Get Updates
Get notified of breaking news, exclusive insights, and must-see stories!

World Population Day: ಭಾರತದಲ್ಲಿ ಜನಸಂಖ್ಯೆ ನಿಯಂತ್ರಣಕ್ಕೆ ಮಹಿಳಾ ಸಬಲೀಕರಣ ಪ್ರಮುಖ

ಭಾರತ ವಿಶ್ವದಲ್ಲೇ ಅತಿ ಹೆಚ್ಚು ಜನಸಂಖ್ಯೆ ಹೊಂದಿರುವ ದೇಶ. ಈ ಜನಸಂಖ್ಯೆಯ ಬೆಳವಣಿಗೆಯನ್ನು ನಿಯಂತ್ರಿಸಲು ಕಳೆದ ಹಲವು ದಶಕಗಳಿಂದ ಪ್ರಯತ್ನಿಸುತ್ತಿದೆ. ಆದರೆ ಅನಕ್ಷರತೆ ಮತ್ತು ಸಾಂಸ್ಕೃತಿಕ ವಿಭಜನೆಯಿಂದಾಗಿ ಇಲ್ಲಿಯವರೆಗೆ ಫಲಿತಾಂಶವನ್ನು ಪಡೆಯಲು ಸಾಧ್ಯವಾಗಿಲ್ಲ.

ಮಹಿಳಾ ಸಬಲೀಕರಣ ಮುಖ್ಯ

ಶಿಕ್ಷಣ ಪ್ರತಿಯೊಬ್ಬರಿಗೂ ತನ್ನ ಸುತ್ತ ನಡೆಯುವ ಎಲ್ಲದರ ಸಾಧಕ-ಬಾಧಕಗಳ ಬಗ್ಗೆ ಅರಿವು ಮೂಡಿಸುತ್ತದೆ. ಭಾರತದಲ್ಲಿ ಜನಸಂಖ್ಯೆಯು ಇಷ್ಟು ದೊಡ್ಡ ಪ್ರಮಾಣದಲ್ಲಿ ಏರಲು ಒಂದು ಪ್ರಮುಖ ಕಾರಣವೆಂದರೆ ಗ್ರಾಮೀಣ ಪ್ರದೇಶಗಳಲ್ಲಿನ ಮಹಿಳೆಯರು ಅಥವಾ ಅನಕ್ಷರಸ್ಥರು. ಮುಖ್ಯವಾಗಿ ಅವರು ಗರ್ಭನಿರೋಧಕಗಳ ಬಳಕೆಯ ಬಗ್ಗೆ ತಿಳಿದಿರುವುದಿಲ್ಲ. ಹೆಚ್ಚಿನವರಿಗೆ ಅನಗತ್ಯ ಗರ್ಭಧಾರಣೆಯಿಂದ ದೂರವಿರುವುದು ತಿಳಿದಿರುವುದಿಲ್ಲ.

World Population Day:Women empowerment is key to population control in India

ಒಬ್ಬ ಮಹಿಳೆ ತನ್ನ ಜೀವಿತಾವಧಿಯಲ್ಲಿ ಮಕ್ಕಳಿಗೆ ಜನ್ಮ ನೀಡುತ್ತಾಳೆ. ದುಃಖಕರವೆಂದರೆ ಹೆಚ್ಚಿನ ಸಂದರ್ಭಗಳಲ್ಲಿ ಇಂತಹ ಮಹಿಳೆಯರು ಬಡವರು ಮತ್ತು ಉತ್ತಮ ಶಿಕ್ಷಣ ಅಥವಾ ಆರೋಗ್ಯ ಸೌಲಭ್ಯಗಳನ್ನು ಹೊಂದಿಲ್ಲ. ಎಷ್ಟೋ ಮನೆಗಳಲ್ಲಿ ಹೆಂಗಸರನ್ನು ಮಕ್ಕಳನ್ನು ಹಡೆಯುವ ಯಂತ್ರಗಳಂತೆ ಕಾಣುತ್ತಾರೆ.

ಮಹಿಳೆ ಆರ್ಥಿಕವಾಗಿ ಸ್ವತಂತ್ರಳಾಗಿದ್ದರೆ ಮತ್ತು ತನ್ನ ಹಕ್ಕುಗಳ ಬಗ್ಗೆ ತಿಳಿದಿದ್ದರೆ ಮಾತ್ರ ಸಾಧ್ಯ ಇದೆಲ್ಲವನ್ನು ಜಯಿಸಲು ಸಾಧ್ಯ. ಹಾಗಾದರೆ ಮಾತ್ರ ಆಕೆ ಮಕ್ಕಳು ಯಾವಾಗ? ಎಷ್ಟು ಬೇಕು? ಬೇಡವೆಂದು ಹೇಳಲು ಧೈರ್ಯವನ್ನು ಮಾಡುತ್ತಾಳೆ. ಮಾತ್ರವಲ್ಲದೆ ಅನಗತ್ಯ ಗರ್ಭಧಾರಣೆಯನ್ನು ತಪ್ಪಿಸಲು ಬಳಸುವ ವಿವಿಧ ರೀತಿಯ ಕ್ರಮಗಳ ಬಗ್ಗೆ ಅವಳು ತಿಳಿದಿರುತ್ತಾಳೆ.

