ಕ್ಯಾನ್ಸರ್ ಗೆದ್ದ ಯುವಕರಿಗೆ ಕೊರೊನಾ ಲಸಿಕೆಯ ಭಯವೇಕೆ?
ವಾಷಿಂಗ್ಟನ್, ಜುಲೈ 05: ಕ್ಯಾನ್ಸರ್‌ನಂತಹ ಭಯಾನಕ ರೋಗವನ್ನೇ ಗೆದ್ದ ಯುವಕರಿಗೆ ಕೊರೊನಾ ಲಸಿಕೆ ಕುರಿತು ಭಯವೇಕೆ ಎನ್ನುವ ಚರ್ಚೆ ಹುಟ್ಟಿಕೊಂಡಿದೆ.
ಅಮೆರಿಕದಲ್ಲಿ ಇತ್ತೀಚೆಗೆ ನಡೆಸಿದ ಸಮೀಕ್ಷೆಯೊಂದರಲ್ಲಿ ಕ್ಯಾನ್ಸರ್‌ನಿಂದ ಚೇತರಿಸಿಕೊಂಡ ಯುವಕರು ಕೊರೊನಾ ಲಸಿಕೆ ಹಾಕಿಸಿಕೊಳ್ಳಲು ಹಿಂದೇಟು ಹಾಕುತ್ತಿದ್ದಾರೆ ಎನ್ನುವ ವಿಷಯ ಬಹಿರಂಗಗೊಂಡಿತ್ತು.
ಕ್ಯಾನ್ಸರ್‌ನಿಂದ ಬದುಕುಳಿದವರು ಕ್ಯಾನ್ಸರ್ ಚಿಕಿತ್ಸೆ ಅಥವಾ ಕ್ಯಾನ್ಸರ್‌ನಿಂದಾಗಿ ತುಂಬಾ ದುರ್ಬಲಗೊಂಡು ರೋಗ ನಿರೋಧಕ ಶಕ್ತಿಯನ್ನು ಕಳೆದುಕೊಂಡಿರುತ್ತಾರೆ, ಇಂಥವರಿಗೆ ಕೊರೊನಾ ಸೋಂಕು ತಗುಲುವ ಸಾಧ್ಯತೆ ಹೆಚ್ಚಿದೆ.
ಹೀಗಾಗಿ ಕ್ಯಾನ್ಸರ್‌ನಿಂದ ಚೇತರಿಸಿಕೊಂಡವರು ಬಹುಬೇಗ ಕೊರೊನಾ ಲಸಿಕೆಯನ್ನು ಪಡೆಯುವಂತೆ ಅಮೆರಿಕದ ತಜ್ಞರು ಸಲಹೆ ನೀಡಿದ್ದಾರೆ.

ಕೊರೊನಾ ಲಸಿಕೆ ಪಡೆಯಲೇಬೇಕು
ಕ್ಯಾನ್ಸರ್‌ನಿಂದ ಬದುಕುಳಿದವರು ಕಡ್ಡಾಯವಾಗಿ ಕೊರೊನಾ ಲಸಿಕೆಯನ್ನು ಸ್ವೀಕರಿಸಬೇಕು, ಮತ್ತು ಲಸಿಕೆ ಬಗ್ಗೆ ಹೆಚ್ಚಿನ ಮಾಹಿತಿ ಇಲ್ಲದಿದ್ದರೆ ಆರೋಗ್ಯ ತಂಡಗಳ ಬಳಿ ಸಲಹೆ ಪಡೆಯಬೇಕೆಂದು ರಾಷ್ಟ್ರೀಯ ಸಂಸ್ಥೆಗಳು ಬಲವಾಗಿ ಶಿಫಾರಸು ಮಾಡಿವೆ.

