ಗುಜರಾತ್ ನೂತನ ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಕಿರು ಪರಿಚಯ
ಅಹ್ಮದಾಬಾದ್, ಸೆಪ್ಟೆಂಬರ್ 12: ಗುಜರಾತಿನಲ್ಲಿ ನಡೆದ ಅನಿರೀಕ್ಷಿತ ರಾಜಕೀಯ ಬೆಳವಣಿಗೆಯೊಂದರಲ್ಲಿ 59 ವರ್ಷದ ಭೂಪೇಂದ್ರ ಪಟೇಲ್ ರಾಜ್ಯದ ನೂತನ ಮುಖ್ಯಮಂತ್ರಿ ಆಗಿ ಆಯ್ಕೆ ಆಗಿದ್ದಾರೆ. ರಾಜ್ಯ ವಿಧಾನಸಭೆ ಚುನಾವಣೆಯು 15 ತಿಂಗಳು ಬಾಕಿ ಇರುವಂತೆ ಬಿಜೆಪಿ ತೆಗೆದುಕೊಂಡಿರುವ ನಿರ್ಧಾರ ಸಾಕಷ್ಟು ಕುತೂಹಲ ಕೆರಳಿಸಿದೆ.
ಶನಿವಾರ ಗುಜರಾತ್ ಮುಖ್ಯಮಂತ್ರಿ ಸ್ಥಾನಕ್ಕೆ ವಿಜಯ್ ರೂಪಾನಿ ರಾಜೀನಾಮೆ ಸಲ್ಲಿಸಿದ ಬೆನ್ನಲ್ಲೇ ನೂತನ ಮುಖ್ಯಮಂತ್ರಿ ಯಾರು ಎನ್ನುವ ಪ್ರಶ್ನೆ ಹುಟ್ಟಿಕೊಂಡಿತ್ತು. ಭಾನುವಾರ ಸಂಜೆ 5 ಗಂಟೆ ವೇಳೆಗೆ ಆ ಪ್ರಶ್ನೆಗೆ ಉತ್ತರ ಸಿಕ್ಕಿದೆ. ಮುಂದಿನ ಚುನಾವಣೆಯನ್ನು ಗಮನದಲ್ಲಿ ಇಟ್ಟುಕೊಂಡಿರುವ ಹೈಕಮಾಂಡ್ ಪಾಟೀದಾರ್ ಸಮುದಾಯವನ್ನು ಒಲಿಸಿಕೊಳ್ಳುವ ಉದ್ದೇಶದಿಂದ ಭೂಪೇಂದ್ರ ಪಟೇಲ್ ರಿಗೆ ಮುಖ್ಯಮಂತ್ರಿ ಸ್ಥಾನವನ್ನು ನೀಡಿದೆ.
ಭಾನುವಾರ ಗಾಂಧಿನಗರದ ಭಾರತೀಯ ಜನತಾ ಪಕ್ಷದ ಶಾಸಕಾಂಗ ಸಭೆಯಲ್ಲಿ ನಡೆದ ಸುದೀರ್ಘ ಚರ್ಚೆ ಬಳಿಕ ಕೇಂದ್ರ ಸಚಿವ ನರೇಂದ್ರ ಸಿಂಗ್ ತೋಮರ್ ಅಧಿಕೃತವಾಗಿ ನೂತನ ಮುಖ್ಯಮಂತ್ರಿ ಹೆಸರು ಘೋಷಿಸಿದರು. ಪ್ರಸ್ತುತ ಗುಜರಾತ್ ಸಿಎಂ ಆಗಿ ಆಯ್ಕೆಯಾಗಿರುವ ಭೂಪೇಂದ್ರ ಪಟೇಲ್ ಗುರಿತು ಕೆಲವು ಕುತೂಹಲಕಾರಿ ಅಂಶಗಳನ್ನು ಮುಂದೆ ಓದಿ.

