ರಾಷ್ಟ್ರಪತಿ ಚುನಾವಣೆಯಲ್ಲಿ ಪ್ರತಿಪಕ್ಷಗಳಿಗೆ ಪ್ರಬಲ ಅಭ್ಯರ್ಥಿ ಏಕೆ ಬೇಕು?
ಮುಂಬೈ, ಜೂನ್ 17: ಭಾರತದಲ್ಲಿ ಮುಂಬರುವ ರಾಷ್ಟ್ರಪತಿ ಚುನಾವಣೆಯನ್ನು ಪ್ರತಿಪಕ್ಷಗಳು ಗಂಭೀರವಾಗಿ ತೆಗೆದುಕೊಳ್ಳಬೇಕಾದ ಅನಿವಾರ್ಯತೆ ಎಷ್ಟರ ಮಟ್ಟಿಗಿದೆ ಎಂಬುದನ್ನು ಶಿವಸೇನೆಯ ಮುಖವಾಣಿ ಸಾಮ್ನಾ ತನ್ನ ವರದಿಯಲ್ಲಿ ವಿವರಿಸಿದೆ.
ರಾಷ್ಟ್ರಪತಿ ಚುನಾವಣೆಗೆ ಪ್ರತಿಪಕ್ಷಗಳು ಸಮರ್ಥ ಮತ್ತು ಪ್ರಬಲ ಅಭ್ಯರ್ಥಿಯನ್ನು ಕಣಕ್ಕೆ ಇಳಿಸದಿದ್ದರೆ, ಇಂಥ ಪ್ರತಿಪಕ್ಷವು ಮುಂದಿನ ಪ್ರಧಾನಮಂತ್ರಿ ಅಭ್ಯರ್ಥಿ ಅನ್ನು ಹೇಗೆ ತಾನೇ ಆಯ್ಕೆ ಮಾಡಿಕೊಳ್ಳುವುದಕ್ಕೆ ಸಾಧ್ಯ ಎಂಬ ಪ್ರಶ್ನೆಯು ಜನರಲ್ಲಿ ಹುಟ್ಟಿಕೊಳ್ಳುತ್ತದೆ.
2024ರ ಲೋಕಸಭೆ ಚುನಾವಣೆಗೂ ಪೂರ್ವದಲ್ಲಿ ಎದುರಾಗಿರುವ ಈ ರಾಷ್ಟ್ರಪತಿ ಚುನಾವಣೆಗೆ ವಿರೋಧ ಪಕ್ಷಗಳು ಪ್ರಬಲ ಅಭ್ಯರ್ಥಿಯನ್ನು ಸ್ಪರ್ಧೆಗೆ ಇಳಿಸಲೇಬೇಕು ಎಂಬುದರ ಕುರಿತು ಸಾಮ್ನಾದ ವರದಿಯಲ್ಲಿ ಉಲ್ಲೇಖಿಸಲಾಗಿದೆ.

ರಾಷ್ಟ್ರಪತಿ ಚುನಾವಣೆ ಎಂದರೆ 2 ಹೆಸರು ಸಾಮಾನ್ಯ
ದೇಶದಲ್ಲಿ ರಾಷ್ಟ್ರಪತಿ ಚುನಾವಣೆಯು ಎದುರಾದಾಗ ಸಾಮಾನ್ಯವಾಗಿ ಮಹಾತ್ಮಾ ಗಾಂಧಿ ಮೊಮ್ಮಗ ಗೋಪಾಲಕೃಷ್ಣ ಗಾಂಧಿ ಮತ್ತು ನ್ಯಾಷನಲ್ ಕಾನ್ಫರೆನ್ಸ್‌ನ ಫಾರೂಕ್ ಅಬ್ದುಲ್ಲಾ ಹೆಸರು ಕೇಳಿ ಬರುತ್ತದೆ. ಆದರೆ ಇವರು ಪ್ರತಿಪಕ್ಷಗಳ ಪ್ರಬಲ ಅಭ್ಯರ್ಥಿಗಳು ಎನ್ನುವಂತಹ ಗಟ್ಟಿತನವನ್ನು ಹೊಂದಿಲ್ಲ," ಎಂದು ಶಿವಸೇನೆ ಮುಖವಾಣಿ ಸಾಮ್ನಾದ ಸಂಪಾದಕೀಯದಲ್ಲಿ ಹೇಳಲಾಗಿದೆ.
