ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ವರ್ಷದ ವಿಶೇಷ; 2022ರಲ್ಲಿ 7 ರಾಜ್ಯಗಳಲ್ಲಿ ವಿಧಾನಸಭೆ ಚುನಾವಣೆ

|
Google Oneindia Kannada News

2021ನೇ ವರ್ಷಕ್ಕೆ ವಿದಾಯ ಹೇಳುವ ಸಮಯ ಬಂದಿದೆ. ವರ್ಷದ ಆರಂಭದಲ್ಲಿಯೇ ವಿವಿಧ ರಾಜ್ಯಗಳಲ್ಲಿ ವಿಧಾನಸಭೆ ಚುನಾವಣೆ ನಡೆಯಲಿದೆ. 2022ರಲ್ಲಿ ಭಾರತದ 7 ರಾಜ್ಯಗಳಲ್ಲಿ ವಿಧಾನಸಭೆ ಚುನಾವಣೆ ನಡೆಯಲಿದೆ. ವರ್ಷದ ಆರಂಭದಲ್ಲಿಯೇ ಉತ್ತರ ಪ್ರದೇಶ ಸೇರಿದಂತೆ 4 ರಾಜ್ಯಗಳ ಚುನಾವಣೆ ನಡೆಯಲಿದೆ. 403 ವಿಧಾನಸಭಾ ಕ್ಷೇತ್ರಗಳನ್ನು ಹೊಂದಿರುವ ಉತ್ತರ ಪ್ರದೇಶದ ಮೇಲೆ ಎಲ್ಲಾ ರಾಜಕೀಯ ಪಕ್ಷಗಳ ಕಣ್ಣು ಬಿದ್ದಿದೆ.

ಪಶ್ಚಿಮ ಬಂಗಾಳ, ಅಸ್ಸಾಂ, ಕೇರಳ, ತಮಿಳುನಾಡು ಮತ್ತು ಪುದುಚೇರಿಯಲ್ಲಿ 2021ರಲ್ಲಿ ವಿಧಾನಸಭೆ ಚುನಾವಣೆ ನಡೆದು ಹೊಸ ಸರ್ಕಾರಗಳು ಅಧಿಕಾರಕ್ಕೆ ಬಂದವು. 2022ರಲ್ಲಿಯೂ ಒಟ್ಟು 7 ರಾಜ್ಯಗಳಲ್ಲಿ ಚುನಾವಣೆ ನಡೆಯಲಿದೆ.

ಗೋವಾ ಚುನಾವಣೆ; ರಾಜ್ಯಕ್ಕೆ ಆಗಮಿಸಿದ ಚುನಾವಣಾ ಆಯೋಗದ ತಂಡ ಗೋವಾ ಚುನಾವಣೆ; ರಾಜ್ಯಕ್ಕೆ ಆಗಮಿಸಿದ ಚುನಾವಣಾ ಆಯೋಗದ ತಂಡ

ಉತ್ತರ ಪ್ರದೇಶ, ಗೋವಾ, ಉತ್ತರಾಖಂಡ, ಪಂಜಾಬ್ ಮತ್ತು ಮಣಿಪುರ ರಾಜ್ಯಗಳ ಸರ್ಕಾರದ ಅವಧಿ 2022ರ ಆರಂಭದಲ್ಲಿಯೇ ಪೂರ್ಣಗೊಳ್ಳಲಿದೆ. ಜನರಿ ಅಂತ್ಯ ಅಥವ ಫೆಬ್ರವರಿಯಲ್ಲಿ ರಾಜ್ಯದಲ್ಲಿ ವಿಧಾನಸಭೆ ಚುನಾವಣೆ ನಡೆಯುವ ನೀರಿಕ್ಷೆ ಇದೆ.

 ಉತ್ತರ ಪ್ರದೇಶ: ಟೈಮ್ಸ್ ನೌ ಚುನಾವಣಾಪೂರ್ವ ಸಮೀಕ್ಷೆ ಏನು ಹೇಳುತ್ತದೆ? ಉತ್ತರ ಪ್ರದೇಶ: ಟೈಮ್ಸ್ ನೌ ಚುನಾವಣಾಪೂರ್ವ ಸಮೀಕ್ಷೆ ಏನು ಹೇಳುತ್ತದೆ?

