ವಿಶ್ವ ರಕ್ತದಾನಿಗಳ ದಿನ; ಸ್ವಯಂ ಪ್ರೇರಿತ ರಕ್ತದಾನಕ್ಕೆ ಕೈ ಜೋಡಿಸೋಣ
ಜೂನ್ 14 ಅನ್ನು ವಿಶ್ವದಾದ್ಯಂತ ರಕ್ತದಾನಿಗಳ ದಿನಾಚರಣೆ ಎಂದು ಆಚರಿಸಲಾಗುತ್ತದೆ. ಪ್ರಥಮ ಬಾರಿಗೆ ರಕ್ತದ ಗುಂಪು ಕಂಡು ಹಿಡಿದ ಕಾರ್ಲ್ ಲ್ಯಾಂಡ್‍ಸ್ಟೇನರ್ ಎಂಬ ವಿಜ್ಞಾನಿಯ ಹುಟ್ಟುಹಬ್ಬದ ನೆನಪಿಗಾಗಿ 2004 ರಿಂದ ವಿಶ್ವ ಆರೋಗ್ಯ ಸಂಸ್ಥೆ ಈ ದಿನಾಚರಣೆ ಜಾರಿಗೆ ತಂದಿದೆ.
2022ನೇ ಸಾಲಿನ ವಿಶ್ವ ರಕ್ತದಾನಿಗಳ ದಿನಾಚರಣೆ ಘೋಷವಾಕ್ಯ 'ರಕ್ತದಾನ ಮಾಡುವುದು ಒಗ್ಗಟ್ಟಿನ ಪ್ರಕ್ರಿಯೆ, ಈ ಪ್ರಯತ್ನಕ್ಕೆ ಕೈ ಜೋಡಿಸಿ ಜೀವ ಉಳಿಸೋಣ' ಎಂಬುದು. ಸ್ವಯಂ ಪ್ರೇರಿತ ರಕ್ತದಾನಿಗಳ ದಿನಾಚರಣೆ ಆಚರಿಸಲಾಗುತ್ತಿದೆ. ರಕ್ತದಾನ ಮಾಡುವಂತೆ ಕರೆ ನೀಡಲಾಗುತ್ತದೆ.
ಜಗತ್ತಿನ ಅತಿ ದೊಡ್ಡ ಸಂಶೋಧನೆಯೆಂದರೆ ಒಬ್ಬ ಮನುಷ್ಯನ ರಕ್ತವನ್ನು ಇನ್ನೊಬ್ಬನ ಜೀವ ಉಳಿಸಲು ಉಪಯೋಗಿಸುವುದು. ಇದರಿಂದ ಹಲವಾರು ಜನರು ಸಾವಿನಿಂದ ಪಾರಾಗಿದ್ದಾರೆ. ತನ್ನ ರಕ್ತವನ್ನು ಇನ್ನೊಬ್ಬರ ಜೀವ ಉಳಿಸಲು ಪ್ರತಿಫಲಾಪೇಕ್ಷೆಯಿಲ್ಲದೆ ಸ್ವಯಂ ಪ್ರೇರಣೆಯಿಂದ ನೀಡುವುದೇ ರಕ್ತದಾನ.
ರಕ್ತಕ್ಕೆ ನಿರಂತರವಾಗಿ ಬೇಡಿಕೆ ಇರುತ್ತದೆ. ಅಪಘಾತ, ತುರ್ತು ಚಿಕಿತ್ಸೆ ಸಂದರ್ಭ ಇಂತಹ ಸಮಯದಲ್ಲಿ ರಕ್ತ ಜೀವ ಉಳಿಸಲು ಅತ್ಯಮೂಲ್ಯವಾದದ್ದು. ಕ್ಯಾನ್ಸರ್ ರೋಗಿಗಳು, ಗರ್ಭಿಣಿ ಸ್ತ್ರೀಯರು, ತಲಸ್ಸೀಮಿಯ, ಹಿಮೊಫೀಲಿಯ ಮುಂತಾದ ರೋಗಿಗಳು ರಕ್ತದಾನಿಗಳನ್ನೇ ಅವಲಂಬಿಸಿರುತ್ತಾರೆ.

