World Health Day 2023: ದಿನಾಂಕ, ಇತಿಹಾಸ, ಮಹತ್ವದ ಬಗ್ಗೆ ತಿಳಿಯಬೇಕಾದದ್ದು
ಆರೋಗ್ಯ.. ಜೀವನದಲ್ಲಿ ಆರೋಗ್ಯ ಇಲ್ಲದೇ ಹೋದರೆ ಏನನ್ನೂ ಮಾಡಲು ಸಾಧ್ಯವಿಲ್ಲ. ಹೀಗಾಗಿನೇ ಆರೋಗ್ಯವೇ ಭಾಗ್ಯ ಎಂದು ಹೇಳಲಾಗುತ್ತದೆ. ಆಸ್ತಿ, ಅಂತಸ್ತು, ಸಂಪತ್ತು, ಹಣಕ್ಕಿಂತ ಆರೋಗ್ಯ ತುಂಬಾನೇ ಬೆಲೆಬಾಳುವಂತದ್ದು. ಜೀವನದಲ್ಲಿ ಏನನ್ನೇ ಸುಲಭವಾಗಿ ಅಥವಾ ಶ್ರಮ ವಹಿಸಿ ಪಡೆದುಬಿಡಬಹುದು. ಆದರೆ ಆರೋಗ್ಯವನ್ನು ಒಮ್ಮೆ ಕಳೆದುಕೊಂಡರೆ ಎಷ್ಟು ಹಣಕೊಟ್ಟರೂ, ಎಷ್ಟೇ ಶ್ರಮ ವಹಿಸಿದರೂ ಅದನ್ನು ಮತ್ತೆ ಪಡೆಯಲು ಸಾಧ್ಯವಿಲ್ಲ. ಹೀಗಾಗಿ ಆರೋಗ್ಯದ ಬಗ್ಗೆ ಕಾಳಜಿ ಜೊತೆಗೆ ಹೆಚ್ಚು ಪ್ರಾಮುಖ್ಯತೆ ನೀಡಲಾಗುತ್ತದೆ. ಈ ಬಗ್ಗೆ ವೈದ್ಯರು, ಅನೇಕ ಸಂಘ ಸಂಸ್ಥೆಗಳು ಸಿಬ್ಬಂದಿಗಳು ವಿಶೇಷ ಕಾರ್ಯಕ್ರಮಗಳ ಮೂಲಕ ಆರೋಗ್ಯದ ಕುರಿತಾದ ಜನ ಜಾಗ್ರತೆಗಳನ್ನು ಮೂಡಿಸುತ್ತಲೇ ಇರುತ್ತಾರೆ.
ಪ್ರಪಂಚದಾದ್ಯಂತದ ಜನರ ಆರೋಗ್ಯ ವಿಷಯದ ಬಗ್ಗೆ ಗಮನ ಸೆಳೆಯಲು ಪ್ರತಿ ವರ್ಷ ಏಪ್ರಿಲ್ 7 ರಂದು ವಿಶ್ವ ಆರೋಗ್ಯ ದಿನವನ್ನು ಆಚರಿಸಲಾಗುತ್ತದೆ. ಇದು 1948 ರಲ್ಲಿ ಸ್ಥಾಪನೆಯಾದ ವಿಶ್ವ ಆರೋಗ್ಯ ಸಂಸ್ಥೆಯ (WHO) ಜನ್ಮದಿನವನ್ನು ಸಹ ಗುರುತಿಸುತ್ತದೆ. ಈ ವರ್ಷ ವಿಶ್ವ ಆರೋಗ್ಯ ಸಂಸ್ಥೆಯು ತನ್ನ 75 ನೇ ವಾರ್ಷಿಕೋತ್ಸವವನ್ನು ಆಚರಿಸುತ್ತಿದೆ.

