ ಮಟ್ಟಿಗೆ ಪಾಲನೆ ಮಾಡಬೇಕು ಎನ್ನುವುದರ ಕುರಿತು ಆರೋಗ್ಯ ತಜ್ಞರು ಹಾಗೂ ಸಾಂಕ್ರಾಮಿಕ ರೋಗ ಶಾಸ್ತ್ರಜ್ಞರು ನೀಡಿರುವ ಉತ್ತರಗಳ ಕುರಿತು ಒಂದು ವಿಶೇಷ ವರದಿ ಇಲ್ಲಿದೆ ಓದಿ.

ಕೊರೊನಾ ಲಸಿಕೆ ಹಾಕಿಸಿಕೊಳ್ಳುವುದು ಉತ್ತಮ

ಕೊರೊನಾ ಲಸಿಕೆ ಹಾಕಿಸಿಕೊಳ್ಳುವುದು ಉತ್ತಮ

ದೇಶದಲ್ಲಿ ಕೊರೊನಾವೈರಸ್ ರೋಗದ ಮೂರನೇ ಅಲೆಯು ನವೆಂಬರ್ ತಿಂಗಳಾಂತ್ಯ ಅಥವಾ ಡಿಸೆಂಬರ್ ತಿಂಗಳ ಆರಂಭದಲ್ಲಿ ತೀವ್ರಗೊಳ್ಳಲಿದೆ. ದೀಪಾವಳಿ ಹಬ್ಬ ಆರಂಭಕ್ಕೂ ಮೊದಲು ದುರ್ಬಲ ಆರೋಗ್ಯ ಸ್ಥಿತಿಯನ್ನು ಹೊಂದಿರುವವರು ಕೊವಿಡ್-19 ಲಸಿಕೆಯನ್ನು ಹಾಕಿಸಿಕೊಳ್ಳುವುದು ಉತ್ತಮ ಎಂದು ಬೆಂಗಳೂರಿನ ಇಂಡಿಯನ್ ಇನ್ಸ್ ಟಿಟ್ಯೂಟ್ ಆಫ್ ಪಬ್ಲಿಕ್ ಹೆಲ್ತ್ ಪ್ರಾಧ್ಯಾಪಕರು ಹಾಗೂ ಸಾಂಕ್ರಾಮಿಕ ರೋಗ ಶಾಸ್ತ್ರಜ್ಞ ಡಾ. ಗಿರಿಧರ್ ಬಾಬು ಎಚ್ಚರಿಸಿದ್ದಾರೆ. ಕೊರೊನಾವೈರಸ್ ಮೂರನೇ ಅಲೆಯು ಬಹುಶಃ ಯುವಕರ ಮೇಲೆ ಹೆಚ್ಚು ಪರಿಣಾಮಕಾರಿ ಆಗಿ ಪ್ರಭಾವ ಬೀರಲಿದೆ ಎಂದು ಕರ್ನಾಟಕದಲ್ಲಿ ರಾಷ್ಟ್ರೀಯ ಕೊವಿಡ್-19 ಕಾರ್ಯಪಡೆಯ ಸದಸ್ಯರೂ ಆಗಿರುವ ಡಾ. ಗಿರಿಧರ್ ಬಾಬು ಎಚ್ಚರಿಕೆ ನೀಡಿದ್ದಾರೆ.

3ನೇ ಅಲೆ ಪತ್ತೆ ಮತ್ತು ನಿಯಂತ್ರಣಕ್ಕೆ ಹೇಗಿರಬೇಕು ಕಾರ್ಯತಂತ್ರ?

3ನೇ ಅಲೆ ಪತ್ತೆ ಮತ್ತು ನಿಯಂತ್ರಣಕ್ಕೆ ಹೇಗಿರಬೇಕು ಕಾರ್ಯತಂತ್ರ?

