2021ರ ಹಿನ್ನೋಟ; ಅಫ್ಘಾನ್‌ನಿಂದ ಜನರ ರಕ್ಷಿಸಿದ 'ಆಪರೇಷನ್ ದೇವಿ ಶಕ್ತಿ'
2021ರ ಆಗಸ್ಟ್ ತಿಂಗಳಿನಲ್ಲಿ ಇಡೀ ಜಗತ್ತೇ ಬೆಚ್ಚಿ ಬೀಳಿಸುವ ಘಟನೆ ನಡೆಯಿತು. ಈ ಘಟನೆ ಅಂತರಾಷ್ಟ್ರೀಯ ಮಟ್ಟದಲ್ಲಿ ಚರ್ಚೆಗೆ ಕಾರಣವಾಯಿತು. ತಾಲಿಬಾನ್ ಉಗ್ರರು ಅಫ್ಘಾನಿಸ್ತಾನವನ್ನು ತಮ್ಮ ವಶಕ್ಕೆ ತೆಗೆದುಕೊಂಡರು. ದೇಶದಲ್ಲಿ ಉಂಟಾದ ಅರಾಕತೆ ವಿವಿಧ ದೇಶಗಳಲ್ಲಿ ತಲ್ಲಣ ಉಂಟು ಮಾಡಿದೆ.
ಅಮೆರಿಕದ ನೂತನ ಅಧ್ಯಕ್ಷ ಜೋ ಬೈಡನ್ ಆಗಸ್ಟ್ 31ರೊಳಗೆ ಅಫ್ಘಾನಿಸ್ತಾನದಲ್ಲಿರುವ ತನ್ನ ಪಡೆಗಳನ್ನು ವಾಪಸ್ ಕರೆಸಿಕೊಳ್ಳುತ್ತೇವೆ ಎಂದು ಘೋಷಣೆ ಮಾಡಿದರು. ಪಡೆಗಳ ಸ್ಥಳಾಂತರ ಪ್ರಕ್ರಿಯೆ ಕಾರ್ಯವನ್ನು ಅಮೆರಿಕ ಆರಂಭಿಸಿಯೇ ಬಿಟ್ಟಿತ್ತು. ಆಗ ತಾಲಿಬಾನಿ ಉಗ್ರರು ಸಕ್ರಿಯರಾದರು.
ಅಫ್ಘಾನಿಸ್ತಾನದ ಎರಡನೇ ಅತಿ ದೊಡ್ಡ ನಗರವಾದ ಕಂದಹಾರ್ ಅನ್ನು ಆಗಸ್ಟ್ 13ರಂದು ತಾಲಿಬಾನಿಗಳು ವಶಕ್ಕೆ ಪಡೆದುಕೊಂಡವು. ಆಧುನಿಕ ಶಸ್ತ್ರಾಸ್ತ್ರಗಳನ್ನು ಹಿಡಿದು ರಾಷ್ಟ್ರದ ರಾಜಧಾನಿ ಕಾಬೂಲ್‌ನತ್ತ ಆಗಮಿಸಲಾರಂಭಿಸಿದವು. ಈ ಬೆಳವಣಿಗೆ ಇಡೀ ವಿಶ್ವವನ್ನೇ ಬೆಚ್ಚಿ ಬೀಳಿಸಿತ್ತು.

ತಾಲಿಬಾನಿಗಳು ಕಾಬೂಲ್ ನಗರವನ್ನು ತಮ್ಮ ವಶಕ್ಕೆ ಪಡೆದುಕೊಂಡರು. ಅಫ್ಘಾನಿಸ್ತಾನದ ಅಧ್ಯಕ್ಷ ಅಶ್ರಫ್ ಘನಿ ದೇಶದಿಂದ ಪರಾರಿಯಾದರು. ಆಡಳಿತ ನಡೆಸುವ ನಾಯಕನೇ ಇಲ್ಲದೇ ದೇಶದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿತು. ಸರ್ಕಾರಿ ನೌಕರರು ಉಗ್ರರಿಗೆ ಬೆದರಿ ಕಚೇರಿಗಳ ಕಡೆ ತಲೆ ಹಾಕಲಿಲ್ಲ.
