ಚಪ್ಪಲಿ ಬಾಟಲಿ ಮಹಿಳೆಯರ ಕೈಯಲ್ಲಿ: ಮೆಟ್ರೋದಲ್ಲಿ ಜಡೆ ಜಗಳ: ವಿಡಿಯೋ ವೈರಲ್
ಕಳೆದ ಕೆಲವು ದಿನಗಳಿಂದ ದೆಹಲಿ ಮೆಟ್ರೋದಲ್ಲಿ ನಡೆದ ಹಲವಾರು ಘಟನೆಯ ವೀಡಿಯೊಗಳು ವೈರಲ್ ಆಗುತ್ತಲೇ ಇವೆ. ಹೀಗಾಗಿ ದೆಹಲಿ ಮೆಟ್ರೋ ಬಹಳ ಸಮಯದಿಂದ ಸಾಮಾಜಿಕ ಮಾಧ್ಯಮದಲ್ಲಿ ಟ್ರೆಂಡಿಂಗ್ ಆರಂಭಿಸಿದೆ. ಕೆಲವೊಮ್ಮೆ ಬಿಕಿನಿ, ಕೆಲವೊಮ್ಮೆ ಸ್ಕರ್ಟ್ ತೊಟ್ಟ ಹುಡುಗಿಯರ ವೀಡಿಯೋಗಳು ಚರ್ಚೆಗೆ ಗ್ರಾಸವಾಗಿದ್ದವು. ಈಗ ಇತ್ತೀಚೆಗೆ ಮತ್ತೊಂದು ವೀಡಿಯೊ ಚರ್ಚೆಯಲ್ಲಿದೆ. ಇದರಲ್ಲಿ ಇಬ್ಬರು ಮಹಿಳೆಯರು ಜಗಳವಾಡುತ್ತಿರುವುದನ್ನು ಕಾಣಬಹುದು.
ದೆಹಲಿ ಮೆಟ್ರೋದ ಮತ್ತೊಂದು ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ಭಾರೀ ವೈರಲ್ ಆಗುತ್ತಿದೆ. ಇದರಲ್ಲಿ ಮಹಿಳೆಯರು ಪರಸ್ಪರ ಚಪ್ಪಲಿಯನ್ನು ಕೈಯಲ್ಲಿ ಹಿಡಿದು ಜಗಳವಾಡುತ್ತಿರುವುದನ್ನು ಕಾಣಬಹುದು.

ಇಬ್ಬರು ಮಹಿಳೆಯರು ಪರಸ್ಪರ ಬೈದಾಡಿಕೊಂಡಿದ್ದಾರೆ. ಇದರಿಂದ ದೆಹಲಿ ಮೆಟ್ರೋ ರಣರಂಗವಾಗಲು ಹೆಚ್ಚು ಸಮಯ ಬೇಕಾಗಲಿಲ್ಲ. ಮಹಿಳೆಯೊಬ್ಬರು ಕೈಯಲ್ಲಿ ಚಪ್ಪಲಿ ಹಿಡಿದಿರುವುದು ವಿಡಿಯೋದಲ್ಲಿ ಸ್ಪಷ್ಟವಾಗಿ ಗೋಚರಿಸುತ್ತಿದೆ. ಇನ್ನೊಬ್ಬ ಮಹಿಳೆ ಕೈಯಲ್ಲಿ ಸ್ಟೀಲ್ ಬಾಟಲ್ ಹಿಡಿದಿದ್ದಾಳೆ. ಜೊತೆಗಿದ್ದ ಇಲ್ಲಿದ್ದ ಇನ್ನಿತರ ಮಹಿಳೆಯರು ಜಗಳವನ್ನು ತಪ್ಪಿಸಲು ಪ್ರಯತ್ನಿಸಿದರೂ ಇಬ್ಬರೂ ಕೇಳುವುದಿಲ್ಲ.