ಇಂದಿನಿಂದ ಮುಂದಿನ ಡಿಸೆಂಬರ್ ತಿಂಗಳವರೆಗೂ ನಾವು ತೆಗೆದುಕೊಳ್ಳುವ ಪ್ರತಿಯೊಂದು ನಿರ್ಧಾರ ಮತ್ತು ನಿಯಮಗಳು ಕೊರೊನಾವೈರಸ್ ಮುಂದಿನ ಅಲೆಯ ಪತ್ತೆ ಹಾಗೂ ನಿಯಂತ್ರಿಸುವಲ್ಲಿ ಪ್ರಮುಖ ಪಾತ್ರ ವಹಿಸಲಿದೆ. ಅತಿಹೆಚ್ಚು ಜನರಿಗೆ ಕೊವಿಡ್-19 ಲಸಿಕೆ ನೀಡುವುದು, ಕೊರೊನಾವೈರಸ್ ಸೋಂಕು ಹರಡುವಿಕೆ ಕೇಂದ್ರಗಳಿಗೆ ಕಡಿವಾಣ ಹಾಕುವುದು, ಸಾರ್ವಜನಿಕವಾಗಿ ಜನರು ಹೆಚ್ಚಾಗಿ ಸೇರದಂತೆ ನೋಡಿಕೊಳ್ಳುವುದು, ಸ್ಥಳೀಯವಾಗಿ ಪತ್ತೆಯಾದ ಪ್ರಕರಣಗಳನ್ನು ಅದೇ ಸ್ಥಳಕ್ಕೆ ಸೀಮಿತವಾಗಿರುವಂತೆ ಮುನ್ನೆಚ್ಚರಿಕೆ ವಹಿಸಬೇಕಾದ ಅಗತ್ಯವಿದೆ ಎಂದು ಡಾ. ಗಿರಿಧರ್ ಹೇಳಿದ್ದಾರೆ.

ಕೊರೊನಾ ಎಚ್ಚರಿಕೆ: ಭಾರತೀಯ ರೈಲ್ವೆ ಸಂಚಾರಕ್ಕೂ ಮೊದಲು ನಿಯಮ ಓದಿ!ಕೊರೊನಾ ಎಚ್ಚರಿಕೆ: ಭಾರತೀಯ ರೈಲ್ವೆ ಸಂಚಾರಕ್ಕೂ ಮೊದಲು ನಿಯಮ ಓದಿ!

ಜನರಲ್ಲಿ ರೋಗ ನಿರೋಧಕ ಶಕ್ತಿ ಕಳೆದುಕೊಳ್ಳಿತ್ತಿದ್ದಾರೆ

ಜನರಲ್ಲಿ ರೋಗ ನಿರೋಧಕ ಶಕ್ತಿ ಕಳೆದುಕೊಳ್ಳಿತ್ತಿದ್ದಾರೆ

ಕೊರೊನಾವೈರಸ್ ಸಾಂಕ್ರಾಮಿಕ ಪಿಡುಗಿನ ಎರಡನೇ ಅಲೆಯಲ್ಲಿ ಅತಿಹೆಚ್ಚು ಜನರಿಗೆ ಸೋಂಕು ತಗುಲಿರುವ ಅಪಾಯವಿದೆ. ಈ ಹಂತದಲ್ಲಿ ಜನರು ಸೋಂಕಿತರೇ ಆಗಿದ್ದರೂ ಕೂಡಾ ಇದುವರೆಗೂ ಸೋಂಕಿನ ತಪಾಸಣೆ ಮಾಡಿಸಿಕೊಂಡಿಲ್ಲ. ಕೊವಿಡ್-19 ಸೋಂಕಿನ ತಪಾಸಣೆ ಮಾಡಿಸಿಕೊಳ್ಳುವ ವೇಳೆಗೆ ಆಗಲೇ ಅವರಲ್ಲಿನ ರೋಗ ನಿರೋಧಕ ಶಕ್ತಿಯು ಕುಂದಿರುತ್ತದೆ ಎಂದು ಸರ್ಕಾರದ ಗಣಿತಶಾಸ್ತ್ರಜ್ಞ ಮತ್ತು ಪ್ರಾಧ್ಯಾಪಕ ಎಂ ವಿದ್ಯಾಸಾಗರ್ ತಿಳಿಸಿದ್ದಾರೆ.

