2021ರ ಹಿನ್ನೋಟ; ವರ್ಷದ ವ್ಯಕ್ತಿ ಬಸವರಾಜ ಬೊಮ್ಮಾಯಿ
2021ನೇ ವರ್ಷಕ್ಕೆ ವಿದಾಯ ಹೇಳುವ ಕಾಲ ಹತ್ತಿರವಾಗುತ್ತಿದೆ. ಕೋವಿಡ್ ಪರಿಸ್ಥಿತಿ, ವರ್ಷವಿಡೀ ಸುರಿದ ಅಕಾಲಿಕ ಮಳೆಯ ನಡುವೆಯೇ ಕರ್ನಾಟಕದ ರಾಜಕೀಯದಲ್ಲಿ ಹಲವಾರು ಬದಲಾವಣೆಗಳು ಆಗಿವೆ. ಅವುಗಳಲ್ಲಿ ಮುಖ್ಯಮಂತ್ರಿಗಳ ಬದಲಾವಣೆ ಒಂದು ದೊಡ್ಡ ಬೆಳವಣಿಗೆ.
ಪ್ರಸ್ತುತ ಕರ್ನಾಟಕದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ. 2021ರ ಆರಂಭದಲ್ಲಿ ಅವರು ಬಹುಶಃ ನಾನು ರಾಜ್ಯದ ಮುಖ್ಯಮಂತ್ರಿಯಾಗುತ್ತೇನೆ ಎಂಬ ಆಲೋಚನೆಯನ್ನು ಸಹ ಮಾಡಿರಲಿಲ್ಲ. ಬಿಜೆಪಿ ಹೈಕಮಾಂಡ್ ಮುಖ್ಯಮಂತ್ರಿ ಬದಲಾವಣೆಯಂತಹ ಮಹತ್ವದ ತೀರ್ಮಾನ ಕೈಗೊಂಡಿತು.
ಜುಲೈ 26ರಂದು ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರ ಎರಡು ವರ್ಷ ಪೂರ್ಣಗೊಳಿಸಿತು. ವಿಧಾನಸೌಧದಲ್ಲಿ ನಡೆದ ಸರ್ಕಾರದ ಸಾಧನಾ ಸಮಾವೇಶದ ಭಾಷಣದಲ್ಲಿಯೇ ಯಡಿಯೂರಪ್ಪ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡುತ್ತೇನೆ ಎಂದು ಘೋಷಣೆ ಮಾಡಿದರು. ಭಾಷಣದ ಬಳಿಕ ರಾಜಭವನಕ್ಕೆ ತೆರಳಿ ರಾಜೀನಾಮೆಯನ್ನು ಸಲ್ಲಿಸಿದರು.
ಯಡಿಯೂರಪ್ಪ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡುತ್ತಿದ್ದಂತೆಯೇ ಮುಂದಿನ ಸಿಎಂ ಯಾರು? ಎಂಬ ಚರ್ಚೆಗಳು ಆರಂಭವಾಯಿತು. ಒಕ್ಕಲಿಗ, ಲಿಂಗಾಯತ ಸಮುದಾಯದ ಹಲವು ನಾಯರಕ ಹೆಸರುಗಳು ಕೇಳಿ ಬರಲಾರಂಭಿಸಿದವು. ಕೆಲವು ಅಚ್ಚರಿಯ ಹೆಸರುಗಳು ಸಹ ಕೇಳಿ ಬಂದವು.

ಕರ್ನಾಟಕ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಮತ್ತು ಕೆಲವು ಹೈಕಮಾಂಡ್‌ನ ಕೆಲವು ನಾಯಕರು ಬೆಂಗಳೂರಿಗೆ ಆಗಮಿಸಿದರು. ಜುಲೈ 27ರಂದು ಹೊಸ ಮುಖ್ಯಮಂತ್ರಿ ಆಯ್ಕೆ ಮಾಡಲು ಶಾಸಕಾಂಗ ಪಕ್ಷದ ಸಭೆಯನ್ನು ಸಹ ಕರೆಯಲಾಯಿತು. ಅವರು ಮುಖ್ಯಮಂತ್ರಿ ಆಗಲಿದ್ದಾರೆ, ಇವರು ಆಗಲಿದ್ದಾರೆ ಎಂಬ ರಾಜಕೀಯ ಪಂಡಿತರ ಲೆಕ್ಕಾಚಾರಗಳು ತಲೆಕೆಳಗಾದವು.
