ವಿಶ್ವ ಶ್ವಾಸಕೋಶದ ಕ್ಯಾನ್ಸರ್ ದಿನ: ಮಹಿಳೆಯರಲ್ಲಿ ಪ್ರಕರಣಗಳ ಸಂಖ್ಯೆ ಹೆಚ್ಚಳವೇಕೆ?
ಬೆಂಗಳೂರು, ಜುಲೈ 30: ವಿಶ್ವ ಶ್ವಾಸಕೋಶದ ಕ್ಯಾನ್ಸರ್ ದಿನಕ್ಕೆ ಪೂರ್ವಭಾವಿಯಾಗಿ, ನ್ಯೂಬರ್ಗ್ ಸೆಂಟರ್ ಫಾರ್ ಜೀನೋಮಿಕ್ ಮೆಡಿಸಿನ್ ಪ್ಯಾನಲ್‌ನಲ್ಲಿ ಶ್ವಾಸಕೋಶದ ಕ್ಯಾನ್ಸರ್ ತಜ್ಞರು 'ಶ್ವಾಸಕೋಶದ ಕ್ಯಾನ್ಸರ್ ಪತ್ತೆ- ಎಷ್ಟು ತಡವಾಗಿ? ತಡವಾಗಿಯೇ?' ಎಂಬುದಕ್ಕೆ ಸಂಬಂಧಿಸಿ ನಡೆಸಿದ ಚರ್ಚೆಯಲ್ಲಿ, ಇತ್ತೀಚೆಗೆ, ಹೆಚ್ಚಿನ ಸಂಖ್ಯೆಯ ಮಹಿಳೆಯರು ಶ್ವಾಸಕೋಶದ ಕ್ಯಾನ್ಸರ್ ಪ್ರಕರಣಗಳನ್ನು ವರದಿ ಮಾಡುತ್ತಿದ್ದಾರೆ ಎಂಬ ಕುರಿತು ಒಳನೋಟಗಳನ್ನು ಹಂಚಿಕೊಂಡಿದ್ದಾರೆ. ಪುರುಷರಲ್ಲಿ ಶ್ವಾಸಕೋಶದ ಕ್ಯಾನ್ಸರ್ ಪ್ರಕರಣಗಳು ಹೆಚ್ಚಾಗಿಯೇ ಇವೆ. ಆದಾಗ್ಯೂ, ಮಹಿಳೆಯರಲ್ಲಿ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿರುವುದು ಚಿಂತೆಯ ವಿಷಯವಾಗಿದೆ ಎಂದಿದ್ದಾರೆ.
ತಜ್ಞರ ಪ್ರಕಾರ, ತೂಕ ನಷ್ಟ, ಕಫ ಉತ್ಪತ್ತಿ, ಕಫದೊಂದಿಗೆ ರಕ್ತ ಬರುವುದು ಶ್ವಾಸಕೋಶದ ಕ್ಯಾನ್ಸರ್‌ನ ಕೆಲವು ಪ್ರಮುಖ ಲಕ್ಷಣಗಳು. ಕ್ಯಾನ್ಸರ್ ಶ್ವಾಸಕೋಶಗಳಿಂದ ಹರಡಿದರೆ, ಅದು ಯಕೃತ್ತನ್ನು ಸೇರಿ ಕಾಮಾಲೆ ರೋಗಕ್ಕೆ ಕಾರಣವಾಗುತ್ತದೆ, ಅಡ್ರಿನಲ್ ಗ್ರಂಥಿಗಳಿಗೆ ಸೇರಿದರೆ ಅವು ವೈಫಲ್ಯ ಅನುಭವಿಸುತ್ತವೆ. ಇದರಿಂದ ರಕ್ತದೊತ್ತಡ ಕುಸಿತದಂತಹ ತುರ್ತು ಸ್ಥಿತಿಯನ್ನು ತಂದೊಡ್ಡುತ್ತದೆ. ಎಲುಬುಗಳಲ್ಲಿ ನೋವು ಮತ್ತು ಮುರಿತ ಉಂಟಾಗುತ್ತದೆ. ಕ್ಯಾನ್ಸರ್ ಮೆದುಳನ್ನು ತಲುಪಿದಾಗ ಪಾರ್ಶ್ವವಾಯು ಅಥವಾ ಸೆಳವು ಉಂಟಾಗುತ್ತದೆ.