ಪ್ರತಿ ಸರ್ಕಾರಿ ಕಚೇರಿಗಳನ್ನು ವಶಕ್ಕೆ ತೆಗೆದುಕೊಂಡ ತಾಲಿಬಾನಿಗಳು ದೇಶದ ಆಡಳಿತ ವ್ಯವಸ್ಥೆಯನ್ನು ಸಂಪೂರ್ಣವಾದ ಹದಗೆಡಿಸಿದರು. ಆದರೆ ಕಾಬೂಲ್‌ನ ಹಮೀದ್ ಕರ್ಜಾಯ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಅಮೆರಿಕ ಮತ್ತು ನ್ಯಾಟೋ ಪಡೆಗಳ ವಶದಲ್ಲಿಯೇ ಉಳಿಯಿತು.
ಬೆಚ್ಚಿ ಬಿದ್ದ ವಿವಿಧ ದೇಶಗಳು; ಅಫ್ಘಾನಿಸ್ತಾನ ತಾಲಿಬಾನಿ ಉಗ್ರರ ವಶವಾಗುತ್ತಿದ್ದಂತೆಯೇ ವಿವಿಧ ದೇಶಗಳು ಬೆಚ್ಚಿಬಿದ್ದವು. ದೇಶದಲ್ಲಿರುವ ತನ್ನ ನಾಗರಿಕರ ರಕ್ಷಣೆ ಬಗ್ಗೆ ಅವುಗಳಿಗೆ ಚಿಂತೆ ಆರಂಭವಾಯಿತು. ಕಾಬೂಲ್ ವಿಮಾನ ನಿಲ್ದಾಣದ ಮೂಲಕ ತನ್ನ ನಾಗರಿಕರನ್ನು ಏರ್ ಲಿಫ್ಟ್ ಮಾಡಲು ಪ್ರಯತ್ನ ಆರಂಭಿಸಿದವು. ವಿವಿಧ ದೇಶಗಳ ಬೆಂಬಲಕ್ಕೆ ನಿಂತ ಅಮೆರಿಕ ವಿಮಾನ ನಿಲ್ದಾಣಕ್ಕೆ ಹೆಚ್ಚಿನ ಯೋಧರನ್ನು ನಿಯೋಜನೆ ಮಾಡಿ, ಏರ್‌ಲಿಫ್ಟ್‌ಗೆ ಸಹಕಾರ ನೀಡಿತು.
ಭಾರತದ ಕಾರ್ಯಾಚರಣೆ; ಭಾರತ ಮತ್ತು ಅಫ್ಘಾನಿಸ್ತಾನದ ನಡುವೆ ರಾಜತಾಂತ್ರಿಕ ಸಂಬಂಧ ಚೆನ್ನಾಗಿತ್ತು. ಅಫ್ಘಾನಿಸ್ತಾನದ ವಿವಿಧ ಯೋಜನೆಗಳಲ್ಲಿ ಭಾರತೀಯರು ದುಡಿಯುತ್ತಿದ್ದರು. ಆದ್ದರಿಂದ ಸಾವಿರಾರು ಭಾರತೀಯರು ಅಲ್ಲಿದ್ದರು.
ಅಫ್ಘಾನಿಸ್ತಾನ ತಾಲಿಬಾನಿ ಉಗ್ರರ ವಶವಾಗುತ್ತಿದ್ದಂತೆಯೇ ಭಾರತದಲ್ಲಿಯೂ ತಲ್ಲಣ ಆರಂಭವಾಯಿತು. ದೇಶದಲ್ಲಿರುವ ನಾಗರಿಕರನ್ನು ಕರೆತರಲು ವಿವಿಧ ದೇಶಗಳಂತೆ ಭಾರತವೂ ಸ್ಥಳಾಂತರ ಪ್ರಕ್ರಿಯೆಯನ್ನು ಆರಂಭಿಸಿತು.
