Get Updates
Get notified of breaking news, exclusive insights, and must-see stories!

ವರ್ಷದ ವ್ಯಕ್ತಿ; ಸ್ವಂತ ಸೂರಿಲ್ಲದ ಕಿತ್ತಳೆ ವ್ಯಾಪಾರಿ ಹರೇಕಳ ಹಾಜಬ್ಬಗೆ ಪದ್ಮಶ್ರೀ ಪ್ರಶಸ್ತಿ

2021ನೇ ವರ್ಷಕ್ಕೆ ವಿದಾಯ ಹೇಳಲು ದಿನಗಣನೆ ಆರಂಭವಾಗಿದೆ. ಈ ವರ್ಷದಲ್ಲಿ ಕೋವಿಡ್ ಭೀತಿಯ ನಡುವೆಯೂ ಎಲೆಮರೆಯ ಸಾಧಕರನ್ನು ಸರ್ಕಾರ ಗುರುತಿಸಿ ಗೌರವಿಸಿದೆ. ಅದರಲ್ಲಿ ಮಂಗಳೂರಿನ ಅಕ್ಷರಸಂತ ಹರೇಕಳ ಹಾಜಬ್ಬ ಕೂಡ ಒಬ್ಬರು.

ಆ ವ್ಯಕ್ತಿ ಕೋಟ್ಯಾಧಿಪತಿಯಲ್ಲ. ಸ್ವಂತ ಮನೆಯೂ ಇರಲಿಲ್ಲ. ಉನ್ನತ ವಿದ್ಯಾಭ್ಯಾಸವಂತೂ ದೂರದ ಬೆಟ್ಟವಾದರೂ ಅಕ್ಷರ ಸ್ನೇಹಿಯಾಗಿದ್ದ. ಮಂಗಳೂರಿನ ರಸ್ತೆ ಬದಿಗಳಲ್ಲಿ ಕಿತ್ತಳೆ ಹಣ್ಣು ಮಾರಿಕೊಂಡು ನಿತ್ಯ ಜೀವನ ಸಾಗಿಸುತ್ತಿರುವ ಹರೇಕಳ ಹಾಜಬ್ಬನವರು ತಮ್ಮ ಜೀವನ ಸುಃಖಗಿಂತಲೂ ಬೇರೆಯವರ ನೋವಿಗೆ ಸ್ಪಂದಿಸುವವರಾಗಿದ್ದಾರೆ.

ಹಾಜಬ್ಬನವರು ಕಿತ್ತಳೆ ವ್ಯಾಪಾರದಿಂದ ಅವರಿಗೆ ದಿನಕ್ಕೆ ಲಭಿಸುವುದು ಕೇವಲ 100ರಿಂದ 120 ರೂಪಾಯಿ. ಮಂಗಳೂರು ನಗರದಲ್ಲಿ ಕಿತ್ತಳೆ ಹಣ್ಣು ಮಾರುವ ಮೂಲಕ ಅಕ್ಷರದ ಕನಸು ಕಂಡ ಇವರು ತನ್ನೂರಾದ ಹರೇಕಳ ನ್ಯೂಪಡು ಎಂಬ ಪುಟ್ಟ ಹಳ್ಳಿಯಲ್ಲಿ ಬಡ ವಿದ್ಯಾರ್ಥಿಗಳ ಶಿಕ್ಷಣಕ್ಕಾಗಿ ಸರಕಾರಿ ಕಚೇರಿಗಳಿಗೆ ಅಲೆದು ಕೊನೆಗೂ ಪ್ರಾಥಮಿಕ ಶಾಲೆ ಪ್ರಾರಂಭಿಸುವಲ್ಲಿ ಯಶಸ್ವಿಯಾದರು.

Year End Person 2021; Harekala Hajabba Receives Padma Shri Award For His Social Work

ಹಾಜಬ್ಬ ಪ್ರಯತ್ನದಿಂದ ಎಷ್ಟರಲ್ಲಿ ಶಾಲೆ ಮಂಜೂರು
ಹರೇಕಳ ಹಾಜಬ್ಬ ತನ್ನೂರಿನ ಬಡ ವಿದ್ಯಾರ್ಥಿಗಳಿಗೆ ಶಿಕ್ಷಣ ದೊರೆಯಬೇಕಾದರೆ ಸರಕಾರಿ ಶಾಲೆ ಆಗಬೇಕು ಎಂದು 1995ರಿಂದ ಶಿಕ್ಷಣ ಇಲಾಖೆ ಸೇರಿದಂತೆ ಎಲ್ಲ ಇಲಾಖೆಯ ಅಧಿಕಾರಿಗಳನ್ನು ಸಂಪರ್ಕಿಸಿದ್ದರು. ಹಾಜಬ್ಬರ ಪ್ರಯತ್ನದ ಫಲವಾಗಿ 1999- 2000ರ ಸಾಲಿಗೆ ನ್ಯೂಪಡುಗೆ ಪ್ರಾಥಮಿಕ ಶಾಲೆ ಮಂಜೂರಾಯಿತು. ಆದರೆ ಮೂಲ ಸೌಕರ್ಯದ ವ್ಯವಸ್ಥೆ ಮಾಡುವುದು ಕಷ್ಟಕರವಾಗಿತ್ತು.