ಶ್ವಾಸಕೋಶದ ಕ್ಯಾನ್ಸರ್‌ಗೆ ಮುಖ್ಯ ಕಾರಣವೇನು?:
ಕೈಗಾರಿಕೆಗಳು, ಗಣಿಗಾರಿಕೆ ವಲಯಗಳಲ್ಲಿ ಕೆಲಸ ಮಾಡುವಂತಹ ಔದ್ಯೋಗಿಕ ಅಂಶಗಳ ಹೊರತಾಗಿ, ಸಿಗರೆಟ್‌ಗಳ ಸೇವನೆ, ತಂಬಾಕು ಜಗಿಯುವುದು, ಖೇಣಿ, ಹುಕ್ಕಾ, ತಂಬಾಕಿನ ಜತೆಗೆ ವೀಳ್ಯದೆಲೆ ತಿನ್ನುವುದು, ಹಿಮ್ಮುಖ ಧೂಮಪಾನ, ಅಡುಗೆ ಮನೆಯ ಹೊಗೆ ಮತ್ತು ವಾಹನಗಳ ಮಾಲಿನ್ಯ ಮುಂತಾದವು ಶ್ವಾಸಕೋಶದ ಕ್ಯಾನ್ಸರ್‌ಗೆ ಮುಖ್ಯ ಕಾರಣಗಳಾಗಿವೆ. ಮುಂದಿನ ಕೆಲವು ವರ್ಷಗಳಲ್ಲಿ ತಂಬಾಕು-ಸಂಬಂಧಿ ಮಾರಕ ರೋಗಗಳ ಹೊರೆ ಭಾರತದಲ್ಲಿ 12 ಪ್ರತಿಶತಕ್ಕೆ ಏರಿಕೆಯಾಗುವ ನಿರೀಕ್ಷೆಯಿದೆ ಎಂದು ಸಮಿತಿ ಎಚ್ಚರಿಸಿದೆ.

ಮೆಡಿಕಲ್ ಆಂಕಾಲಜಿಸ್ಟ್ ಡಾ. ಎಸ್. ವಿಶ್ವನಾಥ್
ಕುಮಾರನ್ ಆಸ್ಪತ್ರೆಯ ಮೆಡಿಕಲ್ ಆಂಕಾಲಜಿಸ್ಟ್ ಡಾ. ಎಸ್. ವಿಶ್ವನಾಥ್ , ''ಬಹುತೇಕ ಸಂದರ್ಭಗಳಲ್ಲಿ ಆರಂಭಿಕ ಹಂತಗಳಲ್ಲಿ ಕ್ಯಾನ್ಸರನ್ನು ಕ್ಷಯವೆಂದು ತಪ್ಪಾಗಿ ಅರ್ಥ ಮಾಡಿಕೊಳ್ಳಲಾಗುತ್ತದೆ. ಎರಡರ ರೋಗಲಕ್ಷಣಗಳೂ ಬಹುತೇಕ ಒಂದೇ ರೀತಿ ಇರುವುದು ಇದಕ್ಕೆ ಕಾರಣ. ಎರಡೂ ಪ್ರಕರಣಗಳಲ್ಲಿ, ರೋಗಿಯು ಕೆಮ್ಮು ಹಾಗೂ / ಅಥವಾ ರಕ್ತ ಸಹಿತವಾದ ಕೆಮ್ಮನ್ನು ಹೊಂದಿರುತ್ತಾರೆ. ಧೂಮಪಾನವು ಶ್ವಾಸಕೋಶದ ಕ್ಯಾನ್ಸರ್‌ಗೆ ಪ್ರಮುಖ ಕಾರಣವಾಗಿದೆ. ಧೂಮಪಾನಿಗಳು ಹಾಗೂ ಧೂಮಪಾನಿಗಳಲ್ಲದವರಲ್ಲಿ ಶ್ವಾಸಕೋಶದ ಕ್ಯಾನ್ಸರ್ ಉಂಟಾಗುವ ಅಪಾಯವು 20:1ರಷ್ಟಿರುತ್ತದೆ,''.