ಲಸಿಕೆ ನೀಡುವ ಕಾರ್ಯವನ್ನು ಕ್ಷಿಪ್ರಗೊಳಿಸಲು ಸಲಹೆ

ಲಸಿಕೆ ನೀಡುವ ಕಾರ್ಯವನ್ನು ಕ್ಷಿಪ್ರಗೊಳಿಸಲು ಸಲಹೆ

ಭಾರತದಲ್ಲಿ ಮುಂದಿನ ಆರು ತಿಂಗಳಿನಲ್ಲಿ ಕೊವಿಡ್-19 ಸೋಂಕು ತಗುಲಿದ ಜನರು ತಮ್ಮಲ್ಲಿನ ರೋಗ ನಿರೋಧಕ ಶಕ್ತಿಯನ್ನು ಆರು ತಿಂಗಳಿನಲ್ಲಿ ಕಳೆದುಕೊಳ್ಳುವ ಆಪಾಯವಿದೆ. ಜನರಲ್ಲಿ ರೋಗ ನಿರೋಧಕ ಶಕ್ತಿ ಕುಗ್ಗುವುದಕ್ಕೂ ಮೊದಲು ತಪಾಸಣೆ ವೇಗ ಹೆಚ್ಚಿಸಬೇಕಿದೆ. ಇದರ ಜೊತೆ ಕೊರೊನಾವೈರಸ್ ಲಸಿಕೆ ವಿತರಣೆ ಮಾಡಬೇಕಿದೆ. ಕೊವಿಡ್-19 ಲಸಿಕೆ ಪಡೆದುಕೊಳ್ಳುವಲ್ಲಿ ವಿಫಲರಾದರೆ ಅಂಥವರಲ್ಲಿ ರೋಗ ನಿರೋಧಕ ಶಕ್ತಿಯು ಕುಗ್ಗುವ ಅಪಾಯ ಮತ್ತಷ್ಟು ಹೆಚ್ಚಾಗಲಿದೆ. ಕೊವಿಡ್-19 ಅಪಾಯವನ್ನು ಎದುರಿಸುತ್ತಿರುವ ವರ್ಗಕ್ಕೆ ಮುಂದಿನ ಆರು ತಿಂಗಳ ಅವಧಿಯಲ್ಲಿ ಲಸಿಕೆ ನೀಡಿದರೆ ಮೂರನೇ ಅಲೆಯ ಭೀಕರತೆಯಿಂದ ಸ್ವಲ್ಪ ತಪ್ಪಿಸಿಕೊಳ್ಳುವುದಕ್ಕೆ ಸಾಧ್ಯವಾಗುತ್ತದೆ ಎಂದು ಪ್ರಾಧ್ಯಾಪಕ ಎಂ ವಿದ್ಯಾಸಾಗರ್ ಹೇಳಿದ್ದಾರೆ.

ಭಾರತದಲ್ಲಿ ಹೊಸ ಅಲೆಯ ಆತಂಕ: ಕೊರೊನಾ 3ನೇ ರೂಪಾಂತರ ತಳಿ!ಭಾರತದಲ್ಲಿ ಹೊಸ ಅಲೆಯ ಆತಂಕ: ಕೊರೊನಾ 3ನೇ ರೂಪಾಂತರ ತಳಿ!