ಭಾರತ ಅಫ್ಘಾನಿಸ್ತಾನದಿಂದ ಜನರನ್ನು ಸ್ಥಳಾಂತರಿಸುವ ಕಾರ್ಯಾಚರಣೆಗೆ 'ಆಪರೇಷನ್ ದೇವಿ ಶಕ್ತಿ' ಎಂದು ಹೆಸರಿಟ್ಟಿತ್ತು. ಈ ಕಾರ್ಯಾಚರಣೆಯಡಿಯಲ್ಲಿ 669 ಜನರನ್ನು ಸ್ಥಳಾಂತರ ಮಾಡಲಾಗಿದೆ, ಇವರಲ್ಲಿ 448 ಭಾರತೀಯರು, 206 ಅಫ್ಘಾನ್ ಪ್ರಜೆಗಳು ಸೇರಿದ್ದರು. ಅಫ್ಘಾನಿಸ್ತಾನದಲ್ಲಿದ್ದ ಹಿಂದೂ/ ಸಿಖ್ ಸಮುದಾಯದ ಜನರನ್ನು ಸಹ ಸ್ಥಳಾಂತರ ಮಾಡಲಾಯಿತು.
ಜನರನ್ನು ಸ್ಥಳಾಂತರ ಮಾಡುವ ಪಕ್ರಿಯೆಗೆ 'ಆಪರೇಷನ್ ದೇವಿ ಶಕ್ತಿ' ಎಂದು ಏಕೆ ಹೆಸರಿಡಲಾಗಿದೆ? ಎಂಬುದು ಇನ್ನೂ ತಿಳಿದಿಲ್ಲ. ಆಪರೇಷನ್‌ನಲ್ಲಿ ಭಾಗಿಯಾದ ಅಧಿಕಾರಿಗಳು ಹೇಳುವಂತೆ ನಿರ್ದೋಷಿ ಜನರನ್ನು ಕಾಪಾಡುವ ರೀತಿಯಲ್ಲಿಯೇ ಈ ಕಾರ್ಯಾಚರಣೆ ನಡೆಯಿತು. ಆದ್ದರಿಂದ ಇಂತಹ ಹೆಸರಿ ಇಟ್ಟಿರಬಹುದು ಎಂದು ಹೇಳುತ್ತಾರೆ.
ದುರ್ಗೆ ರಾಕ್ಷಸರಿಂದ ಅಮಾಯಕ ಜನರನ್ನು ರಕ್ಷಣೆ ಮಾಡಿದಳು. ಹಾಗೆಯೇ ಅಫ್ಘಾನಿಸ್ತಾನದಲ್ಲಿ ಸಿಲುಕಿದ್ದ ಜನರನ್ನು ನಾವು ರಕ್ಷಣೆ ಮಾಡುತ್ತಿದ್ದೇವೆ ಎಂದು ಅಧಿಕಾರಿಗಳು ಹೇಳಿದರು. ಈ ಕಾರ್ಯಾಚರಣೆ ಯಶಸ್ವಿಯಾಗಿ ನಡೆಯಿತು. ತಾಲಿಬಾನಿ ಉಗ್ರರು ಇದಕ್ಕೆ ಯಾವುದೇ ವಿರೋಧ ವ್ಯಕ್ತ ಮಾಡಲಿಲ್ಲ.
ಆಗಸ್ಟ್ 31ರೊಳಗೆ ತಮ್ಮ ದೇಶದ ಜನರನ್ನು ಏರ್ ಲಿಫ್ಟ್ ಮಾಡುವ ಪ್ರಕ್ರಿಯೆ ಪೂರ್ಣಗೊಳಿಸಿ ಎಂದು ತಾಲಿಬಾನ್ ಉಗ್ರರು ಘೋಷಣೆ ಮಾಡಿದರು. ವಿವಿಧ ಪ್ರದೇಶಗಳಲ್ಲಿ ಸಿಲುಕಿದ್ದ ಜನರು ಕಾಬೂಲ್ ವಿಮಾನ ನಿಲ್ದಾಣಕ್ಕೆ ಆಗಮಿಸಲು ಸಹಕಾರ ಮಾಡಿದರು.