ಜುಲೈ 27ರ ಸಂಜೆ ನಡೆದ ಶಾಸಕಾಂಗ ಪಕ್ಷದ ಸಭೆಯಲ್ಲಿ ಹಾವೇರಿ ಜಿಲ್ಲೆಯ ಶಿಗ್ಗಾಂವ್ ಕ್ಷೇತ್ರದ ಬಿಜೆಪಿ ಶಾಸಕ 61 ವರ್ಷದ ಬಸವರಾಜ ಬೊಮ್ಮಾಯಿ ನೂತನ ಮುಖ್ಯಮಂತ್ರಿ ಎಂದು ಘೋಷಣೆ ಮಾಡಲಾಯಿತು. ಬಿ. ಎಸ್. ಯಡಿಯೂರಪ್ಪ ಆಪ್ತ ವಲಯದಲ್ಲಿ ಗುರುತಿಸಿಕೊಂಡಿದ್ದ ಬಸವರಾಜ ಬೊಮ್ಮಾಯಿ ಯಡಿಯೂರಪ್ಪ ಸಂಪುಟದಲ್ಲಿ ಗೃಹ ಸಚಿವರಾಗಿದ್ದರು. ಅದಕ್ಕೂ ಮೊದಲು ರಾಜ್ಯದಲ್ಲಿ ಬಿಜೆಪಿ ಸರ್ಕಾರವಿದ್ದಾಗ ಜಲಸಂಪನ್ಮೂಲ ಸಚಿವರಾಗಿ ಕೆಲಸ ಮಾಡಿದ್ದರು.
ಮಾಜಿ ಸಿಎಂ ಪುತ್ರ; ಲಿಂಗಾಯತ ಸಮುದಾಯಕ್ಕೆ ಸೇರಿದ ಬಸವರಾಜ ಬೊಮ್ಮಾಯಿ ಕರ್ನಾಟಕದ ಮಾಜಿ ಮುಖ್ಯಮಂತ್ರಿ ಸೋಮಪ್ಪ ರಾಯಪ್ಪ ಬೊಮ್ಮಾಯಿ (ಎಸ್. ಆರ್. ಬೊಮ್ಮಾಯಿ) ಪುತ್ರ. ಎಸ್. ಆರ್. ಬೊಮ್ಮಾಯಿ, ಗಂಗಮ್ಮ ದಂಪತಿಗಳ ನಾಲ್ವರು ಮಕ್ಕಳಲ್ಲಿ ಹಿರಿಯರು ಬಸವರಾಜ ಬೊಮ್ಮಾಯಿ. ಜುಲೈ 28ರಂದು ಬಸವರಾಜ ಬೊಮ್ಮಾಯಿ ರಾಜ್ಯದ ಮುಖ್ಯಮಂತ್ರಿಯಾಗಿ ಪ್ರಮಾಣ ಪವಚ ಸ್ವೀಕಾರ ಮಾಡಿದರು.
ಮೆಕಾನಿಕಲ್ ಇಂಜಿನಿಯರಿಂಗ್ ಪದವಿ ಪಡೆದು ಕೃಷಿ, ಉದ್ಯಮದಲ್ಲಿ ತೊಡಗಿಕೊಂಡಿದ್ದ ಬಸವರಾಜ ಬೊಮ್ಮಾಯಿ ಮೂಲ ಬಿಜೆಪಿಯವರಲ್ಲ. 1995ರಲ್ಲಿ ಜನತಾದಳದ ಪ್ರಧಾನ ಕಾರ್ಯದರ್ಶಿಯಾಗಿ ನೇಮಕಗೊಂಡರು. 1996-1997ರಲ್ಲಿ ಮುಖ್ಯಮಂತ್ರಿ ಜೆ. ಎಚ್. ಪಟೇಲ್ ರಾಜಕೀಯ ಕಾರ್ಯದರ್ಶಿಯಾಗಿದ್ದರು.