ಕೊರೊನಾ ಲಸಿಕೆ ವಿತರಣೆ ವೇಗ ಹೆಚ್ಚಿಸುವುದು ಸೂಕ್ತ

ಕೊರೊನಾ ಲಸಿಕೆ ವಿತರಣೆ ವೇಗ ಹೆಚ್ಚಿಸುವುದು ಸೂಕ್ತ

ಕೊರೊನಾವೈರಸ್ ಸೋಂಕಿನ ವಿವಿಧ ಅಲೆಗಳನ್ನು ಎದುರಿಸುವ ನಿಟ್ಟಿನಲ್ಲಿ ಸರ್ಕಾರಗಳು ಯೋಜನೆಯನ್ನು ರೂಪಿಸಿಕೊಳ್ಳಬೇಕಾದ ಅಗತ್ಯವಿದೆ. ಎರಡನೇ ಅಲೆಯ ಬಗ್ಗೆ ತಾಂತ್ರಿಕ ಸಲಹಾ ಸಮಿತಿ ಮೊದಲೇ ಎಚ್ಚರಿಕೆ ನೀಡಿದ್ದು, ಇತರೆ ಯಾವುದೇ ಸ್ಪರ್ಧಾತ್ಮಕ ಆಯ್ಕೆಗಳಿಂದ ಬದಲಾವಣೆ ಸಾಧ್ಯವಿಲ್ಲ. ಲಸಿಕೆಯ ಒಟ್ಟುಗೂಡಿಸುವಿಕೆ, ಪರಿಣಾಮಕಾರಿ ಸಂವಹನ, ಕೊವಿಡ್-19 ಲಸಿಕೆಯ ವಿತರಣೆಯನ್ನು ಸಮರೋಪಾದಿಯಲ್ಲಿ ಹೆಚ್ಚಿಸುವ ಅಗತ್ಯವಿದೆ. ಇದರಿಂದ ಮುಂದಿನ ದಿನಗಳಲ್ಲಿ ಮೂರನೇ ಅಲೆಯನ್ನು ಸಮರ್ಥವಾಗಿ ಎದುರಿಸಲು ಸಾಧ್ಯವಾಗುತ್ತದೆ ಎಂದು ತಾಂತ್ರಿಕ ಸಲಹಾ ಸಮಿತಿ ಸದಸ್ಯ ಡಾ. ಗಿರಿಧರ್ ಬಾಬು ಸಲಹೆ ನೀಡಿದ್ದಾರೆ.

"ಐಸೋಲೇಟ್ ಕಾರ್ಯವಿಧಾನದಿಂದ ಕೊರೊನಾಗೆ ಕಡಿವಾಣ"

ಕರ್ನಾಟಕದಲ್ಲಿ ತೀವ್ರತೆಯನ್ನು ಹೆಚ್ಚಿಸಿಕೊಳ್ಳುತ್ತಿರುವ ಕೊರೊನಾವೈರಸ್ ಎರಡನೇ ಅಲೆಯ ಕಡಿವಾಣಕ್ಕೆ ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳಬೇಕಿದೆ. ಕೊರೊನಾವೈರಸ್ ಹೊಸ ಪ್ರಕರಣ ಮತ್ತು ಸಾವಿನ ಸಂಖ್ಯೆ ನಿಯಂತ್ರಿಸಲು ಸಮರೋಪಾದಿಯಲ್ಲಿ ಕಂಟೇನ್ಮೆಂಟ್ ವಲಯಗಳನ್ನು ಗುರುತಿಸಬೇಕಿದೆ. ಈ ಕಾರ್ಯ ಪ್ರಗತಿಗೆ ಸಾಧ್ಯವಾದಷ್ಟು ಬೇಗ ಜನರನ್ನು ಕೊರೊನಾವೈರಸ್ ಪರೀಕ್ಷೆಗೆ ಒಳಪಡಿಸಿ ಅಗತ್ಯ ಬಿದ್ದಲ್ಲಿ ಐಸೋಲೇಟ್ ಮಾಡಬೇಕಿದೆ. ಸಮಗ್ರ ರೋಗ ಕಣ್ಗಾವಲು ಯೋಜನೆ ಅಡಿಯಲ್ಲಿ ಜಿಲ್ಲಾಮಟ್ಟದಲ್ಲಿ ಕೊವಿಡ್-19 ಸೋಂಕು ತಪಾಸಣೆ ಕೇಂದ್ರಗಳನ್ನು ತೆರೆದು ಸೂಕ್ತ ಮೂಲಭೂತ ಸೌಕರ್ಯಗಳನ್ನು ಒದಗಿಸಬೇಕಿದೆ. ಈ ನಿಟ್ಟಿನಲ್ಲಿ ಪ್ರಧಾನಿ ನರೇಂದ್ರ ಮೋದಿಯವರು ಈಗಾಗಲೇ ಪ್ರತಿಯೊಂದು ಜಿಲ್ಲೆಯಲ್ಲಿ ಆಮ್ಲಜನಕ ಉತ್ಪಾದನೆ ಘಟಕವನ್ನು ಸ್ಥಾಪಿಸುವುದಾಗಿ ಘೋಷಿಸಿದ್ದಾರೆ ಎಂದು ಡಾ. ಗಿರಿಧರ್ ಬಾಬು ತಿಳಿಸಿದ್ದಾರೆ.