ಈ ಸಂದರ್ಭದಲ್ಲಿ ಶಾಲೆಯ ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷರಾಗಿದ್ದ ಹಾಜಬ್ಬ, ಸರಕಾರಿ ಇಲಾಖೆ ಸೇರಿದಂತೆ ದಾನಿಗಳ ಸಹಕಾರದಿಂದ ಶಾಲಾ ಕಟ್ಟಡ ಸೇರಿದಂತೆ, ಮೈದಾನ ನಿರ್ಮಿಸಿಕೊಟ್ಟರು. ಇಷ್ಟೆಲ್ಲಾ ಶ್ರಮಿಸಿದ ಇವರಿಗೆ ಲಕ್ಷಗಟ್ಟಲೆ ಪ್ರಶಸ್ತಿಗಳ ಹೊಳೆಯೇ ಹರಿದಿದೆ. ಇವರ ಸಂಕೀರ್ಣ ಸಾಧನೆಗೆ ರಾಜ್ಯ ಸರಕಾರ ರಾಜ್ಯೋತ್ಸವ ಪ್ರಶಸ್ತಿ ನೀಡಿ ಗೌರವಿಸಿದೆ.

Year End Person 2021; Harekala Hajabba Receives Padma Shri Award For His Social Work

ಕಿತ್ತಳೆ ಹಣ್ಣು ಮಾರಾಟ ಮಾಡುವ ಕಾಯಕ
ಕಿತ್ತಳೆ ಹಣ್ಣು ಮಾರಾಟ ಮಾಡುವ ಕಾಯಕ 2004ರಲ್ಲಿ ಕನ್ನಡ ಪತ್ರಿಕೆಯೊಂದು ಹಾಜಬ್ಬರನ್ನು ವರ್ಷದ ವ್ಯಕ್ತಿ ಎಂದು ಪ್ರಶಸ್ತಿ ನೀಡಿ ಗುರುತಿಸುವ ಮೂಲಕ ಹಾಜಬ್ಬ ಬೆಳಕಿಗೆ ಬಂದಿದ್ದರು. ಬಳಿಕ ದೆಹಲಿಯ ಸಿಎನ್‍ಎನ್- ಐಬಿಎನ್ ರಿಯಲ್ ಹೀರೋ ಪ್ರಶಸ್ತಿ ನೀಡಿ ಗೌರವಿಸಿತ್ತು. ಮಂಗಳೂರು ವಿಶ್ವವಿದ್ಯಾನಿಲಯ ಇರುವ ಕೊಣಾಜೆ ಸಮೀಪದ ಹರೇಕಳದಲ್ಲಿ ಗ್ರಾಮೀಣ ಮಕ್ಕಳಲ್ಲಿ ಶಾಲೆಯ ಸೌಲಭ್ಯ ಇರಲಿಲ್ಲ.

ಮಂಗಳೂರಿನ ಕೇಂದ್ರ ಪ್ರದೇಶ ಸ್ಟೇಟ್ ಬ್ಯಾಂಕ್ ಸರ್ಕಲ್‌ನಲ್ಲಿ ಕಿತ್ತಳೆ ಹಣ್ಣು ಮಾರಾಟ ಮಾಡುವ ಕಾಯಕ ಮಾಡುತ್ತಿದ್ದ ಹಾಜಬ್ಬ, ತಾವೇ ಶಾಲೆಯೊಂದನ್ನು ತನ್ನೂರಿನಲ್ಲಿ ನಿರ್ಮಿಸಿದರು. ಕಿತ್ತಳೆ ಮಾರಾಟ ಮಾಡುತ್ತಿದ್ದಾಗ ವಿದೇಶಿ ಮಹಿಳೆಯ ಆಂಗ್ಲ ಭಾಷೆಯ ಪ್ರಶ್ನೆಗೆ ಉತ್ತರ ನೀಡಲಾಗದ ಹಾಜಬ್ಬರಿಗೆ ಶಿಕ್ಷಣದ ಮಹತ್ವ ಅರಿವಾಗಿತ್ತು. ಅಂದೇ ಶಾಲೆ ಕಟ್ಟುವ ನಿರ್ಣಯ ಮಾಡಿದರು.