ಕುಟುಂಬ ಯೋಜನೆ ಉತ್ತೇಜಿಸುವುದು

ಹೆಚ್ಚಿನ ಸರ್ಕಾರಿ ಆರೋಗ್ಯ ಕೇಂದ್ರಗಳಲ್ಲಿ ಗರ್ಭನಿರೋಧಕಗಳು ಉಚಿತವಾಗಿ ಲಭ್ಯವಿವೆ. ಗ್ರಾಮೀಣ ಪ್ರದೇಶದ ಮಹಿಳೆಯರಿಗೆ ಉಚಿತ ಸಲಹೆ ಮತ್ತು ಚಿಕಿತ್ಸೆ ನೀಡುವ ಮಹಿಳಾ ವೈದ್ಯರನ್ನೂ ನೇಮಿಸಲಾಗಿದೆ. ಆದರೆ ಇದು ಸಾಕಾಗುವುದಿಲ್ಲ ಎಂದು ತೋರುತ್ತದೆ. ದೇಶ ಎದುರಿಸುತ್ತಿರುವ ಜನಸಂಖ್ಯಾ ಸ್ಫೋಟವನ್ನು ನಿಯಂತ್ರಣಕ್ಕೆ ತರಲು ಕುಟುಂಬ ಯೋಜನೆಯನ್ನು ಉತ್ತೇಜಿಸಲು ಹೆಚ್ಚಿನ ಪ್ರಯತ್ನಗಳ ಅಗತ್ಯವಿದೆ.

World Population Day:Women empowerment is key to population control in India

ಅಂದಹಾಗೆ ಇಂದು ವಿಶ್ವ ಜನಸಂಖ್ಯಾ ದಿನ. ಪ್ರತಿ ವರ್ಷ ಜುಲೈ 11 ರಂದು ವಿಶ್ವ ಜನಸಂಖ್ಯಾ ದಿನವನ್ನು ಆಚರಿಸಲಾಗುತ್ತದೆ. ಜಗತ್ತಿನಲ್ಲಿ ಹೆಚ್ಚುತ್ತಿರುವ ಜನಸಂಖ್ಯೆಯನ್ನು ನಿಯಂತ್ರಿಸುವುದು ಪ್ರಸ್ತುತ ದಿನಗಳಲ್ಲಿ ಅತಿ ದೊಡ್ಡ ಸವಾಲಾಗಿ ಪರಿಣಮಿಸಿದೆ. ಮೂರು ದಶಕಗಳಿಂದ ವಿಶ್ವ ಜನಸಂಖ್ಯಾ ದಿನವನ್ನು ಆಚರಿಸುತ್ತಾ ಬರಲಾಗುತ್ತಿದೆ. ವಿಶ್ವ ಜನಸಂಖ್ಯಾ ದಿನವನ್ನು ಜನಸಂಖ್ಯೆ ಹೆಚ್ಚಳದಿಂದ ಉಂಟಾಗುವ ಸಮಸ್ಯೆಗಳ ಬಗ್ಗೆ ಅರಿವು ಮೂಡಿಸುವ ಉದ್ದೇಶದಿಂದ ಈ ದಿನವನ್ನು ಆಚರಣೆ ಮಾಡಲಾಗುತ್ತದೆ.

ಜುಲೈ 11 ರಂದು ಪ್ರತಿ ವರ್ಷ ವಿಶ್ವ ಜನಸಂಖ್ಯಾ ದಿನವನ್ನು ಆಚರಿಸಲಾಗುತ್ತದೆ. 1987 ರ ಜುಲೈ 11 ರಂದು ವಿಶ್ವ ಜನಸಂಖ್ಯೆಯು 500 ಕೋಟಿಯನ್ನು ತಲುಪಿತ್ತು. ಇದರ ಜನಸಂಖ್ಯಾ ಹೆಚ್ಚಳದ ಪರಿಣಾಮಗಳ ಬಗ್ಗೆ ಕಳವಳ ವ್ಯಕ್ತಪಡಿಸಿದ ವಿಶ್ವಸಂಸ್ಥೆಯು, ತನ್ನ ಅಂಗ ಅಂಸ್ಥೆಯಾದ ' ವಿಶ್ವಸಂಸ್ಥೆಯ ಅಭಿವೃದ್ಧಿ ಕಾರ್ಯಕ್ರಮ ಮಂಡಳಿ'ಯ ಮೂಲಕ 1989 ಜುಲೈ 11 ರಂದು ಮೊದಲ ಬಾರಿ ಜನಸಂಖ್ಯಾ ದಿನವನ್ನು ಆಚರಿಸಲಾಯಿತು. ಅಂದಿನಿಂದ ಇಚೆಗೆ ಜಗತ್ತಿನಾದ್ಯಂತ 200ಕ್ಕೂ ಹೆಚ್ಚು ದೇಶಗಳಲ್ಲಿ ಈ ದಿನವನ್ನು ಆಚರಿಸಿಕೊಂಡು ಬರಲಾಗುತ್ತದೆ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+