Explained: ಕುಟುಂಬದಲ್ಲಿ ಒಬ್ಬರಿಗೆ ಕೊರೊನಾ ಅಂಟಿದರೆ ಉಳಿದವರ ಕಥೆ!?Explained: ಕುಟುಂಬದಲ್ಲಿ ಒಬ್ಬರಿಗೆ ಕೊರೊನಾ ಅಂಟಿದರೆ ಉಳಿದವರ ಕಥೆ!?

ದೇಶದಲ್ಲಿ ಕಡಿಮೆಯಾದ ಕೊರೊನಾ ಲಸಿಕೆ ವಿತರಣೆ ವೇಗ?

ದೇಶದಲ್ಲಿ ಕಡಿಮೆಯಾದ ಕೊರೊನಾ ಲಸಿಕೆ ವಿತರಣೆ ವೇಗ?

ಕೊರೊನಾವೈರಸ್ ಲಸಿಕೆ ವಿತರಣೆ ಅಭಿಯಾನ ಆರಂಭವಾಗಿ 109 ದಿನಗಳಲ್ಲಿ ಶೇ.11ರಷ್ಟು ಫಲಾನುಭವಿಗಳಿಗೆ ಮಾತ್ರ ಲಸಿಕೆ ವಿತರಿಸಲಾಗಿದೆ. ದೇಶದಲ್ಲಿ ಈವರೆಗೂ 16,04,18,105 ಫಲಾನುಭವಿಗಳಿಗೆ ಲಸಿಕೆ ವಿತರಿಸಲಾಗಿದೆ. ರಾತ್ರಿ 8 ಗಂಟೆ ವೇಳೆಗೆ 11,49,009 ಮಂದಿಗೆ ಲಸಿಕೆ ನೀಡಲಾಗಿದೆ. ಈ ಪೈಕಿ 6,15,220 ಜನರಿಗೆ ಮೊದಲ ಡೋಸ್ ಹಾಗೂ 5,33,789 ಎರಡನೇ ಡೋಸ್ ಲಸಿಕೆ ನೀಡಲಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.

ಕೊರೊನಾವೈರಸ್ ಲಸಿಕೆ ವಿತರಣೆಯಲ್ಲಿ ಯಾರಿಗೆ ಆದ್ಯತೆ?

ಕೊರೊನಾವೈರಸ್ ಲಸಿಕೆ ವಿತರಣೆಯಲ್ಲಿ ಯಾರಿಗೆ ಆದ್ಯತೆ?