ಭೂಪೇಂದ್ರ ಪಟೇಲ್ ಕುರಿತು ಕಿರುಪರಿಚಯ:
* ಉತ್ತರ ಪ್ರದೇಶದ ಗವರ್ನರ್ ಮತ್ತು ಗುಜರಾತ್ ಮಾಜಿ ಮುಖ್ಯಮಂತ್ರಿ ಆನಂದಿಬೆನ್ ಪಟೇಲ್ ಆಪ್ತರಾಗಿದ್ದಾರೆ ಎಂದು ಹೇಳಲಾದ ಭೂಪೇಂದ್ರ ಪಟೇಲ್ ಗುಜರಾತ್ ನ ಘಟ್ಲೋಡಿಯಾದ ಮೊದಲ ಬಾರಿಗೆ ಶಾಸಕರಾಗಿದ್ದು, 2017ರ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ಸಿನ ಶಶಿಕಾಂತ್ ಪಟೇಲ್ ವಿರುದ್ಧ 1 ಲಕ್ಷಕ್ಕೂ ಅಧಿಕ ಮತಗಳಿಂದ ಗೆದ್ದಿದ್ದರು.
* ಭೂಪೇಂದ್ರ ಪಟೇಲ್ ಈ ಹಿಂದೆ ಅಹಮದಾಬಾದ್ ನಗರಾಭಿವೃದ್ಧಿ ಪ್ರಾಧಿಕಾರದ (AUDA) ಅಧ್ಯಕ್ಷರಾಗಿದ್ದರು ಮತ್ತು ಅಮದವಾಡ್ ಮುನ್ಸಿಪಲ್ ಕಾರ್ಪೊರೇಶನ್ (AMC) ನ ಸ್ಥಾಯಿ ಸಮಿತಿಯ ನೇತೃತ್ವ ವಹಿಸಿದ್ದರು.
* ಸರ್ಕಾರಿ ಪಾಲಿಟೆಕ್ನಿಕ್ ಅಹಮದಾಬಾದ್‌ನಿಂದ ಸಿವಿಲ್ ಎಂಜಿನಿಯರಿಂಗ್‌ನಲ್ಲಿ ಡಿಪ್ಲೊಮಾ ಪಡೆದಿದ್ದಾರೆ. ಅವರ 2017 ರ ಚುನಾವಣಾ ಪತ್ರಿಕೆಗಳಲ್ಲಿ 5 ಕೋಟಿಗೂ ಹೆಚ್ಚು ಆಸ್ತಿ ಘೋಷಿಸಿದ್ದಾರೆ.
* ಅವರು ಪಟೇಲ್ ಅಥವಾ ಪಾಟಿದಾರ್ ಸಮುದಾಯಕ್ಕೆ ಸೇರಿದವರಾಗಿದ್ದು, ಮುಂದಿನ ವರ್ಷ ನಡೆಯಲಿರುವ ವಿಧಾನಸಭಾ ಚುನಾವಣೆಗೆ ಮುನ್ನ ಬಿಜೆಪಿ ಸಮಾಧಾನಪಡಿಸಲು ಉತ್ಸುಕವಾಗಿದೆ ಎಂದು ವರದಿಯಾಗಿದೆ.
* ಬಿಜೆಪಿ ಮೂಲಗಳ ಪ್ರಕಾರ ಭೂಪೇಂದ್ರ ಪಟೇಲ್ ಅವರು ಪಕ್ಷದ ಅಚ್ಚರಿಯ ನಿರ್ಧಾರವಾಗಿದ್ದು ಅವರನ್ನು ಪ್ರಮುಖ ಸ್ಪರ್ಧಿಗಳ ಪಟ್ಟಿಯಲ್ಲಿ ಸೇರಿಸಿರಲಿಲ್ಲ.
