Get Updates
Get notified of breaking news, exclusive insights, and must-see stories!

World Health Day 2022: ಆರೋಗ್ಯವೇ ಭಾಗ್ಯ, ಆರೋಗ್ಯವಿದ್ದರೆ ಎಲ್ಲವೂ ಸಾಧ್ಯ ..!!

ಆರೋಗ್ಯವು ದೈಹಿಕ ಯೋಗಕ್ಷೇಮವನ್ನು ಮಾತ್ರವಲ್ಲದೆ ಮಾನಸಿಕ ಮತ್ತು ಸಾಮಾಜಿಕ ಯೋಗಕ್ಷೇಮವನ್ನೂ ಒಳಗೊಂಡಿದೆ. ಒಬ್ಬ ವ್ಯಕ್ತಿಯು ಈ ಮೂರನ್ನೂ ಹೊಂದಿದ್ದರೆ, ಅವನು ಅಥವಾ ಅವಳು ಆರೋಗ್ಯವಂತರು ಎಂದು ಹೇಳಲಾಗುತ್ತದೆ. ವಿಶ್ವ ಆರೋಗ್ಯ ಸಂಸ್ಥೆಯ ಪ್ರಕಾರ ಆರೋಗ್ಯವು ಮಾನವ ಸಂತೋಷ ಮತ್ತು ಯೋಗಕ್ಷೇಮಕ್ಕೆ ಮೂಲಭೂತವಾಗಿದೆ. ಇದು ಆರ್ಥಿಕ ಪ್ರಗತಿಗೆ ಗಮನಾರ್ಹವಾಗಿ ಕೊಡುಗೆ ನೀಡುತ್ತದೆ, ಏಕೆಂದರೆ ಆರೋಗ್ಯವಂತ ಜನರು ಹೆಚ್ಚು ಕಾಲ ಬದುಕುತ್ತಾರೆ ಮತ್ತು ಹೆಚ್ಚು ಉತ್ಪಾದಕರಾಗಿದ್ದಾರೆ.

ಮನುಷ್ಯ ಉತ್ತಮ ರೀತಿಯಲ್ಲಿ ಬಾಳ್ವೆ ನಡೆಸಲು ಆರೋಗ್ಯ ಅತ್ಯಗತ್ಯ. ಹೀಗಾಗನೇ ಹಿರಿಯರು ಹೇಳೋದು'ಆರೋಗ್ಯವೇ ಭಾಗ್ಯ' ಎಂದು. ಇದು ದೈಹಿಕ ಮತ್ತು ಮಾನಸಿಕ ಆರೋಗ್ಯ ಎರಡನ್ನೂ ಒಳಗೊಂಡಿರುತ್ತದೆ. ಆರೋಗ್ಯ ಕಾಳಜಿ ಕುರಿತು ಜನಸಾಮಾನ್ಯರಲ್ಲಿ ಅರಿವು ಮೂಡಿಸಲು ವಿಶ್ವ ಆರೋಗ್ಯ ಸಂಸ್ಥೆ ಪ್ರತಿವರ್ಷ ಏಪ್ರಿಲ್ 7ನ್ನು ವಿಶ್ವ ಆರೋಗ್ಯ ದಿನವೆಂದು ಆಚರಿಸುತ್ತದೆ. ಈ ದಿನ ಸಾರ್ವಜನಿಕರಿಗೆ ಆರೋಗ್ಯ ಮತ್ತು ಹಲವಾರು ಕೆಡುಕುಗಳ ಬಗ್ಗೆ ಮಾಹಿತಿ ಮತ್ತು ಮಾರ್ಗದರ್ಶನ ನೀಡಲಾಗುತ್ತದೆ. ಜೊತೆಗೆ ನೈರ್ಮಲ್ಯ ಯುಕ್ತ ಸಮಾಜಕ್ಕೆ ಅಗತ್ಯವಾದ ಸ್ವಚ್ಛತಾ ಅಭ್ಯಾಸಗಳು ನೀರಿನ ಸಂರಕ್ಷಣೆ ಪರಿಸರ ಸ್ವಚ್ಛತೆ ಹಾಗೂ ಸೂಕ್ತ ಕಾಲಕ್ಕೆ ತೆಗೆದುಕೊಳ್ಳಬೇಕಾದ ಔಷಧಿಗಳು ಮುಂತಾದ ವಿಷಯಗಳ ಬಗ್ಗೆ ಮಾಹಿತಿ ಬಿತ್ತನೆ ಮಾಡಲಾಗುತ್ತದೆ.