1997ರಲ್ಲಿ ಧಾರವಾಡ ಸ್ಥಳೀಯ ಸಂಸ್ಥೆಗಳಿಂದ ಮೊದಲ ಬಾರಿಗೆ ವಿಧಾನ ಪರಿಷತ್‌ಗೆ ಆಯ್ಕೆಯಾದರು. 2003ರಲ್ಲಿ ಮರು ಆಯ್ಕೆಯಾದರು. ಬಳಿಕ ಜೆಡಿಯುನಲ್ಲಿದ್ದ ಬಸವರಾಜ ಬೊಮ್ಮಾಯಿ ಅವರನ್ನು ಮಾಜಿ ಸಚಿವ ದಿ. ಸಿ. ಎಂ. ಉದಾಸಿ ಬಿಜೆಪಿಗೆ ಕರೆತಂದರು. 2008ರ ಚುನಾವಣೆಯಲ್ಲಿ ಶಿಗ್ಗಾಂವ್ ಕ್ಷೇತ್ರದಿಂದ ಶಾಸಕರಾಗಿ ಆಯ್ಕೆಯಾದರು. ಯಡಿಯೂರಪ್ಪ ತಮ್ಮ ಸಂಪುಟದಲ್ಲಿ ಪ್ರಭಾವಿ ಜಲಸಂಪನ್ಮೂಲ ಖಾತೆಯನ್ನು ಬಸವರಾಜ ಬೊಮ್ಮಾಯಿಗೆ ನೀಡಿದರು.
ಯಡಿಯೂರಪ್ಪ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿ ಡಿ. ವಿ. ಸದಾನಂದ ಗೌಡ ಬಳಿಕ ಜಗದೀಶ್ ಶೆಟ್ಟರ್ ಮುಖ್ಯಮಂತ್ರಿಯಾದರೂ ಬಸವರಾಜ ಬೊಮ್ಮಾಯಿ ಮಾತ್ರ ಸಚಿವರಾಗಿ ಮುಂದುವರೆದರು. 2019ರಲ್ಲಿ ಪುನಃ ಬಿಜೆಪಿ ಸರ್ಕಾರ ಅಸ್ತಿತ್ವಕ್ಕೆ ಬಂದು ಯಡಿಯೂರಪ್ಪ ಮುಖ್ಯಮಂತ್ರಿಯಾಗುತ್ತಿದ್ದಂತೆ ಪ್ರಭಾವಿ ಗೃಹ ಖಾತೆ ಬಸವರಾಜ ಬೊಮ್ಮಾಯಿಗೆ ಸಿಕ್ಕಿತು. ಕೋವಿಡ್ ಪರಿಸ್ಥಿತಿ ಸಂದರ್ಭದಲ್ಲಿ ಯಡಿಯೂರಪ್ಪ ಜೊತೆ ಬಸವರಾಜ ಬೊಮ್ಮಾಯಿ ಉತ್ತಮವಾಗಿ ಕಾರ್ಯ ನಿರ್ವಹಣೆ ಮಾಡಿದರು.
ಅಪ್ಪ-ಮಗ ಮುಖ್ಯಮಂತ್ರಿ; ಬಸವರಾಜ ಬೊಮ್ಮಾಯಿ ಮುಖ್ಯಮಂತ್ರಿಯಾಗುವ ಮೂಲಕ ಅಪ್ಪ-ಮಗ ರಾಜ್ಯದ ಮುಖ್ಯಮಂತ್ರಿಯಾದ ಎರಡನೇಯವರು ಎಂಬ ಸಾಧನೆ ಮಾಡಿದರು. ಎಚ್. ಡಿ. ದೇವೇಗೌಡ, ಎಚ್. ಡಿ. ಕುಮಾರಸ್ವಾಮಿ ಈ ಸಾಧನೆ ಮಾಡಿದ್ದ ಮೊದಲಿಗರು.
ಬಸವರಾಜ ಬೊಮ್ಮಾಯಿ ಪತ್ನಿ ಚೆನ್ನಮ್ಮ. ಓರ್ವ ಪುತ್ರ, ಪುತ್ರಿ ಇದ್ದಾರೆ. ಸಿನಿಮಾ, ಕ್ರಿಕೆಟ್, ಗಾಲ್ಫ್ ಎಂದರೆ ಬಸವರಾಜ ಬೊಮ್ಮಾಯಿಗೆ ಅಚ್ಚುಮೆಚ್ಚು. ಕರ್ನಾಟಕ ರಾಜ್ಯ ಕ್ರಿಕೆಟ್ ಅಸೋಸಿಯೇಷನ್‌ನ ಧಾರವಾಡದ ಅಧ್ಯಕ್ಷರಾಗಿಯೂ ಅವರು ಕಾರ್ಯ ನಿರ್ವಹಣೆ ಮಾಡಿದ್ದರು.