Year End 7 Indian States Gearing Up For Assembly Elections In 2022

5 ರಾಜ್ಯಗಳ ಪೈಕಿ ಉತ್ತರ ಪ್ರದೇಶ, ಗೋವಾ, ಉತ್ತರಾಖಂಡ, ಮಣಿಪುರ ರಾಜ್ಯಗಳಲ್ಲಿ ಬಿಜೆಪಿ/ ಎನ್‌ಡಿಎ ಅಧಿಕಾರದಲ್ಲಿದೆ. ಪಂಜಾಬ್ ರಾಜ್ಯದಲ್ಲಿ ಮಾತ್ರ ಕಾಂಗ್ರೆಸ್ ಪಕ್ಷ ಅಧಿಕಾರದಲ್ಲಿದೆ. ವಿವಿಧ ಸಂಸ್ಥೆಗಳು ನಡೆಸುತ್ತಿರುವ ಚುನಾವಣಾ ಪೂರ್ವ ಸಮೀಕ್ಷೆಗಳು ಬಿಜೆಪಿ ಮತ್ತೆ ಅಧಿಕಾರಕ್ಕೆ ಬರಲಿದೆ ಎಂದು ಹೇಳುತ್ತಿವೆ.

2021ರ ಹಿನ್ನೋಟ; ವರ್ಷದ ವ್ಯಕ್ತಿ ಬಸವರಾಜ ಬೊಮ್ಮಾಯಿ2021ರ ಹಿನ್ನೋಟ; ವರ್ಷದ ವ್ಯಕ್ತಿ ಬಸವರಾಜ ಬೊಮ್ಮಾಯಿ

ಉತ್ತರ ಪ್ರದೇಶ ವಿಧಾನಸಭೆಯಲ್ಲಿ 403 ಸದಸ್ಯ ಸ್ಥಾನಗಳಿವೆ. ಬಹುಮತ ಪಡೆಯಲು 202 ಸ್ಥಾನಗಳನ್ನು ಪಡೆಯಬೇಕು. ಈಗ ಬಿಜೆಪಿ ಅಧಿಕಾರದಲ್ಲಿದೆ, ಮತ್ತೆ ರಾಜ್ಯದಲ್ಲಿ ಅಧಿಕಾರ ಪಡೆಯಬೇಕು ಎಂದು ಬಿಜೆಪಿ ಪ್ರಯತ್ನ ನಡೆಸುತ್ತಿದೆ. ವಿಧಾನಸಭೆ ಚುನಾವಣೆ ದಿನಾಂಕ ಘೋಷಣೆಗೂ ಮುನ್ನವೇ ಬಿಜೆಪಿ ಪ್ರಚಾರ ಕಾರ್ಯವನ್ನು ಆರಂಭಿಸಿದೆ.

ಪಂಜಾಬ್ ರಾಜ್ಯದ 117 ಸ್ಥಾನಗಳಿಗೆ ಚುನಾವಣೆ ನಡೆಯಲಿದೆ. ಬಹುಮತ ಪಡೆಯಲು ಬೇಕಾದ ಮ್ಯಾಜಿಕ್ ನಂಬರ್ 59. ಈಗ ರಾಜ್ಯದಲ್ಲಿ ಕಾಂಗ್ರೆಸ್‌ ಪಕ್ಷ ಅಧಿಕಾರದಲ್ಲಿದೆ. ಕ್ಯಾಪ್ಟನ್ ಅಮರಿಂದರ್ ಸಿಂಗ್‌ರನ್ನು ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿಸಿದ ಬಳಿಕ ನಡೆಯುತ್ತಿರುವ ಮೊದಲ ಚುನಾವಣೆ ಇದಾಗಿದೆ. ನವಜೋತ್ ಸಿಂಗ್ ಸಿಧು ಪಂಜಾಬ್ ಕಾಂಗ್ರೆಸ್ ಅಧ್ಯಕ್ಷರಾಗಿದ್ದು, ಅವರ ನೇತೃತ್ವದಲ್ಲಿಯೇ ಚುನಾವಣೆ ನಡೆಯಲಿದೆ.

