Year End 2022: ದೇಶದ ಏಳು ರಾಜ್ಯಗಳಲ್ಲಿ ನಡೆದ ವಿಧಾನಸಭೆ ಚುನಾವಣೆ- ಒಂದು ಹಿನ್ನೋಟ
ಬೆಂಗಳೂರು, ಡಿಸೆಂಬರ್ 20: 2022ನೇ ವರ್ಷದಲ್ಲಿ ಭಾರತದ ಏಳು ರಾಜ್ಯಗಳಲ್ಲಿ ವಿಧಾನಸಭೆ ಚುನಾವಣೆಗಳು ನಡೆದಿವೆ. ಪ್ರಧಾನಿ ಮೋದಿ(Narendra Modi) ಅವರ ವರ್ಚಸ್ಸಿನಿಂದ ಬಿಜೆಪಿಯು(BJP) ಐದು ರಾಜ್ಯಗಳಲ್ಲಿ ಗೆಲುವು ಸಾಧಿಸಿತು. ಕಾಂಗ್ರೆಸ್(Congress) ಹೇಳಿಕೊಳ್ಳುವಂತ ಸಾಧನೆ ಮಾಡಿಲಿಲ್ಲ. ಪಂಜಾಬ್‌ನಲ್ಲಿ ಅಧಿಕಾರದಲ್ಲಿದ್ದ ಕಾಂಗ್ರೆಸ್ ಸೋತಿತು. ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್(Arvind Kejriwal) ನೇತೃತ್ವದ ಆಮ್ ಆದ್ಮಿ ಪಕ್ಷವು(AAP) ಪಂಜಾಬ್‌ನಲ್ಲಿ ಅಧಿಕಾರಕ್ಕೆ ಬಂದಿತು. ಭಾರತದ ರಾಜಕಾರಣದ ಮಟ್ಟಿಗೆ ಆಮ್ ಆದ್ಮಿ ಪಕ್ಷವು ಮಾಡಿದ್ದು ಮಾತ್ರ ಸಾಧನೆ ಎಂದೇ ಹೇಳಬಹುದು. ಸ್ಥಾಪನೆಯಾದ ಹತ್ತು ವರ್ಷಗಳಲ್ಲಿ ಎರಡು ರಾಜ್ಯಗಳಲ್ಲಿ ಎಎಪಿ ಸ್ಪಷ್ಟ ಬಹುಮತದಿಂದ ಅಧಿಕಾರಕ್ಕೆ ಏರಿದೆ. ಬಿಜೆಪಿ ತನ್ನ ಗೆಲುವಿನ ನಾಗಾಲೋಟವನ್ನು ಮುಂದುವರಿಸಿದೆ.

ಗೋವಾ (Goa)
2022ರ ಫೆಬ್ರುವರಿ 14ರಂದು ಗೋವಾ ವಿಧಾನಸಭೆಗೆ ಚುನಾವಣೆ ನಡೆಯಿತು. ಬಿಜೆಪಿ ಹಾಗೂ ಮಹಾರಾಷ್ಟ್ರವಾದಿ ಗೋಮಂತಕ್ ಪಕ್ಷಗಳು ಸೇರಿ ಸರ್ಕಾರ ರಚಿಸಿವೆ. ಬಿಜೆಪಿ ಶಾಸಕ ಪ್ರಮೋದ್ ಸಾವಂತ್ ಗೋವಾದ ಮುಖ್ಯಮಂತ್ರಿ ಆಗಿ ಮರು ಆಯ್ಕೆ ಆದರು. ಕಾಂಗ್ರೆಸ್ ಪಕ್ಷವು ಎರಡನೇ ಅತಿ ದೊಡ್ಡ ಪಕ್ಷವಾಗಿ ಗೋವಾದಲ್ಲಿ ಹೊರಹೊಮ್ಮಿದೆ.
ಉತ್ತರಾಖಂಡ್ (Uttarakhand)
2022ರ ಫೆಬ್ರುವರಿ 14ರಂದು ಉತ್ತರಾಖಂಡ್ ವಿಧಾನಸಭೆಗೆ ಚುನಾವಣೆ ನಡೆಯಿತು. ಈ ಮೊದಲು ಅಧಿಕಾರದಲ್ಲಿದ್ದ ಬಿಜೆಪಿ ಮತ್ತೆ ಅಧಿಕಾರವನ್ನು ಪಡೆಯುವಲ್ಲಿ ಯಶ್ವಸಿಯಾಯಿತು. ಬಿಜೆಪಿ ಮುಖಂಡ ಪುಷ್ಕರ್ ಸಿಂಗ್ ಧಾಮಿ ಉತ್ತರಾಖಂಡ್‌ನ ಮುಖ್ಯಮಂತ್ರಿ ಆಗಿ ಮರು ಆಯ್ಕೆಯಾದರು. ಕಾಂಗ್ರೆಸ್ ವಿರೋಧ ಪಕ್ಷವಾಗಿ ಹೊರಹೊಮ್ಮಿತು.