ಭಾರತದಲ್ಲಿ ಕೊರೊನಾವೈರಸ್ ಸೋಂಕಿನ ಹರಡುವಿಕೆ ನಿಯಂತ್ರಿಸುವ ಉದ್ದೇಶದಿಂದ ಕೆಲವು ರಾಜ್ಯಗಳಲ್ಲಿ ಮಾತ್ರ 18 ವರ್ಷ ಮೇಲ್ಪಟ್ಟ ಎಲ್ಲರಿಗೂ ಉಚಿತವಾಗಿ ಲಸಿಕೆ ವಿತರಿಸಲಾಗುತ್ತಿದೆ. ದೇಶದಲ್ಲಿ ಈವರೆಗೂ 6,62,619 ಜನರಿಗೆ ಲಸಿಕೆ ನೀಡಲಾಗಿದೆ. ಕೊರೊನಾವೈರಸ್ ಸೋಂಕಿಗೆ ಮೊದಲ ಅಭಿಯಾನದಲ್ಲಿ ವೈದ್ಯರು, ಮೊದಲ ಶ್ರೇಣಿ ಕಾರ್ಮಿಕರಿಗೆ ಲಸಿಕೆ ನೀಡಲು ನಿರ್ಧರಿಸಲಾಗಿತ್ತು. ಅದರಂತೆ ದೇಶದಲ್ಲಿ ಈವರೆಗೆ 94,61,633 ಆರೋಗ್ಯ ಕಾರ್ಯಕರ್ತರಿಗೆ ಮೊದಲ ಡೋಸ್ ಮತ್ತು 63,20,945 ಆರೋಗ್ಯ ಕಾರ್ಯಕರ್ತರಿಗೆ ಎರಡನೇ ಡೋಸ್ ನೀಡಲಾಗಿದೆ. 1,35,59,294 ಜನ ಮೊದಲ ಶ್ರೇಣಿ ಕಾರ್ಮಿಕರಿಗೆ ಮೊದಲ ಡೋಸ್ ಹಾಗೂ 73,21,052 ಕಾರ್ಮಿಕರಿಗೆ ಎರಡನೇ ಡೋಸ್ ಕೊವಿಡ್-19 ಲಸಿಕೆ ನೀಡಲಾಗಿದೆ.

ಮೊದಲು ಓದಿ: ಭಾರತದಲ್ಲಿ ಕೊರೊನಾವೈರಸ್ 2ನೇ ಅಲೆ ಲಕ್ಷಣಗಳ ಬಗ್ಗೆ ತಿಳಿದುಕೊಳ್ಳಿಮೊದಲು ಓದಿ: ಭಾರತದಲ್ಲಿ ಕೊರೊನಾವೈರಸ್ 2ನೇ ಅಲೆ ಲಕ್ಷಣಗಳ ಬಗ್ಗೆ ತಿಳಿದುಕೊಳ್ಳಿ

60 ವರ್ಷಕ್ಕಿಂತ ಹೆಚ್ಚು ವಯಸ್ಸಿನವರಿಗೆ ಲಸಿಕೆ

60 ವರ್ಷಕ್ಕಿಂತ ಹೆಚ್ಚು ವಯಸ್ಸಿನವರಿಗೆ ಲಸಿಕೆ

ಕೊರೊನಾ ಲಸಿಕೆ ವಿತರಣೆ ಎರಡನೇ ಹಂತದಲ್ಲಿ 45 ವರ್ಷ ಮೇಲ್ಪಟ್ಟ ಆಸ್ವಸ್ಥತೆಯನ್ನು ಹೊಂದಿರುವ ಹಾಗೂ 60 ವರ್ಷ ಮೇಲ್ಪಟ್ಟ ಎಲ್ಲರಿಗೂ ಲಸಿಕೆ ನೀಡಲು ಆರಂಭಿಸಲಾಗಿತ್ತು. ಅದರಂತೆ ದೇಶದಲ್ಲಿ ಈವರೆಗೂ 45 ವರ್ಷಕ್ಕಿಂತ ಮೇಲ್ಪಟ್ಟ 5,33,76,589 ಫಲಾನುಭವಿಗಳಿಗೆ ಮೊದಲ ಡೋಸ್ ಲಸಿಕೆ ನೀಡಲಾಗಿದ್ದು, 43,99,995 ಜನರಿಗೆ ಎರಡನೇ ಡೋಸ್ ಲಸಿಕೆ ನೀಡಲಾಗಿದೆ. 60 ವರ್ಷ ಮೇಲ್ಪಟ್ಟ 5,29,43,090 ಫಲಾನುಭವಿಗಳಿಗೆ ಮೊದಲ ಡೋಸ್ ಲಸಿಕೆ ನೀಡಲಾಗಿದ್ದು, 1,23,72,888 ಜನರಿಗೆ ಎರಡನೇ ಡೋಸ್ ಲಸಿಕೆ ನೀಡಲಾಗಿದೆ.