ವಿಶ್ವ ಆರೋಗ್ಯ ದಿನ 2023: ದಿನದ ಥೀಮ್
2023 ರ ವಿಶ್ವ ಆರೋಗ್ಯ ದಿನದ ಥೀಮ್ "ಎಲ್ಲರಿಗೂ ಆರೋಗ್ಯ". ಕಳೆದ 70 ವರ್ಷಗಳಲ್ಲಿ ಜೀವನದ ಗುಣಮಟ್ಟವನ್ನು ಸುಧಾರಿಸಲು ಸಹಾಯ ಮಾಡಿದ ಸಾರ್ವಜನಿಕ ಆರೋಗ್ಯದ ಯಶಸ್ಸನ್ನು ಜಗತ್ತಿಗೆ ಹಿಂತಿರುಗಿ ನೋಡುವ ಅವಕಾಶವನ್ನು ಸೃಷ್ಟಿಸುವುದು ಥೀಮ್‌ನ ಗುರಿಯಾಗಿದೆ. ಇಂದು ಮತ್ತು ನಾಳೆ ಆರೋಗ್ಯ ಸವಾಲುಗಳನ್ನು ನಿಭಾಯಿಸಲು ಸಹಾಯ ಮಾಡುವ ಅಗತ್ಯವಿರುವ ಕ್ರಮಗಳನ್ನು ತೆಗೆದುಕೊಳ್ಳುವಂತೆ ಈ ವಿಷಯವು ಜಗತ್ತಿಗೆ ಕರೆ ನೀಡುತ್ತದೆ ಎಂದು ವಿಶ್ವ ಆರೋಗ್ಯ ಸಂಸ್ಥೆ ಹೇಳಿದೆ.
ವಿಶ್ವ ಆರೋಗ್ಯ ದಿನ 2023: ಈ ದಿನವನ್ನು ಹೇಗೆ ಗುರುತಿಸುವುದು
ವಿಶ್ವ ಆರೋಗ್ಯ ಸಂಸ್ಥೆಯು ಈ ದಿನವನ್ನು ಗುರುತಿಸಲು ಕೆಲವು ವಿಚಾರಗಳನ್ನು ಹಂಚಿಕೊಂಡಿದೆ. ಪ್ರಪಂಚದಾದ್ಯಂತ ಜನರು ತಮ್ಮ ಸಮುದಾಯಗಳಿಗಾಗಿ ವಿಶ್ವ ಆರೋಗ್ಯ ದಿನದ ಕಾರ್ಯಕ್ರಮವನ್ನು ಆಯೋಜಿಸಬಹುದು ಎಂದು WHO ಹೇಳಿದೆ.
"ಆರ್ಥಿಕ ಸಂಕಷ್ಟಕ್ಕೆ ಸಿಲುಕದೆ ಗುಣಮಟ್ಟದ ಆರೋಗ್ಯ ಸೇವೆಯನ್ನು ಪಡೆಯಲು, ನಿಮ್ಮ ಹಕ್ಕನ್ನು ಪಡೆಯಲು, ಉತ್ತಮ ಆರೋಗ್ಯಕ್ಕಾಗಿ ನಿಮ್ಮ ಸಮುದಾಯವನ್ನು ಸಜ್ಜುಗೊಳಿಸಲು, ಆರೋಗ್ಯ ಕಾರ್ಯಕರ್ತರ ಮತ್ತು ಪ್ರಭಾವಿಗಳೊಂದಿಗೆ ಕೆಲಸ ಮಾಡಿ" ಎಂದು WHO ಹೇಳಿಕೆಯಲ್ಲಿ ತಿಳಿಸಿದೆ.

ಕಲಾವಿದರು, ಸಂಗೀತಗಾರರು, ಪ್ರಭಾವಿಗಳು, ಸಾಮಾಜಿಕ ಕಾರ್ಯಕರ್ತರು, ಸೆಲೆಬ್ರಿಟಿಗಳು ಮತ್ತು ಪ್ರಪಂಚದಾದ್ಯಂತದ ಇತರ ಪ್ರಭಾವಶಾಲಿ ವ್ಯಕ್ತಿಗಳೊಂದಿಗೆ ಆರೋಗ್ಯ ಸೇವೆಯಲ್ಲಿ ಸಹಕರಿಸುವ ಮೂಲಕ "ಎಲ್ಲರಿಗೂ ಆರೋಗ್ಯ" ಎಂಬ ಸಂದೇಶವನ್ನು ಹರಡಲು WHO ಕರೆ ನೀಡಿದೆ.