ಪಂಜಾಬ್ (Punjab)
2022ರ ಫೆಬ್ರುವರಿ 20ರಂದು ಪಂಜಾಬ್ ವಿಧಾನಸಭೆ ಚುನಾವಣೆಗಳು ನಡೆದವು. ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ನೇತೃತ್ವ ಆಮ್ ಆದ್ಮಿ ಪಕ್ಷವು ಸ್ಪಷ್ಟ ಬಹುಮತದಿಂದ ಅಧಿಕಾರ ಹಿಡಿಯುತು. ಈ ಮೊದಲು ಅಧಿಕಾರದಲ್ಲಿದ್ದ ಕಾಂಗ್ರೆಸ್ ಹೀನಾಯವಾಗಿ ನೆಲಕಚ್ಚಿತು. ಎಎಪಿ ಮುಖಂಡ ಭಗವಂತ್ ಮಾನ್ ಪಂಜಾಬ್ ಮುಖ್ಯಮಂತ್ರಿ ಆಗಿ ಅಧಿಕಾರ ವಹಿಸಿಕೊಂಡರು.
ಮಣಿಪುರ (Manipur)
2022ರ ಫೆಬ್ರುವರಿ 28 ಹಾಗೂ ಮಾರ್ಚ್ 5ರಂದು ಎರಡು ಹಂತಗಳಲ್ಲಿ ಮಣಿಪುರ ವಿಧಾನಸಭೆಗೆ ಚುನಾವಣೆಗಳು ನಡೆದವು. ಈ ಚುನಾವಣೆಯಲ್ಲಿ ಬಿಜೆಪಿ ಸ್ಪಷ್ಟ ಬಹುಮತದೊಂದಿಗೆ ಅಧಿಕಾರವನ್ನು ಹಿಡಿಯಿತು. ಈ ಹಿಂದೆ ಮುಖ್ಯಮಂತ್ರಿ ಆಗಿದ್ದ ಎನ್. ಬಿರೇನ್ ಸಿಂಗ್ ಅವರು ಮತ್ತೆ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದರು.

ಉತ್ತರ ಪ್ರದೇಶ (Uttar Pradesh)
ದೇಶದ ಅತಿ ದೊಡ್ಡ ರಾಜ್ಯವಾದ ಉತ್ತರ ಪ್ರದೇಶದಲ್ಲಿ ಈ ವರ್ಷ ಚುನಾವಣೆ ನಡೆಯಿತು. 2022 ರ ಫೆಬ್ರುವರಿ 10, 14, 20, 23, 27 ಹಾಗೂ ಮಾರ್ಚ್ 3, 7ರಂದು ಮತದಾನ ಪ್ರಕ್ರಿಯೆ ನಡೆಯಿತು. ಈ ಹಿಂದೆ ಅಧಿಕಾರ ಹಿಡಿದಿದ್ದ ಬಿಜೆಪಿ ಮತ್ತೆ ಆಡಳಿತ ಚುಕ್ಕಾಣಿ ಹಿಡಿಯುವಲ್ಲಿ ಯಶಸ್ವಿ ಆಯಿತು. ಯೋಗಿ ಆದಿತ್ಯನಾಥ್ ಅವರು ಉತ್ತರ ಪ್ರದೇಶದ ಮುಖ್ಯಮಂತ್ರಿ ಆಗಿ ಮರು ಆಯ್ಕೆ ಆದರು. ಅಖಿಲೇಶ್ ನೇತೃತ್ವದ ಸಮಾಜವಾದಿ ಪಕ್ಷವು ವಿರೋಧ ಪಕ್ಷವಾಗಿ ಹೊರಹೊಮ್ಮಿತು.

ಹಿಮಾಚಲ ಪ್ರದೇಶ (Himachal Pradesh)
2022 ರ ನವೆಂಬರ್ 12 ರಂದು ಹಿಮಾಚಲ ಪ್ರದೇಶ ವಿಧಾನಸಭೆಗೆ ಚುನಾವಣೆ ನಡೆಯಿತು. ಈ ಹಿಂದೆ ಅಧಿಕಾರಲ್ಲಿದ್ದ ಬಿಜೆಪಿ ಅಧಿಕಾರವನ್ನು ಕಳೆದುಕೊಂಡಿತು. ಈ ಚುನಾವಣೆಯಲ್ಲಿ ಕಾಂಗ್ರೆಸ್‌ಗೆ ಸ್ಪಷ್ಟ ಬಹುಮತ ದೊರಕಿತು. ಸುಖವಿಂದರ್ ಸಿಂಗ್ ಸುಖು ಹಿಮಾಚಲ ಪ್ರದೇಶ ಮುಖ್ಯಮಂತ್ರಿ ಆಗಿ ಅಧಿಕಾರ ಸ್ವೀಕರಿಸಿದರು.
ಗುಜರಾತ್ (Gujarat)
2022 ಡಿಸೆಂಬರ್ 01 ಹಾಗೂ 05ರಂದು ಮತದಾನ ಪ್ರಕ್ರಿಯೆ ನಡೆಯಿತು. ಈ ಹಿಂದೆ ಗುಜರಾತ್‌ನಲ್ಲಿ ಅಧಿಕಾರದಲ್ಲಿದ್ದ ಬಿಜೆಪಿಗೆ ಅಭೂತಪೂರ್ವ ಬಹುಮತ ಸಿಕ್ಕಿತು. ಭೂಪೇಂದ್ರ ಪಟೇಲ್ ಅವರನ್ನು ಮುಖ್ಯಮಂತ್ರಿ ಸ್ಥಾನಕ್ಕೆ ಮರು ಆಯ್ಕೆ ಮಾಡಲಾಗಿತು. ಎಎಪಿ 5 ಸ್ಥಾನಗಳನ್ನು ಪಡೆಯುವ ಮೂಲಕ ಗುಜರಾತ್‌ನಲ್ಲಿ ಖಾತೆ ತೆರೆಯಿತು.
-
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ












Click it and Unblock the Notifications