Mahindra Thar 5 Door: ಮಹೀಂದ್ರಾ ಥಾರ್ 5 ಡೋರ್ ಬುಕ್ಕಿಂಗ್ ಆರಂಭ ಯಾವಾಗ?-ಇಲ್ಲಿದೆ ಮಾಹಿತಿ
Mahindra Thar Roxx 5 Door: ಬಹುನಿರೀಕ್ಷಿತ ಯುವಪೀಳಿಗೆಯ ಪಂಚಪ್ರಾಣವಾದ ಮಹೀಂದ್ರಾ 5 ಡೋರ್ ಥಾರ್ ನಿನ್ನೆಯಷ್ಟೇ ಅಂದರೆ ಆಗಸ್ಟ್ 15 ಸ್ವಾತಂತ್ರ್ಯ ದಿನಾಚರಣೆಯಂದೇ ಮಾರುಕಟ್ಟಗೆ ಲಗ್ಗೆ ಇಟ್ಟಿದೆ. ಹಾಗಾದರೆ ಇದರ ಬುಕ್ಕಿಂಗ್ ಆರಂಭ ಯಾವಾಗಿನಿಂದ? ದರ, ವಿಶೇಷತೆಗಳ ಬಗ್ಗೆ ಸಂಪೂರ್ಣ ವಿವರವನ್ನು ಇಲ್ಲಿ ನೀಡಲಾಗಿದೆ ಗಮನಿಸಿ.
5 ಡೋರ್ ಥಾರ್ ಯಾವಾಗ ಬಿಡುಗಡೆಯಾಗುತ್ತದೆ ಎಂದು ಗ್ರಾಹಕರು ತುದಿಗಾಲಲ್ಲಿ ಕಾಯುತ್ತಿದ್ದರು. ಇದೀಗ ಈ ಕಾರು ಮಾರುಕಟ್ಟೆಗೆ ಲಗ್ಗೆ ಇಟ್ಟಿದೆ. ಈ ಹೊಸ ಮಹೀಂದ್ರ ಥಾರ್ ಅನ್ನು ಸಂಪೂರ್ಣವಾಗಿ ಅತ್ಯಾಧುನಿಕ ತಂತ್ರಜ್ಞಾನದೊಂದಿಗೆ ತಯಾರು ಮಾಡಲಾಗಿದೆ. ಹಾಗಾದರೆ ಇದರ ಸಂಪೂರ್ಣ ಮಾಹಿತಿ ಇಲ್ಲಿದೆ ತಿಳಿಯಿರಿ.

ದೇಶೀಯ ಮಾರುಕಟ್ಟೆಯಲ್ಲಿ 5-ಡೋರ್‌ನ ಮಾರುತಿ ಸುಜುಕಿ ಜಿಮ್ನಿ ಮತ್ತು ಫೋರ್ಸ್ ಗೂರ್ಖಾಗೆ ಭಾರಿ ಪೈಪೋಟಿ ನೀಡಲು ಥಾರ್ ರಾಕ್ಸ್ ಎಸ್‌ಯುವಿಯನ್ನು 5-ಡೋರ್ ಆಯ್ಕೆಯಲ್ಲಿ ಬಿಡುಗಡೆ ಮಾಡಿದೆ. ಈ ಕಾರು ಕೈಗೆಟುಕುವ ಬೆಲೆಯಲ್ಲಿ ಖರೀದಿಗೆ ಲಭ್ಯವಿದ್ದು, ಅತ್ಯಾಧುನಿಕ ವಿನ್ಯಾಸ ಹಾಗೂ ವೈಶಿಷ್ಟ್ಯಗಳನ್ನು ಇದು ಹೊಂದಿದೆ.
ಮಹೀಂದ್ರಾ ಥಾರ್ ರಾಕ್ಸ್ 5-ಡೋರ್ ಎಸ್‌ಯುವಿ ಸ್ಪರ್ಧಾತ್ಮಕ ಬೆಲೆಯಲ್ಲಿ ಖರೀದಿಗೆ ದೊರೆಯುತ್ತದೆ. 12.99 ಲಕ್ಷ ರೂಪಾಯಿನಿಂದ 18.99 ಲಕ್ಷದ ವರೆಗೆ ಎಕ್ಸ್ ಶೋರೂಂ ಬೆಲೆಯನ್ನು ಹೊಂದಿದೆ. ಅಕ್ಟೋಬರ್ 3ರಿಂದ ಈ ಕಾರಿನ ಬುಕ್ಕಿಂಗ್ ಆರಂಭ ಆಗಲಿದೆ. ದಸರಾ ವೇಳೆಗೆ ವಿತರಣೆ ಕಾರ್ಯ ಆರಂಭವಾಗುವ ನಿರೀಕ್ಷೆಯಿದೆ. MX1, MX3, MX5, AX3L, AX5L, ಮತ್ತು AX7L ಸೇರಿದಂತೆ ವಿವಿಧ ರೂಪಾಂತರಗಳ (ವೇರಿಯೆಂಟ್) ಆಯ್ಕೆಯಲ್ಲಿ ಲಭ್ಯವಿದೆ.