ಕೇಂದ್ರ ಸರ್ಕಾರ ಸಹ "ಪ್ರಬಲ" ಅಭ್ಯರ್ಥಿಯನ್ನು ಅಖಾಡಕ್ಕೆ ಇಳಿಸುವ ಸಾಧ್ಯತೆಗಳು ತೀರಾ ವಿರಳವಾಗಿದೆ. ಐದು ವರ್ಷಗಳ ಹಿಂದೆ ಎರಡರಿಂದ ಮೂರು ಹೆಸರನ್ನು ರಾಷ್ಟ್ರಪತಿ ಅಭ್ಯರ್ಥಿಯ ಪಟ್ಟಿಯಲ್ಲಿ ಗುರುತಿಸಲಾಗಿದ್ದು, ಅದರ ಪೈಕಿ ರಾಮನಾಥ್ ಕೋವಿಂದ್ ಹೆಸರನ್ನು ಆಯ್ಕೆ ಮಾಡಲಾಗಿತ್ತು. ಈ ಬಾರಿಯೂ ಸಹ ಅವರನ್ನೇ ಮುಂದುವರಿಸುವ ಸಾಧ್ಯತೆಯಿದೆ ಎಂದು ಅದು ಹೇಳಿದೆ.

ಜುಲೈ 18ರಂದು ನಡೆಯುವ ರಾಷ್ಟ್ರಪತಿ ಚುನಾವಣೆ
ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅಧಿಕಾರವಧಿಯು ಜುಲೈ 24ರಂದು ಕೊನೆಗೊಳ್ಳಲಿದ್ದು, ಅವರ ಉತ್ತರಾಧಿಕಾರಿಯನ್ನು ಆಯ್ಕೆ ಮಾಡುವುದಕ್ಕಾಗಿ ಜುಲೈ 18ರಂದು ಚುನಾವಣೆ ನಡೆಯಲಿದೆ. ರಾಷ್ಟ್ರಪತಿ ಚುನಾವಣೆಗೆ ನಾಮಪತ್ರ ಸಲ್ಲಿಸುವ ಪ್ರಕ್ರಿಯೆಯು ಬುಧವಾರದಿಂದ ಪ್ರಾರಂಭವಾಗಿದೆ.

ರಾಷ್ಟ್ರಪತಿ ಆಗಲ್ಲ ಎಂದಿರುವ ಶರದ್ ಪವಾರ್
ಕಳೆದ ಜೂನ್ 15ರಂದು ದೆಹಲಿಯ ಕಾನ್ಸ್ಟಿಟ್ಯೂಶನ್ ಕ್ಲಬ್ ಆಫ್ ಇಂಡಿಯಾದಲ್ಲಿ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನೇತೃತ್ವದಲ್ಲಿ ನಡೆದ ಮಹತ್ವದ ಸಭೆ ವೇಳೆ ರಾಷ್ಟ್ರಪತಿ ಚುನಾವಣೆಗೆ ಶರದ್ ಪವಾರ್ ಹೆಸರು ನಾಮನಿರ್ದೇಶನ ಮಾಡುವ ಕುರಿತು ಪ್ರಸ್ತಾಪಿಸಲಾಯಿತು. ಆದರೆ ಎನ್‌ಸಿಪಿ ಮುಖ್ಯಸ್ಥರು ಈ ಪ್ರಸ್ತಾಪವನ್ನು ನಿರಾಕರಿಸಿದ್ದರು.
ಅಂದಿನ ಸಭೆಯಲ್ಲಿ ಕಾಂಗ್ರೆಸ್, ಸಿಪಿಐ, ಸಿಪಿಐ(ಎಂ), ಸಿಪಿಐಎಂಎಲ್, ಆರ್‌ಎಸ್‌ಪಿ, ಶಿವಸೇನೆ, ಎನ್‌ಸಿಪಿ, ಆರ್‌ಜೆಡಿ, ಎಸ್‌ಪಿ, ನ್ಯಾಷನಲ್ ಕಾನ್ಫರೆನ್ಸ್, ಪಿಡಿಪಿ, ಜೆಡಿ(ಎಸ್), ಡಿಎಂಕೆ, ಆರ್‌ಎಲ್‌ಡಿ, ಐಯುಎಂಎಲ್ ಮತ್ತು ಜೆಎಂಎಂ ಸೇರಿದಂತೆ ಒಟ್ಟು 16 ಪಕ್ಷಗಳ ನಾಯಕರು ಮಹತ್ವದ ಸಭೆಯಲ್ಲಿ ಭಾಗವಹಿಸಿದ್ದರು. ಈ ನಡುವೆ ಜೂನ್ 20 ಅಥವಾ ಜೂನ್ 21 ರಂದು ಮುಂಬೈನಲ್ಲಿ ಶರದ್ ಪವಾರ್ ವಿರೋಧ ಪಕ್ಷಗಳ ಎರಡನೇ ಸಭೆ ಕರೆಯಲಿದ್ದಾರೆ ಎಂದು ತಿಳಿದು ಬಂದಿದೆ.