ಮುಖ್ಯಮಂತ್ರಿಯಾದ ಬಳಿಕ ಹಲವು ಬಾರಿ ದೆಹಲಿ ಪ್ರವಾಸ ಮಾಡಿ ಸಂಪುಟವನ್ನು ರಚನೆ ಮಾಡಿದರು. ಕೋವಿಡ್ ಪರಿಸ್ಥಿತಿ, ಅಕಾಲಿಕ ಮಳೆ, ನಟ ಪುನೀತ್ ರಾಜ್‌ಕುಮಾರ್ ನಿಧನದ ಸಂದರ್ಭದಲ್ಲಿ ಬಸವರಾಜ ಬೊಮ್ಮಾಯಿ ಕಾರ್ಯ ನಿರ್ವಹಣೆ ಮಾಡಿದ ರೀತಿಗೆ ಮೆಚ್ಚುಗೆ ಸಿಕ್ಕಿದೆ.
ಸಾರ್ವಜನಿಕ ಸ್ಥಳಗಳಲ್ಲಿ ಪೊಲೀಸರು ಗೌರವ ವಂದನೆ ಸಲ್ಲಿಸುವುದು ಬೇಡ, ಸಂಚಾರ ನಡೆಸುವಾಗ ಝಿರೋ ಟ್ರಾಫಿಕ್ ವ್ಯವಸ್ಥೆ ಬಳಸುವುದಿಲ್ಲ ಎಂಬ ಹಲವು ಬದಲಾವಣೆಯ ತೀರ್ಮಾನವನ್ನು ಬಸವರಾಜ ಬೊಮ್ಮಾಯಿ ತೆಗೆದುಕೊಂಡಿದ್ದಾರೆ.
ಬಸವರಾಜ ಬೊಮ್ಮಾಯಿ ಜಲಸಂಪನ್ಮೂಲ ಸಚಿವರಾಗಿ ಕಾರ್ಯ ನಿರ್ವಹಣೆ ಮಾಡಿದವರು. ಆ ಕ್ಷೇತ್ರದಲ್ಲಿ ಅಪಾರ ಅನುಭವ ಹೊಂದಿದವರು. ಈ ವರ್ಷ ಅಕಾಲಿಕ ಮಳೆಯ ಕಾರಣ ಡ್ಯಾಂಗಳು ತುಂಬಿ ತಮಿಳುನಾಡಿಗೆ ಅಗತ್ಯಕ್ಕಿಂತ ಹೆಚ್ಚಿನ ಕಾವೇರಿ ನೀರನ್ನು ಹರಿಸಲಾಗಿದೆ.
ಬೆಂಗಳೂರು ಸೇರಿದಂತೆ ಅಕ್ಕ-ಪಕ್ಕದ ಜಿಲ್ಲೆಗಳಿಗೆ ಕುಡಿಯುವ ನೀರು ಪೂರೈಕೆ ಮಾಡುವ ಮೇಕೆದಾಟು ಯೋಜನೆ ಜಾರಿಗೊಳಿಸುವ ಮಹತ್ವದ ಹೊಣೆಗಾರಿಗೆ ಬಸವರಾಜ ಬೊಮ್ಮಾಯಿ ಮುಂದಿದೆ. ಈ ಯೋಜನೆಗೆ ತಮಿಳುನಾಡು, ಪುದುಚೇರಿ ರಾಜ್ಯಗಳು ವಿರೋಧ ವ್ಯಕ್ತಪಡಿಸುತ್ತಿವೆ. ಕೇಂದ್ರ ಸರ್ಕಾರದಿಂದ ಒಪ್ಪಿಗೆ ಪಡೆದು ಯೋಜನೆ ಜಾರಿಗೊಳಿಸಬೇಕಿದೆ.