ಚಿಕ್ಕ ಮಕ್ಕಳಿಗೆ ಹೆಚ್ಚು ಅಪಾಯಕಾರಿ ಆಗಿರುವ ಮೂರನೇ ಅಲೆ

ಚಿಕ್ಕ ಮಕ್ಕಳಿಗೆ ಹೆಚ್ಚು ಅಪಾಯಕಾರಿ ಆಗಿರುವ ಮೂರನೇ ಅಲೆ

ಭಾರತದಲ್ಲಿ ಕೊರೊನಾವೈರಸ್ ಸೋಂಕಿನ ಮೂರನೇ ಅಲೆಯು ವಯಸ್ಕರಿಗಿಂತ ಚಿಕ್ಕ ಮಕ್ಕಳಿಗೆ ಹೆಚ್ಚು ಅಪಾಯಕಾರಿ ಆಗಿರುವ ಸಾಧ್ಯತೆಗಳಿವೆ. ಈವರೆಗೂ ಅತಿಹೆಚ್ಚು ವಯಸ್ಕರು ಕೊವಿಡ್-19 ಲಸಿಕೆ ಹಾಕಿಸಿಕೊಂಡಿದ್ದಾರೆ. ಮುಂದಿನ ಅಲೆಯಲ್ಲಿ ಕೊರೊನಾವೈರಸ್ ಮಕ್ಕಳಿಗೆ ಹೆಚ್ಚು ಅಪಾಯವನ್ನು ತಂದೊಡ್ಡುವ ನಿರೀಕ್ಷೆಯಿದೆ. ಏಕೆಂದರೆ ಈವರೆಗೂ ಚಿಕ್ಕ ಮಕ್ಕಳಿಗೆ ಕೊವಿಡ್-19 ಲಸಿಕೆ ಸೂಕ್ತವೋ ಅಲ್ಲವೋ ಎನ್ನುವುದು ಖಚಿತಪಟ್ಟಿಲ್ಲ. ಅಲ್ಲದೇ ಚಿಕ್ಕ ಮಕ್ಕಳಿಗಾಗಿ ಪ್ರತ್ಯೇಕ ಕೊರೊನಾವೈರಸ್ ಲಸಿಕೆಯನ್ನು ಕಂಡು ಹಿಡಿಯಲಾಗಿಲ್ಲ.

