ಟಾರೋ ಭವಿಷ್ಯ: ಬಿಜೆಪಿಯಿಂದಲೇ 'ಮಹಾ' ಸಿಎಂ ಆಗಿ ಅಚ್ಚರಿಯ ಹೆಸರು
ಮುಂಬೈ, ಅಕ್ಟೋಬರ್ 09: ಮಹಾರಾಷ್ಟ್ರ ಚುನಾವಣೆಯಲ್ಲಿ ಬಿಜೆಪಿ ಹಾಗೂ ಶಿವಸೇನಾ ಮೈತ್ರಿಕೂಟಕ್ಕೆ ಜಯ ಸಿಗುವ ಬಗ್ಗೆ ಚುನಾವಣಾ ಪೂರ್ವ ಸಮೀಕ್ಷೆಯಿಂದ ಮುನ್ಸೂಚನೆ ಸಿಕ್ಕಿದೆ. ಈ ಸಮೀಕ್ಷೆಗಳು ನಿಜವಾಗಿ ಬಿಜೆಪಿ ಮೈತ್ರಿ ಕೂಟ ಅಧಿಕಾರಕ್ಕೆ ಬಂದರೆ ಮುಂದಿನ ಮುಖ್ಯಮಂತ್ರಿಯಾಗಬಹುದು ಎಂಬ ಕುತೂಹಲ ಪ್ರಶ್ನೆಗೆ ಟಾರೋ ಕಾರ್ಡ್ ಭವಿಷ್ಯ ಇಲ್ಲಿದೆ.
ಎಬಿಪಿ ನ್ಯೂಸ್ -ಸಿ ವೋಟರ್ ನಡೆಸಿದ ಸಮೀಕ್ಷೆಯಲ್ಲಿ ಬಿಜೆಪಿ-ಶಿವಸೇನಾ ಮೈತ್ರಿಕೂಟಕ್ಕೆ ಭರ್ಜರಿ ಜಯ ಸಿಗಲಿದೆ ಎಂದು ತಿಳಿದು ಬಂದಿದೆ. ಮಹಾರಾಷ್ಟ್ರದ 288 ವಿಧಾನಸಭಾ ಕ್ಷೇತ್ರಗಳಲ್ಲಿ 3239 ಅಭ್ಯರ್ಥಿಗಳು ಕಣದಲ್ಲಿದ್ದಾರೆ. ಬಿಜೆಪಿ ಹಾಗೂ ಶಿವಸೇನಾ ಮೈತ್ರಿಕೂಟದ ವಿರುದ್ಧ ಕಾಂಗ್ರೆಸ್ ಹಾಗೂ ಎನ್ಸಿಪಿ ಮೈತ್ರಿ ವಿರುದ್ಧ ನೇರ ಹಣಾಹಣಿ ನಿರೀಕ್ಷಿಸಲಾಗಿದೆ.
288 ವಿಧಾನಸಭಾ ಕ್ಷೇತ್ರಗಳ ಪೈಕಿ ಬಿಜೆಪಿ-ಶಿವಸೇನಾ ಮೈತ್ರಿಕೂಟಕ್ಕೆ 200 ಸ್ಥಾನಗಳನ್ನು ಗೆಲ್ಲುವ ಸಾಧ್ಯತೆಯಿದೆ ಎಂದು ಎಬಿಪಿ ನ್ಯೂಸ್ ಸಿ ವೋಟರ್ಸ್ ಸಮೀಕ್ಷೆ ಹೇಳಿದೆ. ಕಳೆದ ಲೋಕಸಭೆ ಚುನಾವಣೆ ಫಲಿತಾಂಶದಲ್ಲಿ ಬಿಜೆಪಿ-ಶಿವಸೇನಾ 49 ಸ್ಥಾನಗಳ ಪೈಕಿ 41 ಸ್ಥಾನ ಗಳಿಸಿತ್ತು. ಬಿಜೆಪಿಯಿಂದ ಮತ್ತೊಮ್ಮೆ ದೇವೇಂದ್ರ ಫಡ್ನವೀಸ್ ಮುಖ್ಯಮಂತ್ರಿ ಅಭ್ಯರ್ಥಿಯಾಗಿದ್ದು, ಅಧಿಕಾರ ಹಂಚಿಕೆ ಹಾಗೂ ಸಿಎಂ ಸ್ಥಾನ ಹಂಚಿಕೆ ಬಗ್ಗೆ ಚರ್ಚೆಯಾಗಿದ್ದು ಕೂಡಾ ಪರಿಣಾಮಕಾರಿಯಾಗಬಹುದು ಎಂದು ವಿಶ್ಲೇಷಿಸಲಾಗಿದೆ. ಆದರೆ ಟಾರೋ ಕಾರ್ಡ್ ಭವಿಷ್ಯ ಬೇರೆಯದ್ದೇ ಕಥೆ ಹೇಳುತ್ತಿದೆ.