ವಿಶ್ವ ಆರೋಗ್ಯ ದಿನ 2022: ಥೀಮ್

ವಿಶ್ವ ಆರೋಗ್ಯ ದಿನದ 2022 ರ ಥೀಮ್ ಹೀಗಿದೆ: 'ನಮ್ಮ ಯೋಗಕ್ಷೇಮ ಮತ್ತು ಆರೋಗ್ಯದ ಕಡೆಗೆ ಜಾಗತಿಕ ಗಮನವನ್ನು ಸೆಳೆಯುವ' ಈ ವರ್ಷದ ಧ್ಯೇಯವಾಕ್ಯವಾಗಿದೆ. ವಿಶ್ವ ಆರೋಗ್ಯ ದಿನಾಚರಣೆಯನ್ನು ಸರ್ಕಾರ, ಸರ್ಕಾರೇತರ ಸಂಸ್ಥೆಗಳು, ವಿವಿಧ ಸಂಘಟನೆಗಳು ನಡೆಸಿಕೊಡುತ್ತವೆ.ಸಾರ್ವಜನಿಕರಿಗೆ ಆರೋಗ್ಯ ಮತ್ತು ವಿವಿಧ ಕೆಡುಕುಗಳ ಬಗ್ಗೆ ಮಾಹಿತಿ ಮತ್ತು ಮಾರ್ಗದರ್ಶನ ನೀಡಲಾಗುತ್ತದೆ. ಇದರಲ್ಲಿ ಭಾಗವಹಿಸುವ ಸಂಸ್ಥೆಗಳು ವಿವಿಧ ಮಾಧ್ಯಮಗಳ ಮೂಲಕ ವ್ಯಾಪಕ ಪ್ರಚಾರ ನೀಡಿ ಹೆಚ್ಚು ಹೆಚ್ಚು ಜನರಿಗೆ ಈ ಮಾಹಿತಿ ಲಭ್ಯವಾಗಲು ನೆರವಾಗುತ್ತವೆ. ಜನರು ಸೂಕ್ತ ಕಾಲಕ್ಕೆ ತೆಗೆದುಕೊಳ್ಳಬೇಕಾದ ಔಷಧಿ, ಕಾಪಾಡಬೇಕಾದ ನೈರ್ಮಲ್ಯ, ಸ್ವಚ್ಛತಾ ಅಭ್ಯಾಸಗಳು, ನೀರಿನ ಸಂರಕ್ಷಣೆ, ಪರಿಸರದ ಸ್ವಚ್ಛತೆ, ಮೊದಲಾದ ವಿಷಯಗಳ ಬಗ್ಗೆ ಕಾಳಜಿವಹಿಸುವ ಮಾಹಿತಿಯನ್ನು ನೀಡುತ್ತಾರೆ. ಇದರಿಂದ ಸಮಾಜದ ಆರೋಗ್ಯ ಉತ್ತಮಗೊಳ್ಳುತ್ತದೆ. ಆರೋಗ್ಯಕರ ಸಮಾಜ ರೂಪುಗೊಳ್ಳುತ್ತದೆ.