''ಧೂಮಪಾನಿಗೆ ಹೋಲಿಸಿದರೆ ನಿಷ್ಕ್ರಿಯ ಧೂಮಪಾನಿ ಕ್ಯಾನ್ಸರ್‌ಗೆ ತುತ್ತಾಗುವ ಸಾಧ್ಯತೆ ಸಮನಾಗಿರುತ್ತದೆ ಅಥವಾ ಹೆಚ್ಚಾಗಿರುತ್ತದೆ. ಆರಂಭಿಕ ಹಂತದಲ್ಲಿ ರೋಗಿಗಳನ್ನು ಗುಣಪಡಿಸಲು, ಶಸ್ತ್ರಚಿಕಿತ್ಸೆಯು ತುಂಬ ಮುಖ್ಯವಾದ ವಿಧಾನವಾಗಿದ್ದು, ಆ ಬಳಿಕ ವಿಕಿರಣ ಚಿಕಿತ್ಸೆಯನ್ನು ನೀಡಲಾಗುತ್ತದೆ. ಈಗ ಹೆಚ್ಚು ಸುಧಾರಿತ ಚಿಕಿತ್ಸಾ ವಿಧಾನಗಳಾದ ಉದ್ದೇಶಿತ ಚಿಕಿತ್ಸೆ ಮತ್ತು ಇಮ್ಯುನೊಥೆರಪಿ ಆಯ್ಕೆಗಳು ಲಭ್ಯವಿವೆ. ಇವು ಜೀವಿತಾವಧಿಯನ್ನು ಹೆಚ್ಚಿಸುತ್ತವೆ ಮತ್ತು ಉತ್ತಮ ಗುಣಮಟ್ಟದ ಜೀವನಕ್ಕೆ ಕಾರಣವಾಗುತ್ತವೆ. ಕೀಮೋಥೆರಪಿಗೆ ಹೋಲಿಸಿದರೆ ಉದ್ದೇಶಿತ ಚಿಕಿತ್ಸೆ ಮತ್ತು ಇಮ್ಯುನೋಥೆರಪಿಗಳು ತುಂಬ ಕಡಿಮೆ ಅಡ್ಡ ಪರಿಣಾಮಗಳನ್ನು ಹೊಂದಿವೆ. ಉತ್ತಮ ಬದುಕುಳಿಯುವಿಕೆಯ ದರಗಳಿಗೆ ಕಾರಣವಾಗುವ ಚಿಕಿತ್ಸೆಯ ಆಯ್ಕೆಗಳನ್ನು ನಿರ್ಧರಿಸುವಲ್ಲಿ ಜೆನೆಟಿಕ್ ಪರೀಕ್ಷೆಯು ವರದಾನವಾಗಿದೆ.''

ಹೊಲಗಳಲ್ಲಿ ಕೆಲಸ ಮಾಡುವ ಮಹಿಳೆಯರಿಗೆ ಅಪಾಯ
ಎಚ್‌ಸಿಜಿ ಕ್ಯಾನ್ಸರ್ ಆಸ್ಪತ್ರೆಯ ಸರ್ಜಿಕಲ್ ಆಂಕಾಲಜಿ ವಿಭಾಗದ ಕನ್ಸಲ್ಟೆಂಟ್ ಆಗಿರುವ ಡಾ. ಜಗನ್ನಾಥ್ ದೀಕ್ಷಿತ್: ''50% ಶ್ವಾಸಕೋಶ ಕ್ಯಾನ್ಸರ್ ಪೀಡಿತರು ರೋಗ ಪತ್ತೆಯಾದ ಮೊದಲ ವರ್ಷದಲ್ಲೇ ಸಾವಿಗೀಡಾಗುತ್ತಾರೆ. ಆರಂಭಿಕ ಹಂತಗಳಲ್ಲೇ ಕ್ಯಾನ್ಸರ್ ಪತ್ತೆಯಾದರೆ ಸಾವಿನ ಪ್ರಮಾಣವನ್ನು 14% ದಿಂದ 20% ದಷ್ಟು ಇಳಿಸಬಹುದೆಂದು ನಾವು ಭರವಸೆ ನೀಡುತ್ತೇವೆ. ಆದಾಗ್ಯೂ, ಆರಂಭಿಕ ರೋಗಲಕ್ಷಣಗಳು ಹೆಚ್ಚು ಗೋಚರವಾಗುವುದಿಲ್ಲ. ಆದ್ದರಿಂದ ಆರಂಭಿಕ ಹಂತಗಳಲ್ಲಿ ಶ್ವಾಸಕೋಶದ ಕ್ಯಾನ್ಸರ್ ಪತ್ತೆ ಕಷ್ಟವಾಗುತ್ತಿದೆ. ಗ್ರಾಮೀಣ ಮಹಿಳೆಯರಲ್ಲಿ ಹಿಮ್ಮುಖ(reverse) ಧೂಮಪಾನವು ಶ್ವಾಸಕೋಶದ ಕ್ಯಾನ್ಸರ್‌ಗೆ ಪ್ರಮುಖ ಕಾರಣವಾಗುತ್ತಿದೆ. ಉತ್ತರ ಕರ್ನಾಟಕದ ಹೊಲಗಳಲ್ಲಿ ಕೆಲಸ ಮಾಡುವ ಮಹಿಳೆಯರಲ್ಲಿ ಇದು ಗಮನಾರ್ಹವಾಗಿರುತ್ತದೆ.''