35 ದಿನಗಳ ತನಕ ಶೇಖರಿಸಬಹುದು
ಒಮ್ಮೆ ದಾನಿಗಳಿಂದ ಶೇಖರಿಸಿದ ರಕ್ತ 35 ದಿನಗಳವರೆಗೆ ಮಾತ್ರ ತನ್ನ ಶಕ್ತಿಯನ್ನು ಉಳಿಸಿಕೊಂಡಿರುತ್ತದೆ. 35 ದಿನಗಳ ನಂತರ ಅದು ಉಪಯೋಗಕ್ಕೆ ಬರುವುದಿಲ್ಲ. ಆದ್ದರಿಂದ 18 ವಯಸ್ಸಿನಿಂದ 60 ವರ್ಷದ ಒಳಗಿನ ಪ್ರತಿಯೊಬ್ಬ ಆರೋಗ್ಯವಂತರು ಆಗಾಗ ರಕ್ತದಾನ ಮಾಡಿದಲ್ಲಿ ಮಾತ್ರ ನಿರಂತರವಾಗಿ ಅವಶ್ಯಕತೆ ಇರುವವರಿಗೆ ರಕ್ತ ನೀಡಿ ಜೀವ ಉಳಿಸಲು ಸಾಧ್ಯವಾಗುತ್ತದೆ. ರಕ್ತವನ್ನು ನೀಡಿ ಇನ್ನೊಬ್ಬರ ಜೀವವನ್ನು ಉಳಿಸುವುದರೊಂದಿಗೆ ತಮ್ಮ ದೇಹದಲ್ಲಿ ಇರುವ ರಕ್ತದ ಗುಂಪು ಯಾವುದು? ಎಂದು ತಿಳಿದುಕೊಳ್ಳುವುದು ಮುಖ್ಯವಾಗಿರುತ್ತದೆ.

ಶಿವಮೊಗ್ಗ ಜಿಲ್ಲೆಯ ಮಾಹಿತಿ
ಶಿವಮೊಗ್ಗ ಜಿಲ್ಲೆಯಲ್ಲಿ ಒಟ್ಟು 9 ರಕ್ತನಿಧಿ ಕೇಂದ್ರಗಳು (1 ಸರ್ಕಾರಿ ರಕ್ತನಿಧಿ ಕೇಂದ್ರ, 8 ಖಾಸಗಿ ರಕ್ತನಿಧಿಕೇಂದ್ರಗಳು) ಹಾಗೂ ಸಾರ್ವಜನಿಕ ಆಸ್ಪತ್ರೆಗಳಲ್ಲಿ 6 ರಕ್ತ ಸಂರಕ್ಷಣಾ ಘಟಕಗಳು ಕಾರ್ಯ ನಿರ್ವಹಿಸುತ್ತಿವೆ. 2021-22 ನೇ ಸಾಲಿನಲ್ಲಿ 31553 ರಕ್ತದ ಯುನಿಟ್‍ಗಳನ್ನು ಸಂಗ್ರಹಿಸಲಾಗಿದ್ದು, ಅದರಲ್ಲಿ 18853 ಯುನಿಟ್‍ಗಳನ್ನು ರಕ್ತ ನಿಧಿ ಕೇಂದ್ರಗಳಲ್ಲಿ ಸ್ವಯಂ ಪ್ರೇರಿತರಾಗಿ ನೀಡಿದ್ದು, 290 ಶಿಬಿರಗಳಿಂದ 10333 ಯುನಿಟ್‍ಗಳನ್ನು ಹಾಗೂ 2367 ಯುನಿಟ್‍ಗಳನ್ನು ಬದಲಿ ರಕ್ತದಾನದ ಮೂಲಕ ಸಂಗ್ರಹಿಸಲಾಗಿರುತ್ತದೆ.

ರಕ್ತದಾನ ಶಿಬಿರಗಳ ಆಯೋಜನೆ
ಗ್ರಾಮ ಪಂಚಾಯಿತಿಗಳು, ಸಂಘ ಸಂಸ್ಥೆಗಳು, ರೆಡ್ ರಿಬ್ಬನ್ ಕ್ಲಬ್, ಎನ್‍ಎಸ್‍ಎಸ್ ಘಟಕಗಳು, ನೌಕರರ ಸಂಘಗಳು ಹಾಗೂ ಗ್ರಾಮೀಣ ಪ್ರದೇಶಗಳ ಪ್ರಾಥಮಿಕ ಆರೋಗ್ಯ ಕೇಂದ್ರಗಳ ಮಟ್ಟದಲ್ಲಿಯೂ ಸ್ವಯಂ ಪ್ರೇರಿತ ರಕ್ತದಾನ ಶಿಬಿರಗಳನ್ನು ಹಮ್ಮಿಕೊಳ್ಳಲಾಗುತ್ತಿದೆ.