-
Bengaluru: ಬೆಂಗಳೂರಿನ ಹೋಟೆಲ್ಗಳಲ್ಲಿ ಗ್ರಾಹಕರಿಗೆ ಶಾಕ್: ಸಾಂಬಾರ್ ಬದಲು ಬೇರೆ ಆಯ್ಕೆ - ಪೋಸ್ಟ್ ವೈರಲ್, ಡಿಸಿ ಹೇಳಿದ್ದೇನು -
Sulekere: ಮಂಡ್ಯದಲ್ಲಿ ಸೂಳೇಕೆರೆ ಮರುನಾಮಕರಣ ಚರ್ಚೆ: ಇತಿಹಾಸಕ್ಕೆ ಮಸಿ ಬಳಿಯಬೇಡಿ ಎಂದ ಜಗದೀಶ್ ಕೊಪ್ಪ -
B Khata: ಬಿ ಖಾತಾದಿಂದ ಎ ಖಾತಾ ಪರಿವರ್ತನೆ ಸವಾಲುಗಳು: ವೆಚ್ಚ, ಪ್ರಕ್ರಿಯೆ ಸ್ವಂತ ವಿವರ ಹಂಚಿಕೊಂಡ ಆಸ್ತಿದಾರ ಶ್ರೀನಿವಾಸ ಮಠ -
Rain in Karnataka: ಬಿರು ಬಿಸಿಲಿನ ನಡುವೆ ಬೆಂಗಳೂರು ಸೇರಿ ಕರ್ನಾಟಕದ ಈ ಜಿಲ್ಲೆಗಳಲ್ಲಿ ನಾಲ್ಕು ದಿನ ಮಳೆ: ಐಎಂಡಿ ರಿಪೋರ್ಟ್ -
ವಿಶ್ವಕಪ್ ಕಿರೀಟದ ಹಿಂದೆ ದೈವಬಲ: ಕರಾವಳಿಯ ಅಳಿಯ ಸೂರ್ಯಕುಮಾರ್ ಯಾದವ್ ನಡೆಗೆ ಮೆಚ್ಚುಗೆಗಳ ಸುರಿಮಳೆ -
New Airport: 3 ಜಿಲ್ಲೆ ಜನರ ಅನುಕೂಲಕ್ಕಾಗಿ ಸರ್ಕಾರದ ಮಾಸ್ಟರ್ ಪ್ಲ್ಯಾನ್: ಬಳ್ಳಾರಿ ಬಳಿ ಹೊಸ ಏರ್ಪೋರ್ಟ್ -
KSRTC: ಸಾರಿಗೆ ಲೋಕಕ್ಕೆ 'ಪಲ್ಲಕ್ಕಿ' ಮೆರುಗು: ವಿಶ್ವ ಮಹಿಳಾ ದಿನಾಚರಣೆ ಪ್ರಯುಕ್ತ 115 ಹೊಸ ಬಸ್ಗಳ ಲೋಕಾರ್ಪಣೆ -
ಬೆಂಗಳೂರಲ್ಲಿ ಗ್ಯಾಸ್ ಏಜೆನ್ಸಿಗಳ ಭರ್ಜರಿ ದಂಧೆ: ಸಿಲಿಂಡರ್ ಸಿಗದೇ ಗ್ರಾಹಕರು ಕಂಗಾಲು; ಕಾಳಸಂತೆಯಲ್ಲಿ ₹3,000ಕ್ಕೆ ಮಾರಾಟ -
LPG Gas: ಎಲ್ಪಿಜಿ ನಿಯಮಗಳಲ್ಲಿ ಭಾರೀ ಬದಲಾವಣೆ; ಗ್ರಾಹಕರು ದೂರು ನೀಡಲು ಸಹಾಯವಾಣಿ ಸಂಖ್ಯೆಗಳ ಬಿಡುಗಡೆ -
Gold Rate March 13: ಸತತ 3ನೇ ದಿನವೂ ಚಿನ್ನ - ಬೆಳ್ಳಿ ಬೆಲೆ ಭರ್ಜರಿ ಕುಸಿತ, ಎಷ್ಟಾಗಿದೆ ಇಂದಿನ ಬಂಗಾರದ ಬೆಲೆ -
Resort: ಕರ್ನಾಟಕದಲ್ಲಿ ಶುರುವಾಯ್ತು ರೆಸಾರ್ಟ್ ರಾಜಕೀಯ: ‘ಅವರು ನಮ್ಮ ಅತಿಥಿಗಳು’ ಎಂದ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ -
Horoscope March 13: ಈ ರಾಶಿಯವರ ಬದುಕಲ್ಲಿ ಸಕಾರಾತ್ಮಕ ಬೆಳವಣಿಗೆ, ಅಧಿಕ ಲಾಭ; ದಿನ ಭವಿಷ್ಯ












Click it and Unblock the Notifications