ದೇಶದಲ್ಲಿ ಮೇ 7ರಿಂದ 2ನೇ ಅಲೆ ವೇಗ ಹೆಚ್ಚಳ

ದೇಶದಲ್ಲಿ ಮೇ 7ರಿಂದ 2ನೇ ಅಲೆ ವೇಗ ಹೆಚ್ಚಳ

ಭಾರತದಲ್ಲಿ ಕೊರೊನಾವೈರಸ್ ಸಾಂಕ್ರಾಮಿಕ ರೋಗದ ಎರಡನೇ ಅಲೆಯ ಹರಡುವಿಕೆ ವೇಗ ಮೇ 7ರಿಂದ ಮತ್ತಷ್ಟು ಹೆೆಚ್ಚಾಗಲಿದೆ ಎಂದು ಪ್ರೊ. ಎಂ ವಿದ್ಯಾಸಾಗರ್ ಎಚ್ಚರಿಸಿದ್ದಾರೆ. ಪ್ರಸ್ತುತ ಪರಿಸ್ಥಿತಿಯಲ್ಲಿ ನಮ್ಮ ಅಂದಾಜಿನ ಪ್ರಕಾರ, ಕೊವಿಡ್-19 ಸೋಂಕಿನ ವೇಗ ಮೇ 7ರಿಂದ ಹೆಚ್ಚಾಗಲಿದ್ದು, ಹಲವು ರಾಜ್ಯಗಳಲ್ಲಿ ಈಗಾಗಲೇ ನಿಯಂತ್ರಣ ತಪ್ಪಿ ಹೋಗಿದೆ. ಆ ವಾರಾಂತ್ಯದ ವೇಳೆಗೆ ಸೋಂಕಿತ ಪ್ರಕರಣಗಳ ಸಂಖ್ಯೆಯು ಮಿತಿ ಮೀರಲಿದೆ ಎಂದು ತಿಳಿಸಿದ್ದಾರೆ.

ದೇಶದಲ್ಲಿ ಕೊವಿಡ್-19 ಸೋಂಕಿನ ಅಂಕಿ-ಸಂಖ್ಯೆ ಹೀಗಿದೆ

ದೇಶದಲ್ಲಿ ಕೊವಿಡ್-19 ಸೋಂಕಿನ ಅಂಕಿ-ಸಂಖ್ಯೆ ಹೀಗಿದೆ

ಭಾರತದಲ್ಲಿ ಕೊರೊನಾವೈರಸ್ ಸೋಂಕಿತ ಪ್ರಕರಣಗಳ ಸಂಖ್ಯೆ ಮತ್ತೊಮ್ಮೆ 4 ಲಕ್ಷದ ಗಡಿ ದಾಟಿದೆ. ಕಳೆದ 24 ಗಂಟೆಗಳಲ್ಲಿ 4,12,262 ಮಂದಿಗೆ ಕೊರೊನಾವೈರಸ್ ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ದೃಢಪಟ್ಟಿದ್ದು, 3,980 ಮಂದಿ ಮಹಾಮಾರಿಯಿಂದ ಪ್ರಾಣ ಬಿಟ್ಟಿದ್ದಾರೆ. ಒಂದು ದಿನದಲ್ಲಿ 3,29,113 ಕೊವಿಡ್-19 ಸೋಂಕಿತರು ಗುಣಮುಖರಾಗಿದ್ದಾರೆ. ಗುರುವಾರದ ಅಂಕಿ-ಅಂಶಗಳ ಪ್ರಕಾರ, ದೇಶದಲ್ಲಿ ಒಟ್ಟು 2,10,77,410 ಕೊರೊನಾವೈರಸ್ ಸೋಂಕಿತ ಪ್ರಕರಣಗಳು ವರದಿಯಾಗಿವೆ. ಈವರೆಗೂ 1,72,80,844 ಸೋಂಕಿತರು ಗುಣಮುಖರಾಗಿದ್ದು, ಒಟ್ಟು 23,01,68 ಸಾವಿನ ಪ್ರಕರಣಗಳು ಪತ್ತೆಯಾಗಿವೆ. ಭಾರತದಲ್ಲಿ 35,66,398 ಕೊವಿಡ್-19 ಸಕ್ರಿಯ ಪ್ರಕರಣಗಳಿವೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.

Recommended Video

ಮಹಾಯುದ್ದವನ್ನ ಜೈವಿಕ ಶಸ್ತ್ರಾಸ್ತ್ರಗಳೊಂದಿಗೆ ಹೋರಾಟ ಮಾಡಿ ಪ್ಲಾನ್! | Oneindia Kannada

English summary
When Is A Third Wave Of Covid-19 Likely To Hit India? Experts answers.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X