ರಕ್ತಕ್ಕೆ ಪರ್ಯಾಯ ವಸ್ತುವಿಲ್ಲ. ಕೃತಕವಾಗಿ ಉತ್ಪಾದಿಸಲು ಸಾಧ್ಯವಿಲ್ಲ. ಮನುಷ್ಯರ ದಾನದಿಂದ ಮಾತ್ರ ಇದನ್ನು ಪಡೆಯಬಹುದು. ರಕ್ತದಾನ ಮಾಡಿದ ಕೆಲವೇ ಕ್ಷಣದಲ್ಲಿ ದಾನಿಯ ದೇಹದಲ್ಲಿ ರಕ್ತದ ಉತ್ಪತ್ತಿ ಪ್ರಾರಂಭವಾಗಿ 24 ಗಂಟೆ ಒಳಗಾಗಿ ದಾನ ಮಾಡಿದ ಪ್ರಮಾಣದಲ್ಲಿ ರಕ್ತ ದೇಹದಲ್ಲಿ ಪುನರುತ್ಪತ್ತಿಯಾಗುತ್ತದೆ. ಆದ್ದರಿಂದ ಯಾವುದೇ ಆತಂಕವಿಲ್ಲದೇ ಜನರು ರಕ್ತದಾನ ಮಾಡಬಹುದಾಗಿದೆ.

ಯಾರು ರಕ್ತದಾನ ಮಾಡಬಹುದು
ಯಾವುದೇ ವ್ಯಕ್ತಿ ರಕ್ತದಾನ ಮಾಡಲು ಮತ್ತು ಸುಧಾರಿಸಿಕೊಳ್ಳಲು ಒಟ್ಟು ಸೇರಿ 20 ನಿಮಿಷಕ್ಕೂ ಹೆಚ್ಚಿನ ಸಮಯ ಬೇಕಾಗಿಲ್ಲ. ಹೆಣ್ಣು, ಗಂಡು ಬೇಧವಿಲ್ಲದೆ 18 ರಿಂದ 60 ವರ್ಷದ ಒಳಗಿನ ಎಲ್ಲಾ ಆರೋಗ್ಯವಂತ ವ್ಯಕ್ತಿಗಳು ರಕ್ತದಾನ ಮಾಡಬಹುದು. ಪುರುಷರು 3 ತಿಂಗಳಿಗೊಮ್ಮೆ, ಮಹಿಳೆಯರು 4 ತಿಂಗಳಿಗೊಮ್ಮ ರಕ್ತದಾನ ಮಾಡಬಹುದು, ದಾನಿಯ ದೇಹದ ತೂಕ 45 ಕೆಜಿ ಗಿಂತ ಹೆಚ್ಚಿಗೆ ಇರಬೇಕು ಹಾಗೂ ಹಿಮೋಗ್ಲೊಬಿನ್ ಅಂಶ 12.5 ಗ್ರಾಂ ಗಿಂತ ಹೆಚ್ಚಿರಬೇಕು.
ಅನಾರೋಗ್ಯಪೀಡಿತರು, ಮಾದಕ ವ್ಯಸನಿಗಳು, ಗರ್ಭಿಣಿಯರು, ಎದೆಹಾಲುಣಿಸುವವರು, ಲಸಿಕೆ ಪಡೆದ 4 ವಾರದೊಳಗಿನವರು, ಮಲೇರಿಯಾ ರೋಗಕ್ಕೆ ಚಿಕಿತ್ಸೆ ಪಡೆಯುತ್ತಿರುವವರು, ದೊಡ್ಡ ಶಸ್ತ್ರಚಿಕಿತ್ಸೆಗೆ ಒಳಗಾದ 6 ತಿಂಗಳ ಒಳಗಿನವರು, ಕಾಮಾಲೆ, ಹೆಚ್‍ಐವಿ, ಕ್ಯಾನ್ಸರ್, ಹೃದಯದ ಕಾಯಿಲೆ, ಇತರೆ ರೋಗಗಳಿಗೀಡಾದವರು ರಕ್ತದಾನ ಮಾಡಬಾರದು.
Recommended Video

ರೋಗಗಳಿಂದ ಮುಕ್ತವಾಗಿರಬೇಕು
ಮಲೇರಿಯಾ, ಲೈಂಗಿಕ ಸಂಪಕ ರೋಗಗಳು, ಹೆಪಟೈಟಿಸ್ ಬಿ, ಸಿ ಸೋಂಕಿನಿಂದಾಗುವ ಕಾಮಾಲೆ, ಹೆಚ್‍ಐವಿ ಸೋಂಕು ಮತ್ತು ಏಡ್ಸ್ ಬಗ್ಗೆ ರಕ್ತವನ್ನು ಯವುದೇ ವ್ಯಕ್ತಿಗೆ ನೀಡುವ ಮೊದಲು ಪಡೆದ ರಕ್ತವನ್ನು ಈ ರೋಗಗಳಿಂದ ಮುಕ್ತವಾಗಿದೆ ಎಂದು ಖಾತ್ರಿಪಡಿಸಿಕೊಳ್ಳಲು ಪರೀಕ್ಷೆಗೆ ಒಳಪಡಿಸಲಾಗುತ್ತದೆ.