ಶಸ್ತ್ರಚಿಕಿತ್ಸೆ, ವೈದ್ಯಕೀಯ, ಆಣ್ವಿಕ ರೋಗಶಾಸ್ತ್ರಜ್ಞ ಮತ್ತು ಆನುವಂಶಿಕ ಸಮಾಲೋಚಕರಿಂದ ಬಹುಶಿಸ್ತೀಯ ಆರೈಕೆಯನ್ನು ಕ್ಯಾನ್ಸರ್ ರೋಗಿಗಳು ಪಡೆಯುವುದು ಅಗತ್ಯವೆಂದು ಡಾ. ದೀಕ್ಷಿತ್ ಪ್ರತಿಪಾದಿಸಿದರು. ಉದ್ದೇಶಿತ ಚಿಕಿತ್ಸೆ ಮತ್ತು ಆನುವಂಶಿಕ ಪರೀಕ್ಷೆ ಚಾಲ್ತಿಗೆ ಬಂದಲ್ಲಿಂದ ಬದುಕುಳಿಯುವಿಕೆಯ ದರದಲ್ಲಿ ತೀವ್ರವಾದ ಬದಲಾವಣೆಯಾಗಿದೆ.

ರೋಗಿಗಳ ಜೀವನ ಮಟ್ಟವನ್ನು ಉತ್ತಮಗೊಳಿಸುತ್ತದೆ
ನ್ಯೂಬರ್ಗ್ ಸೆಂಟರ್ ಆಫ್ ಜೀನೋಮಿಕ್ ಮೆಡಿಸಿನ್‌ನ ಮುಖ್ಯ ವಿಜ್ಞಾನಿ (ಆಣ್ವಿಕ ಆಂಕೊಲಾಜಿ), ಡಾ. ಸಿದ್ಧಾರ್ಥ್ ಶ್ರೀವಾಸ್ತವ: ''ಕ್ಯಾನ್ಸರ್ ಗುಣಪಡಿಸುವಲ್ಲಿ ಉದ್ದೇಶಿತ ಚಿಕಿತ್ಸೆಯು ಬಹುಮುಖ್ಯ ವಿಧಾನವಾಗಿ ಮೂಡಿಬರುತ್ತಿದೆ. ಉದ್ದೇಶಿತ ಚಿಕಿತ್ಸೆಗಳು ಕ್ಯಾನ್ಸರ್‌ಗೆ ಸಂಬಂಧಿಸಿದ ನಿರ್ದಿಷ್ಟ ಆಣ್ವಿಕ ಗುರಿಗಳ ಮೇಲೆ ಕಾರ್ಯನಿರ್ವಹಿಸುತ್ತವೆ. ಆದರೆ ಹೆಚ್ಚಿನ ಪ್ರಮಾಣಿತ ಕೀಮೋಥೆರಪಿಗಳು ವೇಗವಾಗಿ ವಿಭಜನೆಗೊಳ್ಳುವ ಎಲ್ಲ ಸಾಮಾನ್ಯ ಮತ್ತು ಕ್ಯಾನ್ಸರ್ ಕೋಶಗಳ ಮೇಲೆ ಕಾರ್ಯನಿರ್ವಹಿಸುತ್ತವೆ. ಇದು ಸಾಮಾನ್ಯ ಕೋಶಗಳನ್ನು ಸಹ ಕೊಲ್ಲುತ್ತದೆ. ಕೀಮೋಥೆರಪಿಗೆ ಹೋಲಿಸಿದರೆ ಉದ್ದೇಶಿತ ಚಿಕಿತ್ಸೆಯು ಕಡಿಮೆ ಅಡ್ಡಪರಿಣಾಮಗಳನ್ನು ಉಂಟು ಮಾಡುತ್ತದೆ. ಅದರೊಂದಿಗೆ ರೋಗಿಗಳ ಜೀವನ ಮಟ್ಟವನ್ನು ಉತ್ತಮಗೊಳಿಸುತ್ತದೆ.''