ಕ್ಯಾನ್ಸರ್‌ನಿಂದ ಬದುಕುಳಿದವರ ಮೇಲೆ ಅಧ್ಯಯನ
ಕೆಲವು ಯುವಕರು ಕ್ಯಾನ್ಸರ್‌ನಿಂದ ಬದುಕುಳಿದಿದ್ದಾರೆ ಆದರೆ ಕೊರೊನಾ ಲಸಿಕೆ ಪಡೆಯಲು ಹಿಂಜರಿಯುತ್ತಿದ್ದಾರೆ ಎಂದು 'ಜೆಎನ್‌ಸಿಐ ಕ್ಯಾನ್ಸರ್ ಸ್ಪೆಕ್ಟ್ರಮ್ 'ನಲ್ಲಿ ಪ್ರಕಟವಾದ ಅಧ್ಯಯನದಲ್ಲಿ ವಿವರಿಸಲಾಗಿದೆ.
ಈ ಅಧ್ಯಯನವು ಪಶ್ಚಿಮ ಅಮೆರಿಕದ 342 ಯುವಕರನ್ನು ನಿರ್ಣಯಿಸಿದೆ, ಅವರೆಲ್ಲರೂ 15ರಿಂದ 39 ವರ್ಷದೊಳಗಿನವರಾಗಿದ್ದಾರೆ ಹಾಗೂ ಕ್ಯಾನ್ಸರ್‌ನಿಂದ ಬಳಲುತ್ತಿದ್ದಾರೆ.ಸಮೀಕ್ಷೆ ನಡೆಸಿದವರಲ್ಲಿ ಹೆಚ್ಚಿನವರು ಲಸಿಕೆ ಪಡೆಯಲು ಉದ್ದೇಶಿಸಿದರೆ ಶೇ.37.1 ರಷ್ಟು ಮಂದಿ ಕೋವಿಡ್ ಲಸಿಕೆ ಪಡೆಯಲು ಹಿಂದೇಟು ಹಾಕುತ್ತಿದ್ದಾರೆ.
ಕೊರೊನಾ ಸೋಂಕಿನ ಭಯ ಹೆಚ್ಚು
ಜೂನ್ 2021ಕ್ಕೆ ಅಮೆರಿಕದಲ್ಲಿ 33 ಮಿಲಿಯನ್ ಮಂದಿಗೆ ಕೊರೊನಾ ಸೋಂಕು ತಗುಲಿದ್ದು, 6 ಲಕ್ಷಕ್ಕೂ ಅಧಿಕ ಮಂದಿ ಮೃತಪಟ್ಟಿದ್ದಾರೆ. ಕೊರೊನಾ ಸೋಂಕನ್ನು ನಿಯಂತ್ರಿಸಲು ಹಾಗೂ ತಡೆಗಟ್ಟಲು ಲಸಿಕೆಯೇ ಉತ್ತಮ ಮಾರ್ಗವಾಗಿದೆ. ಆದರೂ ಅಮೆರಿಕದಲ್ಲಿ ಶೇ.20-30ರಷ್ಟು ಮಂದಿ ಲಸಿಕೆ ಪಡೆಯಲು ಹಿಂಜರಿಯುತ್ತಿದ್ದಾರೆ.
ಇಂತಹ ಹಿಂಜರಿಯುವಿಕೆಯಿಂದಾಗಿ ಕ್ಯಾನ್ಸರ್‌ನಿಂದ ಗುಣಮುಖರಾದರೂ ಕೊರೊನಾದಿಂದ ಸಾವು ಸಂಭವಿಸುವ ಸಾಧ್ಯತೆ ಹೆಚ್ಚಿರುತ್ತದೆ. ರಕ್ತದ ಕ್ಯಾನ್ಸರ್ ಮತ್ತು ಲಿಂಫೋಮಾ ಹಾಗೂ ಹಲವು ಚಿಕಿತ್ಸೆಯು ಪ್ರತಿರಕ್ಷಣಾ ವ್ಯವಸ್ಥೆ ಮೇಲೆ ದುಷ್ಪರಿಣಾಮ ಬೀರುತ್ತದೆ.