ರಕ್ತದಾನ ಮಾಡುವುದರಿಂದ ದಾನಿಯ ದೇಹದಲ್ಲಿ ಹೊಸ ರಕ್ತ ಉತ್ಪತ್ತಿಯಾಗಲು ಪ್ರಚೋದನೆಯಾಗುತ್ತದೆ. ಕಾರ್ಯತತ್ಪರತೆ, ಜ್ಞಾಪಕಶಕ್ತಿ ವೃದ್ದಿಯಾಗುತ್ತದೆ. ರಕ್ತದಲ್ಲಿ ಕೊಬ್ಬಿನಾಂಶ ಕಡಿಮೆ ಮಾಡಲು ಸಹಾಯವಾಗಿದ್ದು, ಹೃದಯಾಘಾತವನ್ನು ಶೇ.80 ಕ್ಕಿಂತಲೂ ಹೆಚ್ಚು ತಡೆಯಲು ಸಹಕಾರಿ ಹಾಗೂ ರಕ್ತದ ಒತ್ತಡ ಇತರೆ ಕೆಲ ರೋಗಗಳನ್ನು ತಡೆಗಟ್ಟಲು ಸಹಕಾರಿಯಾಗಿದೆ.
ಬರಹ ಕೃಪೆ; ಶಿವಮೊಗ್ಗಜಿಲ್ಲಾ ಏಡ್ಸ್ ತಡೆಗಟ್ಟುವ ಮತ್ತು ನಿಯಂತ್ರಣ ಘಟಕ
-
EPFO 3.0: ಇನ್ಮುಂದೆ UPI, ATM ಮೂಲಕವೇ ಪಿಎಫ್ ಹಣ ಪಡೆಯಬಹುದು; ಏಪ್ರಿಲ್ 1 ರಿಂದಲೇ ಹೊಸ ನಿಯಮ ಜಾರಿ -
Gold Rate : ಮಾರ್ಚ್ 29ರ ಚಿನ್ನ ಮತ್ತು ಬೆಳ್ಳಿ ಬೆಲೆ: ಪ್ರಮುಖ ನಗರಗಳ ಇಂದಿನ ದರ ಪಟ್ಟಿ ಹೀಗಿದೆ -
Pooja Gandhi: ಹಿಂದಿ ಒಂದು ಭಾಷೆಯಾಗಿ ಕಲಿಯಲಿ, ಆದ್ರೆ ಕನ್ನಡದ ಮಕ್ಕಳ ಮೇಲೆ ಹೇರಿಕೆ ಬೇಡ: ನಟಿ ಪೂಜಾ ಗಾಂಧಿ -
Chicken Leg Piece: ಚಿಕನ್ ಲೆಗ್ ಪೀಸ್ ಸಿಗಲಿಲ್ಲ ಎಂದು ಮದುವೆ ಮಂಟಪದಲ್ಲೇ ಮಾರಾಮಾರಿ, ವಿಡಿಯೋ ಇಲ್ಲಿದೆ -
ಆರ್ಸಿಬಿ ಗೆಲ್ಲಿಸಿದ ಕೊಹ್ಲಿ ಕಂಡು ಗ್ಯಾಲರಿಯಲ್ಲೇ ಕುಣಿದು ಕುಪ್ಪಳಿಸಿದ ಅನನ್ಯಾ ಬಿರ್ಲಾ: ಭಾರೀ ವೈರಲ್ -
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು -
Bengaluru: 19 ಸಾವಿರಕ್ಕೆ 2BHK ಮನೆ ಸಿಕ್ಕಿದ್ದೇಗೆ? 4 ವರ್ಷದಲ್ಲಿ 3 ಮನೆ ಬದಲಾಯಿಸಿದ ದಂಪತಿ ಹೇಳಿದ ಬಾಡಿಗೆ ಸೀಕ್ರೆಟ್ Viral -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
NWKRTC: ದಾಂಡೇಲಿ-ಬೆಂಗಳೂರು ಮಧ್ಯೆ ಪಲ್ಲಕ್ಕಿ ವೈಭವ: ಬಸ್ಗಳ ಸಂಚಾರಕ್ಕೆ ಗ್ರೀನ್ ಸಿಗ್ನಲ್, ಡಿಟೇಲ್ಸ್ -
Rishab Shetty: ಪತ್ನಿ ಪ್ರಗತಿ ಶೆಟ್ಟಿ ಹೊರತುಪಡಿಸಿ ಎಲ್ಲರನ್ನೂ ಅನ್ಫಾಲೋ ಮಾಡಿದ ನಟ ರಿಷಬ್ ಶೆಟ್ಟಿ -
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ -
New Railway Line: ಗದಗ-ಹೊಟಗಿ ರೈಲು ಡಬ್ಲಿಂಗ್ ಪೂರ್ಣ, ಮಹಾರಾಷ್ಟ್ರವರೆಗೂ ಸಂಚಾರ ಸುಧಾರಣೆ












Click it and Unblock the Notifications