ಶಾಲೆಗಳು, ಕಾಲೇಜುಗಳು ಮತ್ತು ಇತರ ಶಿಕ್ಷಣ ಸಂಸ್ಥೆಗಳು ಪ್ರತಿದಿನ ಅನುಸರಿಸಬಹುದಾದ ಆರೋಗ್ಯಕರ ಅಭ್ಯಾಸಗಳ ಬಗ್ಗೆ ವಿದ್ಯಾರ್ಥಿಗಳಿಗೆ ಶಿಕ್ಷಣ ನೀಡಲು ಚಟುವಟಿಕೆಗಳನ್ನು ಆಯೋಜಿಸಬಹುದು ಎಂದು ಆರೋಗ್ಯ ಸಂಸ್ಥೆ ಹೇಳಿದೆ.
"ನೀವು ಸಾಮಾಜಿಕ ಮಾಧ್ಯಮ ಯೋಜನೆಯನ್ನು ಸಹ ರಚಿಸಬಹುದು ಮತ್ತು #HealthForAll ಮತ್ತು #WHO75 ಎಂಬ ಅಧಿಕೃತ ಹ್ಯಾಶ್‌ಟ್ಯಾಗ್‌ಗಳನ್ನು ಬಳಸಬಹುದು" ಎಂದು ಅದು ಹೇಳಿದೆ.

ವಿಶ್ವ ಆರೋಗ್ಯ ದಿನದ ಇತಿಹಾಸ
1948 ರಲ್ಲಿ ಮೊದಲ ಆರೋಗ್ಯ ಅಸೆಂಬ್ಲಿ ಪ್ರಾರಂಭವಾದಾಗಿನಿಂದ ಮತ್ತು 1950 ರಲ್ಲಿ ಜಾರಿಗೆ ಬಂದಾಗಿನಿಂದ, ಈ ಆಚರಣೆಯು ವಿಶ್ವ ಆರೋಗ್ಯ ಸಂಸ್ಥೆ ಕಾಳಜಿ ಮಾಡಬೇಕಾದ ಆದ್ಯತೆಯ ಕ್ಷೇತ್ರವನ್ನು ಎತ್ತಿ ಹಿಡಿಯಲು ಮತ್ತು ನಿರ್ದಿಷ್ಟ ಆರೋಗ್ಯ ವಿಷಯದ ಬಗ್ಗೆ ಜಾಗೃತಿ ಮೂಡಿಸುವ ಗುರಿಯನ್ನು ಹೊಂದಿದೆ. ಈ ವಿಶ್ವ ಆರೋಗ್ಯ ದಿನದಂದು, ನಮ್ಮ ವೈದ್ಯರು ಆರೋಗ್ಯದ ಅಸಮಾನತೆಗಳನ್ನು ಹೋಗಲಾಡಿಸಲು ಕ್ರಮ ಕೈಗೊಳ್ಳಬೇಕೆಂದು ಕರೆ ನೀಡಿದ್ದಾರೆ.
ಒಂದು ವರ್ಷವಿಡೀ ಜಾಗತಿಕ ಅಭಿಯಾನದ ಭಾಗವಾಗಿ ಜನರನ್ನು ಒಗ್ಗೂಡಿಸಿ ಉತ್ತಮ, ಆರೋಗ್ಯಕರ ಜಗತ್ತನ್ನು ನಿರ್ಮಿಸಲು ಶ್ರಮಿಸುವ ಉದ್ದೇಶ ಹೊಂದಿದ್ದಾರೆ. ನಮ್ಮ ಆರೋಗ್ಯವು ಕೇವಲ ನಮ್ಮ ಸ್ವಂತ ಬುದ್ಧಿವಂತಿಕೆ ಮತ್ತು ಕಾಳಜಿಯ ಪರಿಣಾಮವಲ್ಲ. ವೈದ್ಯಕೀಯ ವಿಜ್ಞಾನಗಳಲ್ಲಿನ ಅದ್ಭುತ ಪ್ರಗತಿಯೊಂದಿಗೆ ಇದು ಹೊಂದಾಣಿಕೆ ಆಗಬೇಕು. ಆದ್ದರಿಂದ ನಾವು ವೈಯಕ್ತಿಕವಾಗಿ ಮತ್ತು ಸಾಮೂಹಿಕವಾಗಿ, ನಮ್ಮ ವೈಯಕ್ತಿಕ ಮತ್ತು ಸಾಮಾಜಿಕ ಆರೋಗ್ಯಕ್ಕಾಗಿ ಏನು ಮಾಡಬೇಕೆಂದನ್ನು ಈ ವಿಶ್ವ ಆರೋಗ್ಯ ದಿನದಂದು ಯೋಚಿಸಬೇಕು.