ಪದ್ಮಶ್ರೀ ಪ್ರಶಸ್ತಿ ನೀಡಿ ಗೌರವಿಸಿದ ಕೇಂದ್ರ ಸರ್ಕಾರ
ದಕ್ಷಿಣ ಕನ್ನಡದ ಅಕ್ಷರಸಂತ, ಬರೀಗಾಲಿನಲ್ಲಿ ಹಣ್ಣು ಮಾರಿದ ಹರೇಕಳ ಹಾಜಬ್ಬರಿಗೆ ದೇಶದ ಅತ್ಯುನ್ನತ ನಾಲ್ಕನೇ ನಾಗರಿಕ ಪ್ರಶಸ್ತಿಯಾದ ಪದ್ಮಶ್ರೀ ಪ್ರಶಸ್ತಿ ನೀಡಿ ಕೇಂದ್ರ ಸರ್ಕಾರ ಗೌರವಿಸಿದೆ.

ನವೆಂಬರ್ 8ರಂದು ನವದೆಹಲಿಯ ರಾಷ್ಟ್ರಪತಿ ಭವನದಲ್ಲಿ ರಾಷ್ಟ್ರಪತಿ ರಾಮನಾಥ ಕೋವಿಂದ್‌ರವರು ಹರೇಕಳ ಹಾಜಬ್ಬರಿಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ ಮಾಡಿದ್ದಾರೆ. ಬರಿಗಾಲಿನಲ್ಲಿಯೇ ಪ್ರಶಸ್ತಿ ಸ್ವೀಕರಿಸುವ ಮೂಲಕ ಹಾಜಬ್ಬ, ತನ್ನ ವ್ಯಕ್ತಿತ್ವವನ್ನು ಮತ್ತೆ ದೇಶಕ್ಕೆ ಪರಿಚಯಿಸಿದರು.

Year End Person 2021; Harekala Hajabba Receives Padma Shri Award For His Social Work

ರಾಷ್ಟ್ರಪತಿ ಭವನದಲ್ಲಿ ನಡೆದ ಪದ್ಮಶ್ರೀ ಪ್ರಶಸ್ತಿ ಪ್ರದಾನ ಕಾರ್ಯಕ್ರಮದಲ್ಲಿ ಹರೇಕಳ ಹಾಜಬ್ಬರಿಗೆ ಪದ್ಮಶ್ರೀ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಪದ್ಮಶ್ರೀ ಪ್ರಶಸ್ತಿ ಪ್ರದಾನ ಸಮಾರಂಭದಲ್ಲೂ ಹಾಜಬ್ಬ ತನ್ನ ನಿಜಗುಣವನ್ನು ಪ್ರದರ್ಶಿಸಿದ್ದರು. ರಾಷ್ಟ್ರಪತಿ ರಾಮನಾಥ ಕೋವಿಂದ್‌ರವರಿಂದ ಪ್ರಶಸ್ತಿ ಸ್ವೀಕಾರ ಮಾಡುವ ವೇಳೆ ಹಾಜಬ್ಬ ಎಂದಿನಂತೆ ಸಾಮಾನ್ಯ ದಿರಿಸು ಧರಿಸಿ ಪ್ರಶಸ್ತಿ ಸ್ವೀಕರಿಸಿದರು.

ಬಿಳಿ ಅಂಗಿ, ಬಿಳಿ ಪಂಚೆ ಧರಿಸಿದ ಹಾಜಬ್ಬ, ಚಪ್ಪಲಿ ಧರಿಸದೇ ಪದ್ಮಶ್ರೀ ಪ್ರಶಸ್ತಿ ಸ್ವೀಕಾರ ಮಾಡಿದ ಮುಗ್ಧ ಮನಸ್ಸಿನ ಹಾಜಬ್ಬ, ಭಯ ಮಿಶ್ರಿತ ಭಾವನೆಯಿಂದಲೇ ರಾಷ್ಟ್ರಪತಿ ರಾಮನಾಥ ಕೋವಿಂದ್‌ರಿಂದ ಪ್ರಶಸ್ತಿ ಸ್ವೀಕಾರ ಮಾಡಿದ್ದಾರೆ. ರಾಷ್ಟ್ರಪತಿಯವರಿಗೆ ಕೈ ಮುಗಿಯುದರಲ್ಲೇ ತಲ್ಲೀನರಾಗಿದ್ದ ಹಾಜಬ್ಬರನ್ನು ರಾಷ್ಟ್ರಪತಿವರು ಕ್ಯಾಮೆರಾ ನೋಡುವಂತೆ ಸೂಚಿಸಿದರೂ, ಹಾಜಬ್ಬ ಮಾತ್ರ ಕೈ ಮುಗಿದು ವಂದನೆ ಸಲ್ಲಿಸಿದರು.