-
SSLC ಪರೀಕ್ಷೆ 2026: ವೇಳಾಪಟ್ಟಿ, ಸಮಯ, ಡ್ರೆಸ್ಕೋಡ್ ಹಾಗೂ ಪ್ರಮುಖ ಮಾರ್ಗಸೂಚಿಗಳ ಮಾಹಿತಿ ಇಲ್ಲಿದೆ -
Horoscope March 16; ಈ ರಾಶಿಯವರಿಗೆ ಶುಭ ಸುದ್ದಿ ಬರಬಹುದು -
Gold Rate: ಆಭರಣ ಪ್ರಿಯರ ಗಮನಕ್ಕೆ; ಮಾರುಕಟ್ಟೆಯಲ್ಲಿ ಇಂದು ಚಿನ್ನ-ಬೆಳ್ಳಿ ಬೆಲೆ ಎಷ್ಟಿದೆ ಗೊತ್ತಾ? ಇಲ್ಲಿದೆ ಮಾಹಿತಿ -
Bengaluru Rent: ಬೆಂಗಳೂರು ಬಾಡಿಗೆ ಮನೆ ಸಮಸ್ಯೆ: 10 ತಿಂಗಳ ಮುಂಗಡ ಹಣ,ಮಾಲೀಕರ ಕಿರಿಕಿರಿ; 2026ರ ಹೊಸ ಬಾಡಿಗೆ ನಿಯಮವೇನು -
ಮಾರ್ಚ್ 15 ದಿನ ಭವಿಷ್ಯ: ಈ ರಾಶಿಯವರಿಗೆ ಒಲಿಯಲಿದೆ ಅದೃಷ್ಟ; ನಿಮ್ಮ ಜಾತಕ ಹೇಗಿದೆ ತಿಳಿಯಿರಿ -
ಪಿಯು ಮೌಲ್ಯಮಾಪನ ಬಹಿಷ್ಕಾರಕ್ಕೆ ಮುಂದಾದ ಉಪನ್ಯಾಸಕರು: ಫಲಿತಾಂಶ ವಿಳಂಬದ ಆತಂಕದಲ್ಲಿ ದ್ವಿತೀಯ ಪಿಯು ವಿದ್ಯಾರ್ಥಿಗಳು -
ಮಕ್ಕಳನ್ನ ಫ್ಯಾಕ್ಟರಿಯಂತೆ ಹೆರುತ್ತಾರೆ, ಪೋಷಿಸುವ ತಾಕತ್ತಿದ್ರೆ ಮಾತ್ರ ಮಕ್ಕಳು ಮಾಡ್ಕೊಳ್ಳಿ: ನಟಿ ವರಲಕ್ಷ್ಮಿ ಶರತ್ಕುಮಾರ್ -
ಬೆಂಗಳೂರು 2ನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ vs ಹೊಸೂರು ಏರ್ಪೋರ್ಟ್: ಯೋಜನೆ ಯಾವ ಹಂತದಲ್ಲಿದೆ -
Anil Kumble: ನಟ ಶಾರುಖ್ ಖಾನ್ ಮಾಲೀಕತ್ವದ ಕೆಕೆಆರ್ ತಂಡ ದಾರಿತಪ್ಪಿದ ಬಗ್ಗೆ ಅನಿಲ್ ಕುಂಬ್ಳೆ ಮಹತ್ವದ ಮಾಹಿತಿ -
ಹೆಣ್ಣುಬಾಕ ಕಾಮಪೀಠಿ ವೈರಮುತ್ತು ರಾಮಸ್ವಾಮಿ ಜ್ಞಾನಪೀಠಕ್ಕೆ ಕಳಂಕ: ಲೇಖಕ ಅರುಣ್ ಜೋಳದಕೂಡ್ಲಿಗಿ -
Viral Video: ಪೋಷಕರಿಗೆ ಹೊಸ ಕಾರು ಗಿಫ್ಟ್ ಮಾಡಿದ ಹೆಣ್ಣುಮಕ್ಕಳು, ನೆಟ್ಟಿಗರ ಹೃದಯ ಗೆದ್ದ ಈ ವಿಡಿಯೋ -
Viral Video: ಶಾಲಾ ಕಾರ್ಯಕ್ರಮದಲ್ಲಿ ವಿದ್ಯಾರ್ಥಿನಿಯರ ಟವಲ್ ಡ್ಯಾನ್ಸ್: ಚರ್ಚೆ ಹುಟ್ಟುಹಾಕಿದ ವೈರಲ್ ವಿಡಿಯೋ












Click it and Unblock the Notifications