ವಿರೋಧ ಪಕ್ಷಗಳ ರಾಷ್ಟ್ರಪತಿ ಅಭ್ಯರ್ಥಿ ಯಾರು?
"ಪವಾರ್ ಇಲ್ಲದಿದ್ದರೆ, ನಂತರ ಯಾರು? ಈ ಪ್ರಶ್ನೆಗೆ ಉತ್ತರಗಳನ್ನು ಹುಡುಕುವ ಕೆಲಸವನ್ನು ಆರು ತಿಂಗಳ ಹಿಂದೆ ಮಾಡಿದ್ದರೆ, ಅದು ಈ ಚುನಾವಣೆಯ ಪ್ರತಿಪಕ್ಷದ ಗಂಭೀರತೆಯನ್ನು ಪ್ರದರ್ಶಿಸುತ್ತದೆ," ಎಂದು ಪಕ್ಷ ಹೇಳಿದೆ. ಪ್ರತಿಪಕ್ಷಗಳು ರಾಷ್ಟ್ರಪತಿ ಚುನಾವಣೆಗೆ ಪ್ರಬಲ ಅಭ್ಯರ್ಥಿಯನ್ನು ಕಣಕ್ಕಿಳಿಸಲು ಸಾಧ್ಯವಾಗದಿದ್ದರೆ, 2024ರಲ್ಲಿ ಸಮರ್ಥ ಪ್ರಧಾನಿಯನ್ನು ಹೇಗೆ ನೀಡುವುದಕ್ಕೆ ಸಾಧ್ಯವಾಗುತ್ತದೆ. ಈ ಪ್ರಶ್ನೆ ಜನರ ಮನಸ್ಸಿನಲ್ಲಿ ಬರುತ್ತದೆ," ಎಂದು ಶಿವಸೇನೆ ಮುಖವಾಣಿ ಸಾಮ್ನಾ ಸಂಪಾದಕೀಯದಲ್ಲಿ ತಿಳಿಸಿದೆ.

ಪ್ರಧಾನಮಂತ್ರಿ ಅಭ್ಯರ್ಥಿ ಆಗುವುದಕ್ಕೆ ನಾಯಕರ ಕ್ಯೂ!
2024ರ ಲೋಕಸಭೆ ಚುನಾವಣೆ ವೇಳೆ ಪ್ರತಿಪಕ್ಷದ ಪ್ರಧಾನಮಂತ್ರಿ ಅಭ್ಯರ್ಥಿ ಆಗುವುದಕ್ಕೆ ಅನೇಕ ನಾಯಕರು ಸರದಿ ಸಾಲಿನಲ್ಲಿ ನಿಂತಿದ್ದಾರೆ. ಆದರೆ ರಾಷ್ಟ್ರಪತಿ ಚುನಾವಣೆಯಲ್ಲಿ ಮಾತ್ರ ಯಾವೊಬ್ಬ ನಾಯಕರು ಅಭ್ಯರ್ಥಿ ಆಗುವುದಕ್ಕೆ ಮನಸ್ಸು ಮಾಡುತ್ತಿಲ್ಲ. ಸಿಎಂ ಮಮತಾ ಬ್ಯಾನರ್ಜಿ ಪ್ರಕಾರ, ರಾಷ್ಟ್ರಪತಿ ಚುನಾವಣೆಯು 2024 ರ ಸಾರ್ವತ್ರಿಕ ಚುನಾವಣೆಯ ಕಾವನ್ನು ಹೆಚ್ಚಿಸಿದೆ. ಪ್ರತಿಪಕ್ಷಗಳು ರಾಷ್ಟ್ರಪತಿ ಚುನಾವಣೆ ಸ್ಪರ್ಧೆಯನ್ನು ಗಂಭೀರವಾಗಿ ಪರಿಗಣಿಸಬೇಕು" ಎಂದು ಸಾಮ್ನಾ ಹೇಳಿದೆ.