ಮೈತ್ರಿಯಿಂದ ಲಾಭ ಬಂದರೂ ಸಿಎಂ ಸ್ಥಾನಕ್ಕಾಗಿ ಪೈಪೋಟಿ
2014ರಲ್ಲಿ ಪ್ರತ್ಯೇಕವಾಗಿ ಸ್ಪರ್ಧಿಸಿದ್ದ ಈ ಪಕ್ಷಗಳು ಈಗ ಮತ್ತೆ ಒಂದಾಗಿವೆ. ಬಿಜೆಪಿ 260 ಕ್ಷೇತ್ರ ಹಾಗೂ ಸೇನಾ 282 ಕ್ಷೇತ್ರಗಳಲ್ಲಿ ಸ್ಪರ್ಧಿಸಿದ್ದರೂ ಮ್ಯಾಜಿಕ್ ನಂಬರ್ 145 ದಾಟಲು ಆಗಿರಲಿಲ್ಲ. ಅಕ್ಟೋಬರ್ 21ರಂದು ಮತದಾನ ಹಾಗೂ ಅಕ್ಟೋಬರ್ 24ರಂದು ಫಲಿತಾಂಶ ಹೊರಬರಲಿದೆ.
ಸದ್ಯ ಮುಖ್ಯಮಂತ್ರಿ ರೇಸಿನಲ್ಲಿರುವ ದೇವೇಂದ್ರ ಫಡ್ನವೀಸ್ ಹಾಗೂ ಆದಿತ್ಯ ಠಾಕ್ರೆ ಇಬ್ಬರಿಗೂ ಅಕ್ಟೋಬರ್ 21 ರ ಮತದಾನ ಒಳ್ಳೆದಿನವಾಗಿದೆ. ಅಕ್ಟೋಬರ್ 24 ಆದಿತ್ಯ ಠಾಕ್ರೆಗೆ ಒಳ್ಳೆ ದಿನವಾಗಿದ್ದು, ದೇವೇಂದ್ರರನ್ನು ಹಿಂದಿಕ್ಕುವ ಮುನ್ಸೂಚನೆ ಸಿಕ್ಕಿದೆ. ಈ ದಿನಗಳಲ್ಲಿ ಮುಂದಿನ ಸಿಎಂ ಬಗ್ಗೆ ಬಿಜೆಪಿ ನಿರ್ಧರಿಸಿದರೆ, ಆದಿತ್ಯ ಮುಂದಿನ ಸಿಎಂ ಆಗುವ ಅವಕಾಶ ನಿಚ್ಚಳವಾಗಿದೆ.

ಸಿಎಂ ಸ್ಥಾನದ ಬಗ್ಗೆ ನಿರ್ಧಾರ ವಿಳಂಬವಾದರೆ
ಸಿಎಂ ಸ್ಥಾನದ ಬಗ್ಗೆ ಬಿಜೆಪಿ ಅಧ್ಯಕ್ಷ ಅಮಿತ್ ಶಾ ಅವರು ನಿರ್ಧಾರ ಅಂತಿಮಗಿಳಿಸುವುದನ್ನು ವಿಳಂಬ ಮಾಡಿದರೆ ಏನಾಗಲಿದೆ.?
ನವೆಂಬರ್ 1 ರಿಂದ ನ 10ರೊಳಗೆ ನಿರ್ಧರಿಸಿದರೆ ದೇವೇಂದ್ರಗೆ ಲಾಭವಾಗಲಿದೆ. ನ 11 ರಿಂದ ನ. 15ರೊಳಗೆ ನಿರ್ಧರಿಸಿದರೂ ದೇವೇಂದ್ರಗೆ ಲಾಭವಾಗಲಿದ್ದು ಅಥವಾ ಬಿಜೆಪಿಯಿಂದಲೇ ಯಾರಾದರೂ ಸಿಎಂ ಆಗುತ್ತಾರೆ.