Delhi Metro has become a battleground 😂 pic.twitter.com/uWVge6sl68
— Deepika Narayan Bhardwaj (@DeepikaBhardwaj) June 4, 2023
ಇದಾದ ನಂತರ ಒಬ್ಬ ಮಹಿಳೆ ಇನ್ನೊಬ್ಬಳನ್ನು ನಿಂದಿಸುತ್ತಾಳೆ. ಇದಕ್ಕೆ ಕೋಪಗೊಂಡ ಮಹಿಳೆ ತನ್ನ ಬಾಟಲಿಯಿಂದ ನೀರನ್ನು ಅವಳ ಮೇಲೆ ಎಸೆಯುತ್ತಾಳೆ. ಈ ವಿಡಿಯೋವನ್ನು ದೀಪಿಕಾ ಭಾರದ್ವಾಜ್ ಎಂಬ ಬಳಕೆದಾರರು ಟ್ವಿಟರ್‌ನಲ್ಲಿ ಹಂಚಿಕೊಂಡಿದ್ದಾರೆ. ವಿಡಿಯೋ ನೋಡಿದ ಜನರು ಆಶ್ಚರ್ಯಚಕಿತರಾಗಿದ್ದಾರೆ. ಅನೇಕ ಜನರು ಮೆಟ್ರೋದಲ್ಲಿ ಈ ರೀತಿಯ ಘಟನೆಗಳು ಮರುಕಳಿಸಬಾರದು ಎಂದು ಆಗ್ರಹಿಸಿದ್ದಾರೆ.
ಈ ರೀತಿ ಜಗಳವಾಡುವವರನ್ನು ದೆಹಲಿ ಮೆಟ್ರೋದಲ್ಲಿ ನಿಷೇಧಿಸಬೇಕು ಎಂದು ಹಲವರು ಹೇಳಿದರೆ, ಇನ್ನೂ ಕೆಲವರು ಇದನ್ನು ತಮಾಷೆ ಮಾಡಿದ್ದಾರೆ. ಈ ವಿಡಿಯೋವನ್ನು 3 ಲಕ್ಷಕ್ಕೂ ಹೆಚ್ಚು ಮಂದಿ ವೀಕ್ಷಿಸಿದ್ದಾರೆ.
ಇದಕ್ಕೂ ಮುನ್ನ ದೆಹಲಿ ಮೆಟ್ರೋದ ವಿಡಿಯೋವೊಂದು ಚರ್ಚೆಗೆ ಗ್ರಾಸವಾಗಿತ್ತು. ಅದರಲ್ಲಿ ಇಬ್ಬರು ಮಹಿಳೆಯರು ಪರಸ್ಪರ ಹೊಡೆದಾಡಿಕೊಂಡಿದ್ದರು. ಪಕ್ಕದ ಆಸನಗಳಲ್ಲಿ ಕುಳಿತಿಕೊಳ್ಳಲು ಹೆಂಗಸರು ಒಬ್ಬರನ್ನೊಬ್ಬರು ದೂರುತ್ತಿದ್ದರು. ಈ ವಿಡಿಯೋ ಟ್ವಿಟ್ಟರ್‌ನಲ್ಲಿ ಭಾರೀ ವೈರಲ್ ಆಗಿತ್ತು.
ವಿಮಾನದಲ್ಲಿ ಮಾರಾಮಾರಿ
ಕಳೆದ ತಿಂಗಳು ಮೇ ನಲ್ಲಿ ಚಿಕಾಗೋದ ಓ'ಹೇರ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಪ್ರಯಾಣಿಕರು ಪರಸ್ಪರ ಹೊಡೆದಾಡಿಕೊಂಡ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು. ಪುರುಷರು ಮಹಿಳೆಯರು ಎನ್ನದೆ ಹತ್ತಾರು ಜನ ಪರಸ್ಪರ ಹೊಡೆದಾಡಿಕೊಂಡಿದ್ದಾರೆ. ವಿಮಾನ ನಿಲ್ದಾಣದ ಬ್ಯಾಗೇಜ್ ಕ್ಲೈಮ್ ಏರಿಯಾದಲ್ಲಿ ಜಗಳ ನಡೆದಿದ್ದು, ಘಟನೆಯಲ್ಲಿ ಪೊಲೀಸರು ಇಬ್ಬರನ್ನು ಬಂಧಿಸಿದ್ದರು.