World Health Day 2022 Date, Theme, Wishes, History and Significance in Kannada

ವಿಶ್ವ ಆರೋಗ್ಯ ದಿನ 2022: ಇತಿಹಾಸ, ಮಹತ್ವ

1948 ರಲ್ಲಿ ಮೊದಲ ಆರೋಗ್ಯ ಅಸೆಂಬ್ಲಿ ಪ್ರಾರಂಭವಾದಾಗಿನಿಂದ ಮತ್ತು 1950 ರಲ್ಲಿ ಜಾರಿಗೆ ಬಂದಾಗಿನಿಂದ, ಈ ಆಚರಣೆಯು ವಿಶ್ವ ಆರೋಗ್ಯ ಸಂಸ್ಥೆ ಕಾಳಜಿ ಮಾಡಬೇಕಾದ ಆದ್ಯತೆಯ ಕ್ಷೇತ್ರವನ್ನು ಎತ್ತಿ ಹಿಡಿಯಲು ಮತ್ತು ನಿರ್ದಿಷ್ಟ ಆರೋಗ್ಯ ವಿಷಯದ ಬಗ್ಗೆ ಜಾಗೃತಿ ಮೂಡಿಸುವ ಗುರಿಯನ್ನು ಹೊಂದಿದೆ. ಈ ವಿಶ್ವ ಆರೋಗ್ಯ ದಿನದಂದು, ನಮ್ಮ ವೈದ್ಯರು ಆರೋಗ್ಯದ ಅಸಮಾನತೆಗಳನ್ನು ಹೋಗಲಾಡಿಸಲು ಕ್ರಮ ಕೈಗೊಳ್ಳಬೇಕೆಂದು ಕರೆ ನೀಡಿದ್ದಾರೆ. ಒಂದು ವರ್ಷವಿಡೀ ಜಾಗತಿಕ ಅಭಿಯಾನದ ಭಾಗವಾಗಿ ಜನರನ್ನು ಒಗ್ಗೂಡಿಸಿ ಉತ್ತಮ, ಆರೋಗ್ಯಕರ ಜಗತ್ತನ್ನು ನಿರ್ಮಿಸಲು ಶ್ರಮಿಸುವ ಉದ್ದೇಶ ಹೊಂದಿದ್ದಾರೆ. ನಮ್ಮ ಆರೋಗ್ಯವು ಕೇವಲ ನಮ್ಮ ಸ್ವಂತ ಬುದ್ಧಿವಂತಿಕೆ ಮತ್ತು ಕಾಳಜಿಯ ಪರಿಣಾಮವಲ್ಲ. ವೈದ್ಯಕೀಯ ವಿಜ್ಞಾನಗಳಲ್ಲಿನ ಅದ್ಭುತ ಪ್ರಗತಿಯೊಂದಿಗೆ ಇದು ಹೊಂದಾಣಿಕೆ ಆಗಬೇಕು. ಆದ್ದರಿಂದ ನಾವು ವೈಯಕ್ತಿಕವಾಗಿ ಮತ್ತು ಸಾಮೂಹಿಕವಾಗಿ, ನಮ್ಮ ವೈಯಕ್ತಿಕ ಮತ್ತು ಸಾಮಾಜಿಕ ಆರೋಗ್ಯಕ್ಕಾಗಿ ಏನು ಮಾಡಬೇಕೆಂದನ್ನು ಈ ವಿಶ್ವ ಆರೋಗ್ಯ ದಿನದಂದು ಯೋಚಿಸಬೇಕು.

World Health Day 2022 Date, Theme, Wishes, History and Significance in Kannada

ವಿಶ್ವ ಆರೋಗ್ಯ ದಿನದ ಉದ್ದೇಶಗಳು:

• ಸಾಂಕ್ರಾಮಿಕ ರೋಗಗಳನ್ನು ತಡೆಗಟ್ಟುವ ಕ್ರಮಗಳ ಬಗ್ಗೆ ಮುನ್ನೆಚ್ಚರಿಕೆ ವಹಿಸುವುದು

• ಸೂಕ್ತ ಕಾಲಕ್ಕೆ ನೀಡಬೇಕಾದ ಆರೋಗ್ಯ ಸೇವೆಗೆ ಪ್ರಾಮುಖ್ಯತೆ ನೀಡುವುದು

• ಪರಿಸರದ ಸ್ವಚ್ಛತೆ ಹಾಗೂ ರಕ್ಷಣಾ ಕ್ರಮಗಳು

• ವಿವಿಧ ರೋಗಗಳಿಗೆ ತುತ್ತಾಗುವ ಕಾರಣಗಳು ಹಾಗೂ ಅವುಗಳನ್ನು ತಡೆಗಟ್ಟುವ ಮುಂಜಾಗ್ರತಾ ಕ್ರಮಗಳ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸುವುದು

• ದುಶ್ಚಟಗಳಿಂದ ದೂರವಿರಿಸುವ ಕ್ರಮಗಳು ಹಾಗೂ ಅದರಿಂದಾಗುವ ಪರಿಣಾಮಗಳ ಬಗ್ಗೆ ತಿಳುವಳಿಕೆ ನೀಡುವುದು

ಇಂದು ಹೆಚ್ಚು ಗಮನಹರಿಸಬೇಕಾದ ವಿಷಯಗಳು

* ಆಹಾರ ಆರೋಗ್ಯದ ಮೇಲೆ ಹೇಗೆ ಪರಿಣಾಮ ಬೀರುತ್ತದೆ ಎಂಬುದರ ಬಗ್ಗೆ ಮಾಹಿತಿ ಹೊದಿರುವುದು ಅಗತ್ಯ

* ನಿಮ್ಮ ಚರ್ಮವು ನಿಮ್ಮ ಆಂತರಿಕ ಆರೋಗ್ಯದ ಮಾಹಿತಿ ನೀಡುತ್ತದೆ

* ಉತ್ತಮ ಆರೋಗ್ಯ ಕಾಪಾಡುವಲ್ಲಿ ಮಹಿಳೆಯರ ಪಾತ್ರ ಹಿರಿದು

* ನಿಮ್ಮ ಮೂತ್ರಪಿಂಡಗಳನ್ನು ಲಘುವಾಗಿ ತೆಗೆದುಕೊಳ್ಳಬೇಡಿ

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+