ಸಿಎಂ ಆಯ್ಕೆ ಬಗ್ಗೆ ನಿರ್ಧಾರ ವಿಳಂಬವಾದಷ್ಟು ಆದಿತ್ಯ ಉಪ ಮುಖ್ಯಮಂತ್ರಿಯಾಗುವ ಸಾಧ್ಯತೆ ಹೆಚ್ಚಿದೆ ಎಂದು ಟಾರೋ ಕಾರ್ಡ್ ತಿಳಿಸಿವೆ.

ಅಚ್ಚರಿಯ ಹೆಸರು ಹೊರಬರಲಿದೆ
ಶಿವಸೇನಾದ ಉದ್ಧವ್ ಠಾಕ್ರೆ, ಬಿಜೆಪಿ ಅಧ್ಯಕ್ಷ ಚಂದ್ರಕಾಂತ್ ಪಾಟೀಲ್ ಅವರಿಗೂ ಸಿಎಂ ಆಗುವ ಯೋಗವಿಲ್ಲ. ದೇವೇಂದ್ರ ಫಡ್ನವೀಸ್ ಅವರ ಹೆಸರು ಹೇಗೆ ಅಚ್ಚರಿಯಾಗಿ ಮೂಡಿಬಂದಿತ್ತೋ ಅದರಂತೆ ಈ ಬಾರಿಯೂ ಬಿಜೆಪಿಯಿಂದಲೇ ಹೊಸಬರ ಹೆಸರು ಮುಂಚೂಣಿಗೆ ಬರಲಿದೆ. ಬಿಜೆಪಿಯಿಂದ ಬೇರೆ ಯಾರಾದ್ರೂ ಸಿಎಂ ಆಗುವ ಸಾಧ್ಯತೆಯಿದೆ ಎಂದರೆ ವಿತ್ತ ಸಚಿವರಾಗಿದ್ದ ಸುಧೀರ್ ಮುಂಗಂಟಿವಾರ್ ಹೆಸರು.

ಎಬಿಪಿ ನ್ಯೂಸ್ ಸಿ ವೋಟರ್ ಪ್ರಕಾರ
ಎಬಿಪಿ ನ್ಯೂಸ್ ಸಿ ವೋಟರ್ ಪ್ರಕಾರ ಬಿಜೆಪಿ-ಶಿವಸೇನಾ ಮೈತ್ರಿ ಸಾಧಿಸಿದ್ದು ಈ ಬಾರಿ ಯಶ ತಂದುಕೊಡಲಿದೆ. 205 ಸ್ಥಾನ ಬಹುತೇಕ ಗೆಲ್ಲಲಿದೆ ಎಂದು ಹೇಳಿದೆ. ಈ ಬಾರಿ ಕೂಡಾ ಮೈತ್ರಿ ಸಾಧಿಸುವುದು ಕಷ್ಟ ಸುಲಭವಾಗಿರಲಿಲ್ಲ. ಸೆಪ್ಟೆಂಬರ್ 30ಕ್ಕೆ ಕೊನೆಗೂ ಮೈತ್ರಿ ಬಗ್ಗೆ ಸ್ಪಷ್ಟ ಚಿತ್ರಣ ಸಿಕ್ಕಿತು. ಅದಲ್ಲದೆ, ಆಡಳಿತಾರೂಢ ಬಿಜೆಪಿ ಪಕ್ಷದಲ್ಲಿ ಎದ್ದಿದ್ದ ಬಂಡಾಯವನ್ನು ಶಮನವಾಗಿದ್ದರಿಂದ ಅಧಿಕೃತ ಅಭ್ಯರ್ಥಿಗಳ ಎದುರು ಸ್ಪರ್ಧಿಸಿದ್ದವರು ನಾಮಪತ್ರ ಹಿಂಪಡೆದುಕೊಂಡಿದ್ದು ಫಲ ನೀಡಲಿದೆ.