ಹರೇಕಳ ಹಾಜಬ್ಬರು ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಲು ಬಂದ ಹಾಜಬ್ಬರ ಹಾವಭಾವ, ವೇಷಭೂಷಣವನ್ನು ರಾಷ್ಟ್ರಪತಿಯವರು ತದೇಕಚಿತ್ತದಿಂದ ಗಮನಿಸಿದರು. ಪ್ರಶಸ್ತಿ ಸ್ವೀಕಾರದ ಬಳಿಕ ಹಾಜಬ್ಬರ ಬಗ್ಗೆ ರಾಷ್ಟ್ರಪತಿ ತಮ್ಮ ಪೇಸ್‌ಬುಕ್‌ನಲ್ಲಿ ಕೂಡ ಪೋಸ್ಟ್ ಮಾಡಿದ್ದಾರೆ. ಮಂಗಳೂರಿನಲ್ಲಿ ಕಿತ್ತಳೆ ಹಣ್ಣನ್ನು ಮಾರಿ, ಅದರ ಹಣದಲ್ಲಿ ತನ್ನ ಗ್ರಾಮದಲ್ಲಿ ಶಾಲೆ ಕಟ್ಟಿಸಿದ ಹರೇಕಳ ಹಾಜಬ್ಬರಿಗೆ ಪದ್ಮಶ್ರೀ ಪ್ರಶಸ್ತಿ ಒಲಿದಿದೆ ಎಂದು ರಾಷ್ಟ್ರಪತಿ ರಾಮನಾಥ ಕೋವಿಂದ್ ಪೋಸ್ಟ್ ಮಾಡಿದ್ದರು.

ಪದ್ಮಶ್ರೀ ಬಂದಿದ್ದಕ್ಕೆ ಹರೇಕಳ ಹಾಜಬ್ಬರ ಪ್ರತಿಕ್ರಿಯೆ ಏನಿತ್ತು?
ಇನ್ನು ಪದ್ಮಶ್ರೀ ಸ್ವೀಕಾರ ಮಾಡಿದ ಬಳಿಕ ಹರೇಕಳ ಹಾಜಬ್ಬರು ಪ್ರತಿಕ್ರಿಯೆ ನೀಡಿದ್ದು, "ಜನ ಸಾಮಾನ್ಯನಾದ ನನಗೆ ದೇಶದ ಅತ್ಯುನ್ನತ ನಾಲ್ಕನೇ ನಾಗರಿಕ ಪ್ರಶಸ್ತಿ ಸಿಕ್ಕಿದ್ದು, ತುಂಬಾ ಖುಷಿಯಾಗಿದೆ. ಪ್ರಧಾನಮಂತ್ರಿ ನರೇಂದ್ರ ಮೋದಿ ನನ್ನ ಕೈ ಮುಟ್ಟಿದರು. ರಾಷ್ಟ್ರಪತಿ ರಾಮನಾಥ ಕೋವಿಂದ್ ಅವರೂ ನನ್ನನ್ನು ಸ್ಪರ್ಶ ಮಾಡಿದರು. ಈ ಪ್ರಶಸ್ತಿಗೆ ನನ್ನನ್ನು ಗುರುತಿಸಿದ ಸರ್ಕಾರ, ಸಚಿವ ಕೋಟಾ ಶ್ರೀನಿವಾಸ ಪೂಜಾರಿ, ಸಂಸದ ನಳಿನ್ ಕುಮಾರ್ ಕಟೀಲ್, ಶಾಸಕ ಯು.ಟಿ. ಖಾದರ್ ಹಾಗೂ ಮಾಧ್ಯಮ ಮಿತ್ರರಿಗೆ ಧನ್ಯವಾದ ಸಲ್ಲಿಸುತ್ತೇನೆ,'' ಅಂತಾ ಹೇಳಿದರು.

ಅಲ್ಲದೇ ತನ್ನ ಮುಂದಿನ ಕನಸನ್ನು ಬಿಚ್ಚಿಟ್ಟ ಹಾಜಬ್ಬ, ಮುಂದೆ ಹರೇಕಳ ಗ್ರಾಮದಲ್ಲಿ ಪಿಯುಸಿ ಕಾಲೇಜು ನಿರ್ಮಿಸುವ ಆಸೆಯನ್ನು ತೆರೆದಿಟ್ಟಿದ್ದಾರೆ. ನಿಸ್ವಾರ್ಥ ಸಮಾಜ ಸೇವಕ, ಶಿಕ್ಷಣ ಪ್ರೇಮಿ, ಅಕ್ಷರಸಂತ ಹರೇಕಳ ಹಾಜಬ್ಬರ ಮಡಿಲಿಗೆ ಕೊನೆಗೂ ಪದ್ಮಶ್ರೀ ಪ್ರಶಸ್ತಿ ಸೇರಿದೆ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+