ವಿಶ್ವ ಆರೋಗ್ಯ ದಿನದ ಉದ್ದೇಶಗಳು:
• ಸಾಂಕ್ರಾಮಿಕ ರೋಗಗಳನ್ನು ತಡೆಗಟ್ಟುವ ಕ್ರಮಗಳ ಬಗ್ಗೆ ಮುನ್ನೆಚ್ಚರಿಕೆ ವಹಿಸುವುದು
• ಸೂಕ್ತ ಕಾಲಕ್ಕೆ ನೀಡಬೇಕಾದ ಆರೋಗ್ಯ ಸೇವೆಗೆ ಪ್ರಾಮುಖ್ಯತೆ ನೀಡುವುದು
• ಪರಿಸರದ ಸ್ವಚ್ಛತೆ ಹಾಗೂ ರಕ್ಷಣಾ ಕ್ರಮಗಳು
• ವಿವಿಧ ರೋಗಗಳಿಗೆ ತುತ್ತಾಗುವ ಕಾರಣಗಳು ಹಾಗೂ ಅವುಗಳನ್ನು ತಡೆಗಟ್ಟುವ ಮುಂಜಾಗ್ರತಾ ಕ್ರಮಗಳ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸುವುದು
• ದುಶ್ಚಟಗಳಿಂದ ದೂರವಿರಿಸುವ ಕ್ರಮಗಳು ಹಾಗೂ ಅದರಿಂದಾಗುವ ಪರಿಣಾಮಗಳ ಬಗ್ಗೆ ತಿಳುವಳಿಕೆ ನೀಡುವುದು
-
ಶಾಲಾ ಮಕ್ಕಳ ಮೊಬೈಲ್ ಬಳಕೆ ನಿರ್ಬಂಧ: 'ಡಿಜಿಟಲ್ ಕರಡು ನೀತಿ' ಬಿಡುಗಡೆಗೊಳಿಸಿದ ರಾಜ್ಯ ಸರ್ಕಾರ -
Harish Rana: ಭಾರತದ ಮೊದಲ ದಯಾಮರಣದ ಹಕ್ಕುದಾರ ಹರೀಶ್ ರಾಣಾ ನಿಧನ, ಕುಟುಂಬಸ್ಥರಿಂದ ಅಂಗಾಂಗ ದಾನ -
Vastu Tips for Kitchen: ವಾಸ್ತು ಪ್ರಕಾರ ಅಡುಗೆ ಮನೆಯಲ್ಲಿ ಇವು ಇರಬಾರದು.. ಒಮ್ಮೆ ನೋಡಿ! -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
LPG: ಗೃಹಬಳಕೆ ಸಿಲಿಂಡರ್ ಬಳಕೆದಾರರಿಗೆ ಬಿಗ್ ಅಪ್ಡೇಟ್: ಎಲ್ಪಿಜಿ ಅಭಾವ ನೀಗಿಸಲು ಕೇಂದ್ರದಿಂದ ಹೊಸ ಪ್ಲಾನ್ -
Rain: ಮುಂದಿನ 3 ಗಂಟೆಗಳಲ್ಲಿ ಕರ್ನಾಟಕದ 13 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ: ಹವಾಮಾನ ಇಲಾಖೆ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ












Click it and Unblock the Notifications