ದೀರ್ಘಕಾಲೀನ ಪರಿಣಾಮ
ಹಲವು ವಿಧದ ಕ್ಯಾನ್ಸರ್‌ಗಳಿವೆ, ಇದರಲ್ಲಿ ಹಲವರು ಕ್ಯಾನ್ಸರ್‌ನಿಂದಾಗಿ ದೀರ್ಘಕಾಲೀನ ಪರಿಣಾಮವನ್ನು ಎದುರಿಸುತ್ತಿರುತ್ತಾರೆ. ಇದಕ್ಕೆ ಹೆಚ್ಚಿನ ಸಂಶೋಧನೆ ಅಗತ್ಯವಿದೆ. ಕ್ಯಾನ್ಸರ್‌ನಿಂದ ಗುಣಮುಖರಾದ ಎಷ್ಟು ದಿನಗಳ ಬಳಿಕ ಲಸಿಕೆ ಪಡೆಯಬೇಕು ಎನ್ನುವ ಕುರಿತು ಮಾಹಿತಿ ಇನ್ನೂ ಲಭ್ಯವಾಗಬೇಕಿದೆ.
ಪ್ರಸ್ತುತ ಸೆಂಟರ್ ಫಾರ್ ಡಿಸೀಸ್ ಕಂಟ್ರೋಲ್ ಆಂಡ್ ಪ್ರಿವೆನ್ಷನ್ ಹೇಳಿರುವ ಮಾಹಿತಿ ಪ್ರಕಾರ, ಕ್ಯಾನ್ಸರ್‌ನಂತಹ ಮಾರಣಾಂತಿಕ ಕಾಯಿಲೆಗಳನ್ನು ಹೊಂದಿರುವವರಿಗೆ ಕೊರೊನಾ ಸೋಂಕಿನ ಅಪಾಯ ಹೆಚ್ಚಿರುತ್ತದೆ. ಹಾಗಾಗಿ ಕ್ಯಾನ್ಸರ್‌ನಿಂದ ಬದುಕುಳಿದವರು ಕಡ್ಡಾಯವಾಗಿ ಕೊರೊನಾ ಲಸಿಕೆ ಹಾಕಿಸಿಕೊಳ್ಳುವಂತೆ ಸಲಹೆ ನೀಡಲಾಗಿದೆ.
ಕ್ಯಾನ್ಸರ್ ರೋಗಿಗಳಲ್ಲಿ ಕಾಡುತ್ತಿರುವ ಪ್ರಶ್ನೆ
ಕೊರೊನಾ ಸೋಂಕು ತಗುಲುದಂತೆ ಮನೆಯಲ್ಲಿಯೇ ಇರುತ್ತೇವೆ, ಈಗಾಗಲೇ ಇಂತಹ ಮಾರಣಾಂತಿಕ ಕಾಯಿಲೆಯಿಂದ ಚೇತರಿಸಿಕೊಂಡಿದ್ದೇವೆ, ಈಗ ಕೊರೊನಾ ಲಸಿಕೆ ಪಡೆದರೆ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುವುದಿಲ್ಲವೇ, ಹಾಗೆಯೇ ಲಸಿಕೆ ಎಷ್ಟು ಪರಿಣಾಮಕಾರಿ ಎಂಬುದು ಪ್ರಶ್ನೆಯಾಗಿದೆ.