ಉತ್ತರಾಖಂಡ ರಾಜ್ಯದ 70 ವಿಧಾನಸಭಾ ಕ್ಷೇತ್ರಗಳಿಗೆ ಚುನಾವಣೆ ನಡೆಯಲಿದೆ. ಬಹುಮತ ಪಡೆಯಲು ಬೇಕಾದ ಮ್ಯಾಜಿಕ್‌ ನಂಬರ್ 36. ಪ್ರಸ್ತುತ ರಾಜ್ಯದಲ್ಲಿ ಬಿಜೆಪಿ ಅಧಿಕಾರದಲ್ಲಿದೆ. ಕಡಿಮೆ ಅವಧಿಯಲ್ಲಿಯೇ ಇಬ್ಬರು ಸಿಎಂಗಳನ್ನು ಬದಲಾವಣೆ ಮಾಡಿರುವ ಬಿಜೆಪಿ ಜನರ ಮುಂದೆ ಮತ್ತೊಮ್ಮೆ ಹೋಗುತ್ತಿದೆ.

60 ಕ್ಷೇತ್ರಗಳನ್ನು ಹೊಂದಿರುವ ಮಣಿಪುರ ವಿಧಾನಸಭೆಗೆ ಚುನಾವಣೆ ನಡೆಯಲಿದೆ. ಬಹುಮತ ಪಡೆಯಲು ಬೇಕಾದ ಮ್ಯಾಜಿಕ್‌ ನಂಬರ್ 31. ರಾಜ್ಯದಲ್ಲಿ ಬಿಜೆಪಿ ಎನ್‌ಪಿಎಫ್, ಎನ್‌ಪಿಪಿ, ಎಲ್‌ಜೆಪಿ ಜೊತೆ ಮೈತ್ರಿ ಮಾಡಿಕೊಂಡು ಸರ್ಕಾರ ರಚನೆ ಮಾಡಿದೆ. 2017ರ ಚುನಾವಣೆಯಲ್ಲಿ ಕಾಂಗ್ರೆಸ್ 28 ಸ್ಥಾನಗಳಲ್ಲಿ ಜಯಗಳಿಸುವ ಮೂಲಕ ದೊಡ್ಡ ಪಕ್ಷವಾಗಿ ಹೊರಹೊಮ್ಮಿತ್ತು. ಆದರೆ ಬಿಜೆಪಿ ಅಧಿಕಾರ ಪಡೆದಿತ್ತು.

2022ರ ಆರಂಭದಲ್ಲಿಯೇ ವಿಧಾನಸಭೆ ಚುನಾವಣೆ ನಡೆಯಲಿರುವ ಮೊತ್ತೊಂದು ರಾಜ್ಯ ಗೋವಾ. 40 ಸದಸ್ಯ ಬಲದ ಗೋವಾ ವಿಧಾನಸಭೆಯಲ್ಲಿ ಬಹುಮತ ಪಡೆಯಲು ಬೇಕಾದ ಮ್ಯಾಜಿಕ್ ನಂಬರ್ 21. ರಾಜ್ಯದಲ್ಲಿ ಬಿಜೆಪಿಯೇ ಅಧಿಕಾರದಲ್ಲಿದೆ. ಬಿಜೆಪಿ, ಕಾಂಗ್ರೆಸ್, ಆಮ್ ಆದ್ಮಿ ಪಕ್ಷ, ಟಿಎಂಸಿ, ಎನ್‌ಸಿಪಿ ಜೊತೆಗೆ ಕೆಲವು ಪ್ರಾದೇಶಿಕ ಪಕ್ಷಗಳು ಚುನಾವಣಾ ಸಿದ್ಧತೆ ಆರಂಭಿಸಿವೆ. ಪಶ್ಚಿಮ ಬಂಗಾಳದಲ್ಲಿ ಅಧಿಕಾರದಲ್ಲಿರುವ ಟಿಎಂಸಿ 40 ಕ್ಷೇತ್ರಗಳಲ್ಲೂ ಸ್ಪರ್ಧೆ ಮಾಡುವುದಾಗಿ ಘೋಷಣೆ ಮಾಡಿದೆ.

ಉಳಿದಂತೆ ಚುನಾವಣೆ ನಡೆಯಲಿರುವ ರಾಜ್ಯಗಳು; 182 ಸದಸ್ಯ ಬಲದ ಗುಜರಾತ್. 68 ಸದಸ್ಯ ಬಲದ ಹಿಮಾಚಲ ಪ್ರದೇಶದಲ್ಲಿ 2022ರ ಅಂತ್ಯದಲ್ಲಿ ವಿಧಾನಸಭೆ ಚುನಾವಣೆ ನಡೆಯಲಿದೆ.

English summary
In 2022 7 Indian states are gearing up for assembly elections. While 5 states will go to polls in the first quarter including Uttar Pradesh.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X