-
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
ಬೆಂಗಳೂರು ಬಿಸಿನೆಸ್ ಕಾರಿಡಾರ್ ಯೋಜನೆಗೆ ಚಾಲನೆ: ಕಾಮಗಾರಿಗೆ 3,348 ಕೋಟಿ ರೂ ಟೆಂಡರ್ ಆಹ್ವಾನ -
Kerosene: ಎಲ್ಪಿಜಿ ಸಮಸ್ಯೆಗೆ ಕೇಂದ್ರದಿಂದ ಹೊಸ ಪರಿಹಾರ: ಮತ್ತೆ ಸಿಗಲಿದೆ ಸೀಮೆಎಣ್ಣೆ, ಪೆಟ್ರೋಲ್ ಬಂಕ್ಗಳಲ್ಲಿ ವಿತರಣೆ -
Dolly Dhananjay: ಆ ಚಿತ್ರಕಥೆ.. 6 ತಿಂಗಳು ನನ್ನ ಟೇಬಲ್ ಮೇಲೆ ಬಿದ್ದಿತ್ತು: ನಟ ಡಾಲಿ ಧನಂಜಯ್ -
SSLC Maths Exam: ಎಸ್ಎಸ್ಎಲ್ಸಿ ಗಣಿತ ಪರೀಕ್ಷೆಯಲ್ಲಿ ಪಠ್ಯದ ಹೊರತಾದ ಪ್ರಶ್ನೆಗಳ ಆರೋಪ, ಕೃಪಾಂಕಕ್ಕಾಗಿ ಹೆಚ್ಚಿದ ಒತ್ತಾಯ -
ಪರಮಾತ್ಮ ಹೇಳಿದ್ರೂ ಹಿಂದೆ ಸರಿಯಲ್ಲ ಎಂದಿದ್ದ ಕಾಂಗ್ರೆಸ್ನ ಸಾದಿಕ್ ಪೈಲ್ವಾನ್ ನಾಮಪತ್ರ ಹಿಂಪಡೆಯಲು ಇದೆ ಹಲವು ಕಾರಣ -
Tamil Nadu Election: ತನ್ನ ಡ್ರೈವರ್ ಮಗನಿಗೆ MLA ಟಿಕೆಟ್ ಘೋಷಿಸಿದ ನಟ ದಳಪತಿ ವಿಜಯ್, ಭಾವುಕ ಕ್ಷಣದ ವಿಡಿಯೋ ವೈರಲ್ -
ವಿರಾಟ್ ಅಸಲಿ ಆಟ ಇನ್ನೂ ಬಾಕಿಯಿದೆ; ಕಿಂಗ್ ಕೊಹ್ಲಿಗೆ ವಿಶೇಷ ಮನವಿ ಮಾಡಿಕೊಂಡ ಅಂಬಟಿ ರಾಯುಡು, ಭಾರೀ ವೈರಲ್ -
Bengaluru Weather: ನಗರಕ್ಕೆ ಇಂದು ಸೋಮವಾರವು ಗುಡುಗು ಸಹಿತ ಮಳೆ ಎಚ್ಚರಿಕೆ, ಸವಾರರೇ ಗಮನಿಸಿ -
Prakash Raj Mother passed Away: ನಟ ಪ್ರಕಾಶ್ ರಾಜ್ ತಾಯಿ ಸ್ವರ್ಣಲತಾ ನಿಧನ, ಚಿತ್ರರಂಗದ ಗಣ್ಯರಿಂದ ಸಂತಾಪ












Click it and Unblock the Notifications