ನೂತನ ಥಾರ್ ರಾಕ್ಸ್ ಆಕರ್ಷಕವಾದ ವಿನ್ಯಾಸವನ್ನು ಹೊಂದಿದೆ. ಎಲ್ಇಡಿ ಪ್ರೊಜೆಕ್ಟರ್ ಹೆಡ್‌ಲೈಟ್‌ಗಳು, ಎಲ್‌ಇಡಿ ಡಿಆರ್‌ಎಲ್‌ಗಳು, ಸರ್ಕ್ಯೂಲರ್ ಫಾಗ್ ಲೈಟ್‌ಗಳು, ಅತ್ಯಾಧುನಿಕ ಬಂಪರ್ ಮತ್ತು ಗ್ರಿಲ್‌ನ್ನು ಹೊಂದಿದೆ. ಅಲ್ಲದೆ, ಡುಯಲ್-ಟೋನ್ ಅಲಾಯ್ ವೀಲ್‌ಗಳು, ಟೈಲ್‌ಗೇಟ್-ಮೌಂಟೆಡ್ ಸ್ಪೇರ್ ವೀಲ್ ಹಾಗೂ ಎಲ್ಇಡಿ ಟೈಲ್‌ಲೈಟ್‌ಗಳನ್ನು ಹೊಂದಿದೆ.
ಈ ಮಹೀಂದ್ರಾ ಥಾರ್ ರಾಕ್ಸ್ 4,428 ಎಂಎಂ ಉದ್ದ, 1,870 ಎಂಎಂ ಅಗಲ ಮತ್ತು 1,923 ಎಂಎಂ ಎತ್ತರ ಇದೆ. ವೀಲ್‌ಬೇಸ್ 2,850 ಎಂಎಂ ಇದ್ದು, ಮುಂಭಾಗ ಹಾಗೂ ಹಿಂಭಾಗ ಇರುವ ವೀಲ್ ಟ್ರ್ಯಾಕ್ 1,580 ಎಂಎಂ ಅಳತೆಯಲ್ಲಿದೆ. 57 ಲೀಟರ್ ಸಾಮರ್ಥ್ಯದ ಫ್ಯುಯೆಲ್ ಟ್ಯಾಂಕ್ ಅನ್ನು ಹೊಂದಿದೆ.
ಹೊಸ ಮಹೀಂದ್ರಾ ಥಾರ್ ರಾಕ್ಸ್ 5-ಡೋರ್ ಎಸ್‌ಯುವಿಯು ಟ್ಯಾಂಗೋ ರೆಡ್, ಎವರೆಸ್ಟ್ ವೈಟ್, ಫಾರೆಸ್ಟ್ ಗ್ರೀನ್, ನೆಬುಲಾ ಬ್ಲ್ಯೂ ಸೇರಿದಂತೆ 7 ಆಕರ್ಷಕ ಬಣ್ಣಗಳಲ್ಲಿ ಲಭ್ಯವಿದೆ. ಇನ್ನು ಪ್ರವಾಸದ ವೇಳೆ ಹೆಚ್ಚಿನ ಲಗೇಜ್ ಸಾಗಿಸಲು 447 ಲೀಟರ್ ಸಾಮರ್ಥ್ಯದ ಬೂಟ್ ಸ್ಪೇಸ್ ಅನ್ನು ಇದು ಹೊಂದಿದೆ.
ನೂತನ ಥಾರ್ ರಾಕ್ಸ್ ಶಕ್ತಿಯುತ ಪವರ್‌ಟ್ರೇನ್‌ಗಳನ್ನು ಹೊಂದಿದೆ. 2.0-ಲೀಟರ್ 4-ಸಿಲಿಂಡರ್ ಟರ್ಬೊ ಪೆಟ್ರೋಲ್ ಮತ್ತು 2-ಲೀಟರ್ 4-ಸಿಲಿಂಡರ್ ಡೀಸೆಲ್ ಎಂಜಿನ್ ಆಯ್ಕೆಯಲ್ಲಿ ಖರೀದಿಗೆ ಸಿಗುತ್ತದೆ. ರೂಪಾಂತರಗಳಿಗೆ ಅನುಗುಣವಾಗಿ 6-ಸ್ಪೀಡ್ ಮ್ಯಾನುವಲ್ ಅಥವಾ 6-ಸ್ಪೀಡ್ ಆಟೋಮೆಟಿಕ್ ಗೇರ್ ಬಾಕ್ಸ್ ಅನ್ನು ಒಳಗೊಂಡಿದೆ. ಆರ್‌ಡಬ್ಲ್ಯೂಡಿ ತಂತ್ರಜ್ಞಾನವನ್ನು ಹೊಂದಿದೆ.
ಈ ಕಾರು 10.25-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಫುಲ್ ಡಿಜಿಟಲ್ ಇನ್ಸ್ಟ್ರುಮೆಂಟ್ ಕ್ಲಸ್ಟರ್, ವೆಂಟಿಲೇಟೆಡ್ ಫ್ರಂಟ್ ಸೀಟ್, ಪನೋರಮಿಕ್ ಸನ್‌ರೂಫ್ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಒಳಗೊಂಡಿದೆ. ಸುರಕ್ಷತೆಗಾಗಿ 6 ಏರ್‌ಬ್ಯಾಗ್, ಲೆವೆಲ್-2 ಎಡಿಎಎಸ್, ಇಎಸ್‌ಸಿ (ಎಲೆಕ್ಟ್ರಾನಿಕ್ ಸ್ಟೆಬಿಲಿಟಿ ಕಂಟ್ರೋಲ್) ಹಾಗೂ 4 ಡಿಸ್ಕ್ ಬ್ರೇಕ್‌ಗಳನ್ನು ಹೊಂದಿದೆ.












Click it and Unblock the Notifications