ಸ್ಟೆಮ್ ಸೆಲ್ ಟ್ರಾನ್ಸ್‌ಪ್ಲಾನ್ಟ್, ಕಾರ್ ಟಿ ಸೆಲ್ ಥೆರಪಿ ಸೇರಿದಂತೆ ಹಲವು ಚಿಕಿತ್ಸೆಯು ರೋಗಿಯ ದೇಹವನ್ನು ತುಂಬಾ ದುರ್ಬಲಗೊಳಿಸುತ್ತದೆ. ಇಷ್ಟೇ ಅಲ್ಲದೆ ಕೀಮೋ ಥೆರಪಿ, ರೇಡಿಯೇಷನ್ ಥೆರಪಿ, ಡ್ರಗ್ ಥೆರಪಿ ಕೂಡ ಮನುಷ್ಯನ ದೇಹವನ್ನು ನಿತ್ರಾಣವನ್ನಾಗಿಸುತ್ತದೆ.-
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
ಬೆಂಗಳೂರು ಬಿಸಿನೆಸ್ ಕಾರಿಡಾರ್ ಯೋಜನೆಗೆ ಚಾಲನೆ: ಕಾಮಗಾರಿಗೆ 3,348 ಕೋಟಿ ರೂ ಟೆಂಡರ್ ಆಹ್ವಾನ -
Kerosene: ಎಲ್ಪಿಜಿ ಸಮಸ್ಯೆಗೆ ಕೇಂದ್ರದಿಂದ ಹೊಸ ಪರಿಹಾರ: ಮತ್ತೆ ಸಿಗಲಿದೆ ಸೀಮೆಎಣ್ಣೆ, ಪೆಟ್ರೋಲ್ ಬಂಕ್ಗಳಲ್ಲಿ ವಿತರಣೆ -
Dolly Dhananjay: ಆ ಚಿತ್ರಕಥೆ.. 6 ತಿಂಗಳು ನನ್ನ ಟೇಬಲ್ ಮೇಲೆ ಬಿದ್ದಿತ್ತು: ನಟ ಡಾಲಿ ಧನಂಜಯ್ -
SSLC Maths Exam: ಎಸ್ಎಸ್ಎಲ್ಸಿ ಗಣಿತ ಪರೀಕ್ಷೆಯಲ್ಲಿ ಪಠ್ಯದ ಹೊರತಾದ ಪ್ರಶ್ನೆಗಳ ಆರೋಪ, ಕೃಪಾಂಕಕ್ಕಾಗಿ ಹೆಚ್ಚಿದ ಒತ್ತಾಯ -
ಪರಮಾತ್ಮ ಹೇಳಿದ್ರೂ ಹಿಂದೆ ಸರಿಯಲ್ಲ ಎಂದಿದ್ದ ಕಾಂಗ್ರೆಸ್ನ ಸಾದಿಕ್ ಪೈಲ್ವಾನ್ ನಾಮಪತ್ರ ಹಿಂಪಡೆಯಲು ಇದೆ ಹಲವು ಕಾರಣ -
Tamil Nadu Election: ತನ್ನ ಡ್ರೈವರ್ ಮಗನಿಗೆ MLA ಟಿಕೆಟ್ ಘೋಷಿಸಿದ ನಟ ದಳಪತಿ ವಿಜಯ್, ಭಾವುಕ ಕ್ಷಣದ ವಿಡಿಯೋ ವೈರಲ್ -
ವಿರಾಟ್ ಅಸಲಿ ಆಟ ಇನ್ನೂ ಬಾಕಿಯಿದೆ; ಕಿಂಗ್ ಕೊಹ್ಲಿಗೆ ವಿಶೇಷ ಮನವಿ ಮಾಡಿಕೊಂಡ ಅಂಬಟಿ ರಾಯುಡು, ಭಾರೀ ವೈರಲ್ -
Bengaluru Weather: ನಗರಕ್ಕೆ ಇಂದು ಸೋಮವಾರವು ಗುಡುಗು ಸಹಿತ ಮಳೆ ಎಚ್ಚರಿಕೆ, ಸವಾರರೇ ಗಮನಿಸಿ -
Prakash Raj Mother passed Away: ನಟ ಪ್ರಕಾಶ್ ರಾಜ್ ತಾಯಿ ಸ್ವರ್ಣಲತಾ ನಿಧನ, ಚಿತ್ರರಂಗದ ಗಣ್ಯರಿಂದ ಸಂತಾಪ












Click it and Unblock the Notifications