2022ರ ಬಜೆಟ್; ಬಸವರಾಜ ಬೊಮ್ಮಾಯಿ ಹಣಕಾಸು ಖಾತೆಯನ್ನು ತಮ್ಮ ಬಳಿಯೇ ಇಟ್ಟುಕೊಂಡಿದ್ದಾರೆ. ಕೋವಿಡ್ ಪರಿಸ್ಥಿತಿಯಲ್ಲಿ ರಾಜ್ಯದ ಖಜಾನೆ ತುಂಬಿಸುವ ಹೊಣೆಗಾರಿಕೆ ಅವರ ಮೇಲಿದೆ. 2022ರಲ್ಲಿ ಅವರು ಬಜೆಟ್ ಮಂಡಿಸಬೇಕಿದೆ. 2023ರಲ್ಲಿ ವಿಧಾನಸಭೆ ಚುನಾವಣೆ ಇರುವುದರಿಂದ ಬಜೆಟ್ ಬಗ್ಗೆ ಹೆಚ್ಚಿನ ಗಮನಹರಿಸಬೇಕು.
-
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು -
EPFO 3.0: ಇನ್ಮುಂದೆ UPI, ATM ಮೂಲಕವೇ ಪಿಎಫ್ ಹಣ ಪಡೆಯಬಹುದು; ಏಪ್ರಿಲ್ 1 ರಿಂದಲೇ ಹೊಸ ನಿಯಮ ಜಾರಿ -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
Chicken Leg Piece: ಚಿಕನ್ ಲೆಗ್ ಪೀಸ್ ಸಿಗಲಿಲ್ಲ ಎಂದು ಮದುವೆ ಮಂಟಪದಲ್ಲೇ ಮಾರಾಮಾರಿ, ವಿಡಿಯೋ ಇಲ್ಲಿದೆ -
March 29 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
New Railway Line: ಗದಗ-ಹೊಟಗಿ ರೈಲು ಡಬ್ಲಿಂಗ್ ಪೂರ್ಣ, ಮಹಾರಾಷ್ಟ್ರವರೆಗೂ ಸಂಚಾರ ಸುಧಾರಣೆ -
"ಜೈಲಲ್ಲಿ ನಮಗೆ ಮೊಬೈಲ್ ಕೊಟ್ಟಿದ್ದು ಡಿಜಿಪಿ ಅಲೋಕ್ ಕುಮಾರ್" ಎಂದ ಕೈದಿಗಳು, ವಿಡಿಯೋ ವೈರಲ್ -
Bengaluru: 19 ಸಾವಿರಕ್ಕೆ 2BHK ಮನೆ ಸಿಕ್ಕಿದ್ದೇಗೆ? 4 ವರ್ಷದಲ್ಲಿ 3 ಮನೆ ಬದಲಾಯಿಸಿದ ದಂಪತಿ ಹೇಳಿದ ಬಾಡಿಗೆ ಸೀಕ್ರೆಟ್ Viral -
ಆರ್ಸಿಬಿ ಗೆಲ್ಲಿಸಿದ ಕೊಹ್ಲಿ ಕಂಡು ಗ್ಯಾಲರಿಯಲ್ಲೇ ಕುಣಿದು ಕುಪ್ಪಳಿಸಿದ ಅನನ್ಯಾ ಬಿರ್ಲಾ: ಭಾರೀ ವೈರಲ್ -
ದುಬೈನ ಬುರ್ಜ್ ಖಲೀಫಾ ಎದುರು ತಾಯಿಯ ಸಂಭ್ರಮ: ಅಮ್ಮನ ಆಸೆ ಈಡೇರಿಸಿದ ಮಗಳ Video Viral -
NWKRTC: ದಾಂಡೇಲಿ-ಬೆಂಗಳೂರು ಮಧ್ಯೆ ಪಲ್ಲಕ್ಕಿ ವೈಭವ: ಬಸ್ಗಳ ಸಂಚಾರಕ್ಕೆ ಗ್ರೀನ್ ಸಿಗ್ನಲ್, ಡಿಟೇಲ್ಸ್ -
Bengaluru: ಲಂಬೋರ್ಗಿನಿ ಪ್ರಕರಣ; ಕಾರೇ ರಿಜಿಸ್ಟರ್ ಆಗಿಲ್ಲ ಎಂದ RTO, ಸ್ಟಂಟ್ ಅಲ್ಲ ಬ್ರೇಕ್ ಸ್ಕಿಡ್ ಎಂದ ರಿಕ್ಕಿ ರೈ












Click it and Unblock the Notifications