ರೈಲಿನಲ್ಲಿ ಸೀಟಿಗಾಗಿ ಜಗಳ
ಕಳೆದ ಬಾರಿ ಮುಂಬೈನಲ್ಲಿ ಚಲಿಸುತ್ತಿರುವ ಎಲೆಕ್ಟ್ರಿಕ್ ರೈಲಿನಲ್ಲಿ ಮಹಿಳೆಯರು ಸೀಟಿಗಾಗಿ ಜಗಳವಾಡುತ್ತಿರುವ ದೃಶ್ಯ ಅಂತರ್ಜಾಲದಲ್ಲಿ ವೈರಲ್ ಆಗಿತ್ತು. ಮುಂಬೈ ಮತ್ತು ಚೆನ್ನೈನಂತಹ ನಗರಗಳಿಗೆ ಉಪನಗರ ರೈಲುಗಳು ನಗರವಾಸಿಗಳಿಗೆ ವರದಾನವಾಗಿದೆ. ದಿನನಿತ್ಯದ ನೂರಾರು ಪ್ರಯಾಣಿಕರು, ಶಾಲಾ ಕಾಲೇಜುಗಳ ಪ್ರಯಾಣಿಕರು ವಿದ್ಯುತ್ ರೈಲು ಪ್ರಯಾಣವನ್ನು ಮಾಡುತ್ತಾರೆ. ಆದರೆ ಪ್ರಯಾಣದ ವೇಳೆ ಮಹಿಳೆಯರು ಸೀಟಿಗಾಗಿ ಹೊಡೆದಾಡಿಕೊಂಡ ಘಟನೆ ನಡೆದಿತ್ತು.
ಬಸ್ ಸೀಟಿಗಾಗಿ ಮಹಿಳೆಯರ ಮಾರಾಮಾರಿ
ಬಸ್‌ನಲ್ಲೂ ಮಹಿಳೆಯರು ಸೀಟಿಗಾಗಿ ಹೊಡೆದಾಡಿಕೊಂಡ ಹಲವಾರು ಘಟನೆಗಳು ನಡೆದಿವೆ. ಇವುಗಳ ವಿಡಿಯೋ ಕೂಡ ವೈರಲ್ ಆಗಿದೆ. ಪ್ರಯಾಣದ ವೇಳೆ ಇಂತಹ ಘಟನೆಗಳು ಇತರ ಪ್ರಯಾಣಿಕರಿಗೂ ಕಿರಿ ಕಿರಿಯನ್ನುಂಟು ಮಾಡುತ್ತವೆ. ಇವು ಮರುಕಳಿಸದಂತೆ ಕಠಿಣ ಕ್ರಮ ತೆಗೆದುಕೊಳ್ಳುವುದು ಅನಿವಾರ್ಯವಾಗಿದೆ.
-
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ -
Horoscope March 11: ಈ ರಾಶಿಯವರಿಗೆ ಸಿಗಲಿವೆ ಹೊಸ ಅವಕಾಶಗಳು, ಬುದಕಿನಲ್ಲಿ ಯಶಸ್ಸು; ಇಂದಿನ ದಿನ ಭವಿಷ್ಯ -
KEA PGNEET: ಕೆಇಎಯಿಂದ ಮತ್ತೊಂದು ಸುತ್ತಿನ ಸೀಟು ಹಂಚಿಕೆ; 783 ವೈದ್ಯಕೀಯ ಸೀಟುಗಳು ಬಾಕಿ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅಸ್ತು: 13 ವರ್ಷಗಳಿಂದ ಹಾಸಿಗೆ ಹಿಡಿದಿದ್ದ ಮಗನಿಗೆ ಮುಕ್ತಿ ನೀಡಲು ಕೋರಿದ್ದ ಪೋಷಕರು -
ಮತ್ತೆ ಶುರುವಾಗುತ್ತಾ ವರ್ಕ್ ಫ್ರಂ ಹೋಮ್? ಇಂಧನ ಕೊರತೆ ಬೆನ್ನಲ್ಲೇ ಹಲವು ದೇಶಗಳಲ್ಲಿ ಕಚೇರಿಗಳಿಗೆ ನಿರ್ಬಂಧ -
ಬೇಸಿಗೆಯಲ್ಲಿ ನೀವು ಚಿಲ್ಡ್ ಬಿಯರ್ ಕುಡಿಯುತ್ತೀರಾ, ಬಾಟಲ್ ಕೆಳಗಿಟ್ಟು ಇದನ್ನು ಓದಿ -
LPG Gas: ದೇಶದಲ್ಲಿ'ಅಡುಗೆ ಅನಿಲ ತುರ್ತು ಪರಿಸ್ಥಿತಿ' ಭೀತಿ; ಡಿಜಿಟಲ್ ಬುಕಿಂಗ್ ಸರ್ವರ್ ಡೌನ್; ಏಜೆನ್ಸಿಗಳ ಮುಂದೆ ಜನರ ಕ್ಯೂ












Click it and Unblock the Notifications