ರಾಷ್ಟ್ರಪತಿಯು ಕೇವಲ ರಬ್ಬರ್ ಸ್ಟಾಂಪ್ ಅಲ್ಲ, ಸಂವಿಧಾನದ ರಕ್ಷಕ ಮತ್ತು ನ್ಯಾಯಾಂಗದ ಪಾಲಕ ಎಂದು ಶಿವಸೇನೆ ಹೇಳಿದೆ. "ಸಂಸತ್ತು, ಪತ್ರಿಕಾ ರಂಗ, ನ್ಯಾಯಾಂಗ ಮತ್ತು ಆಡಳಿತ ರಂಗವು ಅಧಿಕಾರದಲ್ಲಿ ಇರುವವರ ಮುಂದೆ ಮಂಡಿಯೂರಿ ನಿಂತಿದೆ. ದೇಶದಲ್ಲಿ ಕೋಮು ಬಿರುಕುಗಳು ಹೆಚ್ಚುತ್ತಿವೆ. ಅಂತಹ ಸಂದರ್ಭದಲ್ಲಿ ರಾಷ್ಟ್ರಪತಿಗಳು ಸುಮ್ಮನಿರಬಾರದು, ಆದರೂ ರಾಷ್ಟ್ರಪತಿಗಳು ಯಾವುದೇ ನಿಲುವು ತಳೆಯುತ್ತಿಲ್ಲ. ಇದು ದೇಶದ ಸಮಗ್ರತೆಗೆ ಅಪಾಯಕಾರಿ,'' ಎಂದು ರಾಮನಾಥ್ ಕೋವಿಂದ್ ಹೆಸರನ್ನು ಉಲ್ಲೇಖಿಸದೆ ಸಂಪಾದಕೀಯದಲ್ಲಿ ಹೇಳಿದೆ.
-
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
ಬೆಂಗಳೂರು ಬಿಸಿನೆಸ್ ಕಾರಿಡಾರ್ ಯೋಜನೆಗೆ ಚಾಲನೆ: ಕಾಮಗಾರಿಗೆ 3,348 ಕೋಟಿ ರೂ ಟೆಂಡರ್ ಆಹ್ವಾನ -
Kerosene: ಎಲ್ಪಿಜಿ ಸಮಸ್ಯೆಗೆ ಕೇಂದ್ರದಿಂದ ಹೊಸ ಪರಿಹಾರ: ಮತ್ತೆ ಸಿಗಲಿದೆ ಸೀಮೆಎಣ್ಣೆ, ಪೆಟ್ರೋಲ್ ಬಂಕ್ಗಳಲ್ಲಿ ವಿತರಣೆ -
Dolly Dhananjay: ಆ ಚಿತ್ರಕಥೆ.. 6 ತಿಂಗಳು ನನ್ನ ಟೇಬಲ್ ಮೇಲೆ ಬಿದ್ದಿತ್ತು: ನಟ ಡಾಲಿ ಧನಂಜಯ್ -
SSLC Maths Exam: ಎಸ್ಎಸ್ಎಲ್ಸಿ ಗಣಿತ ಪರೀಕ್ಷೆಯಲ್ಲಿ ಪಠ್ಯದ ಹೊರತಾದ ಪ್ರಶ್ನೆಗಳ ಆರೋಪ, ಕೃಪಾಂಕಕ್ಕಾಗಿ ಹೆಚ್ಚಿದ ಒತ್ತಾಯ -
ಪರಮಾತ್ಮ ಹೇಳಿದ್ರೂ ಹಿಂದೆ ಸರಿಯಲ್ಲ ಎಂದಿದ್ದ ಕಾಂಗ್ರೆಸ್ನ ಸಾದಿಕ್ ಪೈಲ್ವಾನ್ ನಾಮಪತ್ರ ಹಿಂಪಡೆಯಲು ಇದೆ ಹಲವು ಕಾರಣ -
Tamil Nadu Election: ತನ್ನ ಡ್ರೈವರ್ ಮಗನಿಗೆ MLA ಟಿಕೆಟ್ ಘೋಷಿಸಿದ ನಟ ದಳಪತಿ ವಿಜಯ್, ಭಾವುಕ ಕ್ಷಣದ ವಿಡಿಯೋ ವೈರಲ್ -
ವಿರಾಟ್ ಅಸಲಿ ಆಟ ಇನ್ನೂ ಬಾಕಿಯಿದೆ; ಕಿಂಗ್ ಕೊಹ್ಲಿಗೆ ವಿಶೇಷ ಮನವಿ ಮಾಡಿಕೊಂಡ ಅಂಬಟಿ ರಾಯುಡು, ಭಾರೀ ವೈರಲ್ -
Bengaluru Weather: ನಗರಕ್ಕೆ ಇಂದು ಸೋಮವಾರವು ಗುಡುಗು ಸಹಿತ ಮಳೆ ಎಚ್ಚರಿಕೆ, ಸವಾರರೇ ಗಮನಿಸಿ -
Prakash Raj Mother passed Away: ನಟ ಪ್ರಕಾಶ್ ರಾಜ್ ತಾಯಿ ಸ್ವರ್ಣಲತಾ ನಿಧನ, ಚಿತ್ರರಂಗದ ಗಣ್ಯರಿಂದ ಸಂತಾಪ












Click it and Unblock the Notifications