-
ಕರ್ನಾಟಕ ದ್ವಿತೀಯ PUC ಫಲಿತಾಂಶಕ್ಕೆ ತಟ್ಟಿದ ಚುನಾವಣಾ ನೀತಿ ಸಂಹಿತೆ ಬಿಸಿ: ಏಪ್ರಿಲ್ 8ಕ್ಕೂ ರಿಸಲ್ಟ್ ಬರೋದು ಡೌಟ್? -
Viral: ಕಚೇರಿಗೆ ಬಂದ ಪೋಷಕರು, ಮ್ಯಾನೇಜರ್ ಬಳಿ ಮಗಳ ವರ್ತನೆ ಬಗ್ಗೆ ವಿಚಾರಣೆ: ಶಾಲಾ ದಿನಗಳನ್ನು ನೆನಪಿಸಿದ ವಿಡಿಯೋ -
Divorce Celebration: ಡಿವೋರ್ಸ್ ಪಡೆದ ಮಗಳಿಗೆ ಸಿಹಿ ತಿನ್ನಿಸಿ ಅದ್ದೂರಿ ಸ್ವಾಗತ: ತಂದೆಯ ಸಂಭ್ರಮಾಚರಣೆ ವಿಡಿಯೋ ವೈರಲ್ -
Gold Rate April 7: ಚಿನ್ನ - ಬೆಳ್ಳಿ ಬೆಲೆ ಸತತ 3ನೇ ದಿನವೂ ಇಳಿಕೆ; ಚಿನ್ನ ಪ್ರಿಯರಿಗೆ ಗುಡ್ನ್ಯೂಸ್ -
Viral Video: ಆರ್ಸಿಬಿ Vs ಸಿಎಸ್ಕೆ ಪಂದ್ಯ; ಕರ್ನಾಟಕ Vs ತಮಿಳುನಾಡು ಮಾಡಬೇಡಿ ಎಂದ ಸಿಎಸ್ಕೆ ಫ್ಯಾನ್ -
Viral Video: ನಾಳೆಯೇ ನಿಮ್ಮ ಕೆಲಸ ಹೋದರೆ ಏನು ಮಾಡುವಿರಿ? ಮಾಜಿ ಗೂಗಲ್ ಉದ್ಯೋಗಿಯ ಪ್ರಶ್ನೆಗೆ ದಂಗಾದ ನೆಟ್ಟಿಗರು -
Karnataka Rain Updates: ಚಂಡಮಾರುತ ಪ್ರಸರಣ ಪ್ರಭಾವ: ಬೆಂಗಳೂರು ಸೇರಿ ಕರ್ನಾಟಕದ 8 ಜಿಲ್ಲೆಗಳಲ್ಲಿ 3ದಿನ ಮಳೆ -
Horoscope April 8: ಕೆಲವರಿಗೆ ಯಶಸ್ಸು, ಕೆಲವರಿಗೆ ಜಾಗ್ರತೆ ಸೂಚಿಸುವ ದಿನ ಭವಿಷ್ಯ -
April 7 Horoscope: ಸ್ಪರ್ಧೆಯಲ್ಲಿ ಜಯ ಮತ್ತು ಹೊಸ ಉದ್ಯೋಗ ಅವಕಾಶಗಳು -
Job Resignation: ಇರೋ ಕೆಲಸಕ್ಕೆ ರಾಜೀನಾಮೆ ಕೊಡುವ ಮೊದಲು ಕೇಳಿಕೊಳ್ಳಬೇಕಾದ 17 ಪ್ರಶ್ನೆಗಳಿವು -
KSRTC: ಕನಕಪುರ-ಬೆಂಗಳೂರು ಬಸ್ ಪ್ರಯಾಣಿಕರಿಗೆ ಶುಭ ಸುದ್ದಿ, 20 ವರ್ಷದ ಬಳಿಕ 4 ಬಸ್ ಸಂಚಾರ -
ಪತಿ ವಿಜಯ್ ದೇವರಕೊಂಡ ಜೊತೆ ಮೊದಲ ಬಾರಿಗೆ ತವರಿಗೆ ಬಂದ ರಶ್ಮಿಕಾ: ತಂದೆಯಿಂದ ಐಷಾರಾಮಿ ಬಂಗಲೆ ಉಡುಗೊರೆ












Click it and Unblock the Notifications